ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ( Chitradurga Bus Accident) ಗೊರ್ಲತ್ತು ಗ್ರಾಮದ ಬಳಿ ಲಾರಿ ಡಿಕ್ಕಿಯಾಗಿ ಹೊತ್ತಿ ಉರಿದ ಸೀ ಬರ್ಡ್ ಬಸ್ ಹೊತ್ತಿ ಉರಿದ ಘಟನೆಯಲ್ಲಿ ಖಾಸಗಿ ಬಸ್ ಚಾಲಕ ಚಿಕಿತ್ಸೆ ಫಲಕಾರಿಯಾದೇ ಮೃತಪಟ್ಟಿದ್ದಾರೆ. ಈ ಮೂಲಕ ಮೃತಪಟ್ಟವರ ಸಂಖ್ಯೆ 7 ಕ್ಕೆ ಏರಿಕೆಯಾಗಿದೆ. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಖಾಸಗಿ ಬಸ್ ಚಾಲಕ ಮೊಹಮ್ಮದ್ ರಫೀಕ್ (42) ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಹಾವೇರಿ ಜಿಲ್ಲೆ ಶಿಗ್ಗಾಂವಿ ನಿವಾಸಿಯಾಗಿದ್ದ ರಫೀಕ್ ಅಪಘಾತದ ಬಳಿಕ ಗಂಭೀರವಾಗಿ ಗಾಯಗೊಂಡಿದ್ದರು. ಅವರನ್ನು ನಿನ್ನೆ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಬೆಳಗ್ಗೆ ಮೃತಪಟ್ಟಿದ್ದಾರೆ. ಈ ಮೂಲಕ ಮೃತಪಟ್ಟವರ ಸಂಖ್ಯೆ 7 ಕ್ಕೆ ಏರಿಯಾಗಿದೆ. ಕಿಮ್ಸ್ ಆಸ್ಪತ್ರೆ ಶವಾಗಾರ ಎದುರು ಮೊಹಮದ್ ರಫೀಕ್ ನೆನೆದು ಕುಟುಂಬದವರು ಕಣ್ಣೀರಿಟ್ಟಿದ್ದಾರೆ. ಮೊಹಮದ್ ರಫೀಕ್ ಪತ್ನಿ ಹಾಗೂ ಅವರ ಸಹೋದರ ಶವಾಗಾರದ ಎದುರು ಕಣ್ಣೀರು ಹಾಕಿದ್ದಾರೆ.
ಆತನೇ ನಮಗೆಲ್ಲ ಆಸರೆಯಾಗಿದ್ದ. ಕುಟುಂಬವನ್ನ ಮುನ್ನಡೆಸುತ್ತಿದ್ದ. ಅಪಘಾತದಲ್ಲಿ ಬದುಕುಳಿದಾಗ ಸ್ವಲ್ಪ ಸಮಾಧಾನ ಆಗಿತ್ತು. ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ನೆನ್ನೆ ಕರೆದುಕೊಂಡು ಬಂದಿದ್ದೆವು. ಆದರೆ ರಾತ್ರಿ ಆಪರೇಷನ್ ಮಾಡುವವರೆಗೂ ಮಾತನಾಡ್ತಾ ಇದ್ದರು. ರಾತ್ರಿ 12:30ಕ್ಕೆ ಆಪರೇಷನ್ ಗೆ ಕರೆದುಕೊಂಡು ಹೋಗಿದ್ದರು. ಆಪರೇಷನ್ ಮುಗಿದ ಮೇಲೆ ಕೇವಲ ಉಸಿರಾಟ ಇತ್ತು. ಆದರೆ ಇದೀಗ ರಫೀಕ್ ಸಾವನ್ನಪ್ಪಿದ್ದಾನೆ ಎಂದು ಅವರ ಸಹೋದರ ತಿಳಿಸಿದರು.
ಚಿತ್ರದುರ್ಗ ಅಪಘಾತದ ವೇಳೆ ತಪ್ಪಿತು ಮತ್ತೊಂದು ಬಸ್ ದುರಂತ; ಪವಾಡ ರೀತಿಯಲ್ಲಿ 43 ಶಾಲಾ ಮಕ್ಕಳು ಪಾರು!
ಅಪಘಾತದಲ್ಲಿ ಮೃತಪಟ್ಟ ಕುಟುಂಬಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮೃತಪಟ್ಟವರ ಕುಟುಂಬಗಳಿಗೆ ಪರಿಹಾರ ಘೋಷಣೆ ಮಾಡಿದ್ದಾರೆ. ರಾಜ್ಯ ಸರ್ಕಾರದಿಂದ ಮೃತರ ಕುಟುಂಬಕ್ಕೆ 5 ಲಕ್ಷ ರೂಪಾಯಿ ನೆರವು ನೀಡಲಾಗುವುದು. ಇದರ ಜೊತೆಗೆ, ಕೇಂದ್ರ ಸರ್ಕಾರದಿಂದ ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಡಿ ಮೃತರ ಕುಟುಂಬಕ್ಕೆ ತಲಾ 2 ಲಕ್ಷ ರೂಪಾಯಿ ಪರಿಹಾರ ಘೋಷಿಸಲಾಗಿದೆ. ಹೀಗಾಗಿ ಮೃತರ ಕುಟುಂಬಗಳಿಗೆ ಒಟ್ಟು 7 ಲಕ್ಷ ರೂಪಾಯಿ ನೆರವು ದೊರೆಯಲಿದೆ.