Job Guide: KSRLPSನ ಬ್ಲಾಕ್ ಮ್ಯಾನೇಜರ್ ಹುದ್ದೆ ಖಾಲಿ- ಅರ್ಜಿ ಸಲ್ಲಿಕೆಗೆ ಡಿ. 28 ಕೊನೆಯ ದಿನ
Job Guide: KSRLPS ಬ್ಲಾಕ್ ಮ್ಯಾನೇಜರ್ ಪೋಸ್ಟ್ ಖಾಲಿ ಇದ್ದು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಚಿತ್ರದುರ್ಗ- ಕನಾರ್ಟಕ ದಲ್ಲಿ ಒಂದು ಹುದ್ದೆ ಖಾಲಿ ಇದ್ದು ಆಸಕ್ತ ಅಭ್ಯರ್ಥಿಗಳು ಡಿ, 28 ರ ಮೊದಲು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಕೆ ಮಾಡಬಹುದು(Job Guide).
Pushpa Kumari
December 22, 2024
ಬೆಂಗಳೂರು: ಕರ್ನಾಟಕ ರಾಜ್ಯ ರೂರಲ್ ಲೈವ್ಲಿಹುಡ್ ಪ್ರಮೋಶನ್ ಸೊಸೈಟಿ (Karnataka State Rural Livelihood Promotion Society) ನಲ್ಲಿ ಬ್ಲಾಕ್ ಮ್ಯಾನೇಜರ್ ಪೋಸ್ಟ್ ಖಾಲಿ ಇದ್ದು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಚಿತ್ರದುರ್ಗ- ಕನಾರ್ಟಕದಲ್ಲಿ ಒಂದು ಹುದ್ದೆ ಖಾಲಿ ಇದ್ದು ಆಸಕ್ತ ಅಭ್ಯರ್ಥಿಗಳು ಡಿ. 28 ರ ಮೊದಲು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಕೆ ಮಾಡಬಹುದು(Job Guide).
ಶೈಕ್ಷಣಿಕ ಅರ್ಹತೆ
ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ B.Sc, M.Sc, ಸ್ನಾತಕೋತ್ತರ ಪದವಿಯನ್ನು ಮಾಡಿರಬೇಕು.ಈ ಅಂಕಪಟ್ಟಿ ದಾಖಲೆ ಅಪ್ಲೋಡ್ ಮಾಡಬೇಕು. ಅರ್ಜಿಗೆ ಯಾವುದೇ ನಿಗಧಿತ ಶುಲ್ಕ ಇರುವುದಿಲ್ಲ. ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಈ ಹುದ್ದೆಗೆ ಅರ್ಜಿ ಸಲ್ಲಿಕೆ ಮಾಡುವವರು ksrlps.karnataka.gov.in ವೆಬ್‌ಸೈಟ್ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಸುವುದು ಹೇಗೆ?
KSRLPS ನ ಅಧಿಕೃತ ಲಿಂಕ್ ksrlps.karnataka.gov.in ಭೇಟಿ ನೀಡಿ ನಿಮ್ಮ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆ, ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ರೆಸ್ಯೂಮ್ ಇತ್ಯಾದಿ ದಾಖಲೆಗಳನ್ನು ಸಿದ್ಧವಾಗಿಟ್ಟುಕೊಂಡು ಅಗತ್ಯ ವಿರುವ ಎಲ್ಲಾ ವಿವರಗಳನ್ನು ನವೀಕರಿಸಿ. ನಿಮ್ಮ ಇತ್ತೀಚಿನ ಫೋಟೋಗ್ರಾಫ್ ಜೊತೆಗೆ ಅಗತ್ಯ ದಾಖಲೆಗಳ ಸ್ಕ್ಯಾನ್ ಮಾಡಿದ ಪ್ರತಿಗಳನ್ನು ಅಪ್‌ಲೋಡ್ ಮಾಡಿ.
ಈ ಸುದ್ದಿಯನ್ನೂ ಓದಿ:ಗಾಯಕ ಮಹಾದೇವನ್, ತಬಲಾ ವಾದಕ ಜಾಕಿರ್ ಹುಸೇನ್ ಸೇರಿ ನಾಲ್ವರು ಸಂಗೀತಗಾರರಿಗೆ ಗ್ರ್ಯಾಮಿ ಪ್ರಶಸ್ತಿ