ಫೋಟೋ ಗ್ಯಾಲರಿ ಬಿಗ್​ಬಾಸ್ ಬಜೆಟ್​ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

ಕೋಣೆಗೆ ಕರೆದು ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ; ಚಿತ್ರದುರ್ಗದಲ್ಲಿ ಖಾಸಗಿ ಶಾಲೆ ಶಿಕ್ಷಕನ ಬಂಧನ

ಚಿತ್ರದುರ್ಗ ತಾಲೂಕಿನ ಭರಮಸಾಗರ ಗ್ರಾಮದ ಶಾಲೆಯಲ್ಲಿ ಘಟನೆ ನಡೆದಿದೆ. ವಿದ್ಯಾರ್ಥಿನಿಯರನ್ನು ಪ್ರತ್ಯೇಕ ಕೋಣೆಗೆ ಕರೆದು ಶಿಕ್ಷಕ ಹೀನ ಕೃತ್ಯ ಎಸಗಿದ್ದಾನೆ. ಈ ಬಗ್ಗೆ ಶಾಲೆಯ ಆಡಳಿತ ಮಂಡಳಿಯಿಂದ ಶಿಕ್ಷಕನ ವಿರುದ್ಧ ದೂರು ನೀಡಲಾಗಿದ್ದು, ಪೋಕ್ಸೊ ಪ್ರಕರಣ ದಾಖಲಾಗಿದೆ.

ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ; ಖಾಸಗಿ ಶಾಲೆ ಶಿಕ್ಷಕನ ಬಂಧನ

ಸಾಂದರ್ಭಿಕ ಚಿತ್ರ -

Prabhakara R
Prabhakara R Feb 3, 2026 6:03 PM

ಚಿತ್ರದುರ್ಗ, ಫೆ.3: ಖಾಸಗಿ ಶಾಲೆಯಲ್ಲಿ ಶಿಕ್ಷಕನೊಬ್ಬ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ (Physical Abuse) ನೀಡಿರುವ ಗಂಭೀರ ಆರೋಪ ತಾಲೂಕಿನ ಭರಮಸಾಗರ ಗ್ರಾಮದಲ್ಲಿ ಕೇಳಿಬಂದಿದೆ. ಪ್ರತಿಷ್ಠಿತ ಮಠವೊಂದಕ್ಕೆ ಸೇರಿದ ಶಾಲೆಯಲ್ಲಿ ಶಿಕ್ಷಕ ನೀಚ ಕೃತ್ಯ ಎಸಗಿದ್ದಾನೆ. ಸುಮಾರು 6 ವಿದ್ಯಾರ್ಥಿನಿಯರನ್ನು ಪ್ರತ್ಯೇಕ ಕೋಣೆಗೆ ಕರೆದು ಶಿಕ್ಷಕ ದುಷ್ಕೃತ್ಯ ಎಸಗಿದ್ದಾನೆ. ವಿಷಯ ತಿಳಿದು ಆಘಾತಕ್ಕೊಳಗಾದ ಶಾಲಾ ಆಡಳಿತ ಮಂಡಳಿಯು ಘಟನೆಯನ್ನು ಗಂಭೀರವಾಗಿ ಪರಿಗಣಿಸಿ, ಕೂಡಲೇ ಕಾನೂನು ಕ್ರಮಕ್ಕೆ ಮುಂದಾಗಿದೆ.

ಶಾಲೆಯ ಆಡಳಿತ ಸಮಿತಿಯು ವಿದ್ಯಾರ್ಥಿನಿಯರ ಹಿತದೃಷ್ಟಿಯಿಂದ ಭರಮಸಾಗರ ಪೊಲೀಸ್ ಠಾಣೆಗೆ ತೆರಳಿ ಶಿಕ್ಷಕ ರಂಗಣ್ಣನ ವಿರುದ್ಧ ದೂರು ನೀಡಿದೆ. ಈ ಹಿನ್ನೆಲೆಯಲ್ಲಿಆರೋಪಿ ಶಿಕ್ಷಕನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ಬಂಧಿತ ಶಿಕ್ಷಕನ ವಿರುದ್ಧ ಭರಮಸಾಗರ ಪೊಲೀಸ್ ಠಾಣೆಯಲ್ಲಿ ಫೋಕ್ಸೊ ಪ್ರಕರಣ ದಾಖಲಾಗಿದೆ. ಘಟನಾ ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿದ್ದು, ಸಂತ್ರಸ್ತ ವಿದ್ಯಾರ್ಥಿನಿಯರಿಂದ ಮಾಹಿತಿ ಸಂಗ್ರಹಿಸಿದ್ದಾರೆ.

ಮದ್ಯ ಸೇವಿಸಿದ ನಂತರ ಮನೆಗೆ ಹೋಗಲು ಹೆದರಿ ವಿದ್ಯಾರ್ಥಿ ಆತ್ಮಹತ್ಯೆ

ಬೆಂಗಳೂರು: ಪಬ್‌ವೊಂದರಲ್ಲಿ ಮದ್ಯ ಸೇವಿಸಿದ ನಂತರ ಮನೆಗೆ ಹೋಗಲು ಹೆದರಿದ ವಿದ್ಯಾರ್ಥಿಯೊಬ್ಬ ಕಟ್ಟಡದ 7ನೇ ಮಹಡಿಯಿಂದ ಹಾರಿ ಮೃತಪಟ್ಟ (Self Harming) ಪ್ರಕರಣ ನಗರದಲ್ಲಿ ತಡವಾಗಿ ಬೆಳಕಿಗೆ ಬಂದಿದೆ. ಘಟನೆ ಸಂಬಂಧ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿರುವ ಆ‌ರ್.ಆ‌ರ್ ನಗರ ಠಾಣೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಬಾಲಕ ಖಾಸಗಿ ಶಾಲೆಯಲ್ಲಿ 10ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ. ಜ.31 ರಂದು ಶಾಲೆಯಲ್ಲಿ ನಡೆದ ಬೀಳ್ಕೊಡುಗೆ ಸಮಾರಂಭ ಮುಗಿದ ನಂತರ ಸ್ನೇಹಿತರೆಲ್ಲರೂ ಆರ್.ಆರ್ ನಗರದ ಪಬ್‌ವೊಂದರಲ್ಲಿ ಮದ್ಯದ ಪಾರ್ಟಿ ಮಾಡಿದ್ದರು. ಮದ್ಯ ಸೇವಿಸಿದ್ದ ಬಾಲಕನನ್ನು ಆತನ ಸ್ನೇಹಿತ ವಿಷ್ಣುವರ್ಧನ್ ಸಮಾಧಿ ರಸ್ತೆಯಲ್ಲಿರುವ ಅಪಾರ್ಟ್‌ಮೆಂಟ್‌ವರೆಗೂ ಬಿಟ್ಟು ಹೋಗಿದ್ದ. ಆದರೆ ಮದ್ಯ ಸೇವಿಸಿದ್ದ ಹಿನ್ನೆಲೆಯಲ್ಲಿ ಬಾಲಕನಿಗೆ ಮನೆಗೆ ಹೋಗಲು ಭಯವಾಗಿದ್ದು, ಅಪಾರ್ಟ್‌ಮೆಂಟ್‌ 7ನೇ ಮಹಡಿಯಿಂದ ಹಾರಿ ಮೃತಪಟ್ಟಿದ್ದ.

ಅನೈತಿಕ ಸಂಬಂಧ ವಿಚಾರಕ್ಕೆ ವ್ಯಕ್ತಿಯ ಕೊಲೆ; ಖ್ಯಾತ ಜ್ಯೋತಿಷಿ ಕಮಲಾಕರ ಭಟ್ ಗುರೂಜಿ ಸೇರಿ 7 ಮಂದಿ ಬಂಧನ

ತನಿಖೆ ವೇಳೆ ಬಾಲಕ ಪಬ್‌ನಲ್ಲಿ ಮದ್ಯಪಾನ ಮಾಡಿರುವುದು ಗೊತ್ತಾಗಿದೆ. ಅಪ್ರಾಪ್ತ ಬಾಲಕನಿಗೆ ಮದ್ಯಪಾನ ಮಾಡಲು ಅವಕಾಶ ನೀಡಿದ್ದ ಪಬ್ ವಿರುದ್ಧ ಕ್ರಮಕ್ಕೆ ಪೊಲೀಸರು ಮುಂದಾಗಿದ್ದಾರೆ.