ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

Chitradurga Accident: ಚಿತ್ರದುರ್ಗದಲ್ಲಿ ಭೀಕರ ಅಪಘಾತ; ಬೊಲೆರೋಗೆ ಲಾರಿ ಡಿಕ್ಕಿಯಾಗಿ ಮೂವರ ದುರ್ಮರಣ

Chitradurga News: ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ತಾಲೂಕಿನ ಬೈರಾಪುರ ಬಳಿ ಭೀಕರ ಅಪಘಾತ ನಡೆದಿದೆ. ಲಾರಿ ಡಿಕ್ಕಿಯಾದ ಪರಿಣಾಮ ಬೊಲೆರೋ ವಾಹನದಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸ್ಥಳಕ್ಕೆ ಮೊಳಕಾಲ್ಮೂರು ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡುತ್ತಿದ್ದಾರೆ.

ಚಿತ್ರದುರ್ಗದಲ್ಲಿ ಬೊಲೆರೋಗೆ ಲಾರಿ ಡಿಕ್ಕಿಯಾಗಿ ಮೂವರ ದುರ್ಮರಣ

ಸಾಂದರ್ಭಿಕ ಚಿತ್ರ -

Prabhakara R
Prabhakara R May 27, 2026 4:55 PM

ಚಿತ್ರದುರ್ಗ: ಬೊಲೆರೋ ವಾಹನಕ್ಕೆ ಲಾರಿ ಡಿಕ್ಕಿಯಾಗಿ ಮೂವರು ದುರ್ಮರಣ ಹೊಂದಿರುವ ಘಟನೆ (Chitradurga Accident) ಜಿಲ್ಲೆಯ ಮೊಳಕಾಲ್ಮೂರು ತಾಲೂಕಿನ ಬೈರಾಪುರ ಬಳಿ ನಡೆದಿದೆ. ರಾಷ್ಟ್ರೀಯ ಹೆದ್ದಾರಿ 150ಎದಲ್ಲಿ ಭೀಕರ ಅಪಘಾತ ಸಂಭವಿಸಿದೆ. ಈ ವೇಳೆ ಬೊಲೆರೋ ವಾಹನದಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸದ್ಯ ಸ್ಥಳಕ್ಕೆ ಮೊಳಕಾಲ್ಮೂರು ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದು, ಮೃತರ ಗುರುತು ಪತ್ತೆ ಹಚ್ಚುತ್ತಿದ್ದಾರೆ.

ಭಾರಿ ಮಳೆಗೆ ಮನೆಯ ಮೇಲಿದ್ದ ಕಲ್ಲು ಬಿದ್ದು ಬಾಲಕಿ ಸಾವು

ಬೀದರ್‌: ಬಿರುಗಾಳಿ ಸಹಿತ ಧಾರಾಕಾರ‌‌ ಆಲಿಕಲ್ಲು ಮಳೆಗೆ ಮನೆಯ ಮೇಲಿದ್ದ ಕಲ್ಲು ಬಿದ್ದು 6 ವರ್ಷದ ಬಾಲಕಿ ಮೃತಪಟ್ಟಿರುವ ಘಟನೆ ಬೀದರ್ ಜಿಲ್ಲೆಯ ಹುಲಸೂರು ಪಟ್ಟಣದ ತಹಸೀಲ್ದಾರ್ ಕಚೇರಿ ಬಳಿ ನಡೆದಿದೆ. 6 ವರ್ಷದ ಮಾಹೆರಾ ಪೈಸ್ ಇಸ್ಮಾಯಿಲ್ ಶೇಕ್ ಎಂಬ ಬಾಲಕಿ ಮೃತಪಟ್ಟಿದ್ದಾಳೆ. ಮನೆಯಲ್ಲಿದ್ದ ಮೂವರಿಗೆ ಗಂಭೀರ ಗಾಯಗಳಾಗಿವೆ.

ಬಿರುಗಾಳಿ ಸಹಿತ ಆಲಿಕಲ್ಲು ಮಳೆಗೆ ಮನೆಯ ಮೇಲ್ಚಾವಣಿ ಹಾರಿ ಹೋಗಿದೆ. ಈ ವೇಳೆ ಮೇಲ್ಚಾವಣಿ ಮೇಲೆ ಇಟ್ಟಿದ್ದ ಕಲ್ಲುಗಳು ಬಾಲಕಿ ಮೇಲೆ ಬಿದ್ದು ಸಾವನ್ನಪ್ಪಿದ್ದಾಳೆ. ಘಟನೆಯಲ್ಲಿ ಗಂಭೀರ ಗಾಯಗೊಂಡಿದ್ದ ಬಾಲಕಿಯನ್ನು ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರಕ್ಕೆ ರವಾನಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲಿ ಬಾಲಕಿ ಕೊನೆಯುಸಿರೆಳೆದಿದ್ದಾಳೆ. ಗಂಭೀರವಾಗಿ ಗಾಯಗೊಂಡ ಉಳಿದ ಮೂವರಿಗೆ ಹುಲಸೂರು ಪಟ್ಟಣದಲ್ಲಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪ್ರಾಥಮಿಕ ಹಂತದ ಚಿಕಿತ್ಸೆ ನೀಡಿ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಹಾರಾಷ್ಟ್ರದ ಶಹಾಜನಿ ಔರಾದ್ ನ ಖಾಸಗಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

ಅನೈತಿಕ ಸಂಬಂಧ ಶಂಕೆ: ನಿದ್ರಿಸುತ್ತಿದ್ದ ಪತಿಯ ಖಾಸಗಿ ಅಂಗವನ್ನೇ ಕತ್ತರಿಸಿದ ಪತ್ನಿ