ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Heart Attack: ಹೃದಯಾಘಾತಕ್ಕೆ ಮತ್ತೊಂದು ಬಲಿ; ಜೆಡಿಎಸ್ ಮುಖಂಡ ಹೆಚ್.ಟಿ ರಾಜೇಂದ್ರ ನಿಧನ

ಹೃದಯಾಘಾತದಿಂದ ಚಿಕ್ಕಮಗಳೂರಿನಲ್ಲಿ ಜೆಡಿಎಸ್ ಪಕ್ಷದ ನಾಯಕ ಹೆಚ್.ಟಿ ರಾಜೇಂದ್ರ (72) ಮೃತಪಟ್ಟಿದ್ದಾರೆ. NR ಪುರ ತಾಲೂಕಿನ ಮುತ್ತಿನಕೊಪ್ಪ ಗ್ರಾಮದಲ್ಲಿ JDS ಪಕ್ಷದ ನಾಯಕ ಹೆಚ್.ಟಿ ರಾಜೇಂದ್ರ ಕೊನೆಯುಸಿರೆಳೆದಿದ್ದಾರೆ. ಹೃದಯಾಘಾತದಿಂದ ಮೃತಪಟ್ಟಿರುವ JDS ಮುಖಂಡ ರಾಜೇಂದ್ರ ಅವರು HD ದೇವೇಗೌಡರ ಕುಟುಂಬದ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದರು.

ಜೆಡಿಎಸ್ ಮುಖಂಡ ಹೆಚ್.ಟಿ ರಾಜೇಂದ್ರ ನಿಧನ

Profile Vishakha Bhat Jul 14, 2025 7:42 AM

ಹೃದಯಾಘಾತದಿಂದ (Heart Attack) ಚಿಕ್ಕಮಗಳೂರಿನಲ್ಲಿ ಜೆಡಿಎಸ್ ಪಕ್ಷದ ನಾಯಕ ಹೆಚ್.ಟಿ ರಾಜೇಂದ್ರ (72) ಮೃತಪಟ್ಟಿದ್ದಾರೆ. NR ಪುರ ತಾಲೂಕಿನ ಮುತ್ತಿನಕೊಪ್ಪ ಗ್ರಾಮದಲ್ಲಿ JDS ಪಕ್ಷದ ನಾಯಕ ಹೆಚ್.ಟಿ ರಾಜೇಂದ್ರ (H.T. Rajendra) ಕೊನೆಯುಸಿರೆಳೆದಿದ್ದಾರೆ. ಹೃದಯಾಘಾತದಿಂದ ಮೃತಪಟ್ಟಿರುವ JDS ಮುಖಂಡ ರಾಜೇಂದ್ರ ಅವರು HD ದೇವೇಗೌಡರ ಕುಟುಂಬದ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದರು. ಜೆಡಿಎಸ್ ಪಕ್ಷದಿಂದ MLA ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಿದ್ದರು. ಶೃಂಗೇರಿ ಕ್ಷೇತ್ರದಿಂದ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ್ದರು.

ಜೆಡಿಎಸ್ ಮುಖಂಡನ ನಿಧನಕ್ಕೆ ಮಾಜಿ ಪ್ರಧಾನಿ ದೇವೇಗೌಡರು ಹಾಗೂ ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿ ಸಂತಾಪ ಸೂಚಿಸಿದ್ದಾರೆ. ಮಾಜಿ ಪ್ರಧಾನಮಂತ್ರಿಗಳಾದ ಹೆಚ್.ಡಿ.ದೇವೇಗೌಡರ ಆಪ್ತರು, ಜೆಡಿಎಸ್ ಪಕ್ಷದ ರಾಜ್ಯ ಉಪಾಧ್ಯಕ್ಷರು, ಶೃಂಗೇರಿ ವಿಧಾನಸಭೆ ಕ್ಷೇತ್ರದ ಹಿರಿಯ ನೇತಾರರು ಆಗಿದ್ದ ಹೆಚ್.ಟಿ. ರಾಜೇಂದ್ರ ಅವರ ನಿಧನದ ವಾರ್ತೆ ಕೇಳಿ ಜೆಡಿಎಸ್‌ ಕಾರ್ಯಕರ್ತರಿಗೆ ಆಘಾತವಾಗಿದೆ.

ಅತ್ಯಂತ ನಿಷ್ಠಾವಂತ ಸೇನಾನಿಯಾಗಿ, ತಳಮಟ್ಟದಿಂದ ಸಂಘಟನೆಯನ್ನು ಬಲಿಷ್ಠವಾಗಿ ಕಟ್ಟುವಲ್ಲಿ ಅವಿರತವಾಗಿ ಶ್ರಮಿಸಿದ್ದ ಅವರು, ತಮ್ಮ ಇಡೀ ಬದುಕನ್ನು ಪಕ್ಷಕ್ಕೇ ಸಮರ್ಪಿಸಿಕೊಂಡಿದ್ದರು. ಶ್ರೀಯುತರ ಅಗಲಿಕೆ ಬಹುದೊಡ್ಡ ನಷ್ಟ ಹಾಗೂ ವೈಯಕ್ತಿಕವಾಗಿ ನಾನು ಬಹಳ ದುಃಖಿತನಾಗಿದ್ದೇನೆ. ರಾಜೇಂದ್ರ ಅವರ ಆತ್ಮಕ್ಕೆ ಸದ್ಗತಿ ಸಿಗಲಿ ಹಾಗೂ ಈ ದುಃಖವನ್ನು ಭರಿಸುವ ಶಕ್ತಿಯನ್ನು ಕುಟುಂಬಕ್ಕೆ, ಅಭಿಮಾನಿಗಳಿಗೆ ಭಗವಂತ ದಯಪಾಲಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಸಂತಾಪ ಸೂಚಿಸಿದ್ದಾರೆ.

ಈ ಸುದ್ದಿಯನ್ನೂ ಓದಿ: Heart Attack: ಕುಷ್ಟಗಿ ಶಾಸಕರ ಪಿಎ ಚಂದ್ರಕಾಂತ ವಡ್ಡಿಗೇರಿ ಹೃದಯಾಘಾತದಿಂದ ನಿಧನ

ವಾಕಿಂಗ್ ಮಾಡುವಾಗ ಹೃದಯಾಘಾತಕ್ಕೆ (Heart Attack) ನರ್ಸಿಂಗ್ ಹೋಮ್ ಮಾಲೀಕನೋರ್ವ ಬಲಿಯಾಗಿರುವ ಘಟನೆ ಕನಕಪುರ ನಗರದಲ್ಲಿ ನಡೆದಿದೆ. ಮಂಜುನಾಥ್ (50) ಹೃದಯಾಘಾತದಿಂದ ಸಾವನ್ನಪ್ಪಿದ ವ್ಯಕ್ತಿ. ಕನಕಪುರದ ಗಣೇಶ್ ನರ್ಸಿಂಗ್ ಹೋಮ್ ಹಾಗೂ ಗಣೇಶ್ ಮೆಡಿಕಲ್ ಮಾಲೀಕ ಮಂಜುನಾಥ್, ಇಂದು ಬೆಳಗ್ಗೆ ವಾಕಿಂಗ್‌ಗೆ ತೆರಳುವ ವೇಳೆ ಕುಸಿದುಬಿದ್ದಿದ್ದಾರೆ. ಕೂಡಲೇ ಕುಟುಂಬಸ್ಥರು ಖಾಸಗಿ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಿಸದೇ ಮಂಜುನಾಥ್ ಮೃತಪಟ್ಟಿದ್ದಾರೆ. ಕನಕಪುರ ತಾಲೂಕು ಗ್ರಾಹಕರ ವೇದಿಕೆ ಅಧ್ಯಕ್ಷ ಹಾಗೂ ಔಷಧಿ ಮಾರಾಟಗಾರರ ಸಂಘದ ಅಧ್ಯಕ್ಷರೂ ಆಗಿದ್ದ ಮಂಜುನಾಥ್ ಸಾವಿನಿಂದ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.