ಸ್ವಾತಂತ್ರ್ಯೋತ್ಸವ ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

KC Veerendra Puppy: ಚಿತ್ರದುರ್ಗ ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ ಅರೆಸ್ಟ್;‌ ಇಡಿಯಿಂದ 12 ಕೋಟಿ ನಗದು, 6 ಕೋಟಿ ಮೌಲ್ಯದ ಚಿನ್ನಾಭರಣ ಜಪ್ತಿ

illegal betting case: ಚಿತ್ರದುರ್ಗ ಕಾಂಗ್ರೆಸ್‌ ಶಾಸಕ ಕೆ.ಸಿ.ವೀರೇಂದ್ರ ಅವರನ್ನು ಶುಕ್ರವಾರ ಬಂದಿಸಿ, ಸಿಕ್ಕಿಂನ ರಾಜಧಾನಿ ಗ್ಯಾಂಗ್ಟಕ್‌ನಲ್ಲಿನ ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಲಾಯಿತು. ಬೆಂಗಳೂರಿನ ನ್ಯಾಯಾಲಯದ ಮುಂದೆ ಹಾಜರುಪಡಿಸಲು ಟ್ರಾನ್ಸಿಟ್ ರಿಮಾಂಡ್ ಪಡೆಯಲಾಯಿತು ಎಂದು ಇಡಿ ತಿಳಿಸಿದೆ.

ಬೆಂಗಳೂರು: ಅಕ್ರಮ ಬೆಟ್ಟಿಂಗ್ ಪ್ರಕರಣಕ್ಕೆ (illegal betting case) ಸಂಬಂಧಿಸಿ ಚಿತ್ರದುರ್ಗ ಕಾಂಗ್ರೆಸ್‌ ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ (K.C. Veerendra Puppy) ಅವರನ್ನು ಇಡಿ ಅಧಿಕಾರಿಗಳು ಸಿಕ್ಕಿಂನಲ್ಲಿ ಬಂಧಿಸಿದ್ದು, ಅವರಿಗೆ ಸಂಬಂಧಿಸಿದ 31 ಸ್ಥಳಗಳಲ್ಲಿ ದಾಳಿ ನಡೆಸಿ, 12 ಕೋಟಿ ರೂ. ನಗದು (ಒಂದು ಕೋಟಿ ರೂ. ವಿದೇಶಿ ಕರೆನ್ಸಿ ಸೇರಿ), 6 ಕೋಟಿ ರೂ. ಮೌಲ್ಯದ ಚಿನ್ನಾಭರಣ, 10 ಕೆಜಿ ಬೆಳ್ಳಿ ಮತ್ತು ನಾಲ್ಕು ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ.

ಈ ಬಗ್ಗೆ ಇಡಿ ಮಾಹಿತಿ ಹಂಚಿಕೊಂಡಿದ್ದು, ಶಾಸಕ ಕೆ.ಸಿ.ವೀರೇಂದ್ರ ಅವರನ್ನು ಶುಕ್ರವಾರ ಬಂದಿಸಿ, ಸಿಕ್ಕಿಂನ ರಾಜಧಾನಿ ಗ್ಯಾಂಗ್ಟಕ್‌ನಲ್ಲಿನ ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಲಾಯಿತು. ಬೆಂಗಳೂರಿನ ನ್ಯಾಯಾಲಯದ ಮುಂದೆ ಹಾಜರುಪಡಿಸಲು ಟ್ರಾನ್ಸಿಟ್ ರಿಮಾಂಡ್ ಪಡೆಯಲಾಯಿತು ಎಂದು ಇಡಿ ತಿಳಿಸಿದೆ. ಈ ಪ್ರಕರಣದ ತನಿಖೆಯನ್ನು ಇ.ಡಿಯ ಬೆಂಗಳೂರು ವಲಯ ನಡೆಸುತ್ತಿದೆ.



ಶಾಸಕ ವಿರೇಂದ್ರ ಪಪ್ಪಿ ತನ್ನ ಸಹಚರರೊಂದಿಗೆ ಸಿಕ್ಕಿಂನ ಗ್ಯಾಂಗ್ಟಕ್‌ಗೆ ಪ್ರಯಾಣಿಸಿದ್ದರು. ಅಲ್ಲಿ ಅವರು ಕ್ಯಾಸಿನೊಗಾಗಿ ಭೂಮಿಯನ್ನು ಗುತ್ತಿಗೆಗೆ ಪಡೆಯುತ್ತಿದ್ದರು ಎನ್ನಲಾಗಿದೆ. ಇವರಿಗೆ ಸಂಬಂಧಿಸಿದ 31 ಸ್ಥಳಗಳ ಮೇಲೆ ದಾಳಿ ನಡೆಸಿ, 12 ಕೋಟಿ ನಗದು (ಸುಮಾರು ಒಂದು ಕೋಟಿ ವಿದೇಶಿ ಕರೆನ್ಸಿ ಸೇರಿ, 6 ಕೋಟಿ ಮೌಲ್ಯದ ಚಿನ್ನದ ಆಭರಣಗಳು ಮತ್ತು ಸುಮಾರು 10 ಕೆಜಿ ತೂಕದ ಬೆಳ್ಳಿ ವಸ್ತುಗಳು ಮತ್ತು ನಾಲ್ಕು ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ.

ಕೇಂದ್ರ ತನಿಖಾ ಏಜೆನ್ಸಿಯು 17 ಬ್ಯಾಂಕ್ ಖಾತೆಗಳು ಮತ್ತು ಎರಡು ಬ್ಯಾಂಕ್ ಲಾಕರ್ಗಳನ್ನು ಸಹ ಸ್ಥಗಿತಗೊಳಿಸಿದೆ. ವೀರೇಂದ್ರ ಪಪ್ಪಿ ಅವರ ಸಹೋದರ ಕೆ. ಸಿ. ನಾಗರಾಜ್ ಮತ್ತು ಅವರ ಮಗ ಪೃಥ್ವಿ ಎನ್ ರಾಜ್ ಅವರ ಮನೆಗಳಿಂದ ಆಸ್ತಿಗೆ ಸಂಬಂಧಿಸಿದ ಅನೇಕ ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿದೆ. ಇತರ ಸಹಚರರಾದ ಸಹೋದರ ಕೆ. ಸಿ. ತಿಪ್ಪೇಸ್ವಾಮಿ ಮತ್ತು ಪೃಥ್ವಿ ಎನ್. ರಾಜ್ ಅವರು ದುಬೈಯಿಂದ ಆನ್ಲೈನ್ ಗೇಮಿಂಗ್ ಕಾರ್ಯಾಚರಣೆಗಳನ್ನು ನಿರ್ವಹಿಸುತ್ತಿದ್ದರು ಎಂಬ ಆರೋಪ ಕೇಳಿಬಂದಿದೆ.

ಇನ್ನು ಗೋವಾದಲ್ಲಿ ಅಕ್ರಮ ಹಣ ವರ್ಗಾವಣೆ ಪ್ರಕರಣದ ಭಾಗವಾಗಿ ವಿರೇಂದ್ರ ಪಪ್ಪಿಗೆ ಸಂಬಂಧಿಸಿದ ಐದು ಕ್ಯಾಸಿನೊಗಳಾದ ಪಪ್ಪೀಸ್ ಕ್ಯಾಸಿನೊ ಗೋಲ್ಡ್, ಓಷನ್ ರಿವರ್ಸ್ ಕ್ಯಾಸಿನೊ, ಪಪ್ಪೀಸ್ ಕ್ಯಾಸಿನೊ ಪ್ರೈಡ್, ಓಷನ್ 7 ಕ್ಯಾಸಿನೊ ಮತ್ತು ಬಿಗ್ ಡ್ಯಾಡಿ ಕ್ಯಾಸಿನೊಗಳಲ್ಲಿ ಇಡಿ ಶೋಧ ನಡೆಸಿದೆ. ಆರೋಪಿತ ಕೆ. ಸಿ. ವೀರೇಂದ್ರ ಪಪ್ಪಿ ಅವರು ಹಲವಾರು ಆನ್ಲೈನ್ ಬೆಟ್ಟಿಂಗ್ ಸೈಟ್‌ಗಳನ್ನು ನಡೆಸುತ್ತಿರುವುದು ಶೋಧ ಕಾರ್ಯಾಚರಣೆಯ ವೇಳೆ ಬಹಿರಂಗವಾಗಿದೆ.