ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಶೃಂಗೇರಿ ವಿಧಾನಸಭಾ ಕ್ಷೇತ್ರದ ಮತ ಎಣಿಕೆ ಕ್ಲೈಮ್ಯಾಕ್ಸ್‌ನಲ್ಲಿ ಭಾರಿ ಟ್ವಿಸ್ಟ್‌; ಅಂತಿಮವಾಗಿ ಸತ್ಯಕ್ಕೆ ಜಯ ಸಿಕ್ಕಿದೆ ಎಂದ ವಿಜಯೇಂದ್ರ

BY Vijayendra: ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆಯಲ್ಲಿ ಬಿಜೆಪಿ ಅಭ್ಯರ್ಥಿ ಡಿ.ಎನ್.‌ ಜೀವರಾಜ್‌ ಮುನ್ನಡೆ ಸಾಧಿಸಿದ್ದು, ಬಿಜೆಪಿ ಸಂಭ್ರಮಾಚರಣೆ ಮುಗಿಲು ಮುಟ್ಟಿದೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅಂತಿಮವಾಗಿ ಸತ್ಯಕ್ಕೆ ಜಯ ಸಿಕ್ಕಿದೆ ಎಂದು ಎಕ್ಸ್‌ನಲ್ಲಿ ತಿಳಿಸಿದ್ದಾರೆ.

ಅಂತಿಮವಾಗಿ ಸತ್ಯಕ್ಕೆ ಜಯ ಸಿಕ್ಕಿದೆ ಎಂದ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ

ವಿಜಯೇಂದ್ರ ಮತ್ತು ಡಿ.ಎನ್‌. ಜೀವರಾಜ್‌ (ಸಂಗ್ರಹ ಚಿತ್ರ) -

Ramesh Ballamoole
Ramesh Ballamoole May 3, 2026 3:26 PM

ಚಿಕ್ಕಮಗಳೂರು, ಮೇ 3: ಶೃಂಗೇರಿ ವಿಧಾನಸಭಾ ಕ್ಷೇತ್ರದ (Sringeri Assembly Constituency) ಅಂಚೆ ಮತಗಳ ಮರು ಎಣಿಕೆ ದೇಶಾದ್ಯಂತ ಸಂಚಲನ ಮೂಡಿಸಿದೆ. 2023ರ ವಿಧಾನಸಭಾ ಚುನಾವಣೆಯ ಅಂಚೆ ಮತಗಳ ಮರು ಎಣಿಕೆ ಕಾರ್ಯ ಮುಂದುವರಿದಿದ್ದು, ಬಿಜೆಪಿ ಅಭ್ಯರ್ಥಿ ಡಿ.ಎನ್.‌ ಜೀವರಾಜ್‌ (DN Jeevaraj) ಮುನ್ನಡೆ ಸಾಧಿಸಿದ್ದಾರೆ. ಅಧಿಕೃತ ಘೋಷಣೆ ಇನ್ನೂ ಹೊರಬಿದ್ದಿಲ್ಲ. ಅದಾಗ್ಯೂ ಕಮಲ ಪಾಳಯದಲ್ಲಿ ಸಂಭ್ರಮ ಮನೆ ಮಾಡಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ (BY Vijayendra) ಅಂತಿಮವಾಗಿ ಸತ್ಯಕ್ಕೆ ಜಯ ಸಿಕ್ಕಿದೆ ಎಂದು ಎಕ್ಸ್‌ನಲ್ಲಿ ತಿಳಿಸಿದ್ದಾರೆ.

ʼʼಶೃಂಗೇರಿಯ ಧರ್ಮಭೂಮಿಯಲ್ಲಿ ಅಂತಿಮವಾಗಿ ಸತ್ಯಕ್ಕೆ ಜಯ ಸಿಕ್ಕಿದೆ. ಪಕ್ಷದ ಅಭ್ಯರ್ಥಿ ಡಿ.ಎನ್. ಜೀವರಾಜ್ ಅವರ ಈ ಗೆಲುವು, ನಮ್ಮ ಚುನಾವಣಾ ವ್ಯವಸ್ಥೆ ಹಾಗೂ ನ್ಯಾಯಾಂಗದ ಮೇಲಿನ ವಿಶ್ವಾಸಕ್ಕೆ ಸಂದ ಜಯ. ಈ ಸಂದರ್ಭದಲ್ಲಿ ಶೃಂಗೇರಿ ಕ್ಷೇತ್ರದ ಸಮಸ್ತ ಮತದಾರ ಬಂಧುಗಳಿಗೂ ನನ್ನ ಕೃತಜ್ಞತೆಗಳನ್ನು ಸಲ್ಲಿಸುತ್ತೇನೆʼʼ ಎಂದಿದ್ದಾರೆ.

ʼʼಸತತ ಪರಿಶ್ರಮ ಮತ್ತು ದಣಿವರಿಯದ ಹೋರಾಟಕ್ಕೆ ಇಂದು ಪ್ರತಿಫಲ ದೊರೆತಿದೆ. ಹೈಕೋರ್ಟ್ ಆದೇಶದಂತೆ ನಡೆದ ಅಂಚೆ ಮತಗಳ ಮರು ಎಣಿಕೆ ನಂತರ ಫಲಿತಾಂಶ ಘೋಷಿಸಲಾಗಿದೆ. ಸಂವಿಧಾನಾತ್ಮಕ ಹೋರಾಟದ ಮೂಲಕ ಮತದಾರರ ಪ್ರತಿ ಮತಕ್ಕೂ ಗೌರವ ತಂದುಕೊಟ್ಟ ಜೀವರಾಜ್ ಅವರಿಗೆ ಹೃತ್ಪೂರ್ವಕ, ಹೆಮ್ಮೆಯ ಅಭಿನಂದನೆಗಳು. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸತ್ಯ ಯಾವತ್ತೂ ಸೋಲುವುದಿಲ್ಲ ಎನ್ನುವುದಕ್ಕೆ ಶೃಂಗೇರಿ ವಿಧಾನಸಭಾ ಕ್ಷೇತ್ರದ ಮರು ಎಣಿಕೆ ಪ್ರಕರಣ ಸಾಕ್ಷಿʼʼ ಎಂದು ಹೇಳಿದ್ದಾರೆ.

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರ ಎಕ್ಸ್‌ ಪೋಸ್ಟ್‌:



ಪ್ರಕರಣದ ಹಿನ್ನೆಲೆ

2023ರ ಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಟಿ.ಡಿ. ರಾಜೇಗೌಡ 201 ಮತಗಳ ಅಂತರದಿಂದ ಗೆಲುವು ಸಾಧಸಿದ್ದರು. ಬಳಿಕ ಅಂಚೆ ಮತ ಎಣಿಕೆಯಲಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ ಬಿಜೆಪಿ ಪರಾಜಿತ ಅಭ್ಯರ್ಥಿ ಡಿ.ಎನ್‌. ಜೀವರಾಜ್‌ ಹೈಕೋರ್ಟ್‌ನಲ್ಲಿ ದಾವೆ ಹೂಡಿದ್ದರು. ವಿಚಾರಣೆ ಕೈಗೆತ್ತಿಕೊಂಡ ಹೈಕೋರ್ಟ್‌ ಅಂಚೆ ಮತಗಳ ಮರು ಎಣಿಕೆಗೆ ಆದೇಶ ನೀಡಿತ್ತು. ಕೋರ್ಟ್‌ ಆದೇಶದಂತೆ ಶನಿವಾರ (ಮೇ 2) ಅಂಚೆ ಮತಗಳ ಮರು ಎಣಿಕೆ ಮಾಡಲಾಗಿದೆ.

ಶೃಂಗೇರಿ ವಿಧಾನಸಭಾ ಕ್ಷೇತ್ರ: ಮತಗಳಲ್ಲಿ ಡಬಲ್‌ ಟಿಕ್‌ನಿಂದಾಗಿ 255 ಮತ ತಿರಸ್ಕೃತ, ಕಾಂಗ್ರೆಸ್‌ಗೆ ಶಾಕ್

ಚಿಕ್ಕಮಗಳೂರಿನ ಐಡಿಎಸ್‌ಜಿ ಕಾಲೇಜಿನಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ನಡುವೆ ಅಂಚೆ ಮತಗಳ ಮರು ಎಣಿಕೆ ನಡೆಯಿತು. ಮೂಲಗಳ ಪ್ರಕಾರ, ಮರು ಎಣಿಕೆಯ ನಂತರ ಕಾಂಗ್ರೆಸ್ ಶಾಸಕ ರಾಜೇಗೌಡ ಅವರ ಮತಗಳ ಸಂಖ್ಯೆಯಲ್ಲಿ ಕುಸಿತ ಕಂಡುಬಂದಿದ್ದು, ಬಿಜೆಪಿಯ ಜೀವರಾಜ್ ಅವರಿಗೆ ಮುನ್ನಡೆ ಸಿಕ್ಕಿದೆ.

ವಿಜಯೋತ್ಸವ ಆಚರಿಸಿದ್ದ ಕಾಂಗ್ರೆಸ್‌ ಕಾರ್ಯಕರ್ತರು

ಶನಿವಾರ ಅಂಚೆ ಮತ ಎಣಿಕೆ ವೇಳೆ ಕಾಂಗ್ರೆಸ್‌ ಅಭ್ಯರ್ಥಿ ಟಿ.ಡಿ. ರಾಜೇಗೌಡ 2 ಮತ ಎಚ್ಚುವರಿಯಾಗಿ ಪಡೆದಿದ್ದರು. ಮತ ಎಣಿಕೆ ಕೇಂದ್ರದ ಬಳಿ ಜಮಾಯಿಸಿದ್ದ ಕಾಂಗ್ರೆಸ್‌ ಕಾರ್ಯಕರ್ತರು ಮತ್ತು ಶಾಸಕ ಟಿ.ಡಿ. ರಾಜೇಗೌಡ ಬೆಂಗಲಿಗರು ಸಂಭ್ರಮಾಚರಣೆ ನಡೆಸಿದ್ದರು. ಆದರೆ ಭಾನುವಾರ ಚಿತ್ರಣವೇ ಬದಲಾಗಿದ್ದು, ಇದೀಗ ಬಿಜೆಪಿ ಕಾರ್ಯಕರ್ತರು ಕುಣಿದು ಕುಪ್ಪಳಿಸುತ್ತಿದ್ದಾರೆ. ಸತ್ಯಕ್ಕೆ ಜಯ ಸಿಕ್ಕಿದೆ ಎಂದು ಬಿಜೆಪಿ ಮುಖಂಡರು ಪ್ರತಿಕ್ರಿಯಿಸಿದ್ದಾರೆ.

ರಾಜ್ಯದ ಇನ್ನಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್‌ ಮಾಡಿ.

ʼಪ್ರವಾಸಿ ಪ್ರಪಂಚʼ ವೆಬ್‌ಸೈಟ್‌ಗೆ ಭೇಟಿ ನೀಡಲು ಇಲ್ಲಿ ಕ್ಲಿಕ್‌ ಮಾಡಿ.