ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

ಸಾಂಬಾರ್‌ ಮಾಡಿಲ್ಲ ಎಂದು ಅಪ್ಪ ಬೈದಿದಕ್ಕೆ ಆತ್ಮಹತ್ಯೆ ಮಾಡಿಕೊಂಡ ಮಗಳು!

ಸಾಂಬಾರ್ ಮಾಡಿಲ್ಲ ಎಂದು ಅಪ್ಪ ಬೈದಿದ್ದಕ್ಕೆ ಮಗಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ. ಸೌಜನ್ಯ ಪೂಜಾರಿ (22) ಮೃತ ಯುವತಿ. ಮೂಡಿಗೆರೆ ತಾಲೂಕಿನ ದೇವವೃಂದ ಗ್ರಾಮದಲ್ಲಿ ಘಟನೆ ನಡೆದಿದೆ. ಸದ್ಯ ಈ ಘಟನೆ ಚಿಕ್ಕಮಗಳೂರು ಜಿಲ್ಲೆಯ ಜನರಲ್ಲಿ ಆತಂಕ ಮೂಡಿಸಿದೆ.

ಸಂಗ್ರಹ ಚಿತ್ರ

ಚಿಕ್ಕಮಗಳೂರು: ಸಾಂಬಾರ್ ಮಾಡಿಲ್ಲ ಎಂದು ಅಪ್ಪ ಬೈದಿದ್ದಕ್ಕೆ ಮಗಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ. (Chikkamagaluru News) ಸೌಜನ್ಯ ಪೂಜಾರಿ (22) ಮೃತ ಯುವತಿ. ಮೂಡಿಗೆರೆ ತಾಲೂಕಿನ ದೇವವೃಂದ ಗ್ರಾಮದಲ್ಲಿ ಘಟನೆ ನಡೆದಿದ್ದು ಸೌಜನ್ಯ ತಂದೆ ನಟೇಶ್ ತರಕಾರಿ ತಂದುಕೊಟ್ಟು ಸಾಂಬಾರ್ ಮಾಡುವಂತೆ ಹೇಳಿದ್ದರು. ಮಧ್ಯಾಹ್ನ ಊಟಕ್ಕೆ ಬಂದಾಗ ಏಕೆ ಸಾಂಬಾರ್ ಮಾಡಿಲ್ಲ ಎಂದು ಬೈದಿದ್ದಾರೆ.

ಬಳಿಕ ನಟೇಶ್‌ ಸಾಂಬಾರ್‌ ತರಲು ಪಕ್ಕದ ಮನೆಗೆ ತೆರಳಿದ್ದಾರೆ. ಅದೇ ವೇಳೆಯಲ್ಲಿ ಸೌಜನ್ಯ ತಮ್ಮ ಮನೆಯಲ್ಲಿಯೇ ನೇಣಿಗೆ ಶರಣಾಗಿದ್ದಾರೆ. ಗೋಣಿಬೀಡು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಸದ್ಯ ಈ ಘಟನೆ ಜನತೆಯಲ್ಲಿ ಆತಂಕ ಮೂಡಿಸಿದ್ದು, ಯುವ ಜನರ ಮನಸ್ಥಿತಿಯ ಕುರಿತು ಕಳವಳ ವ್ಯಕ್ತವಾಗುತ್ತಿದೆ.

Bengaluru Crime news: ಬೆಂಗಳೂರಿನ ಮನೆಯಲ್ಲಿ ದಂಪತಿ ಶವಗಳು ಪತ್ತೆ; ಕೊಲೆ ಮಾಡಿ ಆತ್ಮಹತ್ಯೆ ಶಂಕೆ

ಮೊಬೈಲ್‌ ಮುಟ್ಟಬೇಡ ಎಂದಿದ್ದಕ್ಕೆ ಆತ್ಮಹತ್ಯೆ

ಮೊಬೈಲ್‌ನಲ್ಲಿ ಆನ್‌ಲೈನ್‌ ಗೇಮ್‌ ಆಡುತ್ತಿದ್ದ 14 ವರ್ಷದ ಬಾಲಕ ಸಮರ್ಥ ಪಟಿಕೆ, ಪೋಷಕರ ಹಿತವಚನ ಸಹಿಸದೇ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಬೆಂಗೇರಿಯ ಉದಯನಗರದ ನಿವಾಸಿ ಸಮರ್ಥ್ ಕಳೆದ ಕೆಲವು ದಿನಗಳಿಂದ ಫ್ರೀಫೈರ್ ಆನ್‌ಲೈನ್ ಗೇಮ್‌ಗಳಿಗೆ ವಿಪರೀತ ಅಡಿಕ್ಟ್ ಆಗಿದ್ದ. ರಾತ್ರಿ ಸತತವಾಗಿ ಗೇಮ್ ಆಡುತ್ತಿದ್ದ ಮಗನಿಗೆ ತಾಯಿ ಬುದ್ಧಿವಾದ ಹೇಳಿದ್ದಾರೆ. ‘ಮೊಬೈಲ್ ಸಾಕು ಮಾಡು, ಓದಿಕೊಳ್ಳುವ ಕಡೆ ಗಮನ ಕೊಡು’ ಎಂದು ಹೇಳಿ ಆತನ ಕೈಲಿದ್ದ ಮೊಬೈಲ್ ಕಿತ್ತುಕೊಂಡಿದ್ದಾರೆ.

ಇದರಿಂದ ತೀವ್ರವಾಗಿ ನೊಂದ ಸಮರ್ಥ್, ತಕ್ಷಣ ತನ್ನ ಕೋಣೆಗೆ ಹೋಗಿ ಒಳಗಿನಿಂದ ಬಾಗಿಲು ಹಾಕಿಕೊಂಡಿದ್ದಾನೆ. ಸುಮಾರು 15-20 ನಿಮಿಷಗಳಾದರೂ ಬಾಲಕ ಹೊರಬಾರದಿದ್ದಾಗ ಆತಂಕಗೊಂಡ ತಂದೆ, ಕಿಟಕಿಯಿಂದ ಇಣುಕಿ ನೋಡಿದ್ದಾರೆ. ಈ ವೇಳೆ ಮಗ ಸೀರೆಯಿಂದ ನೇಣು ಬಿಗಿದುಕೊಂಡಿರುವುದು ಕಂಡುಬಂದಿದೆ. ತಕ್ಷಣ ಬಾಗಿಲು ಮುರಿದು ಕಿಮ್ಸ್ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ಅಷ್ಟರಲ್ಲಾಗಲೇ ಆತ ಮೃತಪಟ್ಟಿದ್ದಾಗಿ ವೈದ್ಯರು ಘೋಷಿಸಿದ್ದಾರೆ. ಈ ಸಂಬಂಧ ಹುಬ್ಬಳ್ಳಿಯ ಕೇಶ್ವಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Vishakha Bhat Heggar

View all posts by this author