ಯುಗಾದಿ ಹಬ್ಬ ಐಪಿಎಲ್​ ಸುನಿತಾ ವಿಲಿಯಮ್ಸ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Weather Forecast: ಇಂದು ಬೆಂಗಳೂರಲ್ಲಿ ಮೋಡ ಕವಿದ ಆಕಾಶ, ರಾಜ್ಯದ ಉಳಿದೆಡೆ ಒಣ ಹವೆ

Weather Forecast: ಮುಂದಿನ 3 ದಿನಗಳಲ್ಲಿ ರಾಜ್ಯದ ಉತ್ತರ ಒಳನಾಡಿನಲ್ಲಿ 2-4 ಡಿಗ್ರಿ ಸೆಲ್ಸಿಯಸ್ ಮತ್ತು ದಕ್ಷಿಣ ಒಳನಾಡಿನಲ್ಲಿ 23 ಡಿಗ್ರಿ ಸೆಲ್ಸಿಯಸ್ ಗರಿಷ್ಠ ತಾಪಮಾನದಲ್ಲಿ ಏರಿಕೆಯಾಗಲಿದೆ. ಕರಾವಳಿ ಕರ್ನಾಟಕದಲ್ಲಿ ಮುಂದಿನ 3 ದಿನಗಳವರೆಗೆ ಗರಿಷ್ಠ ತಾಪಮಾನದಲ್ಲಿ ಯಾವುದೇ ದೊಡ್ಡ ಬದಲಾವಣೆಯಿಲ್ಲ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇಂದು ಬೆಂಗಳೂರಲ್ಲಿ ಮೋಡ ಕವಿದ ಆಕಾಶ, ರಾಜ್ಯದ ಉಳಿದೆಡೆ ಒಣ ಹವೆ

Profile Prabhakara R Mar 29, 2025 6:00 AM

ಬೆಂಗಳೂರು: ಮಾ.29 ರಂದು ಬೆಂಗಳೂರು ಸೇರಿ ಸುತ್ತಮುತ್ತಲಿನ ಭಾಗದಲ್ಲಿ ಭಾಗಶಃ ಮೋಡ ಕವಿದ ವಾತಾವರಣ (Karnataka weather) ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 34°C ಮತ್ತು 22°C ಆಗುವ ಸಾಧ್ಯತೆ ಇದೆ. ರಾಜ್ಯದ ಉಳಿದೆಡೆ ಒಣಹವೆ ಇರಲಿದೆ. ಮುಂದಿನ 3 ದಿನಗಳಲ್ಲಿ ಉತ್ತರ ಒಳನಾಡಿನಲ್ಲಿ 2-4 ಡಿಗ್ರಿ ಸೆಲ್ಸಿಯಸ್ ಮತ್ತು ದಕ್ಷಿಣ ಒಳನಾಡಿನಲ್ಲಿ 23 ಡಿಗ್ರಿ ಸೆಲ್ಸಿಯಸ್ ಗರಿಷ್ಠ ತಾಪಮಾನದಲ್ಲಿ ಏರಿಕೆಯಾಗಲಿದೆ ಎಂದು ಭಾರತ ಹವಾಮಾನ ಇಲಾಖೆ (IMD Bengaluru) ಮುನ್ಸೂಚನೆ ನೀಡಿದೆ.

ಇನ್ನು ಮಾ.30ರಂದು ದಕ್ಷಿಣ ಕನ್ನಡ, ಬೆಳಗಾವಿ, ಧಾರವಾಡ, ಗದಗ, ಕೊಡಗು, ಹಾಸನ, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳ ಪ್ರತ್ಯೇಕ ಸ್ಥಳಗಳಲ್ಲಿ ಲಘು ಮಳೆ/ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳ ಕರ್ನಾಟಕದ ಪ್ರತ್ಯೇಕ ಸ್ಥಳಗಳಲ್ಲಿ ಗಂಟೆಗೆ 40-50 ಕಿಮೀ ವೇಗದ ಗಾಳಿ ಬೀಸುವ ಸಾಧ್ಯತೆಯಿದೆ. ರಾಜ್ಯದ ಉಳಿದ ಭಾಗಗಳಲ್ಲಿ ಒಣ ಹವೆ ಇರುವ ಸಾಧ್ಯತೆ ಇದೆ.

ಮಾ.31ರಂದು ಬೆಳಗಾವಿ, ಧಾರವಾಡ, ಬಾಗಲಕೋಟೆ, ವಿಜಯಪುರ ಮತ್ತು ಕಲಬುರಗಿ ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಬಿರುಗಾಳಿ ಸಹಿತ ಸಾಧಾರಣ ಮಳೆ / ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಕೊಡಗು, ಹಾಸನ, ಚಾಮರಾಜನಗರ, ಮೈಸೂರು, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳ ಪ್ರತ್ಯೇಕ ಸ್ಥಳಗಳಲ್ಲಿ ಸಾಧಾರಣ ಮಳೆ/ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ರಾಜ್ಯದ ಉಳಿದ ಭಾಗಗಳಲ್ಲಿ ಒಣ ಹವೆ ಇರುವ ಸಾಧ್ಯತೆ ಇದೆ.

ಏ.1ರಂದು ದಕ್ಷಿಣ ಕನ್ನಡ, ಬೆಳಗಾವಿ, ಧಾರವಾಡ, ಗದಗ, ಕೊಡಗು, ಹಾಸನ, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಲಘು ಮಳೆ/ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಗಂಟೆಗೆ 30-40 ಕಿಮೀ ವೇಗದ ಗಾಳಿ ಬೀಸುವ ಸಾಧ್ಯತೆಯಿದೆ. ರಾಜ್ಯದ ಉಳಿದ ಭಾಗಗಳಲ್ಲಿ ಒಣ ಹವೆ ಇರುವ ಸಾಧ್ಯತೆ ಇದೆ.

ಮಾ.2ರಂದು ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಡಗು, ಹಾಸನ, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಕಡೆ ಲಘು ಮಳೆಯಾಗುವ ಸಾಧ್ಯತೆ ಇದೆ.

ಮಾ.3ರಂದು ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಡಗು, ಹಾಸನ, ದಾವಣಗೆರೆ, ಮೈಸೂರು, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಒಂದಲ್ಲ ಒಂದು ಕಡೆ ಲಘು ಮಳೆಯಾಗುವ ಸಾಧ್ಯತೆ ಇದೆ.

ತಾಪಮಾನದ ಮುನ್ಸೂಚನೆ:

ಮುಂದಿನ 3 ದಿನಗಳಲ್ಲಿ ಉತ್ತರ ಒಳನಾಡಿನಲ್ಲಿ 2-4 ಡಿಗ್ರಿ ಸೆಲ್ಸಿಯಸ್ ಮತ್ತು ದಕ್ಷಿಣ ಒಳನಾಡಿನಲ್ಲಿ 23 ಡಿಗ್ರಿ ಸೆಲ್ಸಿಯಸ್ ಗರಿಷ್ಠ ತಾಪಮಾನದಲ್ಲಿ ಏರಿಕೆಯಾಗಲಿದೆ. ಕರಾವಳಿ ಕರ್ನಾಟಕದಲ್ಲಿ ಮುಂದಿನ 3 ದಿನಗಳವರೆಗೆ ಗರಿಷ್ಠ ತಾಪಮಾನದಲ್ಲಿ ಯಾವುದೇ ದೊಡ್ಡ ಬದಲಾವಣೆಯಿಲ್ಲ. ನಂತರದ ದಿನಗಳಲ್ಲಿ ಸ್ವಲ್ಪ ಕಡಿಮೆಯಾಗಲಿದೆ. ಒಳನಾಡಿನಲ್ಲಿ ಮುಂದಿನ 3 ದಿನಗಳಲ್ಲಿ ಕನಿಷ್ಠ ತಾಪಮಾನದಲ್ಲಿ 23 ಡಿಗ್ರಿ ಸೆಲ್ಸಿಯನ್‌ಗಳಷ್ಟು ಏರಿಕೆ, ನಂತರದ ದಿನಗಳಲ್ಲಿ ಯಾವುದೇ ದೊಡ್ಡ ಬದಲಾವಣೆಯಿಲ್ಲ.

ಈ ಸುದ್ದಿಯನ್ನೂ ಓದಿ | Healthy Tips: ಏರುತ್ತಿರುವ ಬಿಸಿಲಿನಲ್ಲಿ ದೇಹಕ್ಕೆ ನೀರುಣಿಸುವುದು ಹೇಗೆ?

ಕಲಬುರಗಿಯಲ್ಲಿ ಗರಿಷ್ಠ ಉಷ್ಣಾಂಶ ದಾಖಲು

ರಾಜ್ಯದ ಸಮತಟ್ಟಾದ ಪ್ರದೇಶಗಳಲ್ಲಿ ಕಲಬುರಗಿಯಲ್ಲಿ ಗುರುವಾರ ಅತೀ ಹೆಚ್ಚು ಉಷ್ಣಾಂಶ 39.8 ಡಿ.ಸೆ ದಾಖಲಾಗಿದೆ. ಇನ್ನು ಧಾರವಾಡದಲ್ಲಿ ಅತೀ ಕಡಿಮೆ ಉಷ್ಣಾಂಶ 18.8 ಡಿ.ಸೆ. ದಾಖಲಾಗಿದೆ.