ಸ್ವಾತಂತ್ರ್ಯೋತ್ಸವ ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

K.C.Veerendra Puppy: ಅಕ್ರಮ ಹಣ ವರ್ಗಾವಣೆ ಕೇಸ್‌; ಕಾಂಗ್ರೆಸ್‌ ಶಾಸಕ ವೀರೇಂದ್ರ ಪಪ್ಪಿ ಸಿಕ್ಕಿಂನಲ್ಲಿ ಇಡಿ ವಶಕ್ಕೆ

ED Raid: ಚಿತ್ರದುರ್ಗ ಶಾಸಕ ವೀರೇಂದ್ರ ಪಪ್ಪಿ ಒಡೆತನದ ಕಂಪನಿಗಳಿಂದ ಗೇಮಿಂಗ್ ಆ್ಯಪ್‌ಗಳಿಗೆ ಅಕ್ರಮ ಹಣ ವರ್ಗಾವಣೆ ಆಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ಸಂಬಂಧ ಇಡಿ ದಾಳಿ ನಡೆಸಿ ಅಧಿಕಾರಿಗಳು ಶೋಧ ನಡೆಸುತ್ತಿದ್ದಾರೆ. ಶಾಸಕನಿಗೆ ಸೇರಿದ 16 ಕಡೆ ಇಡಿ ದಾಳಿ ಮಾಡಿದೆ.

ಕಾಂಗ್ರೆಸ್‌ ಶಾಸಕ ವೀರೇಂದ್ರ ಪಪ್ಪಿ ಸಿಕ್ಕಿಂನಲ್ಲಿ ಇಡಿ ವಶಕ್ಕೆ

Prabhakara R Prabhakara R Aug 22, 2025 1:32 PM

ಚಿತ್ರದುರ್ಗ: ಕಾಂಗ್ರೆಸ್ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ 9K.C.Veerendra Puppy) ಮನೆ ಮೇಲೆ ಇಡಿ ಅಧಿಕಾರಿಗಳು ಶುಕ್ರವಾರ ಬೆಳ್ಳಂ ಬೆಳಗ್ಗೆ ದಾಳಿ ನಡೆಸಿ, ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಇದರ ನಡುವೆ ಆನ್‌ಲೈನ್ ಗೇಮಿಂಗ್ ಆ್ಯಪ್ ಕಂಪನಿಗಳಿಗೆ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಅವರನ್ನು ಇಡಿ ಅಧಿಕಾರಿಗಳು ಸಿಕ್ಕಿಂನಲ್ಲಿ ವಶಕ್ಕೆ ಪಡೆದಿದ್ದಾರೆ ಎಂದು ತಿಳಿದುಬಂದಿದೆ.

ಅಕ್ರಮ ಹಣ ವರ್ಗಾವಣೆ ಆರೋಪದಲ್ಲಿ ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿ ವಿರುದ್ಧ 2 ಎಫ್‌ಐಆರ್ ದಾಖಲಾಗಿವೆ. ಈ ಕೇಸ್‌ನಲ್ಲೇ ಆಕ್ರಮ ಹಣ ವರ್ಗಾವಣೆ ಆಗಿದೆ ಎಂದು ಇ.ಡಿ. ಅಧಿಕಾರಿಗಳು ಇಸಿಐಆರ್ ದಾಖಲಿಸಿಕೊಂಡು ಇಂದು ಬೆಳಗ್ಗೆಯೇ ದಾಳಿ ನಡೆಸಿ ದಾಖಲೆಪತ್ರಗಳ ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಈ ತನಿಖೆಯ ಭಾಗವಾಗಿಯೇ ಸಿಕ್ಕಿಂನಲ್ಲಿದ್ದ ವೀರೇಂದ್ರ ಪಪ್ಪಿಯನ್ನು ಹೋಟೇಲ್‌ನಲ್ಲೇ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಇನ್ನು ಚಳ್ಳಕೆರೆ ನಗರದಲ್ಲಿನ ಶಾಸಕ ಕೆ.ಸಿ ವೀರೇಂದ್ರ ಪಪ್ಪಿ ನಿವಾಸದ ಮೇಲೆ ಇ.ಡಿ. ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಕೆ.ಸಿ.ವೀರೇಂದ್ರ ಪಪ್ಪಿ ಅವರ ಅಣ್ಣ ಕೆ.ಸಿ. ನಾಗರಾಜ್, ಕೆ.ಸಿ ಸ್ವಾಮಿ ಮನೆ ಮೇಲೂ ಇ.ಡಿ. ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಚಿತ್ರದುರ್ಗ ನಗರದ ಹಳೇ ಟೌನ್ ವೀರಭದ್ರ ಸ್ವಾಮಿ ದೇವಸ್ಥಾನ ಬಳಿ‌ ಇರುವ ನಿವಾಸದ ಮೇಲೂ ದಾಳಿಯಾಗಿದೆ. ಆಕ್ರಮ ಹಣ ವರ್ಗಾವಣೆ ಕುರಿತಂತೆ ದಾಖಲೆ ಇ.ಡಿ. ಅಧಿಕಾರಿಗಳು ಪರಿಶೀಲಿಸುತ್ತಿದ್ದಾರೆ.

ಬೆಂಗಳೂರಿನ ವಸಂತ ನಗರ ಅಪಾರ್ಟ್ ಮೆಂಟ್ ಮೇಲೂ ಇ.ಡಿ. ಅಧಿಕಾರಿಗಳು ದಾಳಿ ನಡೆಸಿದ್ದಾರೆ. ವಸಂತನಗರದ ಪ್ರೆಸ್ಟೀಜ್ ಎಡ್ವರ್ಡಿಯನ್ ಅಪಾರ್ಟ್‌ಮೆಂಟ್‌ನಲ್ಲಿ ಫ್ಲ್ಯಾಟ್ ಅನ್ನು ವೀರೇಂದ್ರ ಪಪ್ಪಿ ಹೊಂದಿದ್ದಾರೆ. ಬೆಂಗಳೂರು, ಚಳ್ಳಕೆರೆ, ಚಿತ್ರದುರ್ಗ, ಗೋವಾ ಸೇರಿದಂತೆ ಹದಿನಾರು ಕಡೆಗಳಲ್ಲಿ ದಾಳಿ ನಡೆಸಿರುವ ಇ.ಡಿ ಅಧಿಕಾರಿಗಳು ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾರೆ.

ಈ ಸುದ್ದಿಯನ್ನೂ ಓದಿ | ED Raid: ಕಾಂಗ್ರೆಸ್‌ ನಾಯಕಿ ಕುಸುಮಾಗೆ ಇಡಿ ಶಾಕ್‌; ಬೆಂಗಳೂರಿನ ಮನೆಯಲ್ಲಿ ಶೋಧ

ವೀರೇಂದ್ರ ಪಪ್ಪಿ ಒಡೆತನದ ಕಂಪನಿಗಳಿಂದ ಗೇಮಿಂಗ್ ಆ್ಯಪ್ ಗಳಿಗೆ ಅಕ್ರಮ ಹಣ ವರ್ಗಾವಣೆ ಸಂಬಂಧ ದಾಳಿ ನಡೆಸಿ ಅಧಿಕಾರಿಗಳು ಶೋಧ ನಡೆಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಶಾಸಕ ಕೆ.ಸಿ. ವೀರೇಂದ್ರ ಗೆ ಸೇರಿದ 16 ಕಡೆ ಇಡಿ ದಾಳಿ ಮಾಡಿದೆ.