ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

Karnataka Rains: ಕಾಫಿನಾಡು ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟ; ಹಲವೆಡೆ ಧರೆಗುರುಳಿದ ಮರ, ವಿದ್ಯುತ್ ಕಂಬಗಳು

Karnataka Rains: ಮುಂದಿನ ನಾಲ್ಕು ದಿನಗಳ ಕಾಲ ರಾಜ್ಯದಲ್ಲಿ ಮಳೆ ಅಬ್ಬರಿಸುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ನಾಳೆ ಬೀದರ್‌, ವಿಜಯಪುರ, ಯಾದಗಿರಿ, ಬೆಳಗಾವಿ, ಧಾರವಾಡ ಸೇರಿ 12 ಜಿಲ್ಲೆಗಳಿಗೆ ಹವಾಮಾನ ಇಲಾಖೆಯು ಯೆಲ್ಲೋ ಅಲರ್ಟ್‌ ಘೋಷಿಸಿದ್ದು, ಭಾರಿ ಮಳೆಯಾಗುವ ಸಾಧ್ಯತೆ ಇದೆ.

ಚಿಕ್ಕಮಗಳೂರು ಜಿಲ್ಲೆಯ ಕಳಸದಲ್ಲಿ ಭಾರಿ ಮಳೆ.

ಚಿಕ್ಕಮಗಳೂರು, ಏಪ್ರಿಲ್‌ 20: ಕಾಫಿನಾಡು ಚಿಕ್ಕಮಗಳೂರು (Chikkamagaluru) ಜಿಲ್ಲೆಯ ವಿವಿಧೆಡೆ ಸೋಮವಾರ ಬಿರುಗಾಳಿ ಸಹಿತ ಭಾರಿ ಮಳೆಯಾಗಿದೆ (heavy rain). ಅಲ್ಲಲ್ಲಿ ಮರಗಳು ಧರೆಗುರುಳಿದ್ದು, ವಿದ್ಯುತ್ ಕಂಬಗಳು ನೆಲಕ್ಕುರುಳಿವೆ. ಇದರಿಂದ ಹಲವು ಗ್ರಾಮಗಳಲ್ಲಿ ವಿದ್ಯುತ್‌ ಸಂಪರ್ಕ ಕಡಿತಗೊಂಡಿದೆ. ಜಿಲ್ಲೆಯ ಶೃಂಗೇರಿ, ಕೊಪ್ಪ, ಮೂಡಿಗೆರೆ, ಕಳಸ, ಎನ್.ಆರ್.ಪುರ ತಾಲೂಕುಗಳ ವ್ಯಾಪ್ತಿಯಲ್ಲಿ ಭಾರಿ ಮಳೆಯಾಗಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಇನ್ನು ಹಲವೆಡೆ ಆಲಿಕಲ್ಲು ಮಳೆಯಾಗಿದೆ.



ಏಪ್ರಿಲ್‌ 24ರವರೆಗೆ ರಾಜ್ಯದಲ್ಲಿ ಅಬ್ಬರಿಸಲಿದೆ ಮಳೆ

ಮುಂದಿನ ನಾಲ್ಕು ದಿನಗಳ ಕಾಲ ರಾಜ್ಯದಲ್ಲಿ ಮಳೆ ಅಬ್ಬರಿಸುವ ಸಾಧ್ಯತೆ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್‌ ಘೋಷಿಸಿದೆ. ಮಂಗಳವಾರ ಕೂಡ ಬೀದರ್‌, ವಿಜಯಪುರ, ಯಾದಗಿರಿ, ಬೆಳಗಾವಿ, ಧಾರವಾಡ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಶಿವಮೊಗ್ಗ, ಉಡುಪಿ, ಚಿಕ್ಕಮಗಳೂರು, ಹಾಸನ, ಕೊಡಗು ಸೇರಿ 12 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಿಸಿದ್ದು, ಭಾರಿ ಮಳೆಯಾಗುವ ನಿರೀಕ್ಷೆ ಇದೆ.

Summer Health Tips: ಬಿಸಿಲಿಗೆ ಸ್ಮೃತಿ ತಪ್ಪದಿರಲಿ; ಆರೋಗ್ಯದ ಬಗ್ಗೆ ಕಾಳಜಿ ಇರಲಿ

ಏಪ್ರಿಲ್‌ 22ರಂದು ಬೆಳಗಾವಿ, ಧಾರವಾಡ, ಗದಗ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಹಾವೇರಿ, ಶಿವಮೊಗ್ಗ, ಕೊಡಗು, ಹಾಸನ, ಚಿಕ್ಕಮಗಳೂರು ಸೇರಿ 11 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಯೆಲ್ಲೋ ಅಲರ್ಟ್‌ ನೀಡಲಾಗಿದೆ.