#ದೆಹಲಿರಿಸಲ್ಟ್​ ಧಾರ್ಮಿಕ ವಿಶ್ವವಾಣಿ ಕ್ಲಬ್‌ ಹೌಸ್‌ ರಾಜಕೀಯ ಸಂಪಾದಕೀಯ ಫ್ಯಾಷನ್‌ ಲೋಕ ಉದ್ಯೋಗ

Pavagada Hostel: ಪಾವಗಡ ಬಾಲಕಿಯರ ಹಾಸ್ಟೆಲ್‌ಗೆ ಮಕ್ಕಳ ರಕ್ಷಣಾ ಆಯೋಗದ ಸದಸ್ಯ ಡಾ.ತಿಪ್ಪೇಸ್ವಾಮಿ ದಿಢೀರ್ ಭೇಟಿ; ಅವ್ಯವಸ್ಥೆಗೆ ಗರಂ

Pavagada Hostel: ವಸತಿ ನಿಲಯದಲ್ಲಿ ಕುಡಿಯುವ ನೀರಿನ ಸಮಸ್ಯೆ, ಶೌಚಾಲಯ ಅವ್ಯವಸ್ಥೆ, ಶುಚಿತ್ವ ಕೊರತೆಯಿಂದ ಮಕ್ಕಳು ಪದೇ ಪದೇ ಅನಾರೋಗ್ಯಕ್ಕೆ ಈಡಾಗುತ್ತಿದ್ದು, ತಿಂಗಳುಗಟ್ಟಲೇ ವಸತಿ ನಿಲಯಕ್ಕೆ ಗೈರಾಗಿರೋದು ಬೆಳಕಿಗೆ ಬಂದಿದೆ. ಹೀಗಾಗಿ ಸಿಬ್ಬಂದಿಯನ್ನು ಮಕ್ಕಳ ರಕ್ಷಣಾ ಆಯೋಗದ ಸದಸ್ಯ ಡಾ.ತಿಪ್ಪೇಸ್ವಾಮಿ ತರಾಟೆಗೆ ತೆಗೆದುಕೊಂಡಿದ್ದಾರೆ.

ಪಾವಗಡ ಹಾಸ್ಟೆಲ್‌ಗೆ ಮಕ್ಕಳ ರಕ್ಷಣಾ ಆಯೋಗದ ಸದಸ್ಯ ಭೇಟಿ

Profile Prabhakara R Feb 9, 2025 8:34 PM

ಪಾವಗಡ: ಪಟ್ಟಣದ ವ್ಯಾಪ್ತಿಯ ದೇವರಾಜ ಅರಸು ಬಾಲಕಿಯರ ವಸತಿ ನಿಲಯಕ್ಕೆ (Pavagada Hostel) ಮಕ್ಕಳ ರಕ್ಷಣಾ ಆಯೋಗದ ಸದಸ್ಯ ಡಾ.ತಿಪ್ಪೇಸ್ವಾಮಿ ಅವರು ದಿಢೀರ್ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಹಾಸ್ಟೆಲ್‌ನ ಅವ್ಯವಸ್ಥೆ ಕಂಡು ಗರಂ ಆಗಿದ್ದು, ಸಿಬ್ಬಂದಿಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಅಲ್ಲದೇ ವಸತಿ ನಿಲಯದಲ್ಲಿ ಕುಡಿಯುವ ನೀರಿನ ಸಮಸ್ಯೆ, ಶೌಚಾಲಯ ಅವ್ಯವಸ್ಥೆ, ಶುಚಿತ್ವ ಕೊರತೆಯಿಂದ ಮಕ್ಕಳು ಪದೇ ಪದೇ ಅನಾರೋಗ್ಯಕ್ಕೆ ಈಡಾಗುತ್ತಿದ್ದು, ತಿಂಗಳುಗಟ್ಟಲೇ ವಸತಿ ನಿಲಯಕ್ಕೆ ಗೈರಾಗಿರೋದು ಬೆಳಕಿಗೆ ಬಂದಿದೆ. ಇನ್ನು ಪರಿಶೀಲನೆ ವೇಳೆ ಹಾಸ್ಟೆಲ್‌ನ ವಾರ್ಡನ್‌ ಕೂಡ ಗೈರಾಗಿರುವುದು ಕಂಡು ಬಂದಿದ್ದು, ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಮಕ್ಕಳ ರಕ್ಷಣಾ ಆಯೋಗದ ಸದಸ್ಯ ತಿಪ್ಪೇಸ್ವಾಮಿ ಎಚ್ಚರಿಕೆ ನೀಡಿದ್ದಾರೆ.

ಇನ್ನು ಹಾಸ್ಟೆಲ್‌ನಲ್ಲಿ ಹಾಜರಾತಿ ಪುಸ್ತಕವನ್ನು ಸರಿಯಾಗಿ ನಿರ್ವಹಣೆ ಮಾಡಿಲ್ಲ, ಜತೆಗೆ ಸಿಸಿ ಕ್ಯಾಮೆರಾ ಕೂಡ ಸರಿಯಾಗಿ ವರ್ಕ್‌ ಆಗುತ್ತಿಲ್ಲ. ಇದಿಷ್ಟು ಅಲ್ಲದೇ ನಾನಾ ಸಮಸ್ಯೆಗಳು ಹಾಸ್ಟೆಲ್‌ನಲ್ಲಿ ಇದ್ದು ವಾರ್ಡನ್‌ ಗಮನಕ್ಕೆ ಬಂದರೂ, ಸರಿ ಪಡಿಸುವ ಕೆಲಸಕ್ಕೆ ಮಾತ್ರ ಕೈ ಹಾಕಿಲ್ಲ ಎಂಬ ಆರೋಪ ಕೇಳಿಬಂದಿದೆ. ಈ ಎಲ್ಲಾ ಅಂಶಗಳನ್ನು ಗಮನಿಸಿದ ಮಕ್ಕಳ ರಕ್ಷಣಾ ಆಯೋಗದ ಸದಸ್ಯರಾದ ತಿಪ್ಪೇಸ್ವಾಮಿ ಮೇಲಧಿಕಾರಿಗಳ ಗಮನಕ್ಕೆ ತರುವುದಾಗಿ ತಿಳಿಸಿದ್ದಾರೆ.



ಈ ಸುದ್ದಿಯನ್ನೂ ಓದಿ | Viral News: ಆಲಿಘಡ್‌ ವಿವಿ ಹಾಸ್ಟೆಲ್‌ ನೋಟಿಸ್‌ನಲ್ಲಿ ಬೀಫ್‌ ಬಿರಿಯಾನಿ ಉಲ್ಲೇಖ: ಆಡಳಿತ ಮಂಡಳಿ ಹೇಳಿದ್ದೇನು?

ನಿರಾಶ್ರಿತರ ನಿವೇಶನದಲ್ಲಿ ಅಕ್ರಮವಾಗಿ ಮನೆ ನಿರ್ಮಾಣ; ಬಿಲ್ ಕಲೆಕ್ಟರ್ ವಿರುದ್ಧ ದೂರು

Doddabelavangala GP Bill Collector

ದೊಡ್ಡಬಳ್ಳಾಪುರ: ನಿರಾಶ್ರಿತರಿಗೆ ಹಂಚಿಕೆ ಮಾಡಿದ್ದ ನಿವೇಶನದಲ್ಲಿ ಅಕ್ರಮವಾಗಿ ಮನೆ ನಿರ್ಮಾಣ ಮಾಡುತ್ತಿದ್ದಾರೆ ಎಂಬ ಆರೋಪದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ (Doddaballapur News) ತಾಲೂಕಿನ ದೊಡ್ಡಬೆಳವಂಗಲ ಗ್ರಾಮ ಪಂಚಾಯಿತಿ ಬಿಲ್ ಕಲೆಕ್ಟರ್ ಪ್ರಭಾವತಿ ವಿರುದ್ಧ ದೂರು ದಾಖಲಾಗಿದೆ. ತಮ್ಮ ಹೆಸರಿಗೆ ಹಂಚಿಕೆಯಾಗಿದ್ದ ನಿವೇಶನದಲ್ಲಿ ಅಕ್ರಮವಾಗಿ ಮನೆ ನಿರ್ಮಾಣ ಮಾಡುತ್ತಿದ್ದಾರೆ ಎಂದು ಆರೋಪಿಸಿ ಬಿಲ್ ಕಲೆಕ್ಟರ್ ಪ್ರಭಾವತಿ ಮತ್ತು ಪತಿ ನಂಜಪ್ಪ ವಿರುದ್ಧ ಸರಸ್ವತಮ್ಮ ಎಂಬುವವರು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ, ದೊಡ್ಡಬೆಳವಂಗಲ ಪಿಡಿಒ ಹಾಗೂ ದೊಡ್ಡಬೆಳವಂಗಲ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ದೊಡ್ಡಬೆಳವಂಗಲ ಗ್ರಾಮ ಪಂಚಾಯಿತಿಯಲ್ಲಿ ಸರಸ್ವತಮ್ಮ ಹೆಸರಲ್ಲಿ ಖಾತೆಯೂ ಇದ್ದು, 2021ರವರೆಗೆ ಕಂದಾಯವನ್ನು ಬಿಲ್ ಕಲೆಕ್ಟರ್ ಪ್ರಭಾವತಿ ಕಟ್ಟಿಸಿಕೊಂಡಿದ್ದರು. ಆದರೆ ವೈಯಕ್ತಿಕ ಪ್ರಭಾವದಿಂದ ಅದೇ ಜಾಗಕ್ಕೆ ಅತಿಕ್ರಮ ಪ್ರವೇಶ ಮಾಡಿ, ನಕಲಿ ದಾಖಲೆ ಸೃಷ್ಟಿಸಿ ಅತಿಕ್ರಮಣಕ್ಕೆ ಮುಂದಾಗಿದ್ದಾರೆ ಎನ್ನಲಾಗಿದೆ.

ಈ ಸುದ್ದಿಯನ್ನೂ ಓದಿ | Aarushi Nishank: ಹಿರೋಯಿನ್ ಮಾಡುತ್ತೇವೆಂದು ಮಾಜಿ ಸಿಎಂ ಪುತ್ರಿಗೆ ವಂಚನೆ: 4 ಕೋಟಿ‌ ರೂ. ಪಂಗನಾಮ!

ಗ್ರಾಮ ಪಂಚಾಯಿತಿಯಲ್ಲಿ ಖಾತೆ ಇರುವ ನಿವೇಶನದಲ್ಲಿ ಅಲ್ಲಿನ ಬಿಲ್ ಕಲೆಕ್ಟರ್ ಅಕ್ರಮವಾಗಿ ಮನೆ ನಿರ್ಮಾಣ ಮಾಡುತಿದ್ದರೂ ಪಿಡಿಒ ಸುಮ್ಮನೆ ಕುಳಿತಿರುವುದೇಕೆ ಎಂದು ಸ್ಥಳೀಯರು ಪ್ರಶ್ನಿಸಿದ್ಧಾರೆ. ಬಿಲ್ ಕಲೆಕ್ಟರ್ ಪ್ರಭಾವತಿ ಸಾಕ್ಷ್ಯ ನಾಶ ಮಾಡುವ ಸಂಭವವಿರುವುದರಿಂದ ಕೂಡಲೇ ಅವರ ವಿರುದ್ಧ ಕಾನೂನು ಕ್ರಮ ತೆಗೆದುಕೊಂಡು, ಅಮಾನತು ಮಾಡಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.