ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

ಇಂದು ಶೃಂಗೇರಿ ಕ್ಷೇತ್ರದ ಅಂಚೆ ಮತಪತ್ರಗಳ ಮರು ಎಣಿಕೆ

ಶೃಂಗೇರಿ ವಿಧಾನಸಭಾ ಕ್ಷೇತ್ರದ 2023ರ ಚುನಾವಣೆ ಅಂಚೆ ಮತಪತ್ರಗಳ ಮತ ಎಣಿಕೆ ಮೇ 2ರ ಶನಿವಾರ ಬೆಳಗ್ಗೆ 9ಕ್ಕೆ ಆರಂಭಗೊಳ್ಳಲಿದೆ. ಮತ ಎಣಿಕಾ ಕೇಂದ್ರದ 200 ಮೀ. ಸುತ್ತಮುತ್ತ ನಿಷೇಧಾಜ್ಞೆ ಜಾರಿಗೊಳಿಸಲಾಗಿದ್ದು ಐದಕ್ಕಿಂತ ಹೆಚ್ಚು ಮಂದಿ ಗುಂಪು ಸೇರದಂತೆ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಜಿತೇಂದ್ರ ಕುಮಾರ್ ದಯಾಮ ಆದೇಶಿಸಿದ್ದಾರೆ.

ಸಂಗ್ರಹ ಚಿತ್ರ

ಚಿಕ್ಕಮಗಳೂರು: ಶೃಂಗೇರಿ ವಿಧಾನಸಭಾ ಕ್ಷೇತ್ರದ 2023ರ ಚುನಾವಣೆ ಅಂಚೆ ಮತಪತ್ರಗಳ ಮತ ಎಣಿಕೆ ಮೇ 2ರ ಶನಿವಾರ ಬೆಳಗ್ಗೆ 9ಕ್ಕೆ ಆರಂಭಗೊಳ್ಳಲಿದೆ. ಮತ ಎಣಿಕಾ ಕೇಂದ್ರದ 200 ಮೀ. ಸುತ್ತಮುತ್ತ ನಿಷೇಧಾಜ್ಞೆ ಜಾರಿಗೊಳಿಸಲಾಗಿದ್ದು ಐದಕ್ಕಿಂತ ಹೆಚ್ಚು ಮಂದಿ ಗುಂಪು ಸೇರದಂತೆ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಜಿತೇಂದ್ರ ಕುಮಾರ್ ದಯಾಮ ಆದೇಶಿಸಿದ್ದಾರೆ. ಹೈಕೋರ್ಟ್‌ ಸೂಚನೆಯಂತೆ ಅಂಚೆ ಮತಪತ್ರದ ಮರು ಎಣಿಕೆ ನಡೆಸಲು ಚುನಾವಣಾ ಆಯೋಗದ ಸೂಚನೆ ಮೇಲೆ ಜಿಲ್ಲಾ ಚುನಾವಣಾಧಿಕಾರಿಗಳಿಂದ ಸಕಲ ಸಿದ್ಧತೆ ಮಾಡಲಾಗಿದೆ. ನಗರದ ಐಡಿಎಸ್‌ಜಿ ಕಾಲೇಜಿನ ಮೊದಲ ಮಹಡಿಯ ಕೊಠಡಿ ಸಂಖ್ಯೆ 12 ರಲ್ಲಿ ಮತ ಎಣಿಕೆ ನಡೆಯಲಿದೆ.

ಶನಿವಾರ ಬೆಳಗ್ಗೆ 6 ರಿಂದ ಸಂಜೆ 5ಗಂಟೆವರೆಗೆ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಎಣಿಕೆ ಕೇಂದ್ರದ 200 ಮೀಟರ್ ಸುತ್ತಳತೆಯಲ್ಲಿ ಎಣಿಕೆ ಹಾಗೂ ಬಂದೋ ಬಸ್ತ್‌ ಗೆ ನೇಮಕವಾದ ಅಧಿಕಾರಿಗಳು ಹಾಗೂ ಸಿಬ್ಬಂದಿ, ಚುನಾವಣಾ ಅಧಿಕಾರಿಗಳನ್ನು ಹೊರತುಪಡಿಸಿ ಸಾರ್ವಜನಿಕರ ಪ್ರವೇಶಕ್ಕೆ ನಿಷೇಧ ಹೇರಲಾಗಿದೆ. ಚುನಾವಣಾಧಿಕಾರಿ ಗೌರವ್ ಶೆಟ್ಟಿ ನೇತೃತ್ವದಲ್ಲಿ ಒಂದೇ ಟೇಬಲ್‌ನಲ್ಲಿ ಅಂಚೆ ಮತಗಳ ಮರು ಎಣಿಕೆ ನಡೆಯಲಿದ್ದು, ಆರು ಜನ ಸಹಾಯಕ ಚುನಾವಣಾಧಿಕಾರಿಗಳು ಸಾಥ್ ನೀಡಲಿದ್ದಾರೆ. ಎಣಿಕೆ ಕೊಠಡಿಯಲ್ಲಿ ಸಿಸಿಟಿವಿ ಕ್ಯಾಮೆರಾ ಅಳವಡಿಕೆ ಮಾಡಲಾಗಿದೆ.

ಸ್ಡ್ರಾಂಗ್ ರೂಂಗೆ ಶಾಸಕ ರಾಜೇಗೌಡ, ಮಾಜಿ ಶಾಸಕ ಜೀವರಾಜ್, ಸುಧಾಕರ್ ಶೆಟ್ಟಿ ಆಗಮಿಸಿದ್ದಾರೆ. ಜಿಲ್ಲಾಧಿಕಾರಿ ನಾಗರಾಜ್, ಕೊಪ್ಪ-ಶೃಂಗೇರಿ-ಚಿಕ್ಕಮಗಳೂರು ತಹಶೀಲ್ದಾರ್ ಕೂಡ ಬಂದಿದ್ದಾರೆ. ಮತ ಎಣಿಕೆಯ ವೀಕ್ಷಕರಾಗಿ ಕಿರಣ್ ಹೆಚ್ ಕುಲಕರ್ಣಿ ಆಗಮಿಸಿದ್ದಾರೆ. ಅಭ್ಯರ್ಥಿಗಳ ಸಮ್ಮುಖದಲ್ಲಿ ಸ್ಟ್ರಾಂಗ್ ರೂಂ ಓಪನ್ ಮಾಡಲಾಗಿದೆ. ಅಭ್ಯರ್ಥಿಗಳು ಸಮ್ಮುಖದಲ್ಲಿ ಈಗ ಮತ ಎಣಿಕೆ ಕಾರ್ಯ ನಡೆಯಲಿದೆ. ಮತ ಎಣಿಕೆ ಕಾರ್ಯ ಮುಕ್ತಾಯವಾದ ಬಳಿಕ ಫಲಿತಾಂಶ ಘೋಷಣೆಯಾಗಲಿದೆ.

ಮತ ಎಣಿಕೆಗೆ 3 ದಿನ ಬಾಕಿ ಇರುವಾಗಲೇ ಪಶ್ಚಿಮ ಬಂಗಾಳದಲ್ಲಿ ಹೈಡ್ರಾಮ; ಭವಾನಿಪುರ ಸ್ಟ್ರಾಂಗ್ ರೂಂಗೆ ಮಮತಾ ಬ್ಯಾನರ್ಜಿ ಭೇಟಿ: ಮತ ಎಣಿಕೆ ಅಕ್ರಮಗಳ ಬಗ್ಗೆ ಎಚ್ಚರಿಕೆ

2023ರಲ್ಲಿ 12 ಜನ ಅಭ್ಯರ್ಥಿಗಳು ಸ್ಪರ್ಧೆ ಮಾಡಿದ್ದರು. ಕಾಂಗ್ರೆಸ್ಸಿನ ಟಿ.ಡಿ.ರಾಜೇಗೌಡ 201 ಮತಗಳ ಅಂತರದಿಂದ ಗೆಲುವು ಕಂಡಿದ್ದರು. 2023ರಲ್ಲಿ ಮತ ಎಣಿಕೆಯ ಸಂದರ್ಭದಲ್ಲಿ ಇಬ್ಬರು ಅಭ್ಯರ್ಥಿಗಳು ಗೈರಾಗಿದ್ದರು. ಫಲಿತಾಂಶ ಪ್ರಕಟವಾದ ಬಳಿಕ ಕಾಂಗ್ರೆಸ್ ಅಭ್ಯರ್ಥಿ ರಾಜೇಗೌಡರು ಎಣಿಕೆಯ ಕೇಂದ್ರಕ್ಕೆ ಆಗಮಿಸಿದ್ದರು. ಇಂದು ಅಭ್ಯರ್ಥಿಗಳ ಸಮ್ಮುಖದಲ್ಲಿ ಎಣಿಕೆ ಕಾರ್ಯ ನಡೆಯಲಿದೆ.

Vishakha Bhat Heggar

View all posts by this author