ಕರ್ನಾಟಕ ಬಜೆಟ್​ ಮಹಿಳಾ ದಿನಾಚರಣೆ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Corruption Case: ಲಂಚ ಕೇಳಿದ ಅಧಿಕಾರಿಯ ಟೇಬಲ್‌ ಮೇಲೆ ಚಿಲ್ಲರೆ ಸುರಿದು, ಸನ್ಮಾನ

Chikkanayakanayakanahalli News: ಉಪ ನೋಂದಣಾಧಿಕಾರಿ ರಾಘವೇಂದ್ರ ಒಡೆಯರ್ ಲಂಚಕ್ಕೆ ಬೇಡಿಕೆ ಇಟ್ಟಿದ್ದಾರೆ ಎಂದು ಆರೋಪಿಸಿ, ಕೆಆರ್‌ಎಸ್‌ ಪಕ್ಷದ ನೇತೃತ್ವದಲ್ಲಿ, ಟೇಬಲ್‌ ಮೇಲೆ ನಾಣ್ಯಗಳನ್ನು ಸುರಿದು ಆಕ್ರೋಶ ವ್ಯಕ್ತಪಡಿಸಿದ ಘಟನೆ ಚಿಕ್ಕನಾಯಕನಹಳ್ಳಿ ಪಟ್ಟಣದ ಉಪನೋಂದಣಾಧಿಕಾರಿ ಕಚೇರಿಯಲ್ಲಿ ನಡೆದಿದೆ. ಈ ಕುರಿತ ವಿವರ ಇಲ್ಲಿದೆ.

ಲಂಚ ಕೇಳಿದ ಅಧಿಕಾರಿಯ ಟೇಬಲ್‌ ಮೇಲೆ ಚಿಲ್ಲರೆ ಸುರಿದು, ಸನ್ಮಾನ

Profile Siddalinga Swamy Mar 7, 2025 9:07 PM

ಚಿಕ್ಕನಾಯಕನಹಳ್ಳಿ: ಲಂಚಕ್ಕೆ ಬೇಡಿಕೆ ಇಟ್ಟಿದ್ದಾರೆ ಎಂಬ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಉಪ ನೋಂದಣಾಧಿಕಾರಿ ಟೇಬಲ್‌ ಮುಂದೆ ಚಿಲ್ಲರೆ ಸುರಿದು, ಸನ್ಮಾನಿಸುವ ಮೂಲಕ ಕೆಆರ್‌ಎಸ್‌ ಪಕ್ಷದ (KRS Party) ಕಾರ್ಯಕರ್ತರು ಆಕ್ರೋಶ ಹೊರಹಾಕಿದ ಘಟನೆ ಚಿಕ್ಕನಾಯಕನಹಳ್ಳಿ ಪಟ್ಟಣದ (Chikkanayakanayakanahalli News) ಉಪನೋಂದಣಾಧಿಕಾರಿ ಕಚೇರಿಯಲ್ಲಿ ನಡೆದಿದೆ. ಇದಕ್ಕೂ ಮುನ್ನ ಕೆ.ಆರ್.ಎಸ್ ಪಕ್ಷದ ಕಾರ್ಯಕರ್ತರು ಎತ್ತಿನ ಗಾಡಿಯಲ್ಲಿ ಅಧಿಕಾರಿಯ ಭಾವಚಿತ್ರ ಇರಿಸಿ ಮೆರವಣಿಗೆ ಮಾಡಿದ್ದಾರೆ. ಬಳಿಕ ಕಚೇರಿಗೆ ತೆರಳಿ, ಅಧಿಕಾರಿ ಟೇಬಲ್‌ ಮೇಲೆ ಚಿಲ್ಲರೆ ಸುರಿದು ಸನ್ಮಾನಿಸಿ ಆಕ್ರೋಶ ಹೊರಹಾಕಿದ್ದಾರೆ.

ಉಪ ನೋಂದಣಾಧಿಕಾರಿ ರಾಘವೇಂದ್ರ ಒಡೆಯರ್ ವಿರುದ್ಧ ಲಂಚಕ್ಕೆ ಬೇಡಿಕೆ ಆರೋಪ ಕೇಳಿಬಂದಿತ್ತು. ಹೀಗಾಗಿ ಲಂಚಕ್ಕೆ ಬೇಡಿಕೆ ಇರಿಸಿರೋ ಅಧಿಕಾರಿಗೆ ಸನ್ಮಾನಿಸಿ ಪ್ರತಿಭಟನೆ ನಡೆಸಲಾಯಿತು. ಜನರಿಂದ ಭಿಕ್ಷೆ ಬೇಡಿ ಸಂಗ್ರಹಿಸಿದ್ದ ಚಿಲ್ಲರೆ ಹಣವನ್ನು ಉಪನೋಂದಣಾಧಿಕಾರಿ ರಾಘವೇಂದ್ರ ಒಡಯರ್ ಟೇಬಲ್ ಮೇಲೆ ಸುರಿದು, ಅವರಿಗೆ ಹಾರ, ಮೈಸೂರು ಪೇಟೆ ತೊಡಿಸಿ ಸನ್ಮಾನಿಸಲು ಯತ್ನಿಸಲಾಗಿದೆ.

Tumkur  News

ಈ ವೇಳೆ ತಪ್ಪಿಸಿಕೊಂಡು ಹೊರ ಹೋಗಲು ಅಧಿಕಾರಿ ಯತ್ನಿಸಿದ್ದಾರೆ. ಆಗ ಅವರ ಕುರ್ಚಿಗೆ ಹಾರ ಹಾಕಿ, ಪೇಟ ತೊಡಿಸಿ ಕಾರ್ಯಕರ್ತರು ಆಕ್ರೋಶ ಹೊರಹಾಕಿದ್ದಾರೆ. ಕೆ.ಆರ್.ಎಸ್. ಪಕ್ಷದ ಕಾರ್ಯಕರ್ತರ ಪ್ರತಿಭಟನೆಯಿಂದ ಅಧಿಕಾರಿ ತೀವ್ರ ಮುಜುಗರಕ್ಕೊಳಗಾಗಿದ್ದಾರೆ.

31

ಗುರುತಿನ ಚೀಟಿ ಧರಿಸದ್ದಕ್ಕೆ ನೋಟಿಸ್‌

ಕಡ್ಡಾಯವಾಗಿ ಗುರುತಿನ ಚೀಟಿಯನ್ನು ಧರಿಸಬೇಕು ಎಂಬ ಸೂಚನೆಯಿದ್ದರೂ, ಗುರುತಿನ ಚೀಟಿಯನ್ನು ಧರಿಸದೇ ಇರುವ ಬಗ್ಗೆ ಚಿಕ್ಕನಾಯಕನಹಳ್ಳಿ ಉಪ ನೋಂದಣಾಧಿಕಾರಿ ರಾಘವೇಂದ್ರ ಒಡೆಯರ್ ಅವರಿಗೆ ತುಮಕೂರು ಜಿಲ್ಲಾ ನೋಂದಣಾಧಿಕಾರಿಗಳು ನೋಟಿಸ್‌ ನೀಡಿದ್ದು, ವರದಿ ನೀಡುವಂತೆ ಸೂಚನೆ ನೀಡಿದ್ದಾರೆ.

ಈ ಸುದ್ದಿಯನ್ನೂ ಓದಿ | Robbery Case: ಹಾವೇರಿ: ಶಾಸಕರ ಮನೆ ಎದುರೇ ಕಾರಿನ ಗ್ಲಾಸ್ ಒಡೆದು 33 ಲಕ್ಷ ರೂ. ಕಳವು

Ranya Roa: ದುಬೈನಿಂದ 17 ಚಿನ್ನದ ಗಟ್ಟಿಯನ್ನು ತಂದಿದ್ದೇನೆ; ವಿಚಾರಣೆಯ ವೇಳೆಯಲ್ಲಿ ಬಾಯ್ಬಿಟ್ಟ ರನ್ಯಾ

ಬೆಂಗಳೂರು: ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ (Kempegowda International Airport) ನಿಲ್ದಾಣದಲ್ಲಿ ಚಿನ್ನದ ಕಳ್ಳಸಾಗಣೆ (Gold smuggling) ಮಾಡುವಾಗ ಸಿಕ್ಕಿಬಿದ್ದ ನಟಿ ರನ್ಯಾ ರಾವ್‌ (Ranya Roa) ವಿಚಾರಣೆಯನ್ನು ಅಧಿಕಾರಿಗಳು ನಡೆಸುತ್ತಿದ್ದಾರೆ. ಬಂಧನದ ನಂತರ ಅಧಿಕಾರಿಗಳಿಗೆ ನೀಡಿದ ತಪ್ಪೊಪ್ಪಿಗೆಯಲ್ಲಿ ಆಕೆ ದುಬೈನಿಂದ 17 ಚಿನ್ನದ ಗಟ್ಟಿಯನ್ನು ತೆಗೆದುಕೊಂಡು ಬಂದಿದ್ದಾಗಿ ಆರೋಪಿ ತಿಳಿಸಿದ್ದಾಳೆ. ಮಧ್ಯಪ್ರಾಚ್ಯ, ದುಬೈ ಮತ್ತು ಕೆಲವು ಪಾಶ್ಚಿಮಾತ್ಯ ದೇಶಗಳನ್ನು ಒಳಗೊಂಡಂತೆ ಅಂತರಾಷ್ಟ್ರೀಯ ಪ್ರವಾಸಗಳ ವಿವರಗಳನ್ನು ಅಧಿಕಾರಿಗಳ ಎದುರು ಬಹಿರಂಗಗೊಳಿಸಿದ್ದಾಳೆ ಎಂದು ಮೂಲಗಳು ತಿಳಿಸಿವೆ.

ನಾನು ಇತ್ತೀಚೆಗೆ ಯುರೋಪ್, ಅಮೆರಿಕ ಮತ್ತು ಮಧ್ಯಪ್ರಾಚ್ಯಕ್ಕೆ ಪ್ರಯಾಣಿಸಿದ್ದೇನೆ ಮತ್ತು ದುಬೈ, ಸೌದಿ ಅರೇಬಿಯಾಕ್ಕೆ ಭೇಟಿ ನೀಡಿದ್ದೆ ಎಂದು ರನ್ಯಾ ಹೇಳಿದ್ದಾಳೆ. ಆಕೆ ತನ್ನ ಕುಟುಂಬದ ಬಗ್ಗೆ ಹೇಳಿದ್ದು, ತನ್ನ ತಂದೆ ಕೆ.ಎಸ್. ಹೆಗ್ದೇಶ್, ರಿಯಲ್ ಎಸ್ಟೇಟ್ ಉದ್ಯಮಿಯಾಗಿದ್ದಾರೆ. ನಾನು ಜತಿನ್‌ ಹುಕ್ಕೇರಿ ಎಂಬ ಉದ್ಯಮಿ ಜೊತೆ ಮದುವೆಯಾಗಿದ್ದು, ಅವರ ಜೊತೆ ಬೆಂಗಳೂರಿನಲ್ಲಿ ವಾಸವಿದ್ದೆ ಎಂದು ಹೇಳಿದ್ದಾಳೆ. ರನ್ಯಾ ರಾವ್‌ ಮಲ ತಂದೆ ರಾಮಚಂದ್ರ ರಾವ್, ಕರ್ನಾಟಕ ರಾಜ್ಯ ಪೊಲೀಸ್ ವಸತಿ ನಿಗಮದ ಪೊಲೀಸ್ ಮಹಾನಿರ್ದೇಶಕರು.

ಪ್ರಕರಣದಲ್ಲಿ ಬಂಧನ ಬಳಿಕ ವಿಶೇಷ ಆರ್ಥಿಕ ಅಪರಾಧಗಳ ವಿಶೇಷ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದ ವೇಳೆ ‘ನಾನು ಟ್ರ್ಯಾಪ್‌ಗೊಳಗಾಗಿದ್ದೇನೆ, ನನ್ನದೇನೂ ತಪ್ಪಿಲ್ಲ’ ರನ್ಯಾ ಹೇಳಿದ್ದಳು. . ಈ ಹೇಳಿಕೆ ಬೆನ್ನಲ್ಲೇ ಕಾರ್ಯಾಚರಣೆ ಚುರುಕುಗೊಳಿಸಿರುವ ಡಿಆರ್‌ಐ ಅಧಿಕಾರಿಗಳು, ನಟಿ ಸಂಪರ್ಕ ಜಾಲದ ಕುರಿತು ಶೋಧ ಆರಂಭಿಸಿದೆ ಟ್ರ್ಯಾಪ್‌ ಎಂದಿರುವ ಕಾರಣಕ್ಕೆ ಆಕೆಯನ್ನು ವಿಚಾರಣೆ ನಡೆಸಲು ಕಸ್ಟಡಿಗೆ ನೀಡುವಂತೆ ಡಿಆರ್‌ಇ ಮೂಲಕ ಕೋರ್ಟ್‌ಗೆ ಕೋರಲಾಗಿದೆ ಎಂದು ಮೂಲಗಳು ಹೇಳಿವೆ.ಚಿನ್ನ ಕಳ್ಳಸಾಗಣೆ ಪ್ರಕರಣ ಸಂಬಂಧ ರನ್ಯಾ ಮೊಬೈಲ್ ಹಾಗೂ ಲ್ಯಾಪ್‌ಟಾಪ್‌ ವಶಕ್ಕೆ ಪಡೆದು ಡಿಆರ್‌ಐ ಅಧಿಕಾರಿಗಳು ಜಾಲಾಡಿದ್ದಾರೆ. ನಟಿ ಜತೆ ನಿರಂತರ ಸಂಪರ್ಕದಲ್ಲಿದ್ದವರ ಪಟ್ಟಿ ತಯಾರಿಸಿ, ಪ್ರಕರಣದ ತನಿಖೆ ನಡೆಯುತ್ತಿದೆ.

ಆರು ತಿಂಗಳ ಅವಧಿಯಲ್ಲಿ 27ಕ್ಕೂ ಹೆಚ್ಚು ಬಾರಿ ದುಬೈಗೆ ರನ್ಯಾ ಪಯಣಿಸಿದ್ದು, ಆಕೆಯ ಪ್ರವಾಸದ ಕುರಿತು ವಿವರ ಕಲೆ ಹಾಕುವ ಕಾರ್ಯದಲ್ಲಿ ಡಿಆರ್‌ಐ ಅಧಿಕಾರಿಗಳು ತೊಡಗಿದ್ದಾರೆ.