ಚಿಕ್ಕಮಗಳೂರು, ಮಾ. 28: ಹಾಲು ಉತ್ಪಾದಕರ ಸಂಘದಲ್ಲಿ ಹಣ ದುರ್ಬಳಕೆ ಆರೋಪ ಸಂಬಂಧ ಮನನೊಂದು ಮಹಿಳಾ ಸಂಘದ ಕಾರ್ಯದರ್ಶಿ ವಿಡಿಯೋ ಮಾಡಿ ಆತ್ಮಹತ್ಯೆಗೆ (Self Harming) ಶರಣಾದ ಘಟನೆ ಚಿಕ್ಕಮಗಳೂರಿನ (chikkamagaluru) ತರೀಕೆರೆಯ ಹೆಚ್. ಮಲ್ಲೇನಹಳ್ಳಿ ಗ್ರಾಮದಲ್ಲಿ ನಡೆದಿದೆ. ಉಷಾ (45) ಮೃತ ಮಹಿಳೆಯಾಗಿದ್ದು, ಕಿರುಕುಳ ತಡೆಯಲು ನನ್ನಿಂದ ಆಗುತ್ತಿಲ್ಲ ಎಂದು ಹೇಳಿರುವ ವಿಡಿಯೋ ರೆಕಾರ್ಡ್ ಮಾಡಿ ನೇಣಿಗೆ ಶರಣಾಗಿದ್ದಾರೆ. ಲೆಕ್ಕಪತ್ರ ಪುಸ್ತಕ ಕಳೆದುಹೋಗಿರೋದು ತನ್ನಿಂದಾದ ತಪ್ಪು ಎಂದು ವಿಡಿಯೋದಲ್ಲಿ ಅವರು ಹೇಳಿಕೊಂಡಿದ್ದಾರೆ.
ಕಳೆದ 10 ವರ್ಷಗಳಿಂದ ಹಣ ದುರುಪಯೋಗ ಎಂದು ಗ್ರಾಮಸ್ಥರು ಆರೋಪಿಸಿದ್ದು, ಈ ಸಂಬಂಧ ನಡೆದಿದ್ದ ಪಂಚಾಯತಿಯಲ್ಲೂ ಲೆಕ್ಕಪತ್ರ ಮಿಸ್ಸಿಂಗ್ ಆಗಿರೋದು ನಿಜ ಎಂದು ಉಷಾ ಒಪ್ಪಿಕೊಂಡಿದ್ದರು. 2010ರಲ್ಲಿ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘ ಆರಂಭವಾಗಿತ್ತು. ಅಲ್ಲಿಂದಲೂ ಉಷಾ ಸಂಘದ ಕಾರ್ಯದರ್ಶಿಯಾಗಿದ್ದರು. ಈ ನಡುವೆ 2025ರಲ್ಲಿ ಸಂಘಕ್ಕೆ ಹೊಸ ಸದಸ್ಯರು ಸೇರ್ಪಡೆಗೊಂಡ ಬಳಿಕ ಎಲ್ಲಾ ಲೆಕ್ಕಪತ್ರ ಕೇಳಲು ಅವರು ಪ್ರಾರಂಭಿಸಿದ್ದರು. ಆ ವೇಳೆ ಉಷಾ ವಿರುದ್ಧ ಹಣ ದುರ್ಬಳಕೆ ಆರೋಪ ಮಾಡಲಾಗಿತ್ತು ಎನ್ನಲಾಗಿದೆ.
ಘಟನೆ ಬಗ್ಗೆ ಮೃತ ಉಷಾ ಅವರ ಪತಿ ಪೊಲೀಸರಿಗೆ ದೂರು ನೀಡಿದ್ದು, ಪತ್ನಿ ಸಾವಿಗೆ ಕೆಲವರ ಕಿರುಕುಳವೇ ಕಾರಣ ಎಂದು ಆರೋಪಿಸಿದ್ದಾರೆ. ಜೊತೆಗೆ ಆಕೆ ಎಲ್ಲ ಲೆಕ್ಕಪತ್ರವನ್ನೂ ನೀಡಿದ್ದಳು. ಹೀಗಿದ್ದರೂ ನಮ್ಮ ಕುಟುಂಬಕ್ಕೆ ಜೀವ ಬೆದರಿಕೆ ಹಾಕಲಾಗಿತ್ತು. ಎಚ್. ಎನ್. ಜಗದೀಶ್ (ದೊಡ್ಡೆರಿ), ದಕ್ಷಿಣ ಮೂರ್ತಿ, ಎಚ್. ಎಂ. ಯತೀಶ, ಲವಕುಮಾರ, ಕುಮಾರಸ್ವಾಮಿ, ವಿನಯ್ ಕುಮಾರ, ದರ್ಶನ್ ಕುಮಾರ್ ಎಚ್. ಆರ್., ಮಂಜುನಾಥ, ರಾಜೇಶ್ ಬಿನ್ ಪಾಲಾಕ್ಷಿ ಇವರೇ ತನ್ನ ಪತ್ನಿಯ ಸಾವಿಗೆ ಕಾರಣ ಎಂದು ಆರೋಪಿಸಿದ್ದಾರೆ. ಉಷಾ ವಿಡಿಯೋದಲ್ಲಿ 10 ಜನರ ಹೆಸರು ಉಲ್ಲೇಖಿಸಿರುವ ಹಿನ್ನೆಲೆ ಹೆಚ್. ಮಲ್ಲೇನಹಳ್ಳಿ ಗ್ರಾಮದ 10 ಜನರ ಮೇಲೆ ತರೀಕೆರೆ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ.
Self harming: ರಾಜ್ಯದಲ್ಲೊಂದು ಮನಕಲಕುವ ಘಟನೆ, ಮೂವರು ಮಕ್ಕಳನ್ನು ಬಾವಿಗೆ ತಳ್ಳಿ ತಾಯಿ ಆತ್ಮಹತ್ಯೆ