Road Accident: ಮರಕ್ಕೆ ಬೊಲೆರೊ ಡಿಕ್ಕಿಯಾಗಿ ನಾಲ್ವರು ದುರ್ಮರಣ
ದಾವಣಗೆರೆ ತಾಲೂಕಿನ ಅಣಜಿ ಗ್ರಾಮದಿಂದ ಕಲ್ಲವ್ವ ನಾಗತಿಹಳ್ಳಿಗೆ ಹಿಂದಿರುಗುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿದ ಬೊಲೆರೊ ಮರಕ್ಕೆ ಡಿಕ್ಕಿಯಾದ ಪರಿಣಾಮ, ಕಲ್ಲವ್ವ ನಾಗತಿಹಳ್ಳಿ ಗ್ರಾಮದ ಗಿರಿರಾಜ್ (46), ಕಿರಣ್ (25) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅರುಣ್ (32) ಹಾಗೂ ಹನುಮಂತ (32) ದಾವಣಗೆರೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
ಬೊಲೆರೊ ಅಪಘಾತ -
ಚಿತ್ರದುರ್ಗ, ಜ.07: ಮರಕ್ಕೆ ಬೊಲೆರೊ ವಾಹನ ಡಿಕ್ಕಿಯಾಗಿ (Road Accident) ನಾಲ್ವರು ದುರ್ಮರಣಕ್ಕೀಡಾಗಿರುವ ಘಟನೆ ಚಿತ್ರದುರ್ಗ (Chitradurga) ಜಿಲ್ಲೆ ಹೊಳಲ್ಕೆರೆ ತಾಲೂಕಿನ ಅಂದನೂರು ಗ್ರಾಮದ ಬಳಿ ನಡೆದಿದೆ. ಮೃತಪಟ್ಟವರು ಕಾರ್ಮಿಕರು. ಅಡಿಕೆ ಸುಲಿಯುವ ಕೆಲಸ ಮುಗಿಸಿ ಹಿಂದಿರುಗುತ್ತಿದ್ದ ವೇಳೆ ಅಪಘಾತ ಸಂಭವಿಸಿದ್ದು, ಇನ್ನುಳಿದ ನಾಲ್ವರಿಗೆ ಗಂಭೀರ ಗಾಯಗಳಾಗಿವೆ.
ದಾವಣಗೆರೆ ತಾಲೂಕಿನ ಅಣಜಿ ಗ್ರಾಮದಿಂದ ಕಲ್ಲವ್ವ ನಾಗತಿಹಳ್ಳಿಗೆ ಹಿಂದಿರುಗುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿದ ಬೊಲೆರೊ ಮರಕ್ಕೆ ಡಿಕ್ಕಿಯಾದ ಪರಿಣಾಮ, ಕಲ್ಲವ್ವ ನಾಗತಿಹಳ್ಳಿ ಗ್ರಾಮದ ಗಿರಿರಾಜ್ (46), ಕಿರಣ್ (25) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅರುಣ್ (32) ಹಾಗೂ ಹನುಮಂತ (32) ದಾವಣಗೆರೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
ಗಾಯಾಳುಗಳಲ್ಲಿ ಇಬ್ಬರ ಸ್ಥಿತಿ ಶೋಚನೀಯವಾಗಿದ್ದು, ಇವರನ್ನು ದಾವಣಗೆರೆ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಪ್ರಕರಣ ಚಿಕ್ಕಜಾಜೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಆಟೋ ಡಿಕ್ಕಿ: ಪಾದಚಾರಿ ಸ್ಥಳದಲ್ಲೇ ಸಾವು
ಹಾಸನ: ಹಾಸನ ನಗರದ ಸಾಲಗಾಮೆ ರಸ್ತೆ ಸುಬೇದಾರ್ ನಾಗೇಶ್ ವೃತ್ತದಲ್ಲಿ ಆಟೋ ಡಿಕ್ಕಿಯಾಗಿ ಪಾದಚಾರಿ ಸ್ಥಳದಲ್ಲೇ ದುರ್ಮರಣ ಹೊಂದಿರುವಂತಹ ಘಟನೆ ನಡೆದಿದೆ. ಸಿಗ್ನಲ್ ಬಳಿ ನಡೆದುಕೊಂಡು ಹೊರಟಿದ್ದ ರಾಜ್ಕುಮಾರ್ಗೆ ಡಿಕ್ಕಿ ಹೊಡೆದು ಆಟೋ ಸಮೇತ ಚಾಲಕ ಪರಾರಿ ಆಗಿದ್ದಾರೆ. ಮೂಲತಃ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಯಗಟಿಪುರ ಗ್ರಾಮದ ರಾಜ್‌ಕುಮಾರ್(51) ಮೃತ ವ್ಯಕ್ತಿ. ದಾಸರಕೊಪ್ಪಲಿನಲ್ಲಿ ಕುಟುಂಬದ ಜೊತೆ ವಾಸವಿದ್ದರು. ಹಾಸನ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
Techie Death: ಅಪಾರ್ಟ್‌ಮೆಂಟ್‌ನಲ್ಲೇ ಉಸಿರುಗಟ್ಟಿ ಮಹಿಳಾ ಟೆಕ್ಕಿ ಸಾವು