ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

ಶೃಂಗೇರಿ ಮತ ಎಣಿಕೆ ವೀಡಿಯೊ ನಾಪತ್ತೆ: ಚುನಾವಣಾ ಆಯೋಗವನ್ನು ತರಾಟೆಗೆ ತೆಗೆದುಕೊಂಡ ಸುಪ್ರೀಂ ಕೋರ್ಟ್

ಶೃಂಗೇರಿ ವಿಧಾನ ಸಭಾ ಕ್ಷೇತ್ರದಲ್ಲಿ 2023ರಲ್ಲಿ ಮತ ಎಣಿಕೆ ವೇಳೆ ಅಕ್ರಮ ನಡೆದಿದೆ ಎಂದು ಆರೋಪಿಸಿ ಶಾಸಕ ರಾಜೇಗೌಡ ಸಲ್ಲಿದ್ದ ಅರ್ಜಿ ವಿಚಾರಣೆ ವೇಳೆ ಸುಪ್ರೀಂ ಕೋರ್ಟ್, ಚುನಾವಣಾ ಆಯೋಗವನ್ನು ತೀವ್ರ ತರಾಟೆಗೆ ತೆಗೆದುಕೊಂಡಿದೆ. ಮತ ಎಣಿಕೆ ವಿಡಿಯೋ ಲಭ್ಯವಿಲ್ಲ ಎಂದು ಚುನಾವಣಾ ಆಯೋಗ ನೀಡಿದ್ದ ಹೇಳಿಕೆಗೆ ಸುಪ್ರೀಂ ಕೋರ್ಟ್, ಚುನಾವಣಾ ದಾಖಲೆಗಳನ್ನು ಸಂರಕ್ಷಿಸುವುದು ಚುನಾವಣಾ ಆಯೋಗದ ಕರ್ತವ್ಯ ಎಂದು ಹೇಳಿದೆ. ಎರಡು ವಾರಗಳೊಳಗೆ ಎಲ್ಲಾ ದಾಖಲೆಗಳ ಹೊಸ ಅಫಿಡವಿಟ್ ಸಲ್ಲಿಸುವಂತೆ ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡಿದೆ.

ಸಂಗ್ರಹ ಚಿತ್ರ

ನವದೆಹಲಿ: ಕರ್ನಾಟಕದ ಶೃಂಗೇರಿ ವಿಧಾನಸಭಾ ಕ್ಷೇತ್ರದ 2023ರ (Sringeri Assembly Constituency) ಚುನಾವಣಾ ಮತ ಎಣಿಕೆ ವೇಳೆ ಅಕ್ರಮ ನಡೆದಿದೆ ಎಂದು ಆರೋಪಿಸಿ ಶೃಂಗೇರಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಿ.ಎನ್. ಜೀವ್‌ರಾಜ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ವೇಳೆ ಸುಪ್ರೀಂ ಕೋರ್ಟ್, (Supreme Court) ಚುನಾವಣಾ ಆಯೋಗವನ್ನು (Election Commission) ತೀವ್ರ ತರಾಟೆಗೆ ತೆಗೆದುಕೊಂಡಿದೆ. ಮತ ಎಣಿಕೆ ವಿಡಿಯೋ ರೆಕಾರ್ಡಿಂಗ್ ಪತ್ತೆಹಚ್ಚಲು ಸಾಧ್ಯವಾಗುತ್ತಿಲ್ಲ ಎಂದು ಭಾರತೀಯ ಚುನಾವಣಾ ಆಯೋಗದ ಹೇಳಿಕೆಯನ್ನು ತಿರಸ್ಕರಿಸಿರುವ ಸುಪ್ರೀಂ ಕೋರ್ಟ್, ʼʼಚುನಾವಣಾ ದಾಖಲೆಗಳನ್ನು ಸಂರಕ್ಷಿಸುವುದು ಚುನಾವಣಾ ಆಯೋಗದ ಪ್ರಮುಖ ಕರ್ತವ್ಯವಾಗಿದೆʼʼ ಎಂದು ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ ಮತ್ತು ನ್ಯಾಯಮೂರ್ತಿ ಜಾಯ್‌ಮಲ್ಯ ಬಾಗ್ಚಿ ಅವರನ್ನೊಳಗೊಂಡ ಪೀಠ ಹೇಳಿದೆ.

2023ರ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಶೃಂಗೇರಿ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿ ಟಿ.ಡಿ. ರಾಜೇಗೌಡ ಅವರು ಬಿಜೆಪಿಯ ಡಿ.ಎನ್. ಜೀವರಾಜ್ ವಿರುದ್ಧ ಕೇವಲ 201 ಮತಗಳ ಅಲ್ಪ ಅಂತರದಿಂದ ಜಯಗಳಿಸಿದ್ದರು. ಇದನ್ನು ಪ್ರಶ್ನಿಸಿ ಡಿ.ಎನ್. ಜೀವರಾಜ್ ಅವರು ಮತ ಎಣಿಕೆ ವೇಳೆ ಅಕ್ರಮ ನಡೆದಿದ್ದು, ಮತ ಎಣಿಕೆ ಕೇಂದ್ರದ ವಿಡಿಯೋ ರೆಕಾರ್ಡಿಂಗ್ ಮತ್ತು ಸಿಸಿಟಿವಿ ದೃಶ್ಯಾವಳಿಗಳನ್ನು ಸಂರಕ್ಷಿಸಿ ನ್ಯಾಯಾಲಯಕ್ಕೆ ಸಲ್ಲಿಸುವಂತೆ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

ಹೈಕೋರ್ಟ್ ಆದೇಶದಂತೆ ಅಂಚೆ ಮತಗಳ ಮರುಎಣಿಕೆ ನಡೆದಾಗ ಫಲಿತಾಂಶ ಬದಲಾಗಿ ಜೀವರಾಜ್ ಮುನ್ನಡೆ ಸಾಧಿಸಿದರು. ಇದರ ವಿರುದ್ಧ ಟಿ.ಡಿ. ರಾಜೇಗೌಡ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದು, ಮೂಲ ಮತ ಎಣಿಕೆ ಮತ್ತು ಮರುಎಣಿಕೆಯ ಸಿಸಿಟಿವಿ ದೃಶ್ಯಾವಳಿ ಹಾಗೂ ವೀಕ್ಷಕರ ವರದಿಯನ್ನು ಒದಗಿಸುವಂತೆ ಕೋರಿದ್ದರು. ವಿಚಾರಣೆ ವೇಳೆ, 2023ರ ಎಣಿಕೆಯ ವೀಡಿಯೊ ರೆಕಾರ್ಡಿಂಗ್ ಈಗ ಲಭ್ಯವಿಲ್ಲ ಮತ್ತು ಅದು ಟ್ರೇಸ್ ಆಗುತ್ತಿಲ್ಲ ಎಂದು ಇಸಿಐ ಪರ ವಕೀಲರು ತಿಳಿಸಿದ್ದು ವಿವಾದಕ್ಕೆ ಕಾರಣವಾಗಿದೆ.

ಅಫಿಡವಿಟ್ ಸಲ್ಲಿಸುವಂತೆ ಚುನಾವಣಾ ಆಯೋಗಕ್ಕೆ ಸೂಚನೆ

ನ್ಯಾಯಮೂರ್ತಿ ಸಂಜಯ್ ಕುಮಾರ್ ಹಾಗೂ ನ್ಯಾಯಮೂರ್ತಿ ಸಂಜೀವ್ ಸಚದೇವ ಅವರನ್ನೊಳಗೊಂಡ ದ್ವಿಪೀಠವು ಈ ಪ್ರಕರಣದ ವಿಚಾರಣೆ ನಡೆಸಿತು. ವಿಚಾರಣೆ ವೇಳೆ ಚುನಾವಣಾ ಆಯೋಗದ ಪರ ವಕೀಲರು ʼʼಮತ ಎಣಿಕೆಯ ವಿಡಿಯೋ ತುಣುಕುಗಳನ್ನು ಹುಡುಕಲಾಗುತ್ತಿದೆʼʼ ಎಂದು ತಿಳಿಸಿದಾಗ ನ್ಯಾಯಪೀಠ ತೀವ್ರ ಅಸಮಾಧಾನ ವ್ಯಕ್ತಪಡಿಸಿತು. ʼʼಚುನಾವಣೆಗಳನ್ನು ನ್ಯಾಯಸಮ್ಮತವಾಗಿ ನಡೆಸುವುದು ಮತ್ತು ಅದರ ದಾಖಲೆಗಳನ್ನು ಸುರಕ್ಷಿತವಾಗಿಡುವುದು ಚುನಾವಣಾ ಆಯೋಗದ ಪ್ರಥಮ ಕರ್ತವ್ಯ. ವಿಡಿಯೋ ಕಳೆದುಹೋಗಿದೆ ಅಥವಾ ಹುಡುಕುತ್ತಿದ್ದೇವೆ ಎಂಬ ನೆಪಗಳು ಚುನಾವಣಾ ಆಯೋಗದಂತಹ ಜವಾಬ್ದಾರಿಯುತ ಸಂಸ್ಥೆಗೆ ಶೋಭೆ ತರುವುದಿಲ್ಲ'' ಎಂದು ಪೀಠ ಖಾರವಾಗಿ ಹೇಳಿತು.

ಚುನಾವಣಾ ಆಯೋಗದ ಈ ಹೇಳಿಕೆಯನ್ನು ಖಂಡಿಸಿರುವ ಸುಪ್ರೀಂ ಕೋರ್ಟ್, ದಾಖಲೆಗಳನ್ನು ಎಷ್ಟು ಕಾಲ ಸಂರಕ್ಷಿಸಲಾಗುತ್ತಿತ್ತು, ವಿಡಿಯೋ ರೆಕಾರ್ಡಿಂಗ್ ಯಾವಾಗ ಅಳಿಸಲಾಯಿತು, ಮತ್ತು ಅದಕ್ಕೆ ಅನುಮತಿ ಯಾರು ನೀಡಿದರು, ಅದರ ಬ್ಯಾಕಪ್ ಏನಾದರೂ ಇದೆಯೇ ಎಂಬುದನ್ನು ಪರಿಶೀಲಿಸಿ ಎರಡು ವಾರಗಳೊಳಗೆ ಹೊಸ ಅಫಿಡವಿಟ್ ಸಲ್ಲಿಸುವಂತೆ ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿದೆ.

ದಾಖಲೆಗಳ ಸಂರಕ್ಷಣೆಯಲ್ಲಿ ಲೋಪಗಳು ಕಂಡುಬಂದರೆ ಗಂಭೀರವಾಗಿ ಪರಿಗಣಿಸಲಾಗುವುದು ಎಂದು ನ್ಯಾಯಾಲಯ ಎಚ್ಚರಿಕೆ ನೀಡಿದೆ. ಪ್ರಕರಣದ ಮುಂದಿನ ವಿಚಾರಣೆಯನ್ನು ಎರಡು ವಾರಗಳ ಬಳಿಕ ನಡೆಸಲು ನಿಗದಿಪಡಿಸಲಾಗಿದೆ.

Vishakha Bhat Heggar

View all posts by this author