ಫೋಟೋ ಗ್ಯಾಲರಿ ಬಿಗ್​ಬಾಸ್ ಬಜೆಟ್​ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

Student Self Harming: ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ಶಾಲಾ ಕಟ್ಟಡದಿಂದ ಜಿಗಿದು ಆತ್ಮಹತ್ಯೆ

ಚಿತ್ರದುರ್ಗ ತಾಲೂಕಿನ ಭರಮಸಾಗರದ ಡಿವಿಎಸ್ ಶಾಲೆಯಲ್ಲಿ ದುರಂತ ನಡೆದಿದೆ. ಚಿತ್ರದುರ್ಗದ ಕರಿಯಣ್ಣನಹಳ್ಳಿ ನಿವಾಸಿಯಾಗಿರುವ ವಿದ್ಯಾರ್ಥಿ ಕೊಟ್ರೇಶ್ ಶಾಲಾ ಕಟ್ಟಡದ 3ನೇ ಮಹಡಿಯಿಂದ ಕೆಳಕ್ಕೆ ಜಿಗಿದಿದ್ದಾನೆ. ಗಂಭೀರವಾಗಿ ಗಾಯಗೊಂಡಿದ್ದ ಆತನನ್ನು ತಕ್ಷಣವೇ ಆಸ್ಪತ್ರೆಗೆ ಕರೆದೊಯ್ಯುವ ಪ್ರಯತ್ನ ಮಾಡಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ ಎಂದು ತಿಳಿದುಬಂದಿದೆ.

ಪ್ರಾತಿನಿಧಿಕ ಚಿತ್ರ

ಚಿತ್ರದುರ್ಗ, ಫೆ.16 : ಚಿತ್ರದುರ್ಗದಲ್ಲಿ (Chitrdurga news) ಘೋರವಾದ ದುರಂತವೊಂದು ಸಂಭವಿಸಿದೆ. ಶಾಲಾ ಕಟ್ಟಡದ ಮೂರನೇ ಮಹಡಿಯಿಂದ ಹಾರಿ ಎಸ್‌ಎಸ್ಎಲ್‌ಸಿ ವಿದ್ಯಾರ್ಥಿಯೊಬ್ಬ (SSLC Student Self Harming) ಆತ್ಮಹತ್ಯೆಗೆ ಶರಣಾಗಿದ್ದಾನೆ. ಡಿವಿಎಸ್ ವಸತಿ ಶಾಲೆಯ ವಿದ್ಯಾರ್ಥಿ ಕೊಟ್ರೇಶ್ (16) ಆತ್ಮಹತ್ಯೆ ಶರಣಾಗಿರುವ ವಿದ್ಯಾರ್ಥಿ ಎಂದು ತಿಳಿದುಬಂದಿದೆ.

ಚಿತ್ರದುರ್ಗ ತಾಲೂಕಿನ ಭರಮಸಾಗರದ ಡಿವಿಎಸ್ ಶಾಲೆಯಲ್ಲಿ ಈ ಒಂದು ದುರಂತ ನಡೆದಿದೆ. ಚಿತ್ರದುರ್ಗದ ಕರಿಯಣ್ಣನಹಳ್ಳಿ ನಿವಾಸಿಯಾಗಿರುವ ವಿದ್ಯಾರ್ಥಿ ಕೊಟ್ರೇಶ್ ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಕೊಟ್ರೇಶ್ ಶಾಲಾ ಕಟ್ಟಡದ 3ನೇ ಮಹಡಿಯಿಂದ ಕೆಳಕ್ಕೆ ಜಿಗಿದಿದ್ದಾನೆ. ಗಂಭೀರವಾಗಿ ಗಾಯಗೊಂಡಿದ್ದ ಆತನನ್ನು ತಕ್ಷಣವೇ ಆಸ್ಪತ್ರೆಗೆ ಕರೆದೊಯ್ಯುವ ಪ್ರಯತ್ನ ಮಾಡಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ ಎಂದು ತಿಳಿದುಬಂದಿದೆ.

ವಿದ್ಯಾರ್ಥಿಯ ಈ ತೀವ್ರ ನಿರ್ಧಾರಕ್ಕೆ ನಿಖರವಾದ ಕಾರಣ ಇನ್ನೂ ತಿಳಿದುಬಂದಿಲ್ಲ. ಪರೀಕ್ಷೆಯ ಒತ್ತಡವೋ ಅಥವಾ ವೈಯಕ್ತಿಕ ಕಾರಣಗಳೋ ಎಂಬ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಘಟನಾ ಸ್ಥಳಕ್ಕೆ ಭರಮಸಾಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಹೋಟೆಲ್‌ ಉದ್ಘಾಟನೆ ವೇಳೆ ಹೃದಯಾಘಾತದಿಂದ ಸಾವು

ದಾವಣಗೆರೆ: ಖಾಸಗಿ ಹೋಟೆಲ್ ಉದ್ಘಾಟನಾ ಕಾರ್ಯಕ್ರಮದ ವೇಳೆ ಹೃದಯಾಘಾತಕ್ಕೊಳಗಾಗಿ (Heart Attack) ಯುವಕ ಸಾವನ್ನಪ್ಪಿರುವ ಘಟನೆ ದಾವಣಗೆರೆ (Davanagere) ಜಿಲ್ಲೆ ಜಗಳೂರು ಪಟ್ಟಣದಲ್ಲಿ ನಡೆದಿದೆ. ಸುಭಾನ್ (25) ಮೃತ ಯುವಕ.

ಖಾಸಗಿ ಹೋಟೆಲ್ ಕಾರ್ಯಕ್ರಮಕ್ಕೆ ನೆನಪಿರಲಿ ಪ್ರೇಮ್ ಸೇರಿದಂತೆ ಹಲವು ಗಣ್ಯರು ಪಾಲ್ಗೊಂಡಿದ್ದರು. ಈ ವೇಳೆ ಊಟಕ್ಕೆ ಕೂತಿದ್ದಾಗ ಹೃದಯಾಘಾತವಾಗಿದೆ. ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಯುವಕ ಕೊನೆಯುಸಿರೆಳೆದಿದ್ದಾನೆ. ಘಟನೆ ಸಂಬಂಧ ಜಗಳೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹರೀಶ್‌ ಕೇರ

View all posts by this author