ಯುಗಾದಿ ಹಬ್ಬ ಐಪಿಎಲ್​ ಸುನಿತಾ ವಿಲಿಯಮ್ಸ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Road Accident: ಚಿತ್ರದುರ್ಗದಲ್ಲಿ ಟಿಟಿ ಅಪಘಾತ, ಮೂವರು ದುರ್ಮರಣ

ಟಿಟಿ ವಾಹನ ನಿಯಂತ್ರಣ ಕಳೆದುಕೊಂಡು ಪಲ್ಟಿಯಾದ ಪರಿಣಾಮ ಮೂವರು ಸ್ಥಳದಲ್ಲಿಯೇ ಸಾವು (death) ಕಂಡಿದ್ದು, ಐವರಿಗೆ ಗಂಭೀರವಾದ ಗಾಯಗಳಾಗಿವೆ. ದುರ್ಘಟನೆ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಹೆಗ್ಗೆರೆ ಗ್ರಾಮದಲ್ಲಿ ನಡೆದಿದೆ. ಮೃತಪಟ್ಟವರನ್ನು ಶಂಕರಿಬಾಯಿ (65) ಕುಮಾರ್ ನಾಯಕ್ (46) ಮತ್ತು ಶ್ವೇತ (38) ಎಂದು ಗುರುತಿಸಲಾಗಿದೆ.

ಚಿತ್ರದುರ್ಗದಲ್ಲಿ ಟಿಟಿ ಅಪಘಾತ, ಮೂವರು ದುರ್ಮರಣ

ಹರೀಶ್‌ ಕೇರ ಹರೀಶ್‌ ಕೇರ Mar 29, 2025 12:13 PM

ಚಿತ್ರದುರ್ಗ: ಇಂದು ಚಿತ್ರದುರ್ಗದಲ್ಲಿ (Chitradurga) ಸಂಭವಿಸಿದ ಭೀಕರವಾದ ಅಪಘಾತದಲ್ಲಿ (Road Accident) ಮೂವರು ಸಾವನ್ನಪ್ಪಿದ್ದಾರೆ. ಟಿಟಿ ವಾಹನ ನಿಯಂತ್ರಣ ಕಳೆದುಕೊಂಡು ಪಲ್ಟಿಯಾದ ಪರಿಣಾಮ ಮೂವರು ಸ್ಥಳದಲ್ಲಿಯೇ ಸಾವು (death) ಕಂಡಿದ್ದು, ಐವರಿಗೆ ಗಂಭೀರವಾದ ಗಾಯಗಳಾಗಿವೆ. ದುರ್ಘಟನೆ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಹೆಗ್ಗೆರೆ ಗ್ರಾಮದಲ್ಲಿ ನಡೆದಿದೆ. ಮೃತಪಟ್ಟವರನ್ನು ಶಂಕರಿಬಾಯಿ (65) ಕುಮಾರ್ ನಾಯಕ್ (46) ಮತ್ತು ಶ್ವೇತ (38) ಎಂದು ಗುರುತಿಸಲಾಗಿದೆ.

ಅಪಘಾತದಲ್ಲಿ ಐವರಿಗೆ ಗಂಭೀರವಾದ ಗಾಯಗಳಾಗಿದ್ದು ಕೂಡಲೇ ಅವರನ್ನು ಚಳ್ಳಕೆರೆ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆ ಕುರಿತಂತೆ ಚಳ್ಳಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಪಘಾತಕ್ಕೆ ಕಾರಣವನ್ನು ಪತ್ತೆಹಚ್ಚಲಾಗುತ್ತಿದೆ. ವಾಹನ ಚಾಲಕನ ನಿಯಂತ್ರಣ ಕಳೆದುಕೊಂಡು ಪಲ್ಟಿಯಾಗಿರಬಹುದು ಎಂದು ಸಂಶಯಿಸಲಾಗಿದೆ.

ಎರಡು ಅಪಘಾತ, ಯುಗಾದಿ ಹಬ್ಬಕ್ಕೆ ತೆರಳುತ್ತಿದ್ದ ಯುವಕರು ಸೇರಿ ನಾಲ್ವರ ದುರ್ಮರಣ

ದಾವಣಗೆರೆ/ಉಡುಪಿ: ಎರಡು ಪ್ರತ್ಯೇಕ ಅಪಘಾತಗಳು ನಡೆದಿದ್ದು, ಯುಗಾದಿ ಹಬ್ಬಕ್ಕೆಂದು ಊರಿಗೆ ತೆರಳುತ್ತಿದ್ದ ಇಬ್ಬರು ಯುವಕರು ಸೇರಿದಂತೆ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಉಡುಪಿ ಹಾಗೂ ದಾವಣಗೆರೆಯಲ್ಲಿ ನಡೆದಿದೆ. ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಬೀರೂರು ಹಾಗೂ ಸಮ್ಮಸಗಿ ರಾಜ್ಯ ಹೆದ್ದಾರಿಯ ಗುಳ್ಳೇಹಳ್ಳಿಯ ಕೂಗಳತೆಯಲ್ಲಿ ಹಿಟ್ ಆ್ಯಂಡ್ ರನ್ ಪ್ರಕರಣದಲ್ಲಿ ಇಬ್ಬರು ಬೈಕ್ ಸವಾರರು ಮೃತಪಟ್ಟಿದ್ದಾರೆ. ಅರ್ಜುನ್ ನಾಯ್ಕ (25), ಹರೀಶ್ ನಾಯ್ಕ (31) ಮೃತ ಯುವಕರು ಎಂದು ತಿಳಿದುಬಂದಿದೆ. ಯುಗಾದಿ ಹಬ್ಬ ಇರುವ ಕಾರಣ ತಮ್ಮ ದ್ವಿಚಕ್ರ ವಾಹನದಲ್ಲಿ ಯುವಕರು ಊರಿಗೆ ಮರಳುವ ವೇಳೆ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದು ಹೋಗಿದೆ.

ಪರಿಣಾಮ ಇಬ್ಬರು ಬೈಕ್ ಸವಾರರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದು, ಚನ್ನಗಿರಿ ಪೊಲೀಸ್ ಠಾಣೆಯ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಅಪರಿಚಿತ ವಾಹನದ ಗುರುತನ್ನು ಪತ್ತೆ ಮಾಡಲು ಸ್ಥಳೀಯ ಸಿಸಿ ಟಿವಿ ಕ್ಯಾಮೆರಾಗಳನ್ನು ಜಾಲಾಡಲಾಗಿದೆ.

ಉಡುಪಿಯಲ್ಲಿ ಕಾರು ಹಾಗೂ ಬಸ್ರೂರು ಸಮೀಪದ ಬಿ.ಹೆಚ್.ನಿಂದ ಕಂಡ್ಲೂರಿನತ್ತ ತೆರಳುತ್ತಿದ್ದ ಸ್ಕೂಟಿ ಮಧ್ಯೆ ಮುಖಾಮುಖಿ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ. ಡಿಕ್ಕಿ ಹೊಡೆದ ರಭಸಕ್ಕೆ ರಾಜೀವ ಶೆಟ್ಟಿ (55) ಹಾಗೂ ಸುಧೀರ ದೇವಾಡಿಗ (35) ಎನ್ನುವವರು ಸಾವನ್ನಪ್ಪಿದ್ದಾರೆ. ಅಪಘಾತದ ಕುರಿತಂತೆ ಕುಂದಾಪುರ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: Road Accident: ಬೆಂಗಳೂರು- ಮೈಸೂರು ಎಕ್ಸ್‌ಪ್ರೆಸ್‌ವೇ ಬಳಿ ಅಪಘಾತ, ಮೂವರು ಸಾವು, ಮೂವರು ಗಂಭೀರ