ಫೋಟೋ ಗ್ಯಾಲರಿ ಆಪರೇಷನ್​ ಸಿಂಧೂರ ಐಪಿಎಲ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

CM Siddaramaiah: ಮಳೆ ಅನಾಹುತ, ಪ್ರವಾಹ ಪೀಡಿತ ಪ್ರದೇಶಗಳಿಗೆ ತಕ್ಷಣ ಭೇಟಿ ನೀಡಿ: ಜಿಲ್ಲಾ ಉಸ್ತುವಾರಿ ಸಚಿವರುಗಳಿಗೆ ಸಿಎಂ ಸೂಚನೆ

CM Siddaramaiah: ಮಳೆ ಅನಾಹುತ ಹಾಗೂ ಪ್ರವಾಹ ಪೀಡಿತ ಪ್ರದೇಶಗಳಿಗೆ ತಕ್ಷಣ ಭೇಟಿ ನೀಡಿ, ಪರಿಹಾರ ಕಾರ್ಯದ ಉಸ್ತುವಾರಿ ನೋಡಿಕೊಳ್ಳುವಂತೆ ಜಿಲ್ಲಾ ಮಂತ್ರಿಗಳು ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ಈ ಕುರಿತ ವಿವರ ಇಲ್ಲಿದೆ.

ಮಳೆ ಅನಾಹುತ, ಪ್ರವಾಹ ಪೀಡಿತ ಪ್ರದೇಶಗಳಿಗೆ ತಕ್ಷಣ ಭೇಟಿ ನೀಡಿ- ಸಿಎಂ ಸೂಚನೆ

Profile Siddalinga Swamy May 28, 2025 2:16 PM

ಬೆಂಗಳೂರು: ರಾಜ್ಯಾದ್ಯಂತ ಭಾರಿ ಮಳೆ ಆಗುತ್ತಿರುವ ಹಿನ್ನೆಲೆಯಲ್ಲಿ ತಕ್ಷಣ ಪ್ರವಾಹ ಪೀಡಿತ ಪ್ರದೇಶಗಳಿಗೆ ತೆರಳಿ ಪರಿಹಾರ ಕಾರ್ಯದ ಉಸ್ತುವಾರಿ ನೋಡಿಕೊಳ್ಳುವಂತೆ ಜಿಲ್ಲಾ ಮಂತ್ರಿಗಳು ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah)‌ ಅವರು ಸೂಚನೆ ನೀಡಿದ್ದಾರೆ. ಮಳೆಯಿಂದ ಆಗಿರುವ ಅನಾಹುತದ ಬಗ್ಗೆ ಇಂದು ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡ ಮುಖ್ಯಮಂತ್ರಿಗಳು, ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಆದೇಶಿಸಿದರು. ಜೋರು ಮಳೆಯಿಂದ ಹಾನಿಗೆ ಒಳಗಾಗಿರುವ ಮತ್ತು ಪ್ರವಾಹ ಪೀಡಿತ ಪ್ರದೇಶಗಳಿಗೆ ತಕ್ಷಣ ಭೇಟಿ ನೀಡಿ ಪರಿಸ್ಥಿತಿಯನ್ನು ಸಮಗ್ರವಾಗಿ ಅವಲೋಕಿಸುವಂತೆ ಜಿಲ್ಲಾ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಿಗೆ ಸೂಚನೆ ನೀಡಿದ್ದಾರೆ. ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಈ ಬಗ್ಗೆ ಕಟ್ಟೆಚ್ಚರ ಮತ್ತು ತೀವ್ರ ನಿಗಾ ವಹಿಸಿ ತಕ್ಷಣ ಪರಿಹಾರ ಕಾರ್ಯಗಳನ್ನು ಸಮರೋಪಾದಿಯಲ್ಲಿ ನಿರ್ವಹಿಸಲು ಸಿಎಂ ಸೂಚನೆ ನೀಡಿದ್ದಾರೆ.

ಈ ಬಗ್ಗೆ ಸಮಗ್ರ ಅವಲೋಕನ‌ ನಡೆಸಲು ಮೇ 30, 31 ರಂದು ಡಿಸಿ, ಸಿಇಒ ಮತ್ತು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳ ಸಭೆಯನ್ನು ಕರೆಯುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಸರ್ಕಾರದ ಮುಖ್ಯ ಕಾರ್ಯದರ್ಶಿ ಅವರಿಗೆ ಸೂಚನೆ ನೀಡಿದ್ದಾರೆ.

ಸದ್ಯ ತೆಗೆದುಕೊಂಡಿರುವ ಕ್ರಮಗಳು

  • ರಾಜ್ಯದಲ್ಲಿ 170 ತಾಲೂಕುಗಳನ್ನು ಪ್ರವಾಹ/ಭೂಕುಸಿತಕ್ಕೆ ಗುರಿಯಾಗುವ ತಾಲೂಕುಗಳೆಂದು ಗುರುತಿಸಲಾಗಿದ್ದು, ಮುಂಜಾಗ್ರತೆಯಾಗಿ 2,296 ಕಾಳಜಿ/ಆಶ್ರಯ ತಾಣಗಳನ್ನು ಗುರುತಿಸಲಾಗಿದೆ.
  • ಬಿ.ಬಿ.ಎಂ.ಪಿ ವ್ಯಾಪ್ತಿಯಲ್ಲಿ 201 ಸ್ಥಳಗಳನ್ನು ಪ್ರವಾಹ ಪೀಡಿತ ಸ್ಥಳಗಳನ್ನು ಗುರುತಿಸಲಾಗಿದೆ.
  • ಮೇ 26, 2025 ರವರೆಗೆ ರಾಜ್ಯದಲ್ಲಿ 45 ಮನೆಗಳು ಸಂಪೂರ್ಣವಾಗಿ ಹಾನಿಗೊಂಡಿದ್ದು, 1,385 ಮನೆಗಳು ಭಾಗಶಃ ಹಾನಿಯಾಗಿದ್ದು, ಅದರಲ್ಲಿ ಶೇ.99% ರಷ್ಟು ಆರ್ಥಿಕ ಸಹಾಯ ಧನವನ್ನು ಪಾವತಿ ಮಾಡಲಾಗಿದೆ.
  • ಮೇ 26, 2025 ರಂತೆ ವಿಪತ್ತು ನಿರ್ವಹಣೆಗಾಗಿ ಜಿಲ್ಲಾ ಮತ್ತು ತಾಲೂಕು ಮಟ್ಟದ ಪಿ.ಡಿ ಖಾತೆಯಲ್ಲಿ ರೂ.97,351.95 ಲಕ್ಷಗಳು ಅನುದಾನವಿರುತ್ತದೆ.

ಈ ಸುದ್ದಿಯನ್ನೂ ಓದಿ | Karnataka weather: ಹವಾಮಾನ ವರದಿ; ಇಂದು ಕರಾವಳಿ ಸೇರಿ ಈ ಜಿಲ್ಲೆಗಳಲ್ಲಿ ಭರ್ಜರಿ ಮಳೆ ನಿರೀಕ್ಷೆ