ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

Govind M Karjol: ರೇಷ್ಮೆ ಉತ್ಪಾದನೆಯಲ್ಲಿ ಭಾರತ ಅಗ್ರಸ್ಥಾನಕ್ಕೇರಲಿ: ಗೋವಿಂದ ಕಾರಜೋಳ

ಚಿತ್ರದುರ್ಗದ ಮಾರಗಟ್ಟದಲ್ಲಿ ಇಲ್ಲಿಯವರೆಗೆ ಕಾರ್ಯನಿರ್ವಹಿಸುತ್ತಿದ್ದ ರೇಷ್ಮೆ ಕೃಷಿ ಸಂಶೋಧನಾ ಕೇಂದ್ರ ವಿಸ್ತರಣ ಕೇಂದ್ರವನ್ನು ಪ್ರಾದೇಶಿಕ ರೇಷ್ಮೆ ಕೃಷಿ ಸಂಶೋಧನಾ ಕೇಂದ್ರವನ್ನಾಗಿ ಮೇಲ್ದರ್ಜೆ ಗೇರಿಸಲಾಗಿದೆ. 1982ರಲ್ಲಿ ಪ್ರಾರಂಭವಾದ ಚಿತ್ರದುರ್ಗ ತಾಲೂಕಿನ ಮಾರಗಟ್ಟದಲ್ಲಿರುವ ರೇಷ್ಮೆ ಸಂಶೋಧನಾ ವಿಸ್ತರಣ ಕೇಂದ್ರವು ಚಿತ್ರದುರ್ಗ, ಬಳ್ಳಾರಿ ಮತ್ತು ದಾವಣಗೆರೆ ಮೂರು ಜಿಲ್ಲೆಗಳ ರೇಷ್ಮೆ ಬೆಳೆಗಾರರ ಅಗತ್ಯತೆಗಳನ್ನು ಪೂರೈಸುತ್ತಿತ್ತು.

ಚಿತ್ರದುರ್ಗ: ವಿಶ್ವದ ರೇಷ್ಮೆ ಉತ್ಪಾದನೆಯಲ್ಲಿ ಚೀನಾ ಮೊದಲ ಸ್ಥಾನದಲ್ಲಿದ್ದರೆ, ಭಾರತ ಎರಡನೇ ಸ್ಥಾನದಲ್ಲಿದೆ. ನಮ್ಮ ದೇಶದಲ್ಲಿ ಕರ್ನಾಟಕ ರೇಷ್ಮೆ ಉತ್ಪಾದನೆಯಲ್ಲಿ ಪ್ರಥಮ ಸ್ಥಾನದಲ್ಲಿದೆ. ಕಠಿಣ ಶ್ರಮ ಹಾಗೂ ತಾಂತ್ರಿಕ ಸಂಶೋಧನೆಗಳ ಮೂಲಕ ಭಾರತ ರೇಷ್ಮೆ ಉತ್ಪಾದನೆಯಲ್ಲಿ ಪ್ರಥಮ ಸ್ಥಾನಕ್ಕೇರುವಂತೆ ರೈತರು ಹಾಗೂ ವಿಜ್ಞಾನಿಗಳು ಶ್ರಮಿಸಬೇಕು ಎಂದು ಸಂಸದ ಗೋವಿಂದ ಎಂ. ಕಾರಜೋಳ(MP Govind M Karjol) ಹೇಳಿದರು.

ನಗರದ ರೇಷ್ಮೆ ಇಲಾಖೆ ಉಪನಿರ್ದೇಶಕರ ಕಚೇರಿಯಲ್ಲಿ ಕೇಂದ್ರ ರೇಷ್ಮೆ ಮಂಡಳಿ ಹಾಗೂ ರೇಷ್ಮೆ ಇಲಾಖೆಯ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿದ್ದ ‘ನನ್ನ ರೇಷ್ಮೆ-ನನ್ನ ಹೆಮ್ಮೆ ಅಭಿಯಾನದಡಿ ರೈತರು ಮತ್ತು ವಿಜ್ಞಾನಿಗಳ ನಡುವಿನ ಸಂವಾದ ಹಾಗೂ ವಿಚಾರ ವಿನಿಮಯ ಕಾರ್ಯಕ್ರಮ’ ಉದ್ಘಾಟಿಸಿ ಮಾತನಾಡಿದರು.

ಇದನ್ನೂ ಓದಿ: Govind Karjol: ಆರೆಸ್ಸೆಸ್ ರಾಜಕೀಯ ಪಕ್ಷವಲ್ಲ, ನೀವು ಎದುರಿಸಬೇಕಾಗಿರುವುದು ಬಿಜೆಪಿಯನ್ನು: ಗೋವಿಂದ ಕಾರಜೋಳ

ಚಿತ್ರದುರ್ಗದ ಮಾರಗಟ್ಟದಲ್ಲಿ ಇಲ್ಲಿಯವರೆಗೆ ಕಾರ್ಯನಿರ್ವಹಿಸುತ್ತಿದ್ದ ರೇಷ್ಮೆ ಕೃಷಿ ಸಂಶೋಧನಾ ಕೇಂದ್ರ ವಿಸ್ತರಣ ಕೇಂದ್ರವನ್ನು ಪ್ರಾದೇಶಿಕ ರೇಷ್ಮೆ ಕೃಷಿ ಸಂಶೋಧನಾ ಕೇಂದ್ರವನ್ನಾಗಿ ಮೇಲ್ದರ್ಜೆ ಗೇರಿಸಲಾಗಿದೆ. 1982ರಲ್ಲಿ ಪ್ರಾರಂಭವಾದ ಚಿತ್ರದುರ್ಗ ತಾಲೂಕಿನ ಮಾರಗಟ್ಟದಲ್ಲಿರುವ ರೇಷ್ಮೆ ಸಂಶೋಧನಾ ವಿಸ್ತರಣ ಕೇಂದ್ರವು ಚಿತ್ರದುರ್ಗ, ಬಳ್ಳಾರಿ ಮತ್ತು ದಾವಣಗೆರೆ ಮೂರು ಜಿಲ್ಲೆಗಳ ರೇಷ್ಮೆ ಬೆಳೆಗಾರರ ಅಗತ್ಯತೆಗಳನ್ನು ಪೂರೈಸುತ್ತಿತ್ತು.

ಬೆಂಗಳೂರಿನ ಸರ್ಜಾಪುರದ ಬಳಿಯ ಕೊಡತಿಯಿಂದ ಪ್ರಾದೇಶಿಕ ರೇಷ್ಮೆ ಕೃಷಿ ಸಂಶೋಧನಾ ಕೇಂದ್ರವನ್ನು ಚಿತ್ರದುರ್ಗದ ಮಾರಗಟ್ಟಕ್ಕೆ ಸ್ಥಳಾಂತರಿಸಿ ಮೇಲ್ದರ್ಜೆಗೇರಿಸಲಾಗಿದೆ ಎಂದು ಹೇಳಿದರು.

ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ಜಿಲ್ಲೆಯ ಒಟ್ಟು 1,42,767 ರೈತರಿಗೆ 713.72 ಕೋಟಿ ರು. ನೇರ ಹಣ ವರ್ಗಾವಣೆಯಾಗಿದೆ. ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆ ಯಡಿ ಜಿಲ್ಲೆಯ 3,43,000 ರೈತರು 113 ಕೋಟಿ ರು.ಪ್ರೀಮಿಯಂ ವಂತಿಗೆ ಪಾವತಿಸಿದ್ದರು.