ವಕ್ಫ್​ ತಿದ್ದುಪಡಿ ಮಸೂದೆ ಐಪಿಎಲ್​ ಸುನಿತಾ ವಿಲಿಯಮ್ಸ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Karnataka Rain: ಚಿಕ್ಕಮಗಳೂರಲ್ಲಿ ಭಾರಿ ಮಳೆ; ಸಿಡಿಲು ಬಡಿದು ಮಹಿಳೆ ಸಾವು

Karnataka Rain: ಚಿಕ್ಕಮಗಳೂರು ತಾಲೂಕಿನ ಕುರುಬರಹಳ್ಳಿಯಲ್ಲಿ ಘಟನೆ ನಡೆದಿದೆ. ಹೊಲದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಸಿಡಿಲು ಬಡಿದ ಪರಿಣಾಮ ಬೇಲೂರು ತಾಲೂಕಿನ ಹೆಬ್ಬಾಳ ತಿಮ್ಮನಹಳ್ಳಿಯ ಮಹಿಳೆ ಮೃತಪಟ್ಟಿದ್ದಾರೆ. ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಚಿಕ್ಕಮಗಳೂರಲ್ಲಿ ಭಾರಿ ಮಳೆ; ಸಿಡಿಲು ಬಡಿದು ಮಹಿಳೆ ಸಾವು

Profile Prabhakara R Mar 23, 2025 9:58 PM

ಚಿಕ್ಕಮಗಳೂರು: ಜಿಲ್ಲೆಯ ಹಲವೆಡೆ ಭಾನುವಾರ ಗುಡುಗು ಸಹಿತ ಭಾರಿ ಮಳೆಯಾಗಿದೆ. ಈ ನಡುವೆ ಹೊಲದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಸಿಡಿಲು ಬಡಿದು ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ (Karnataka Rain) ಚಿಕ್ಕಮಗಳೂರು ತಾಲೂಕಿನ ಕುರುಬರಹಳ್ಳಿಯಲ್ಲಿ ನಡೆದಿದೆ. ಬೇಲೂರು ತಾಲೂಕಿನ ಹೆಬ್ಬಾಳ ತಿಮ್ಮನಹಳ್ಳಿಯ ನಾಗಮ್ಮ (65) ಮೃತರು. ಹೊಲದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಸಿಡಿಲು ಬಡಿದ ಪರಿಣಾಮ ಮೃತಪಟ್ಟಿದ್ದಾರೆ. ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಸುದ್ದಿಯನ್ನೂ ಓದಿ | Viral Video: ನಾಯಿಯ ಮೇಲೆ ಕಾರು ಹತ್ತಿಸಿ ವಿಕೃತಿ ಮೆರೆದ ಕಿಡಿಗೇಡಿ ಚಾಲಕ; ನೆಟ್ಟಿಗರಿಂದ ಆಕ್ರೋಶ

ಯೆಲ್ಲೋ ಅಲರ್ಟ್‌; ಮಾ.24ರಂದು ಬೆಂಗಳೂರು ಸೇರಿ ಹಲವೆಡೆ ಅಬ್ಬರಿಸಲಿದ್ದಾನೆ ವರುಣ!

ಬೆಂಗಳೂರು: ಬೆಂಗಳೂರು ಸೇರಿ ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡಿನ ಕೆಲವೆಡೆ ಶನಿವಾರ ಭರ್ಜರಿ ಮಳೆಯಾಗಿದೆ. ಅದೇ ರೀತಿ ನಾಳೆಯೂ (ಮಾ.24) ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆ (Karnataka Rain) ಸುರಿಯುವ ಸಾಧ್ಯತೆ ಹಿನ್ನೆಲೆಯಲ್ಲಿ ಭಾರತ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್‌ ಘೋಷಿಸಿದೆ. ರಾಜ್ಯದಾದ್ಯಂತ ಮಾರ್ಚ್ 25 ರವರೆಗೆ ಮೋಡ ಕವಿದ ವಾತಾವರಣದೊಂದಿಗೆ, ಗುಡುಗು, ಮಿಂಚು ಮತ್ತು ಬಿರುಗಾಳಿ ಸಹಿತ ಗಾಳಿಯ ವೇಗ ಗಂಟೆಗೆ 30-50 ಕಿಮೀ ತಲುಪುವ ಸಾಧ್ಯತೆ ಇದ್ದು, ಕರಾವಳಿ, ಮಲೆನಾಡು ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಚದುರಿದಿಂದ ವ್ಯಾಪಕವಾಗಿ ಸಾಧಾರಣ ಮಳೆ ಹಾಗೂ ಅಲ್ಲಲ್ಲಿ ಭಾರಿ ಮಳೆಯಾಗಲಿದೆ.

ಇನ್ನು ಶನಿವಾರ ಸಂಜೆಯೂ (ಮಾ.23) ಬೆಂಗಳೂರು, ಬಾಗಲಕೋಟೆ, ಬಳ್ಳಾರಿ, ಬೀದರ್, ಚಾಮರಾಜನಗರ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಹಾಸನ, ಕೊಡಗು, ಕೊಪ್ಪಳ, ರಾಯಚೂರು, ರಾಮನಗರ, ತುಮಕೂರು, ವಿಜಯನಗರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳ ಮುನ್ಸೂಚನೆ:

ಮುಂದಿನ 24 ಗಂಟೆ: ಸಾಮಾನ್ಯವಾಗಿ ಮೋಡ ಕವಿದ ಆಕಾಶವಿರಲಿದ್ದು, ಹಗುರದಿಂದ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ .ಕೆಲವೊಮ್ಮೆ ಮೇಲೆ ಗಾಳಿ ಬಲವಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 30-C ಮತ್ತು 20°C ಆಗುವ ಸಾಧ್ಯತೆ ಇದೆ.

ಮುಂದಿನ 48 ಗಂಟೆ: ಭಾಗಶಃ ಮೋಡ ಕವಿದ ವಾತಾವರಣ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 32°C ಮತ್ತು 22°C ಅಗುವ ಸಾಧ್ಯತೆ ಇದೆ.

ಮಾ.26ರವರೆಗೆ ರಾಜ್ಯದ ವಿವಿಧೆಡೆ ಮಳೆ

ಮಾ. 24ರಂದು ಚಿಕ್ಕಮಗಳೂರು, ಕೊಡಗು, ಹಾಸನ ಮತ್ತು ಮೈಸೂರು ಜಿಲ್ಲೆಗಳ ಒಂದೆರಡು ಸ್ಥಳಗಳಲ್ಲಿ ಹಗುರ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಬೆಳಗಾವಿ ಮತ್ತು ಧಾರವಾಡ ಜಿಲ್ಲೆಗಳ ಒಂದೆರಡು ಸ್ಥಳಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಒಂದೆರಡು ಸ್ಥಳಗಳಲ್ಲಿ ಗಂಟೆಗೆ 30-40 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ. ರಾಜ್ಯದ ಉಳಿದ ಭಾಗಗಳಲ್ಲಿ ಒಣ ಹವಾಮಾನ ಇರುವ ಸಾಧ್ಯತೆ ಇದೆ.

ಮಾ.25ರಂದು ಚಿಕ್ಕಮಗಳೂರು, ಕೊಡಗು, ಹಾಸನ, ಮಂಡ್ಯ, ಚಾಮರಾಜನಗರ ಮತ್ತು ಮೈಸೂರು ಜಿಲ್ಲೆಗಳ ಒಂದೆರಡು ಸ್ಥಳಗಳಲ್ಲಿ ಹಗುರ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳ ಒಂದೆರಡು ಸ್ಥಳಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಒಂದೆರಡು ಸ್ಥಳಗಳಲ್ಲಿ ಗಂಟೆಗೆ 30-40 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ. ರಾಜ್ಯದ ಉಳಿದ ಭಾಗಗಳಲ್ಲಿ ಒಣ ಹವಾಮಾನ ಇರುವ ಸಾಧ್ಯತೆ ಇದೆ.

ಮಾ.26ರಂದು ಚಿಕ್ಕಮಗಳೂರು, ಕೊಡಗು, ಹಾಸನ ಮತ್ತು ಮೈಸೂರು ಜಿಲ್ಲೆಗಳ ಒಂದೆರಡು ಸ್ಥಳಗಳಲ್ಲಿ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಕನ್ನಡ ಜಿಲ್ಲೆಯ ಒಂದೆರಡು ಸ್ಥಳಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಒಂದೆರಡು ಸ್ಥಳಗಳಲ್ಲಿ ಗಂಟೆಗೆ 30-40 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ. ರಾಜ್ಯದ ಉಳಿದ ಭಾಗಗಳಲ್ಲಿ ಒಣ ಹವಾಮಾನ ಇರುವ ಸಾಧ್ಯತೆ ಇದೆ.

ಮಾ.27ರಂದು ರಾಜ್ಯದಾದ್ಯಂತ ಒಣ ಹವೆ ಇರುವ ಸಾಧ್ಯತೆಯಿದೆ. ಇದೇ ರೀತಿಯ ಸ್ಥಿತಿ ಮಾ. 28ರಂದು ಮುಂದುವರಿಯಲಿದೆ.

ಶನಿವಾರ ಎಲ್ಲೆಲ್ಲಿ ಎಷ್ಟು ಮಳೆ?

ದಕ್ಷಿಣ ಒಳನಾಡಿನ ಕೆಲವು ಸ್ಥಳಗಳಲ್ಲಿ ಮತ್ತು ಉತ್ತರ ಒಳನಾಡಿನ ಒಂದೆರಡು ಸ್ಥಳಗಳಲ್ಲಿ ಶನಿವಾರ ಗುಡುಗು ಸಹಿತ ಮಳೆಯಾಗಿದೆ. ಎಲ್ಲೆಲ್ಲಿ ಎಷ್ಟು ಪ್ರಮಾಣದಲ್ಲಿ ಮಳೆಯಾಗಿದೆ ಎಂದು ಕುರಿತ ಮಾಹಿತಿ ಇಲ್ಲಿದೆ.