ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

Self Harming: ನಾಗಾಲ್ಯಾಂಡ್‌ನ ಯುವತಿ ಚಿಕ್ಕಮಗಳೂರಿನಲ್ಲಿ ಆತ್ಮಹತ್ಯೆ

ಲಿನ್ಸುಲಾಳಿಗೆ ರಾಜೇಶ್ ಹಾಗೂ ತೇಜಸ್ ಮಾನಸಿಕವಾಗಿ ಹಿಂಸೆ ನೀಡುತ್ತಿದ್ದರು ಎಂದು ಲಶಿಲಾ ಇಂಚುಗರ್ ಎಂಬವರು ಬಸವನಹಳ್ಳಿ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಬಸವನಹಳ್ಳಿ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡು ಪರಿಶೀಲನೆ ನಡೆಸಿದ್ದಾರೆ.

ನಾಗಾಲ್ಯಾಂಡ್‌ನ ಯುವತಿ ಚಿಕ್ಕಮಗಳೂರಿನಲ್ಲಿ ಆತ್ಮಹತ್ಯೆ

ಮೃತ ಲಿನ್ಸುಲಾ -

ಹರೀಶ್‌ ಕೇರ
ಹರೀಶ್‌ ಕೇರ Mar 25, 2026 9:16 AM

ಚಿಕ್ಕಮಗಳೂರು, ಮಾ.25: ನಾಗಾಲ್ಯಾಂಡ್ (Nagaland) ಮೂಲದ ಯುವತಿಯೊಬ್ಬಳ ಶವ ಚಿಕ್ಕಮಗಳೂರಿನ (Chikkamagaluru) ಅರವಿಂದ ನಗರದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಮೃತ ಯುವತಿಯನ್ನು ಲಿನ್ಸುಲಾ (22) ಎಂದು ಗುರುತಿಸಲಾಗಿದೆ. ಯುವತಿ ರೆಸಾರ್ಟ್ ಒಂದರಲ್ಲಿ ಕೆಲಸ ಮಾಡುತ್ತಿದ್ದಳು.

ಎರಡು ದಿನದ ಹಿಂದೆ ಕಿವಿಶೆ ಕಿನಿಮಿ ಎಂಬವರ ಜೊತೆ ಅರ್ಧ ಗಂಟೆ ಮಾತನಾಡಿದ್ದಳು ಎಂದು ತಿಳಿದು ಬಂದಿದೆ. ಯುವತಿ ಸಾವಿಗೂ ಮುನ್ನ ರಾಜೇಶ್ ಹಾಗೂ ತೇಜಸ್ ಎಂಬವರ ಹೆಸರನ್ನು ಡೈರಿಯಲ್ಲಿ ಬರೆದಿಟ್ಟಿದ್ದಾಳೆ.

ಲಿನ್ಸುಲಾಳಿಗೆ ರಾಜೇಶ್ ಹಾಗೂ ತೇಜಸ್ ಮಾನಸಿಕವಾಗಿ ಹಿಂಸೆ ನೀಡುತ್ತಿದ್ದರು ಎಂದು ಲಶಿಲಾ ಇಂಚುಗರ್ ಎಂಬವರು ಬಸವನಹಳ್ಳಿ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಬಸವನಹಳ್ಳಿ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡು ಪರಿಶೀಲನೆ ನಡೆಸಿದ್ದಾರೆ.

ಧಾರವಾಡದಲ್ಲಿ ಮಾಜಿ ಶಾಸಕನ ಪುತ್ರ ಅನುಮಾನಾಸ್ಪದ ಸಾವು; ಕಾರಿನಲ್ಲಿ ಸುಟ್ಟ ಸ್ಥಿತಿಯಲ್ಲಿ ಶವ ಪತ್ತೆ!

ಸಿಡಿಲು ಬಡಿದು ರೈತ ಸಾವು

ಕಲಬುರಗಿ: ಕಬ್ಬು ನಾಟಿ ಮಾಡುತ್ತಿದ್ದಾಗ ಸಿಡಿಲು(Thunder) ಬಡಿದು ಯುವ ರೈತ ಸಾವನ್ನಪ್ಪಿರುವ ಘಟನೆ ಕಲಬುರಗಿ (Kalaburagi) ಜಿಲ್ಲೆ ಚಿಂಚೋಳಿ (Chincholi) ತಾಲೂಕಿನ ಶಾದಿಪುರ ತಾಂಡಾದಲ್ಲಿ ನಡೆದಿದೆ. ಮಹೇಶ್ ಚೌವ್ಹಾಣ್ (24) ಸಿಡಿಲಿಗೆ ಬಲಿಯಾದ ರೈತ. ಕಲಬುರಗಿ ಜಿಲ್ಲೆಯ ವಿವಿಧೆಡೆ ಇಂದು ಬಿರುಗಾಳಿ, ಗುಡುಗು ಸಹಿತ ಮಳೆಯಾಗಿದೆ. ಈ ವೇಳೆ ಜಮೀನಿನಲ್ಲಿ ಕಬ್ಬು ನಾಟಿ ಮಾಡಲೆಂದು ಹೋಗಿದ್ದ ಮಹೇಶ್ ಸಿಡಿಲಿಗೆ ಬಲಿಯಾಗಿದ್ದಾನೆ. ಘಟನಾ ಸ್ಥಳಕ್ಕೆ ಕಂದಾಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕುಂಚಾವರಂ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.