Chitradurga News: ಡಿ.ಕೆ. ಶಿವಕುಮಾರ್‌ ಆಡಿದ ಮಾತಿಗೆ ಕೂಡಲೇ ಕ್ಷಮೆ ಕೇಳಬೇಕು; ಶ್ರೀ ಇಮ್ಮಡಿ ಸಿದ್ದರಾಮೇಶ್ವರ ಶ್ರೀಗಳ ಆಗ್ರಹ

ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಸದನದಲ್ಲಿ ವಡ್ಡ ಎಂಬ ಪದವನ್ನು ಬಳಕೆ ಮಾಡಿದ ಹಿನ್ನಲೆಯಲ್ಲಿ ಭೋವಿ ಗುರುಪೀಠದ ಶ್ರೀ ಇಮ್ಮಡಿ ಸಿದ್ದರಾಮೇಶ್ವರ ಶ್ರೀಗಳು ತೀವ್ರವಾಗಿ ಖಂಡಿಸಿದ್ದಾರೆ. (Chitradurga News) ಈ ಕುರಿತ ವಿವರ ಇಲ್ಲಿದೆ.

Profile Vishwavani News December 13, 2024
ಚಿತ್ರದುರ್ಗ: ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸದನದಲ್ಲಿ ವಡ್ಡ ಎಂಬ ಪದವನ್ನು ಬಳಕೆ ಮಾಡಿದ ಹಿನ್ನಲೆಯಲ್ಲಿ ಭೋವಿ ಗುರುಪೀಠದ ಶ್ರೀ ಇಮ್ಮಡಿ ಸಿದ್ದರಾಮೇಶ್ವರ ಶ್ರೀಗಳು ತೀವ್ರವಾಗಿ ಖಂಡಿಸಿದ್ದಾರೆ. ಚಿತ್ರದುರ್ಗ ನಗರದ (Chitradurga News) ಭೋವಿ ಗುರುಪೀಠದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಶ್ರೀಗಳು, ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಸದನದಲ್ಲಿ ಇತ್ತೀಚೆಗೆ ಮೃತರಾದ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರ ನಿಧನದ ಹಿನ್ನಲೆಯಲ್ಲಿ ಅವರ ಬಗ್ಗೆ ಸಂತಾಪ ಸೂಚಿಸುವ ಸಮಯದಲ್ಲಿ ಅವರ ಆಡಿದ ಮಾತು ನಮ್ಮ ಸಮುದಾಯಕ್ಕೆ ಧಕ್ಕೆಯನ್ನುಂಟು ಮಾಡಿದೆ. ಇದು ಖಂಡನೀಯ ಎಂದು ತಿಳಿಸಿದರು. ಈ ಕೂಡಲೇ ಅವರು ಕ್ಷಮೆಯನ್ನು ಕೇಳಬೇಕು, ಅವರು ಆಡಿದ ಮಾತನ್ನು ವಾಪಾಸ್ಸು ಪಡೆಯಬೇಕು. ಆದೇ ರೀತಿ ಸದನದ ಕಡತದಲ್ಲಿ ನಮೂದಾಗಿರುವ ಆ ಪದವನ್ನು ತೆಗೆಯಬೇಕು ಎಂದು ಶ್ರೀ ಇಮ್ಮಡಿ ಸಿದ್ದರಾಮೇಶ್ವರ ಶ್ರೀಗಳು ಆಗ್ರಹಿಸಿದ್ದಾರೆ. ಈ ಸುದ್ದಿಯನ್ನೂ ಓದಿ | Pralhad Joshi: ಭಾರತೀಯ ಪರಂಪರೆ, ಸಂಸ್ಕೃತಿ ಪುನರುತ್ಥಾನಕ್ಕೆ ಕೇಂದ್ರ ಸರ್ಕಾರ ದಿಟ್ಟ ಹೆಜ್ಜೆ; ಪ್ರಲ್ಹಾದ್‌ ಜೋಶಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ನಮ್ಮ ಮಠಕ್ಕೂ ನಮ್ಮ ಸಮುದಾಯಕ್ಕೂ ಬಹಳವಾದ ಸಂಬಂಧವನ್ನು ಹೊಂದಿದ್ದಾರೆ. ಅವರ ಸಮಯದಲ್ಲಿ ನಾವುಗಳು ಅವರಿಗೆ ಹಲವಾರು ಕೆಲಸಗಳನ್ನು ಹೇಳಿದ್ದೇವು ಅದನ್ನು ಅವರು ಚಾಚು ತಪ್ಪದೆ ಮಾಡಿದ್ದಾರೆ. ಇದೇ ರೀತಿ ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿ ಪಕ್ಷದಲ್ಲಿ ವಿವಿಧ ರೀತಿಯ ಹುದ್ದೆಗಳನ್ನು ನಮ್ಮ ಸಮುದಾಯಕ್ಕೆ ನೀಡಿದ್ದಾರೆ. ಸಿದ್ದರಾಮಯ್ಯ ಸಚಿವ ಸಂಪುಟದಲ್ಲಿ ನಮ್ಮ ಸಮುದಾಯದ ಮಂತ್ರಿಗಳಾಗಲು ಸಹ ಅವರು ನೆರವಾಗಿದ್ದಾರೆ, ಇದ್ದಲ್ಲದೆ ಚುನಾವಣೆಯ ಸಮಯದಲ್ಲಿ ಚಿತ್ರದುರ್ಗ ಹಾಗೂ ಬಾಗಲಕೋಟೆಯ ಮಠಗಳಿಗೆ ಭೇಟಿ ನೀಡಿ ನಮ್ಮ ಆರ್ಶೀವಾದವನ್ನು ಪಡೆದಿದ್ದಾರೆ. ತಮ್ಮ ಮಗಳ ಮದುವೆಗೂ ಸಹ ನಮ್ಮನ್ನು ಆಹ್ವಾನ ಮಾಡಿದ್ದರು ಎಂದು ಅವರ ಕಾರ್ಯವನ್ನು ನೆನೆದರು. ಸಂವಿಧಾನಿಕ ಹುದ್ದೆಯಲ್ಲಿರುವ ಡಿ.ಕೆ. ಶಿವಕುಮಾರ್‌ ಅವರು ಈ ರೀತಿಯಾದ ಮಾತುಗಳನ್ನು ಆಡುವಾಗ ಎಚ್ಚರ ವಹಿಸಬೇಕಿತ್ತು, ಈ ಮಾತುಗಳಿಂದ ನಮ್ಮ ಶಿಷ್ಯ ಸಮುದಾಯ ತುಂಬಾ ಆತಂಕಗೊಂಡಿದೆ. ಇವರ ಮೇಲೆ ದೂರನ್ನು ದಾಖಲಿಸುವಂತೆಯೂ ಸಹಾ ನಮ್ಮ ಮೇಲೆ ಒತ್ತಡವನ್ನು ತರಲಾಗುತ್ತಿದೆ. ಆದರೆ ನಾವು ಶಾಂತಿಯಿಂದ ಇರುವಂತೆ ತಿಳಿಸಿದ್ದೇವೆ. ಮೊದಲು ಡಿ.ಕೆ. ಶಿವಕುಮಾರ್ ಅವರಿಗೆ ಸಮಯವನ್ನು ನೀಡಿ ತದನಂತರ ಮುಂದುವರೆಯಲಾಗುವುದು ಎಂದು ಶ್ರೀಗಳು ಹೇಳಿದರು. ಡಿ.ಕೆ. ಶಿವಕುಮಾರ್ ಅವರ ಮೇಲೆ ಸಮುದಾಯ ಆಪಾರವಾದ ಪ್ರೀತಿ, ವಿಶ್ವಾಸವನ್ನು ಹೊಂದಿದೆ, ಅವರು ಸಹ ನಮ್ಮ ಸಮುದಾಯದ ಮೇಲೆ ವಿಶ್ವಾಸವನ್ನು ಹೊಂದಿದ್ದಾರೆ. ನಮ್ಮಲ್ಲಿ ಯಾವುದೇ ದ್ವೇಷ ಇಲ್ಲ, ಆದರೆ ಸಮುದಾಯ ಎಂದು ಬಂದಾಗ ಮಾತ್ರ ನಾವು ಭಕ್ತರ ಪರವಾಗಿ ಇರಬೇಕಿದೆ. ಶಿವಕುಮಾರ್ ಆಡಿದ ಮಾತಿಗೆ ಕ್ಷಮೆಯನ್ನು ಕೇಳಬೇಕು. ಸದನದ ಕಡತದಿಂದ ಆಡಿದ ಮಾತನ್ನು ವಾಪಾಸ್ಸು ಪಡೆಯಬೇಕು ಎಂದು ಶ್ರೀಗಳು ಆಗ್ರಹಿಸಿದರು. ಈ ಸುದ್ದಿಯನ್ನೂ ಓದಿ | Bengaluru Power Cut: ಡಿ.14, 15ರಂದು ಬೆಂಗಳೂರಿನ ಈ ಪ್ರದೇಶಗಳಲ್ಲಿ ಕರೆಂಟ್‌ ಇರಲ್ಲ ಈ ವೇಳೆ ಭೋವಿ ಸಮಾಜದ ಮಾಜಿ ಅಧ್ಯಕ್ಷ ತಿಪ್ಪೇಸ್ವಾಮಿ, ಪ್ರಧಾನ ಕಾರ್ಯದರ್ಶಿ ಲಕ್ಷ್ಮಣ್ ಪಾಲ್ಗೊಂಡಿದ್ದರು.
Three labourers brutally assaulted by brick kiln owner
1:53 PM January 20, 2025

Assault case: ಮೂವರು ಕಾರ್ಮಿಕರ ಮೇಲೆ ಇಟ್ಟಿಗೆ ಭಟ್ಟಿ ಮಾಲೀಕ ಮಾರಣಾಂತಿಕ ಹಲ್ಲೆ; ಕೆಲಸಕ್ಕೆ ಬರುವುದು ವಿಳಂಬವಾಗಿದ್ದಕ್ಕೆ ರಾಕ್ಷಸಿ ಕೃತ್ಯ!

Saif Ali Khan, Ibrahim
2:50 PM January 16, 2025

Saif Ali Khan: 1,200 ಕೋಟಿ ರೂ. ಆಸ್ತಿಗಳ ಒಡೆಯ ಸೈಫ್‌ ಆಲಿ ಖಾನ್‌ನನ್ನು‌ ಆಟೋದಲ್ಲಿ ಆಸ್ಪತ್ರೆಗೆ ಕರೆದೊಯ್ದ ಪುತ್ರ ಇಬ್ರಾಹಿಂ; ಕಾರಣವೇನು?

Student dies 1
8:51 PM January 18, 2025

Heart Attack: ಕಾಲೇಜು ಮುಗಿಸಿ ಹೋಗುವಾಗ ಹೃದಯಾಘಾತವಾಗಿ ವಿದ್ಯಾರ್ಥಿನಿ ಸಾವು

robbery case shooting
1:49 PM January 16, 2025

Murder Case: ಸೆಕ್ಯೂರಿಟಿ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ ಮಾಡಿ 93 ಲಕ್ಷ ರೂ. ದರೋಡೆ

BBK 11 Mid week Elimination (1)
9:12 PM January 15, 2025

BBK 11: ಇಂದೇ ನಡೆಯಲಿದೆ ಮಿಡ್ ವೀಕ್ ಎಲಿಮಿನೇಷನ್: ಔಟ್ ಆದ ಸ್ಪರ್ಧಿ ಇವರೇ ನೋಡಿ

Chaithra Kundapura remuneration (1)
7:13 AM January 16, 2025

BBK 11: ಬಿಗ್ ಬಾಸ್​ನಿಂದ ಹೊರಬಂದ ಚೈತ್ರಾ ಕುಂದಾಪುರಗೆ ಸಿಕ್ಕ ಹಣ ಎಷ್ಟು ಗೊತ್ತೇ?

Saif ali Khan (1)
9:38 AM January 18, 2025

Saif Ali Khan: ರಕ್ತಸಿಕ್ತವಾದ ಬಟ್ಟೆ, ಸಂಪೂರ್ಣ ಅಸ್ವಸ್ಥರಾಗಿದ್ದ ಸೈಫ್‌! ಆ ರಾತ್ರಿ ನಡೆದಿದ್ದಾದರೂ ಏನು? ಆಟೋ ಡ್ರೈವರ್‌ ಹೇಳಿದ್ದೇನು?

Naga Sadhus
11:15 PM January 18, 2025

Maha Kumbh Mela: ಕುಂಭಮೇಳದ ವೇಳೆ ನಾಗ ಸಾಧುಗಳು ಬರುವುದೆಲ್ಲಿಂದ? ಬಳಿಕ ಅಪ್ರತ್ಯಕ್ಷರಾಗುವುದೇಕೆ? ಅವರ ನಿಗೂಢ ಪ್ರಪಂಚ ಹೇಗಿದೆ? ಇಲ್ಲಿದೆ ಸಮಗ್ರ ವಿವರ

Honnamaradi jatre
5:53 PM January 15, 2025

Honnamaradi Jatre: ವೈಭವದಿಂದ ನಡೆದ ಹೊನ್ನಮರಡಿ ಜಾತ್ರೆ; ಶ್ರೀ ರಂಗನಾಥಸ್ವಾಮಿ ದರ್ಶನ ಪಡೆದ ಸಾವಿರಾರು ಭಕ್ತರು

Eshwara Khandre
6:54 PM January 16, 2025

Bidar ATM Robbery: ಬೀದರ್ ಎಟಿಎಂ ದರೋಡೆ ಪ್ರಕರಣ; ದುಷ್ಕರ್ಮಿಗಳ ವಿರುದ್ಧ ಕಠಿಣ ಕ್ರಮಕ್ಕೆ ಸಚಿವ ಖಂಡ್ರೆ ಸೂಚನೆ