ಕರ್ನಾಟಕ ಬಜೆಟ್​ ವಿದೇಶ ಪುನೀತ್​ @ 50 ಫ್ಯಾಷನ್​ ಧಾರ್ಮಿಕ ಕ್ರೈಂ ಹೋಳಿ ಹಬ್ಬ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

CM Siddaramaiah: ರಾಜ್ಯಕ್ಕೆ ಅನ್ಯಾಯ ಮಾಡಬೇಡಿ ಎಂದು ನಿರ್ಮಲಾ ಸೀತಾರಾಮನ್ ಬಳಿ 3 ಬಾರಿ ಮನವಿ ಮಾಡಿದ್ದೆವು, ಆದ್ರೂ ನ್ಯಾಯ ಸಿಗಲಿಲ್ಲ: ಸಿಎಂ

CM Siddaramaiah: ನಿರ್ಮಲಾ ಸೀತಾರಾಮನ್ ಅವರನ್ನು ನಮ್ಮ ರಾಜ್ಯಕ್ಕೆ ಅನ್ಯಾಯ ಮಾಡಬೇಡಿ ಎಂದು, ರಾಜ್ಯಕ್ಕೆ ಬರಬೇಕಾದ ಅನುದಾನವನ್ನು ಒದಗಿಸಿ ಎಂದು ಮೂರು ಬಾರಿ ಭೇಟಿಯಾಗಿ ಮನವಿ ಮಾಡಿದ್ದರೂ, ಬಜೆಟ್‌ನಲ್ಲಿ ಭದ್ರಾ ಮೇಲ್ದಂಡೆ ಯೋಜನೆಗೆ 5300 ಕೋಟಿ ರೂ. ಘೋಷಿಸಿದ್ದರೂ ಒಂದು ರೂಪಾಯಿ ಬರಲಿಲ್ಲ. ರಾಷ್ಟ್ರೀಯ ಯೋಜನೆ ಎಂದು ಘೋಷಣೆ ಮಾಡಲಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ರಾಜ್ಯಕ್ಕೆ ಅನ್ಯಾಯ ಮಾಡಬೇಡಿ ಎಂದು ಮನವಿ ಮಾಡಿದ್ರೂ ನ್ಯಾಯ ಸಿಗಲಿಲ್ಲ: ಸಿಎಂ

ಸಿಎಂ ಸಿದ್ದರಾಮಯ್ಯ

Profile Siddalinga Swamy Mar 17, 2025 6:16 PM

ಬೆಂಗಳೂರು: ನಮ್ಮ ರಾಜ್ಯಕ್ಕೆ ಅನ್ಯಾಯ ಮಾಡಬೇಡಿ ಎಂದು, ರಾಜ್ಯಕ್ಕೆ ಬರಬೇಕಾದ ಅನುದಾನವನ್ನು ಒದಗಿಸಿ ಎಂದು ನಿರ್ಮಲಾ ಸೀತಾರಾಮನ್ ಅವರನ್ನು ಮೂರು ಸಾರಿ ಭೇಟಿಯಾಗಿ ಮನವಿ ಮಾಡಿದ್ದರೂ, ಬಜೆಟ್‌ನಲ್ಲಿ ಭದ್ರಾ ಮೇಲ್ದಂಡೆ ಯೋಜನೆಗೆ 5300 ಕೋಟಿ ರೂ. ಘೋಷಿಸಿದ್ದರೂ ಒಂದು ರೂಪಾಯಿ ಬರಲಿಲ್ಲ. ರಾಷ್ಟ್ರೀಯ ಯೋಜನೆ ಎಂದು ಘೋಷಣೆ ಮಾಡಲಿಲ್ಲ. ನೀವು ಬಿಜೆಪಿಯವರು ಅದರ ಬಗ್ಗೆ ಒಂದೂ ಮಾತೂ ಆಡಲಿಲ್ಲ. ಕರ್ನಾಟಕಕ್ಕೆ ಅನ್ಯಾಯವಾಗುತ್ತಿರುವಾಗ ಧ್ವನಿ ಎತ್ತಲಿಲ್ಲ. ಕೇಂದ್ರ ಸರ್ಕಾರದಲ್ಲಿ ನ್ಯಾಯಯುತವಾಗಿ ಬರಬೇಕಾದ್ದನ್ನು ಕೇಳಲೂ ಇವರಿಗೆ ಆಗಲಿಲ್ಲ. ರಾಜ್ಯಕ್ಕೆ ಇದರಿಂದ ಸಾಕಷ್ಟು ನಷ್ಟವಾಗಿದೆ. ವಿರೋಧ ಪಕ್ಷ ಇರುವುದು ಭಾಷಣ ಮಾಡಲು ಮಾತ್ರವೇ? ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಪ್ರಶ್ನಿಸಿದರು.

ಸದನದಲ್ಲಿ ರಾಜ್ಯಪಾಲರ ಭಾಷಣದ ಮೇಲಿನ ಚರ್ಚೆ ವೇಳೆ ಮಾತನಾಡಿದ ಅವರು, ವಿರೋಧ ಪಕ್ಷದ ನಾಯಕ ಅಶೋಕ್ ಅವರು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಡಿ ಕಲಾವಿದರಿಗೆ ಅನುದಾನ ಕೊಟ್ಟಿಲ್ಲ ಎಂದು ಹೇಳಿದ್ದಾರೆ. ನಾವು ಈ ಬಾರಿ ಕಲಾವಿದರ ಮಾಶಾಸನ ಹೆಚ್ಚಳ ಮಾಡಿರುವುದು ಮಾತ್ರವಲ್ಲದೆ ಅನುದಾನ ಕೊಟ್ಟಿದ್ದೇವೆ ಎಂದು ಮುಖ್ಯಮಂತ್ರಿಗಳು ಸ್ಪಷ್ಟಪಡಿಸಿದರು.

ರೈಲ್ವೆ ಇಲಾಖೆ, ಕೇಂದ್ರ ಸರ್ಕಾರದ ಸುಪರ್ದಿಗೆ ಬರುತ್ತದೆ. ಆದ್ರೂ ರೈಲ್ವೆ ಯೋಜನೆಗೆ ರಾಜ್ಯ ಸರ್ಕಾರ ಉಚಿತ ಸ್ಥಳವನ್ನು ಒದಗಿಸುತ್ತದೆ. 50% ವೆಚ್ಚವನ್ನು ರಾಜ್ಯ ಸರ್ಕಾರ ವಹಿಸಿಕೊಳ್ಳುತ್ತದೆ. ಲಾಭ ಪೂರ್ತಿ ಕೇಂದ್ರ ಸರ್ಕಾರವೇ ಪಡೆಯುತ್ತದೆ. ಉತ್ತರ ಪ್ರದೇಶದಲ್ಲಿ ಸ್ಥಳವನ್ನು ರೈಲ್ವೆಗೆ ಕೊಡುತ್ತಾರೆಯೇ? ಬಿಜೆಪಿಯವರು ರೈಲು ಬಿಡಬಾರದು ಎಂದು ವ್ಯಂಗ್ಯವಾಡಿದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಯಲ್ಲಿ ನಾವು ಕೊಟ್ಟಿದ್ದಕ್ಕಿಂತ ಅರ್ಧ ಅನುದಾನವನ್ನು ಬಿಜೆಪಿ ಸರ್ಕಾರ ಕೊಟ್ಟಿದೆ. 275 ಕೋಟಿ ಅನುದಾನವನ್ನು ನಾವು ಕೊಟ್ಟಿದ್ದೇವೆ ಎಂದು ಸಿಎಂ ಸ್ಪಷ್ಟಪಡಿಸಿದರು.

ಎಸ್‌ಸಿಎಸ್‌ಪಿ/ ಟಿಎಸ್‌ಪಿ ಯೋಜನೆ ಬಗ್ಗೆ ಸಿಎಂ ಸ್ಪಷ್ಟನೆ

ಎಸ್‌ಸಿಎಸ್‌ಪಿ/ ಟಿಎಸ್‌ಪಿ ಬಗ್ಗೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಸಂವಿಧಾನದ 46ನೇ ಪರಿಚ್ಛೇದವು ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದವರಿಗೆ ವಿಶೇಷವಾಗಿ ಶೈಕ್ಷಣಿಕ, ಆರ್ಥಿಕ ಕಾರ್ಯಕ್ರಮಗಳನ್ನು ನೀಡಬೇಕು ಎಂದು ತಿಳಿಸಿದೆ. ಆಂಧ್ರ ಪ್ರದೇಶ ಮೊಟ್ಟ ಮೊದಲ ಬಾರಿಗೆ ಎಸ್‌ಸಿಎಸ್‌ಪಿ/ ಟಿಎಸ್‌ಪಿ ಕಾಯ್ದೆ ಜಾರಿಗೆ ತಂದಿದ್ದು, ನಂತರ ಅದನ್ನು ಕರ್ನಾಟಕ 2013 ರಲ್ಲಿ ಜಾರಿಗೆ ತಂದಿತು. ಈಗ ತೆಲಂಗಾಣದಲ್ಲಿ ಕೂಡ ಜಾರಿಗೆ ಬಂದಿದ್ದು, ಇಡೀ ದೇಶದಲ್ಲಿ ಬೇರೆಲ್ಲೂ ಈ ಕಾಯ್ದೆ ಇಲ್ಲ. ಕಾಯ್ದೆ ಬಂದ ನಂತರ ರಾಜ್ಯದಲ್ಲಿ 2,61,274 ಕೋಟಿ ವೆಚ್ಚ ಮಾಡಲಾಗಿದೆ. ಬಿಜೆಪಿ ಅಧಿಕಾರದಲ್ಲಿದ್ದಾಗ ಒಟ್ಟು 5 ವರ್ಷಗಳಲ್ಲಿ ನೀಡಿದ್ದ 35,464 ಕೋಟಿ, ಅನುದಾನದಲ್ಲಿ 29,452 ಕೋಟಿ ವೆಚ್ಚ ಮಾಡಿದ್ದಾರೆ ಎಂದರು.

ಈ ಸುದ್ದಿಯನ್ನೂ ಓದಿ | CM Siddaramaiah: 36 ಸಾವಿರ ಕೋಟಿ ಬಾಕಿ ಬಿಲ್‌ಗಳು ಬಿಜೆಪಿಯ ಬಳುವಳಿ: ಸಿಎಂ ಸಿದ್ದರಾಮಯ್ಯ

ನಾವು ಅಧಿಕಾರದಲ್ಲಿದ್ದ ನಾಲ್ಕು ವರ್ಷಗಳಲ್ಲಿ 1,80,000 ಕೋಟಿ ವೆಚ್ಚ ಮಾಡಿದ್ದೇವೆ. ದಲಿತರ ಹಣವನ್ನು ಬೇರೆ ಉದ್ದೇಶಗಳಿಗೆ ಬಳಸಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.