ಬಿಗ್​ಬಾಸ್ ಫೋಟೋ ಗ್ಯಾಲರಿ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Pralhad Joshi: ಸಿಎಂ ಅಲ್ಪಸಂಖ್ಯಾತರ ವಿಷಯದಲ್ಲಿ ಮಾತ್ರ ಅತೀ ಉದಾರಿ: ಪ್ರಲ್ಹಾದ್‌ ಜೋಶಿ

ರಾಜ್ಯದಲ್ಲಿ ಶಾಲಾ ಮಕ್ಕಳ ಬಿಸಿಯೂಟಕ್ಕೂ ಹಣವಿಲ್ಲ ಎಂಬ ನೆಪ ಹೇಳುವ ಕಾಂಗ್ರೆಸ್ ಸರ್ಕಾರ, ಕೇವಲ ಮತಬ್ಯಾಂಕ್‌ ಅನ್ನೇ ಗುರಿಯಾಗಿಸಿಕೊಂಡು ಒಂದು ಸಮುದಾಯಕ್ಕೆ ಮಾತ್ರ ಅನುದಾನ ಬಿಡುಗಡೆ ಮಾಡುತ್ತಿದೆ. ಇದು ಸಂವಿಧಾನದ ಸಮಾನತೆಯ ತತ್ತ್ವಗಳಿಗೆ ಸ್ಪಷ್ಟ ವಿರುದ್ಧ ಎಂದು ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ಆರೋಪಿಸಿದ್ದಾರೆ.

ಸಿಎಂ ಅಲ್ಪಸಂಖ್ಯಾತರ ವಿಷಯದಲ್ಲಿ ಮಾತ್ರ ಅತೀ ಉದಾರಿ: ಜೋಶಿ

ಪ್ರಲ್ಹಾದ್‌ ಜೋಶಿ (ಸಂಗ್ರಹ ಚಿತ್ರ) -

Profile
Siddalinga Swamy Nov 21, 2025 10:20 PM

ನವದೆಹಲಿ, ನ. 21: ರಾಜ್ಯ ಸರ್ಕಾರದ ಖಜಾನೆಯನ್ನು ಕೇವಲ ಒಂದು ಸಮುದಾಯಕ್ಕೆ ವಿನಿಯೋಗಿಸುವುದು ಸಂವಿಧಾನದ ಆಶಯಕ್ಕೆ ವಿರುದ್ಧ ಎಂದು ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ (Pralhad Joshi) ಆಕ್ಷೇಪಿಸಿದ್ದಾರೆ. ಮುಸ್ಲಿಂ ಸಮುದಾಯ ಭವನಗಳಿಗಾಗಿ ರಾಜ್ಯ ಸರ್ಕಾರ (State Congress Government) 67 ಕೋಟಿ ರೂ. ಮಂಜೂರು ಮಾಡಿರುವ ಬಗ್ಗೆ ಪ್ರತಿಕ್ರಿಯಿಸಿರುವ ಅವರು, ಓಲೈಕೆ ರಾಜಕಾರಣ ಮತ್ತು ತುಷ್ಟೀಕರಣಕ್ಕೆ ಸ್ವಲ್ಪ ಮಿತಿಯಿರಬೇಕು ಹರಿಹಾಯ್ದಿದ್ದಾರೆ. ರಾಜ್ಯದ ಸಮಗ್ರ ಅಭಿವೃದ್ಧಿಗೆ ಅನುದಾನ ಒದಗಿಸದ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅಲ್ಪಸಂಖ್ಯಾತರ ವಿಷಯದಲ್ಲಿ ಮಾತ್ರ ಅತೀ ಉದಾರಿಯಾಗಿದ್ದಾರೆ ಎಂದು ಚಾಟಿ ಬೀಸಿದ್ದಾರೆ.

ರೈತರಿಗೆ ಪರಿಹಾರ ನೀಡಲು ಹಿಂದೆಮುಂದೆ ನೋಡುತ್ತಾರೆ. ನೌಕರರಿಗೆ ಸರಿಯಾಗಿ ಸಕಾಲಕ್ಕೆ ಸಂಬಳ ಕೊಡಲು ಹಣವಿಲ್. ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧಿ ಖರೀದಿಗೆ ಹಣವಿಲ್ಲ, ಹದಗೆಟ್ಟ ರಸ್ತೆಗಳಲ್ಲಿ ಗುಂಡಿ ಮುಚ್ಚಲು ಸಹ ಹಣವಿಲ್ಲ ಎನ್ನುವ ಈ ಸರ್ಕಾರ ಮುಸ್ಲಿಂ ಅಂದರೆ ಸಾಕು ಧಾರಾಕಾರವಾಗಿ ಅನುದಾನ ಮಂಜೂರು ಮಾಡುತ್ತದೆ ಎಂದು ಸಚಿವ ಪ್ರಲ್ಹಾದ್‌ ಜೋಶಿ ಸರ್ಕಾರದ ನಡೆಯನ್ನು ಖಂಡಿಸಿದ್ದಾರೆ.

ರಾಜ್ಯದಲ್ಲಿ ಶಾಲಾ ಮಕ್ಕಳ ಬಿಸಿಯೂಟಕ್ಕೂ ಹಣವಿಲ್ಲ ಎಂಬ ನೆಪ ಹೇಳುವ ಕಾಂಗ್ರೆಸ್ ಸರ್ಕಾರ, ಕೇವಲ ಮತಬ್ಯಾಂಕ್‌ ಅನ್ನೇ ಗುರಿಯಾಗಿಸಿಕೊಂಡು ಒಂದು ಸಮುದಾಯಕ್ಕೆ ಮಾತ್ರ ಅನುದಾನ ಬಿಡುಗಡೆ ಮಾಡುತ್ತಿದೆ. ಇದು ಸಂವಿಧಾನದ ಸಮಾನತೆಯ ತತ್ತ್ವಗಳಿಗೆ ಸ್ಪಷ್ಟ ವಿರೋಧವಾಗಿದೆ ಎಂದು ಆರೋಪಿಸಿದ್ದಾರೆ.

ಒಂದೇ ಸಮುದಾಯದ ಸಂತೃಪ್ತಿ ಖಂಡನೀಯ

ರಾಜ್ಯದ ಒಟ್ಟಾರೆ ಹಿತಾಸಕ್ತಿ ಗಮನದಲ್ಲಿ ಇರಿಸಿಕೊಂಡು ಅನುದಾನ ಒದಗಿಸಬೇಕಾದ ಈ ಸರ್ಕಾರ, ಸಾರ್ವಜನಿಕ ಹಣವನ್ನು ಒಂದು ಸಮುದಾಯದ ಸಂತೃಪ್ತಿಗೆ ಬಳಸುತ್ತಿರುವುದು ಖಂಡನೀಯ ಎಂದಿದ್ದಾರೆ.

ರಾಗಿ, ಜೋಳ, ಮೆಕ್ಕೆಜೋಳದ ಕಮಿಷನ್‌ ಪ್ರತಿ ಕ್ವಿಂಟಲ್‌ಗೆ 27 ರೂ.ಕ್ಕೆ ಹೆಚ್ಚಿಸಿದ ಕೇಂದ್ರ

ಜನರೇ ಬುದ್ಧಿ ಕಲಿಸುತ್ತಾರೆ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಈ ಕ್ರಮ ಸಂವಿಧಾನ ಮತ್ತು ಆಡಳಿತದ ಮೂಲ ಸಿದ್ಧಾಂತಕ್ಕೆ ಧಕ್ಕೆಯಾಗಿದೆ. ಸರ್ವರಿಗೂ ಸಮಾನ ಅವಕಾಶ ಒದಗಿಸುವುದು ಸಂವಿಧಾನಬದ್ಧ ಹೊಣೆಗಾರಿಕೆ ಆಗಿದೆ. ಅದು ಬಿಟ್ಟು ಮತಬ್ಯಾಂಕ್‌ಗಾಗಿ ಹೀಗೆ ಓಲೈಕೆ ರಾಜಕಾರಣ ಮತ್ತು ತೀರಾ ತೀರಾ ತುಷ್ಟೀಕರಣಕ್ಕೆ ಇಳಿದರೆ ಮುಂದಿನ ದಿನಗಳಲ್ಲಿ ಜನರೇ ಬುದ್ಧಿ ಕಳಿಸುತ್ತಾರೆ ಎಂದು ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ಎಚ್ಚರಿಸಿದ್ದಾರೆ.