ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತ ಪ್ರಕರಣ: ವರದಿಯ ಅಧ್ಯಯನಕ್ಕೆ ಸಚಿವ ಸಂಪುಟ ತೀರ್ಮಾನ
Bengaluru Stampede: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಗುರುವಾರ ಸಚಿವ ಸಂಪುಟ ನಡೆಯಿತು. ಈ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿ ನಿವೃತ್ತ ನ್ಯಾಯಾಧೀಶ ಜಾನ್ ಮೈಕಲ್ ಕುನ್ಹಾ ನೇತೃತ್ವದ ಏಕ ಸದಸ್ಯ ವಿಚಾರಣಾ ಆಯೋಗದ ವರದಿಯನ್ನು ಪರಿಶೀಲಿಸಿ ನಿರ್ಣಯ ಕೈಗೊಳ್ಳಲು ತೀರ್ಮಾನಿಸಲಾಯಿತು.


ಬೆಂಗಳೂರು: ಜೂ. 4ರಂದು ಆರ್.ಸಿ.ಬಿ. ಕ್ರಿಕೆಟ್ ತಂಡದ ವಿಜಯೋತ್ಸವ ಸಮಾರಂಭದಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಉಂಟಾದ ಕಾಲ್ತುಳಿತಕ್ಕೆ (Bengaluru Stampede) ಸಂಬಂಧಿಸಿದಂತೆ ಕರ್ನಾಟಕ ಉಚ್ಛ ನ್ಯಾಯಾಲಯದ ನಿವೃತ್ತ ನ್ಯಾಯಾಧೀಶ ಜಾನ್ ಮೈಕಲ್ ಕುನ್ಹಾ ನೇತೃತ್ವದ ಏಕ ಸದಸ್ಯ ವಿಚಾರಣಾ ಆಯೋಗದ ವರದಿಯನ್ನು ಸ್ವೀಕರಿಸಲಾಗಿದ್ದು, ಅಧ್ಯಯನ ಮಾಡಲಾಗುತ್ತದೆ. ಮುಂದಿನ ಸಚಿವ ಸಂಪುಟದಲ್ಲಿ ಚರ್ಚಿಸಿ ಈ ಬಗ್ಗೆ ತೀರ್ಮಾನ ಕೈಗೊಳ್ಳಲು ಸಚಿವ ಸಂಪುಟ ನಿರ್ಧರಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರ ನೇತೃತ್ವದಲ್ಲಿ ಗುರುವಾರ (ಜು. 17) ಸಚಿವ ಸಂಪುಟ ನಡೆಯಿತು. ಈ ವೇಳೆ ಕೈಗೊಂಡ ಇತರ ಪ್ರಮುಖ ನಿರ್ಣಯಗಳ ಕುರಿತಾ ವಿವರ ಇಲ್ಲಿದೆ.
- ರಾಯಚೂರು ಜಿಲ್ಲೆ ತಾಲೂಕಿನಲ್ಲಿ ನೂತನ ಜವಳಿ ಪಾರ್ಕನ್ನು ಸಾರ್ವಜನಿಕ ಖಾಸಗಿ ಸಹಭಾಗಿತ್ವ(PPP) ಮಾದರಿಯಲ್ಲಿ ಒಟ್ಟು 24.50 ಕೋಟಿ ರೂ. ಮೊತ್ತದಲ್ಲಿ ಅಭಿವೃದ್ಧಿಪಡಿಸಲು ಸಚಿವ ಸಂಪುಟ ನಿರ್ಣಯ ಕೈಗೊಂಡಿದೆ.
- ರಾಜ್ಯದಲ್ಲಿ ಪರಮಾಣು ವಿದ್ಯುತ್ ಸ್ಥಾವರ ಸ್ಥಾಪಿಸಲು ತಾತ್ವಿಕ ಅನುಮೋದನೆ ಹಾಗೂ ಎನ್ ಟಿಪಿಸಿ ಸಂಸ್ಥೆಯು ಕರ್ನಾಟಕದಲ್ಲಿ ಪರಮಾಣು ವಿದ್ಯುತ್ ಸ್ಥಾಪನೆಗೆ ಗುರುತಿಸಿರುವ ಸಂಭಾವ್ಯ ಸ್ಥಳಗಳ್ಲಿ ಪ್ರಾಥಮಿಕ ಅಧ್ಯಯನ ನಡೆಸಲು ಅನುಮತಿ ನೀಡಲು ಸಚಿವ ಸಂಪುಟದಲ್ಲಿ ನಿರ್ಣಯ ಕೈಗೊಳ್ಳಲಾಗಿದೆ.
- ಆಯುಷ್ ಇಲಾಖೆಯ ಆಯುರ್ವೇದ, ಸಿದ್ದ ಮತ್ತು ಯುನಾನಿ ಔಷಧಗಳ ಅಮಲುಜಾರಿ ವಿಭಾಗ ಹಾಗೂ ಪರೀಕ್ಷಾ ಪ್ರಯೋಗಾಲಯವನ್ನು ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆಯ ಜೊತೆಗೆ ವಿಲೀನಗೊಳಿಸಲು ನಿರ್ಣಯಿಸಲಾಯಿತು.
- ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಯಳವಟ್ಟಿ ಗ್ರಾಮದಲ್ಲಿ 28.3 ಎಕರೆಯಲ್ಲಿ ಮಾವು ಮತ್ತು ಇತರೆ ತೋಟಗಾರಿಕೆ ಬೆಳೆಗಳ ಬಹು ಉತ್ಪನ್ನಗಳ ನಿರ್ವಹಣೆ, ಸಂಗ್ರಹಣೆ, ಸಂಸ್ಕರಣೆ ಮತ್ತು ಸಂರಕ್ಷಣಾ ಘಟಕವನ್ನು ಸಾರ್ವಜನಿಕ ಖಾಸಗಿ ಸಹಭಾಗಿತ್ವ (PPP) ಮಾದರಿಯಡಿ 35.07 ಕೋಟಿ ರೂ. ಮೊತ್ತದಲ್ಲಿ Common Infrastructure for Industrial Parks (Food Park) ಮಾದರಿಯಲ್ಲಿ ಸ್ಥಾಪಿಸಲು ಅನುಮೋದನೆ ನೀಡಲಾಗಿದೆ.
- ಕೊಪ್ಪಳ ಜಿಲ್ಲೆಯ ಕನಕಗಿರಿ ತಾಲ್ಲೂಕಿನ ಸಿರಿವಾರ ಗ್ರಾಮದ ಪರಂಪೋಕ ಸರ್ಕಾರಿ ಸರ್ವೆ ನಂ.124/*/1/ಪಿ2 ನಲ್ಲಿನ 194-33 ಎಕರೆ ಜಮೀನಿನಲ್ಲಿ ತೋಟಗಾರಿಕೆ ತಂತ್ರಜ್ಞಾನ ಪಾರ್ಕ್ ಅನ್ನು ಸಾರ್ವಜನಿಕ ಖಾಸಗಿ ಸಹಭಾಗಿತ್ವ (ಪಿಪಿಪಿ) ಮಾದರಿಯಡಿ 83.79 ಕೋಟಿ ರೂ. ಅಂದಾಜು ವೆಚ್ಚದಲ್ಲಿ ಸ್ಥಾಪಿಸಲಾಗುವುದು.
ಈ ಸುದ್ದಿಯನ್ನೂ ಓದಿ: ಅಂಗನವಾಡಿಗಳಲ್ಲಿ ಪೂರ್ವ ಪ್ರಾಥಮಿಕ ತರಗತಿ- ಸಚಿವರಾದ ಮಧು ಬಂಗಾರಪ್ಪ, ಲಕ್ಷ್ಮೀ ಹೆಬ್ಬಾಳ್ಕರ್ ಚರ್ಚೆ
- ಚಿಕ್ಕಬಳ್ಳಾಪುರ ಜಿಲ್ಲೆ, ಚಿಕ್ಕಬಳ್ಳಾಪುರ ತಾಲೂಕು, ಮಂಡಿಕಲ್ಲು ಹೋಬಳಿ, ಯರಮಾರೇನಹಳ್ಳಿ ಗ್ರಾಮದಲ್ಲಿ 5-23 ಎಕರೆ / ಗುಂಟೆ ಸರ್ಕಾರಿ ಬೀಳು ಜಮೀನನ್ನು ಅಕ್ಷಯ ಪಾತ್ರೆ ಅಡುಗೆ ಮನೆ ಮತ್ತು ಆರ್ಥಿಕ ಹಾಗೂ ಸಾಮಾಜಿಕವಾಗಿ ಹಿಂದುಳಿದ ಗ್ರಾಮೀಣ ಮಕ್ಕಳಿಗೆ ಶಾಲಾ ಕಟ್ಟಡ ನಿರ್ಮಾಣಕ್ಕಾಗಿ, ಇಸ್ಕಾನ್ ಬೆಂಗಳೂರು ಇವರಿಗೆ ಮಂಜೂರು ಮಾಡಲು ಸಚಿವ ಸಂಪುಟವು ನಿರ್ಧರಿಸಿದೆ.
- ಬೆಂಗಳೂರು ಗ್ರಾಮಾಂತರ ಜಿಲ್ಲೆ, ದೊಡ್ಡಬಳ್ಳಾಪುರ ತಾಲೂಕು, ವೀರಭದ್ರನ ಪಾಳ್ಯ ಗ್ರಾಮದ ಸ.ನಂ. 66ರಲ್ಲಿ 15 ಗುಂಟೆ ಖರಾಬು ಜಮೀನನ್ನು ಕಾಂಗ್ರೆಸ್ ಕಚೇರಿ ಕಟ್ಟಡ ನಿರ್ಮಾಣಕ್ಕಾಗಿ ಕಾಂಗ್ರೆಸ್ ಭವನ ಟ್ರಸ್ಟ್ ಇವರಿಗೆ ಗುತ್ತಿಗೆ ನೀಡಲು ಸಚಿವ ಸಂಪುಟ ನಿರ್ಧರಿಸಿದೆ.
- ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಕೆಮ್ಮಿಂಜೆ ಗ್ರಾಮದ ಸ.ನಂ.138/4 ರಲ್ಲಿ 3.00 ಎಕರೆ ಗೋಮಾಳ ಜಮೀನನ್ನು ಪುತ್ತೂರು ತಾಲೂಕಿನ ಬಂಟರ ಸಂಘಕ್ಕೆ ಮಂಜೂರು ಮಾಡಲಾಗಿದೆ.
ವಿದ್ಯಾರ್ಥಿಗಳು ಹಾಗೂ ನಾಗರಿಕರಲ್ಲಿ ಸಂವಿಧಾನ ಮೌಲ್ಯಗಳ ಬಗ್ಗೆ ಅರಿವು ಮೂಡಿಸಲು ಹಾಗೂ ಸಂವಿಧಾನದ ಬಗ್ಗೆ ವಿವಿಧ ಸೆಮಿನಾರ್ಗಳು, ಚರ್ಚೆಗಳು ಹಾಗೂ ಸಂಶೋಧನಾ ಕಾರ್ಯಕ್ರಮಗಳನ್ನು ಆಯೋಜಿಸುವ ಉದ್ದೇಶದಿಂದ ಮೈಸೂರು ವಿಶ್ವವಿದ್ಯಾಲಯದಲ್ಲಿ ರೂ.10 ಕೋಟಿ ವೆಚ್ಚದಲ್ಲಿ ಡಾ. ಬಿ. ಆರ್. ಅಂಬೇಡ್ಕರ್ ಸಂವಿಧಾನ ಪೀಠ ಸ್ಥಾಪಿಸಲು ಇಂದು ನನ್ನ… pic.twitter.com/CbRixucmoP
— Siddaramaiah (@siddaramaiah) July 17, 2025
- ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ವತಿಯಿಂದ ರಾಜ್ಯದಲ್ಲಿ ಗ್ರಾಮ ಪಂಚಾಯತ್ ಮಟ್ಟದಲ್ಲಿ ಅಳವಡಿಸಲಾಗಿರುವ ಸಮರ್ಪಕವಾಗಿ ಕಾರ್ಯನಿರ್ವಹಿಸದ 1,530 ಟೆಲಿಮೆಟ್ರಿಕ್ ಮಳೆ ಮಾಪನ ಕೇಂದ್ರಗಳ ಉಪಕರಣಗಳನ್ನು 19.89 ಕೋಟಿ ರೂ. ಅಂದಾಜು ಮೊತ್ತದಲ್ಲಿ ಬದಲಿಸಿ ಹೊಸದಾಗಿ ಸ್ಥಾಪಿಸಲು ಸಚಿವ ಸಂಪುಟ ಅನುಮೋದನೆ ನೀಡಿದೆ.
- ಮೈಸೂರು ವಿಶ್ವವಿದ್ಯಾಲಯದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಸಂವಿಧಾನ ಪೀಠವನ್ನು 10 ಕೋಟಿ ರೂ. ಅಂದಾಜು ಮೊತ್ತದಲ್ಲಿ ಸ್ಥಾಪಿಸಲು ಸಚಿವ ಸಂಪುಟ ಅನುಮೋದನೆ ನೀಡಿದೆ.
- ರಾಜ್ಯದಲ್ಲಿ ಪ್ರವಾಸೋದ್ಯಮವನ್ನು ಉತ್ತೇಜಿಸಲು ಹಂಪಿ-ಬಾದಾಮಿ-ಐಹೊಳೆ-ಪಟ್ಟದಕಲ್ಲು-ವಿಜಯಪುರ ಒಳಗೊಂಡಂತೆ ಉತ್ತರ ಕರ್ನಾಟಕ ಪ್ರವಾಸಿ ವೃತ್ತವನ್ನು ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ DBFOT ಮಾದರಿಯಲ್ಲಿ ಕರ್ನಾಟಕ ಪ್ರವಾಸೋದ್ಯಮ ಮೂಲಸೌಲಭ್ಯ ನಿಗಮದ ಮೂಲಕ 166.22 ಕೋಟಿ ರೂ. ಅಂದಾಜು ಮೊತ್ತದಲ್ಲಿ ಅಭಿವೃದ್ಧಿಪಡಿಸಲು ಸಚಿವ ಸಂಪುಟ ಒಪ್ಪಿಗೆ ನೀಡಿದೆ.
- ಗ್ರೇಟರ್ ಬೆಂಗಳೂರು ಪ್ರದೇಶ ವ್ಯಾಪ್ತಿಯಲ್ಲಿನ ಆಸ್ತಿಗಳಿಗೆ “ಎ” ಮತ್ತು “ಬಿ” ಖಾತಾ ನೀಡುವುದನ್ನು ನಿಯಂತ್ರಿಸಲು ಸಚಿವ ಸಂಪುಟ ನಿರ್ಣಯವನ್ನು ಕೈಗೊಂಡಿತು.
- ಮಲಪ್ರಭಾ ನದಿಗೆ ಅಡ್ಡಲಾಗಿರುವ ಮುನವಳ್ಳಿ ಆರ್‌ಬಿಸಿಗೆ ನವಿಲುತೀರ್ಥ ಆಣೆಕಟ್ಟಿನ ಚೈನೇಜ್. 0+098 ರಿಂದ ಚೈನೇಜ್ 0+433 ವರೆಗೆ ಅಕ್ವಾಡಕ್ಟ್ ಅನ್ನು ಎಂಎಸ್ ಪೈಪ್‌ನೊಂದಿಗೆ ನಿರ್ಮಿಸುವ ಕಾಮಗಾರಿಯನ್ನು 19.05 ಕೋಟಿ ರೂ. ಅಂದಾಜು ಮೊತ್ತದಲ್ಲಿ ಕೈಗೊಳ್ಳಲು ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ.
ಇಂದು ನನ್ನ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು#Cabinetdecisions pic.twitter.com/O2QG10C2Sb
— Siddaramaiah (@siddaramaiah) July 17, 2025
- ಅಂತರ್ಜಲ ಬಳಕೆಗೆ ನಿರಾಕ್ಷೇಪಣಾ ನೀಡುವ ಸಂಬಂಧ ಕೇಂದ್ರಿಯ ಅಂತರ್ಜಲ ಪ್ರಾಧಿಕಾರ ಇವರು ಹೊರಡಿಸಿರುವ ಮಾರ್ಗಸೂಚಿಯನ್ನು ಸೂಕ್ತ ಮಾರ್ಪಾಡುಗಳೊಂದಿಗೆ ಕರ್ನಾಟಕ ರಾಜ್ಯದಲ್ಲಿ ಜಾರಿಗೊಳಿಸಲು ಸಚಿವ ಸಂಪುಟ ಒಪ್ಪಿಗೆ ನೀಡಿತು.
- ದಕ್ಷಿಣ ಕನ್ನಡ ಜಿಲ್ಲೆಯ ಉಲ್ಲಾಳದಲ್ಲಿ ಅಲ್ಪಸಂಖ್ಯಾತರ ವಿದ್ಯಾಥಿನಿಯರಿಗಾಗಿ ವಸತಿ ಸಹಿತ ಪದವಿ ಪೂರ್ವ ಕಾಲೇಜನ್ನು 17.09 ಕೋಟಿ ರೂ. ಅಂದಾಜು ಮೊತ್ತದಲ್ಲಿ ನಿರ್ಮಿಸಿ 400 ವಿದ್ಯಾರ್ಥಿನಿಯರ ಸಂಖ್ಯಾ ಬಲದೊಂದಿಗೆ ಪ್ರಾರಂಭಿಸಲು ಸಚಿವ ಸಂಪುಟ ಒಪ್ಪಿಗೆ ನೀಡಿತು
- ಚಿಕ್ಕಮಗಳೂರು ಜಿಲ್ಲೆ, ನರಸಿಂಹರಾಜಪುರ ಪಟ್ಟಣದ ರಸ್ತೆಯನ್ನು 60 ಕೋಟಿ ರೂ. ಅಂದಾಜು ಮೊತ್ತದಲ್ಲಿ ಅಗಲ ಮಾಡುವ ಕಾಮಗಾರಿಗಳನ್ನು ಕೈಗೊಳ್ಳಲು ಆಡಳಿತಾತ್ಮಕ ಅನುಮೋದನೆ ನೀಡಲಾಯಿತು.
- ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲ್ಲೂಕಿನಲ್ಲಿ ತಾಲ್ಲೂಕು ಪ್ರಜಾಸೌಧ ಕಟ್ಟಡ ಕಾಮಗಾರಿಯನ್ನು 16 ಕೋಟಿ ರೂ. ಅಂದಾಜು ಮೊತ್ತದಲ್ಲಿ ನಿರ್ಮಿಸಲು ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ.
- ಬೆಂಗಳೂರು ನಗರದ ಸಂಸ್ಕರಿಸಿದ ತ್ಯಾಜ್ಯ ನೀರನ್ನು ಕೋಲಾರ ಜಿಲ್ಲೆಯ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಒಟ್ಟು 126 ಕೆರೆಗಳಿಗೆ ನೀರು ತುಂಬಿಸುವ ಏತ ನೀರಾವರಿ ಯೋಜನೆಯ ಕಾಮಗಾರಿಯ 5 ವರ್ಷಗಳ ಪೋಷಣೆ ಮತ್ತು ನಿರ್ವಹಣೆ (O&M) ಕಾಮಗಾರಿಯನ್ನು 128 ಕೋಟಿ ರೂ. ಅಂದಾಜು ಮೊತ್ತದಲ್ಲಿ ಕೈಗೊಳ್ಳಲು ಆಡಳಿತಾತ್ಮಕ ಅನುಮೋದನೆ ನೀಡಲು ಸಚಿವ ಸಂಪುಟ ನಿರ್ಣಯಿಸಿದೆ.
- ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲಾ ಕಾಲೇಜುಗಳ ಕಟ್ಟಡ ನಿರ್ಮಾಣದ 4 ಕಾಮಗಾರಿಗಳನ್ನು ಒಟ್ಟು 64 ಕೋಟಿ ರೂ. ಅಂದಾಜು ಮೊತ್ತದಲ್ಲಿ ಕೈಗೊಳ್ಳಲು ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ.
- ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ಕಿತ್ತೂರು ಕೋಟೆ ಆವರಣದಲ್ಲಿ 30 ಕೋಟಿ ರೂ. ವೆಚ್ಚದ ಥೀಮ್ ಪಾರ್ಕ್ ನಿರ್ಮಾಣ ಕಾಮಗಾರಿಗೆ ಆಡಳಿತಾತ್ಮಕ ಅನುಮೋದನೆ ನೀಡಲು; ಸಚಿವ ಸಂಪುಟ ನಿರ್ಣಯಿಸಿದೆ.
- ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಿಂದ ಭೂಸ್ವಾಧೀನಪಡಿಸಿಕೊಂಡಿದ್ದ ಜಮೀನಗಳನ್ನು ಭೂಸ್ವಾಧೀನ ಕಾಯ್ದೆ 1894ರ ಕಲಂ48(1)ರಡಿ ಭೂಸ್ವಾಧೀನದಿಂದ ಕೈಬಿಟ್ಟಿರುವ 29 ಪ್ರಕರಣಗಳಲ್ಲಿ, ಸಂಬAಧಪಟ್ಟ ಎಲ್ಲಾ ಬಾಧಿತ ವ್ಯಕ್ತಿಗಳಿಗೆ ನೋಟೀಸ್ ನೀಡಿ, ವಿವರಣೆ ಪಡೆದು, ನಿಯಮಬಾಹಿರವಾಗಿ ಭೂಸ್ವಾಧೀನದಿಂದ ಕೈಬಿಟ್ಟಿರುವ ಅಧಿಸೂಚನೆಗಳನ್ನು ಹಿಂಪಡೆಯಲು ಹಾಗೂ ಇದಕ್ಕೆ ಕಾರಣಕರ್ತರಾಗಿರುವ ಅಧಿಕಾರಿ/ಸಿಬ್ಬಂದಿ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲು ಸಚಿವ ಸಂಪುಟ ನಿರ್ಧರಿಸಿದೆ.
- ಹಾರಂಗಿ ಜಲಾಶಯದ ಕೆಳಭಾಗದಲ್ಲಿ ಕೊಡಗು ಜಿಲ್ಲೆಯ ಕುಶಾಲನಗರದ ಹುಲುಗುಂದ ಗ್ರಾಮದ ಬಳಿ ಕಮಾನು ಸೇತುವೆ (Arch Bridge)ಯನ್ನು 36.50 ಕೋಟಿ ರೂ. ಅಂದಾಜು ಮೊತ್ತದಲ್ಲಿ ನಿರ್ಮಿಸಲು ಸಚಿವ ಸಂಪುಟ ನಿರ್ಣಯಿಸಿದೆ.
- ಹೇಮಾವತಿ ಯೋಜನೆಯಡಿಯಲ್ಲಿನ ನಾಗಮಂಗಲ ಶಾಖಾ ನಾಲೆಯ ಸರಪಳಿ 0.00 ಕಿ.ಮೀ. ಯಿಂದ 78.46 ಕಿ.ಮೀ.ವರೆಗೆ ಅಭಿವೃದ್ಧಿಪಡಿಸುವ 560 ಕೋಟಿ ರೂ. ಮೊತ್ತದ ಕಾಮಗಾರಿಗಳಿಗೆ ಆಡಳಿತಾತ್ಮಕ ಅನುಮೋದನೆ ನೀಡಲು ಸಚಿವ ಸಂಪುಟ ನಿರ್ಣಯಿಸಿದೆ.