ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಚಳ್ಳಕೆರೆಯಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿದ ಸಚಿವ ಡಿ. ಸುಧಾಕರ್‌ ಅಂತ್ಯಸಂಸ್ಕಾರ; ಸಿಎಂ, ಡಿಸಿಎಂ ಸೇರಿ ಪ್ರಮುಖರು ಭಾಗಿ

Minister D. Sudhakar's funeral: ಶ್ವಾಸಕೋಶ ಸೋಂಕಿನ ಹಿನ್ನೆಲೆಯಲ್ಲಿ ಸಚಿವ ಡಿ.ಸುಧಾಕರ್‌ ಅವರು ಚಿಕಿತ್ಸೆ ಫಲಿಸದೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದರು. ಚಳ್ಳಕೆರೆಯ ಜೈನಧಾಮದಲ್ಲಿ ಅವರ ಅಂತ್ಯಸಂಸ್ಕಾರ ಸೋಮವಾರ ನೆರವೇರಿದ್ದು, ಈ ವೇಳೆ ಸಾವಿರಾರು ಮಂದಿ ಭಾಗಿಯಾಗಿದ್ದರು.

ಚಳ್ಳಕೆರೆಯಲ್ಲಿ ನೆರವೇರಿದ ಸಚಿವ ಡಿ. ಸುಧಾಕರ್‌ ಅಂತ್ಯಸಂಸ್ಕಾರ

ಚಳ್ಳಕೆರೆಯಲ್ಲಿ ಸಚಿವ ಡಿ.ಸುಧಾಕರ್‌ ಅವರ ಅಂತ್ಯಸಂಸ್ಕಾರ ನೆರವೇರಿತು. -

Prabhakara R
Prabhakara R May 11, 2026 5:51 PM

ಚಿತ್ರದುರ್ಗ: ಅನಾರೋಗ್ಯದಿಂದ ನಿಧನರಾಗಿದ್ದ ಸಚಿವ ಡಿ.ಸುಧಾಕರ್‌ (Minister D. Sudhakar) ಅವರ ಅಂತ್ಯ ಸಂಸ್ಕಾರವು ಸಕಲ ಸರ್ಕಾರಿ ಗೌರವಗಳೊಂದಿಗೆ ಜಿಲ್ಲೆಯ ಚಳ್ಳಕೆರೆಯಲ್ಲಿ ಸೋಮವಾರ ನೆರವೇರಿತು. ಜೈನ ಸಂಪ್ರದಾಯದಂತೆ ಚಳ್ಳಕೆರೆಯ ಜೈನಧಾಮದಲ್ಲಿ ಅಂತ್ಯಕ್ರಿಯೆ ನಡೆಯಿತು. ಈ ವೇಳೆ ಕುಟುಂಬಸ್ಥರು, ಸಂಬಂಧಿಕರು, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್‌ ಸೇರಿ ವಿವಿಧ ಸಚಿವರು, ಶಾಸಕರೂ ಸೇರಿ ಸಾವಿರಾರು ಮಂದಿ ಭಾಗಿಯಾಗಿದ್ದರು.

ಸಚಿವ ಡಿ. ಸುಧಾಕರ್‌ ಅವರ ಚಿತೆಗೆ ಪುತ್ರ ಸುಹಾಸ್‌ ಅಗ್ನಿಸ್ಪರ್ಶ ಮಾಡಿದರು. ಇದಕ್ಕೂ ಮುನ್ನ ಚಳ್ಳಕೆರೆ ಸ್ಟೇಡಿಯಂನಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು. ಬಳಿಕ ಅಲ್ಲಿಂದ ಮೆರವಣಿಗೆಯಲ್ಲಿ ಪಾರ್ಥಿವ ಶರೀರವನ್ನು ಜೈನಧಾಮಕ್ಕೆ ತೆಗೆದುಕೊಂಡು ಹೋಗಲಾಯಿತು.

_Minister D. Sudhakar's funeral  (1)

ಸುಧಾಕರ್‌ ಅವರ ಪತ್ನಿಗೆ ಸಿಎಂ ಸಿದ್ದರಾಮಯ್ಯ ಅವರು ರಾಷ್ಟ್ರಧ್ವಜ ಹಸ್ತಾಂತರಿಸಿದರು. ಈ ವೇಳೆ ಪೊಲೀಸ್‌ ಪಡೆಯಿಂದ ಮೂರು ಸುತ್ತು ಕುಶಾಲು ತೋಪು ಸಿಡಿಸಿ, ರಾಷ್ಟ್ರಗೀತೆ ನುಡಿಸಿ ಅಂತಿಮ ಗೌರವ ಸಲ್ಲಿಸಲಾಯಿತು.

_Minister D. Sudhakar's funeral  (2)

ತೆಲಂಗಾಣದಲ್ಲಿ ಭೀಕರ ಅಪಘಾತ: 140 ಕಿ.ಮೀ. ವೇಗದಲ್ಲಿ ಬಂದ ಹಯಾಬುಸಾ ಬೈಕ್ ಕಾರಿಗೆ ಡಿಕ್ಕಿ, ಐವರ ಸಾವು

65 ವರ್ಷದ ಸಚಿವ ಸುಧಾಕರ್ ಅವರು ಮೊದಲು ಮೊಣಕಾಲು ಶಸ್ತ್ರಚಿಕಿತ್ಸೆಗಾಗಿ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದರು. ಸರ್ಜರಿ ಬಳಿಕ ಶ್ವಾಸಕೋಶ ಸೋಂಕು ಕಾಣಿಸಿಕೊಂಡಿತ್ತು. ಬಳಿಕ ಮಣಿಪಾಲ್ ಆಸ್ಪತ್ರೆಯಿಂದ ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯಲ್ಲಿರುವ ಕಿಮ್ಸ್ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿತ್ತು. ಐಸಿಯುನಲ್ಲಿಯೇ ಇದ್ದ ಸುಧಾಕರ್ ಅವರು ಚಿಕಿತ್ಸೆ ಫಲಿಸದೆ ಭಾನುವಾರ ಬೆಳಗ್ಗೆ ಕೊನೆಯುಸಿರೆಳೆದಿದ್ದರು.