Chikkamagaluru News: ಎನ್.ಆರ್.ಪುರದಲ್ಲಿ ಸೇತುವೆ ಮೇಲಿಂದ ಹೊಳೆಗೆ ಹಾರಿ ನರ್ಸ್ ಆತ್ಮಹತ್ಯೆ
NR Pura Nurse Death Case: ಶಿವಮೊಗ್ಗದ ಪ್ರತಿಷ್ಠಿತ 'ನಾರಾಯಣ ಹೃದಯಾಲಯ' ಆಸ್ಪತ್ರೆಯ ನರ್ಸ್ ಸೋಮವಾರ ಸಂಜೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೆಲಸ ಮುಗಿಸಿ ಮುತ್ತಿನಕೊಪ್ಪದ ಮನೆಗೆ ಮರಳಿದ್ದ ಅವರು, ಮುಡುಬ ಸಮೀಪದ ಸೇತುವೆ ಮೇಲಿಂದ ಹೊಳೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ರನ್ಯಾ ಬೇಸಿಲ್ -
ಚಿಕ್ಕಮಗಳೂರು: ಸೇತುವೆ ಮೇಲಿಂದ ಹೊಳೆಗೆ ಹಾರಿ ನರ್ಸ್ ಒಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಜಿಲ್ಲೆಯ (Chikkamagaluru News) ಎನ್.ಆರ್.ಪುರ ತಾಲೂಕಿನ ಮುಡುಬ ಸಮೀಪ ನಡೆದಿದೆ. ಮೃತರನ್ನು ಎನ್.ಆರ್.ಪುರ ತಾಲೂಕಿನ ಮುತ್ತಿನಕೊಪ್ಪ ಗ್ರಾಮದ ನಿವಾಸಿ ರನ್ಯಾ ಬೇಸಿಲ್ (30) ಎಂದು ಗುರುತಿಸಲಾಗಿದೆ.
ಇವರು ಶಿವಮೊಗ್ಗದ ಪ್ರತಿಷ್ಠಿತ 'ನಾರಾಯಣ ಹೃದಯಾಲಯ' ಆಸ್ಪತ್ರೆಯಲ್ಲಿ ನರ್ಸ್ ಆಗಿ ಸೇವೆ ಸಲ್ಲಿಸುತ್ತಿದ್ದರು. ರನ್ಯಾ ಅವರು ಸೋಮವಾರ ಸಂಜೆ ಶಿವಮೊಗ್ಗದಲ್ಲಿ ತಮ್ಮ ಕೆಲಸ ಮುಗಿಸಿ ಮುತ್ತಿನಕೊಪ್ಪದ ಮನೆಗೆ ಮರಳಿದ್ದರು. ಮನೆಗೆ ಬಂದ ಕೆಲವೇ ಹೊತ್ತಿನಲ್ಲಿ ಮತ್ತೆ ಹೊರಗೆ ಹೋದವರು, ಮುಡುಬ ಸಮೀಪದ ಸೇತುವೆಯ ಮೇಲಿಂದ ಹೊಳೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.
ರನ್ಯಾ ಅವರ ಆತ್ಮಹತ್ಯೆ ಕಾರಣವೇನು ಎಂಬುದು ತಿಳಿದುಬಂದಿಲ್ಲ. ಕುಟುಂಬಸ್ಥರಲ್ಲಿ ಈ ಘಟನೆ ತೀವ್ರ ಆಘಾತ ಮೂಡಿಸಿದೆ. ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಧಾವಿಸಿದ ಪೊಲೀಸರು ಮತ್ತು ರಕ್ಷಣಾ ತಂಡದವರು ಮೃತದೇಹವನ್ನು ಹೊರತೆಗೆಯುವಲ್ಲಿ ಯಶಸ್ವಿಯಾಗಿದ್ದಾರೆ. ಈ ಸಂಬಂಧ ಎನ್.ಆರ್.ಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Belagavi news: ಪತ್ನಿಯ ಆತ್ಮಹತ್ಯೆ ಸುದ್ದಿ ತಿಳಿದು ಧಾವಿಸಿ ಬರುವಾಗ ಆಕ್ಸಿಡೆಂಟ್, ಪತಿಯೂ ಸಾವು!
ಶ್ರೀರಂಗಪಟ್ಟಣದಲ್ಲಿ ಕಾವೇರಿ ನದಿಗೆ ಹಾರಿ ವಿದ್ಯುತ್ ಗುತ್ತಿಗೆದಾರ ಆತ್ಮಹತ್ಯೆ
ಶ್ರೀರಂಗಪಟ್ಟಣ: ವಿದ್ಯುತ್ ಗುತ್ತಿಗೆದಾರರೊಬ್ಬರು ಕಾವೇರಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಪಟ್ಟಣದ ಬಳಿ ನಡೆದಿದೆ. ಮೂರು ದಿನಗಳ ಹಿಂದೆ ನಡೆದಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ತಾಲೂಕಿನ ಹುಣಸನಹಳ್ಳಿ ಗ್ರಾಮದ ಪುಟ್ಟಸ್ವಾಮಿ ಎಂಬವರ ಮಗ ಪವನ್ ಎಚ್.ಪಿ (28) ಅವರ ಶವ ಪಟ್ಟಣ ಸಮೀಪದ ಗಂಜಾಂ ಬಳಿ ಕಾವೇರಿ ನದಿ ಮೇಲ್ಸೇತುವೆ ಕೆಳಗೆ ಪತ್ತೆಯಾಗಿದೆ.
ಪವನ್ ಅವರ ಬೈಕ್ ಪಟ್ಟಣದ ವೆಲ್ಲೆಸ್ಲಿ ಸೇತುವೆ ಬಳಿ ಕಂಡು ಬಂದಿದೆ. ಪವನ್ ವೆಲ್ಲೆಸ್ಲಿ ಸೇತುವೆ ಬಳಿ ನದಿಗೆ ಹಾರಿರುವ ಸಾಧ್ಯತೆ ಇದ್ದು, ಒಂದು ಕಿ.ಮೀ. ದೂರದಲ್ಲಿ ಶವ ಸಿಕ್ಕಿದೆ. ಮೃತನ ಮೈ ಮೇಲೆ ಯಾವುದೇ ಗಾಯಗಳು ಕಂಡು ಬಂದಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಪಂಚನಾಮೆ ನಡೆಸಿದ ಬಳಿದ ಶವವನ್ನು ಸೋಮವಾರ ವಾರಸುದಾರರಿಗೆ ಒಪ್ಪಿಸಲಾಗಿದೆ.