ಫೋಟೋ ಗ್ಯಾಲರಿ ಬಿಗ್​ಬಾಸ್ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Murugha Mutt seer Case: ಮುರುಘಾ ಶ್ರೀ ವಿರುದ್ಧ ಇದ್ದ ಕೇಸ್‌ ಏನು?; ಇಲ್ಲಿದೆ ಸಂಪೂರ್ಣ ವಿವರ

Chitradurga News: ಮೊದಲ ಪೋಕ್ಸೊ ಪ್ರಕರಣದಲ್ಲಿ ಎ1 ಮುರುಘಾ ಶ್ರೀ, ಎರಡನೇ ಆರೋಪಿ ರಶ್ಮಿ, ನಾಲ್ಕನೇ ಆರೋಪಿ, ಮಠದ ಮ್ಯಾನೇಜರ್ ಪರಮಶಿವಯ್ಯ ನಿರ್ದೋಷಿಗಳು ಎಂದು ಚಿತ್ರದುರ್ಗದ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್‌ ಕೋರ್ಟ್‌ ತೀರ್ಪು ನೀಡಿದೆ. ಈ ಪ್ರಕರಣದಲ್ಲಿ ಶ್ರೀಗಳ ಪರ ವಕೀಲ ಸಿ.ವಿ.ನಾಗೇಶ್ ವಾದ ಮಂಡಿಸಿದ್ದರು.

ಮುರುಘಾ ಶ್ರೀ ವಿರುದ್ಧ ಇದ್ದ ಕೇಸ್‌ ಏನು?; ಇಲ್ಲಿದೆ ಸಂಪೂರ್ಣ ವಿವರ

ಚಿತ್ರದುರ್ಗದ ಮುರುಘಾ ಶ್ರೀ (ಸಂಗ್ರಹ ಚಿತ್ರ) -

Prabhakara R
Prabhakara R Nov 26, 2025 4:36 PM

ಚಿತ್ರದುರ್ಗ,ನ.26: ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರು (Murugha Mutt seer Case) ಮೊದಲ ಪೋಕ್ಸೊ ಪ್ರಕರಣದಲ್ಲಿ ನಿರಾಳಾರಾಗಿದ್ದಾರೆ. ಕೇಸ್‌ನಲ್ಲಿ ನಿರ್ದೋಷಿ ಎಂದು ಚಿತ್ರದುರ್ಗದ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್‌ ಕೋರ್ಟ್‌ ತೀರ್ಪು ನೀಡಿದೆ. ಆದರೆ, ಮಠ ಪ್ರವೇಶಕ್ಕೆ ನಿರ್ಬಂಧ ಇರುವ ಕಾರಣ ಚಿತ್ರದುರ್ಗದಿಂದ ದಾವಣಗೆರೆಯತ್ತ ಶ್ರೀಗಳು ಪ್ರಯಾಣ ಬೆಳೆಸಿದ್ದಾರೆ. ಇನ್ನು ಶ್ರೀಗಳ ವಿರುದ್ಧ ದಾಖಲಾಗಿದ್ದ ಪ್ರಕರಣಗಳು ಯಾವುವು?, ಇದುವರೆಗೆ ಏನೆಲ್ಲಾ ಆಗಿದೆ ಎಂಬ ಕುರಿತ ವಿವರವಾದ ಮಾಹಿತಿ ಇಲ್ಲಿದೆ.

ಇಬ್ಬರು ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ

ಮುರುಘಾ ಶ್ರೀ ವಿರುದ್ಧ 2022ರ ಆ.26 ರಂದು ಮೈಸೂರಿನ ನಜರಾಬಾದ್ ಠಾಣೆಯಲ್ಲಿ ಪೋಕ್ಸೊ ಕೇಸ್ ದಾಖಲಾಗಿತ್ತು. ತಮ್ಮ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಿ ಮುರುಘಾ ಮಠದ ಹಾಸ್ಟೆಲ್‌ನ ಇಬ್ಬರು ಬಾಲಕಿಯರಿಂದ ಕೇಸ್ ದಾಖಲಾಗಿತ್ತು. ಈ ಪ್ರಕರಣದಲ್ಲಿ ಎ1 ಮುರುಘಾಶ್ರೀ, ಎ2 ಲೇಡಿ ವಾರ್ಡನ್ ರಶ್ಮಿ, ಎ3 ಬಸವಾದಿತ್ಯ, ಎ4 ಮ್ಯಾನೇಜರ್ ಪರಮಶಿವಯ್ಯ, ಎ5 ವಕೀಲ ಗಂಗಾಧರಯ್ಯ ವಿರುದ್ಧ ಪ್ರಕರಣ ದಾಖಲಾಗಿತ್ತು. ಅದೇ ವರ್ಷ ಆ.27ರಂದು ಚಿತ್ರದುರ್ಗ ಗ್ರಾಮಾಂತರ ಠಾಣೆಗೆ ಕೇಸ್ ವರ್ಗಾವಣೆಯಾಗಿತ್ತು. 2022ರ ಸೆ.01 ರಂದು ಎ1 ಮುರುಘಾಶ್ರೀ, ಎ2 ವಾರ್ಡನ್ ರಶ್ಮಿ ಬಂಧನಕ್ಕೊಳಗಾಗಿದ್ದರು.

ಬಳಿಕ ಮೈಸೂರಿನ ನಜರಾಬಾದ್ ಠಾಣೆಯಲ್ಲಿ ಮುರುಘಾಶ್ರೀ ವಿರುದ್ಧ 2022ರ ಅ.13 ರಂದು ಮಠದ ಅಡುಗೆ ಸಹಾಯಕಿಯಿಂದ ಮತ್ತೊಂದು ದೂರು ದಾಖಲಾಗಿತ್ತು. ಆ ಕೇಸಲ್ಲಿ ತನ್ನಿಬ್ಬರು ಅಪ್ರಾಪ್ತ ಹೆಣ್ಣು ಮಕ್ಕಳ ಮೇಲೆಯೂ ಲೈಂಗಿಕ ಕಿರುಕುಳ ನೀಡಿರುವುದಾಗಿಯೂ ಎಂದು ಕೂಡ ಉಲ್ಲೇಖಿಸಿದ್ದರು. ಆಗ ಎ1 ಮುರುಘಾಶ್ರೀ, ಎ2 ವಾರ್ಡನ್ ರಶ್ಮಿ, ಎ3 ಬಸವಾದಿತ್ಯ, ಎ4 ಪರಮಶಿವಯ್ಯ, ಎ5 ವಕೀಲ ಗಂಗಾಧರಯ್ಯ, ಎ6 ಮುರುಘಾಶ್ರೀ ಸಹಾಯಕ ಮಹಾಲಿಂಗ, ಎ7 ಅಡುಗೆಭಟ್ಟ ಕರಿಬಸಪ್ಪ ವಿರುದ್ದ ಕೇಸ್ ದಾಖಲಾಗಿತ್ತು.

ಪೋಕ್ಸೊ ಕೇಸ್‌ನಲ್ಲಿ ಮುರುಘಾ ಶ್ರೀಗಳನ್ನು ಖುಲಾಸೆಗೊಳಿಸಿದ ಚಿತ್ರದುರ್ಗ ಕೋರ್ಟ್

694 ಪುಟಗಳ ಚಾರ್ಜ್‌ಶೀಟ್‌ ಸಲ್ಲಿಕೆ

ಮೊದಲ ಪ್ರಕರಣದಲ್ಲಿ ಸಂಪೂರ್ಣ ತನಿಖೆ ನಡೆಸಿದ ಚಿತ್ರದುರ್ಗ ಗ್ರಾಮಾಂತರ ಪೊಲೀಸರು ಹಾಗೂ ಚಿತ್ರದುರ್ಗ ಡಿವೈಎಸ್ಪಿ ಅನಿಲ್ ಕುಮಾರ್ ನೇತೃತ್ವದ ತಂಡವು 2022ರ ಅ.27 ರಂದು 694 ಪುಟಗಳ ಚಾರ್ಜ್‌ಶೀಟ್‌ ಸಲ್ಲಿಸಿತ್ತು. ಅದರಲ್ಲಿ 347 ಪುಟಗಳ ಎ ಮತ್ತು ಬಿ ಎಂದು ಎರಡು ಸೆಟ್ ಚಾರ್ಜ್ ಶೀಟ್ ಸಲ್ಲಿಸಿದ್ದರು.

ಇನ್ನು 2023ರ ಜ.10ಕ್ಕೆ ದಾಖಲಾದ 2ನೇ ಪೋಕ್ಸೊ ಪ್ರಕರಣದಲ್ಲಿ ಚಿತ್ರದುರ್ಗ ಗ್ರಾಮಾಂತರ ಠಾಣೆ ಪೊಲೀಸರು 761 ಪುಟಗಳ ಚಾರ್ಜ್‌ಶೀಟ್‌ನ್ನು ಸಲ್ಲಿಸಿದ್ದರು. ಇಷ್ಟೆಲ್ಲ ಸಾಕ್ಷ್ಯಾಧಾರ ಹಾಗೂ ಚಾರ್ಜ್‌ಶೀಟ್‌ ಮೇಲೆ ಚಿತ್ರದುರ್ಗ ನ್ಯಾಯಾಲಯ ವಿಚಾರಣೆ ನಡೆಸಿತ್ತು. ವಿಚಾರಣೆ ನಡೆಯುವಾಗಲೇ 2023ರ ನ.8 ರಂದು ಹೈಕೋರ್ಟ್ ನಿಂದ ಮುರುಘಾಶ್ರೀಗೆ ಷರತ್ತುಬದ್ಧ ಜಾಮೀನು ಮಂಜೂರಾಗಿತ್ತು. ನ.16ರಿಂದು ಜಿಲ್ಲಾ ಕಾರಾಗೃಹದಿಂದ ಮುರುಘಾಶ್ರೀ ಬಿಡುಗಡೆಯಾಗಿದ್ದರು.

2ನೇ ಪೋಕ್ಸೊ ಕೇಸ್‌ನಲ್ಲಿ ಜಾಮೀನು ಪಡೆಯದ ಹಿನ್ನೆಲೆಯಲ್ಲಿ ಚಿತ್ರದುರ್ಗ 2ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಆದೇಶ ಹಿನ್ನೆಲೆ ಪುನಃ ನ.20ರಂದು ಮಧ್ಯಾಹ್ನ ಮುರುಘಾಶ್ರೀ ಮತ್ತೆ ಬಂಧನಕ್ಕೊಳಗಾದರು. ಬಳಿಕ ಅವರನ್ನು ಕೋರ್ಟ್ ಮುಂದೆ ಹಾಜರುಪಡಿಸಿದ್ದರು. ಆಗ ನ.20 ಸಂಜೆ ವೇಳೆಗೆ ಹೈಕೋರ್ಟ್ ಸೂಚನೆ ಮೇರೆಗೆ ಅಂದು ಬಿಡುಗಡೆ ಭಾಗ್ಯ ಸಿಕ್ಕಿತ್ತು.

ಭೂಸ್ವಾಧೀನ ಕೋರ್ಟ್ ಪ್ರಕರಣಗಳ ಕರ್ತವ್ಯ ಲೋಪ ತನಿಖೆಗೆ ಎಸ್ಐಟಿ ರಚನೆ

2024ರ ಅಕ್ಟೋಬರ್‌ನಲ್ಲಿ ಬಿಡುಗಡೆ ಭಾಗ್ಯ

ಆಗ ಸಂತ್ರಸ್ತೆಯರು ಮುರುಘಾಶ್ರೀಗಳ ಜಾಮೀನು ರದ್ದತಿ ಕೋರಿ ಸುಪ್ರೀಂ ಕೋರ್ಟ್ ಮೊರೆ ಹೋದ ಹಿನ್ನೆಲೆಯಲ್ಲಿ ಮುಖ್ಯ ಸಾಕ್ಷಿಗಳ ವಿಚಾರಣೆ ಪೂರ್ಣ ಆಗುವವರೆಗೆ ಮುರುಘಾಶ್ರೀ ಬಂಧನದಲ್ಲಿಡುವಂತೆ ಸುಪ್ರಿಂ ಕೋರ್ಟ್ ಆದೇಶ ಮಾಡಿತ್ತು. ಹೀಗಾಗಿ 2024ರ ಮೇ.27 ರಂದು ಕೋರ್ಟ್ ಎದುರು ಶರಣಾದ ಮುರುಘಾಶ್ರೀಗೆ ನ್ಯಾಯಾಂಗ ಬಂಧನ ವಿಸ್ತರಿಸಿ ಕೋರ್ಟ್ ಆದೇಶಿಸಿತ್ತು. ಬಳಿಕ ಸಂತ್ರಸ್ತೆಯರಿಬ್ಬರು ಸೇರಿದಂತೆ 13 ಜನರ ಸಾಕ್ಷ ವಿಚಾರಣೆ ಅಂತ್ಯವಾದ ಹಿನ್ನೆಲೆಯಲ್ಲಿ 2024ರ ಅಕ್ಟೋಬರ್‌ 7ರಂದು ಜಿಲ್ಲಾ ಕೋರ್ಟ್ ಆದೇಶದಂತೆ ಮುರುಘಾಶ್ರೀಗೆ ಬಿಡುಗಡೆ ಭಾಗ್ಯ ಸಿಕ್ಕಿತ್ತು.