ಶೃಂಗೇರಿ ಅಂಚೆ ಮತ ಮರುಎಣಿಕೆ ಪ್ರಕರಣ: ಯಥಾಸ್ಥಿತಿ ಕಾಯ್ದುಕೊಳ್ಳಲು ಸುಪ್ರೀಂ ಕೋರ್ಟ್ ಸೂಚನೆ
Supreme Court: ಶೃಂಗೇರಿ ಶಾಸಕರಾಗಿ ಆಯ್ಕೆಯಾದ ಬಿಜೆಪಿಯ ಡಿ.ಎನ್. ಜೀವರಾಜ್ ಅವರಿಗೆ ಸುಪ್ರೀಂ ಕೋರ್ಟ್‌ನಿಂದ ಮತ್ತೆ ಬಿಗ್ ಶಾಕ್ ಎದುರಾಗಿದೆ. ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತ ಮರು ಎಣಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಯಥಾಸ್ಥಿತಿ ಮುಂದುವರಿಸಲು ಸೂಚನೆ ನೀಡಿ ವಿಚಾರಣೆಯನ್ನು ಜುಲೈ 30ಕ್ಕೆ ಮುಂದೂಡಿಕೆ ಮಾಡಿದೆ. ಆ ಮೂಲಕ ಕಾಂಗ್ರೆಸ್ ಅಭ್ಯರ್ಥಿ ಟಿ.ಡಿ. ರಾಜೇಗೌಡ ಶಾಸಕರಾಗಿ ಮುಂದುವರಿಯಲಿದ್ದಾರೆ.
ಸುಪ್ರೀಂ ಕೋರ್ಟ್ ಮತ್ತು ಜೀವರಾಜ್ (ಸಂಗ್ರಹ ಚಿತ್ರ) -
ಚಿಕ್ಕಮಗಳೂರು, ಜು. 23: ಹಲವು ನಾಟಕೀಯ ಬೆಳವಣಿಗೆ, ಮರು ಮತ ಎಣಿಕೆ ಬಳಿಕ (Sringeri MLA Row) ಶೃಂಗೇರಿ ಶಾಸಕರಾಗಿ ಆಯ್ಕೆಯಾದ ಬಿಜೆಪಿಯ ಡಿ.ಎನ್. ಜೀವರಾಜ್ (DN Jeevaraj) ಅವರಿಗೆ ಸುಪ್ರೀಂ ಕೋರ್ಟ್‌ನಿಂದ ಮತ್ತೆ ಬಿಗ್ ಶಾಕ್ ಎದುರಾಗಿದೆ. ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತ ಮರು ಎಣಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಯಥಾಸ್ಥಿತಿ ಮುಂದುವರಿಸಲು ಸೂಚನೆ ನೀಡಿ ವಿಚಾರಣೆಯನ್ನು ಜುಲೈ 30ಕ್ಕೆ ಮುಂದೂಡಿಕೆ ಮಾಡಿದೆ. ಆ ಮೂಲಕ ಕಾಂಗ್ರೆಸ್ ಅಭ್ಯರ್ಥಿ ಟಿ.ಡಿ. ರಾಜೇಗೌಡ ಶಾಸಕರಾಗಿ ಮುಂದುವರಿಯಲಿದ್ದಾರೆ.
ವಿಧಾನಸಭೆ ಚುನಾವಣೆ ನಡೆದು ಸುಮಾರು ಎರಡೂವರೆ ವರ್ಷ ಕಳೆದು ಶಾಸಕರಾಗಿ ಡಿ.ಎನ್. ಜೀವರಾಜ್ ಪ್ರಮಾಣ ವಚನ ಸ್ವೀಕರಿಸಿದ್ದರು. ಸತತ ಕಾನೂನು ಹೋರಾಟದ ಮೂಲಕ ಶಾಸಕರಾಗಿ ಆಯ್ಕೆಯಾಗಿರುವ ಜೀವರಾಜ್ ಮೇ 6ರಂದು ಶೃಂಗೇರಿ ಶಾರದಾಂಬೆ ಹೆಸರಲ್ಲಿ ವಿಧಾನಸೌಧದಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದರು. ಆದರೆ ಇದು ತುಂಬ ಸಮಯದವರೆಗೆ ಮುಂದುವರಿಯಲಿಲ್ಲ. ಇದನ್ನು ಪ್ರಶ್ನಿಸಿ ಕಾಂಗ್ರೆಸ್ ಸುಪ್ರೀಂ ಕೋರ್ಟ್ ಮೆಟ್ಟಿಲೇರಿತು.
ನಾಟಕೀಯ ಬೆಳವಣಿಗೆ ಬಳಿಕ ಕೊನೆಗೂ ಶೃಂಗೇರಿ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಬಿಜೆಪಿಯ ಜೀವರಾಜ್
ವಿಚಾರಣೆಯಲ್ಲಿ ಟಿ.ಡಿ. ರಾಜೇಗೌಡ ಅವರ ಶಾಸಕತ್ವವನ್ನು ತಾತ್ಕಾಲಿಕವಾಗಿ ಪುನಃ ಸ್ಥಾಪಿಸುವಂತೆ ಸುಪ್ರೀಂ ಕೋರ್ಟ್ ಆದೇಶ ಹೊರಡಿಸಿತು. ಬಳಿಕ ವಿಚಾರಣೆಯನ್ನು ಜುಲೈ 23ಕ್ಕೆ ಕಾಯ್ದಿರಿತ್ತು. ಗುರುವಾರ ನಡೆದ ವಿಚಾರಣೆಯಲ್ಲಿ ಸುಪ್ರೀಂ ಕೋರ್ಟ್ ಜೀವರಾಜ್ ಪರವಾಗಿ ತೀರ್ಪು ನೀಡಿ ಜುಲೈ 30ಕ್ಕೆ ವಿಚಾರಣೆ ಮುಂದೂಡಿದೆ.
ಏನಿದು ಪ್ರಕರಣ?
2023ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಟಿ.ಡಿ. ರಾಜೇಗೌಡ ಗೆದ್ದಿದ್ದರು. ಜೀವರಾಜ್ ಕೇವಲ 201 ಮತಗಳ ಅಂತರದಿಂದ ಸೋತಿದ್ದರು. ಬಳಿಕ ಈ ಫಲಿತಾಂಶ ಪ್ರಶ್ನಿಸಿ ಜೀವರಾಜ್ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು. ಏಪ್ರಿಲ್ 6ರಂದು ಹೈಕೋರ್ಟ್ 279 ತಿರಸ್ಕೃತ ಅಂಚೆ ಮತಪತ್ರಗಳ ಮರುಪರಿಶೀಲನೆ ಹಾಗೂ ಎಲ್ಲ ಅಂಚೆ ಮತಗಳ ಮರುಎಣಿಕೆಗೆ ಆದೇಶಿಸಿತ್ತು. ಅದರಂತೆ ಮೇ 2ರಂದು ಮರುಎಣಿಕೆ ನಡೆದಿತ್ತು.
ಅಂಚೆ ಮತ ತಿರುಚಿದ ಆರೋಪ; ಶೃಂಗೇರಿ ಬಿಜೆಪಿ ಶಾಸಕ ಡಿ.ಎನ್. ಜೀವರಾಜ್ ವಿರುದ್ಧದ ಪ್ರಕರಣಕ್ಕೆ ಹೈಕೋರ್ಟ್ ತಡೆ
ಮೊದಲ ಎಣಿಕೆಯಲ್ಲಿ 1,822 ಅಂಚೆ ಮತಗಳಲ್ಲಿ ಜೀವರಾಜ್ 692 ಮತಗಳನ್ನು ಪಡೆದರೆ, ರಾಜೇಗೌಡ 569 ಮತಗಳನ್ನು ಪಡೆದಿದ್ದರು. ಮರುಪರಿಶೀಲನೆ ಮತ್ತು ಮರುಎಣಿಕೆಯ ಬಳಿಕ ಜೀವರಾಜ್ ಮತಗಳು 690 ಆಗಿದ್ದು, ರಾಜೇಗೌಡ ಅವರ ಮತಗಳು 314ಕ್ಕೆ ಇಳಿಯಿತು. 255 ಮತ ಕಡಿತವಾಗಿತ್ತು. ಇದರಿಂದ ಹೆಚ್ಚುವರಿ 52 ಮತ ಪಡೆದ ಜೀವರಾಜ್ ಅವರನ್ನು ವಿಜೇತರೆಂದು ಘೋಷಿಸಲಾಯಿತು. ಅದರಂತೆ ಮೇ 6ರಂದು ಜೀವರಾಜ್ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ್ದರು. ಇದೀಗ ಮತ್ತೆ ಅವರು ತಮ್ಮ ಶಾಸಕ ಸ್ಥಾನವನ್ನು ಕಳೆದುಕೊಂಡಿದ್ದಾರೆ.
ರಾಜ್ಯದ ಇನ್ನಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.
ʼಪ್ರವಾಸಿ ಪ್ರಪಂಚʼ ವೆಬ್‌ಸೈಟ್‌ಗೆ ಭೇಟಿ ನೀಡಲು ಇಲ್ಲಿ ಕ್ಲಿಕ್ ಮಾಡಿ.