ಕರ್ನಾಟಕ ಬಜೆಟ್​ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹೋಳಿ ಹಬ್ಬ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

CM Siddaramaiah: ಗ್ಯಾರಂಟಿ ಸಮಿತಿಗಳಿಂದ ಶಾಸಕರ ಘನತೆಗೆ ಕುಂದಿಲ್ಲ: ಡಿಸಿಗಳಿಗೆ ಸೂಚನೆ ನೀಡಿದ್ದೇನೆ ಎಂದ ಸಿಎಂ

CM Siddaramaiah: ರಾಜ್ಯ ಮತ್ತು ಜಿಲ್ಲಾ, ತಾಲೂಕು ಗ್ಯಾರಂಟಿ ಜಾರಿ ಸಮಿತಿಗಳಲ್ಲಿ ಬದಲಾವಣೆ ಇಲ್ಲ ಎಂದು ತಿಳಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಗ್ಯಾರಂಟಿ ಸಮಿತಿಗಳಿಂದ ಶಾಸಕರ ಘನತೆಗೆ ಕುಂದಿಲ್ಲ. ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ಹೇಳಿದ್ದಾರೆ. ಈ ಕುರಿತ ವಿವರ ಇಲ್ಲಿದೆ.

ಗ್ಯಾರಂಟಿ ಸಮಿತಿಗಳಿಂದ ಶಾಸಕರ ಘನತೆಗೆ ಕುಂದಿಲ್ಲ: ಸಿಎಂ

ಸಿಎಂ ಸಿದ್ದರಾಮಯ್ಯ

Profile Siddalinga Swamy Mar 12, 2025 8:45 PM

ಬೆಂಗಳೂರು: ಗ್ಯಾರಂಟಿ ಸಮಿತಿಗಳಿಂದ (Guarantee Committees) ಶಾಸಕರ ಘನತೆಗೆ ಕುಂದಿಲ್ಲ. ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah)‌ ತಿಳಿಸಿದರು. ವಿಧಾನಸಭೆಯಲ್ಲಿ ಪ್ರತಿಪಕ್ಷದ ನಾಯಕರ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು, ಅಧಿವೇಶನ ಮುಗಿಯುತ್ತಿದ್ದಂತೆ ಈ ಬಗ್ಗೆ ಸಭೆ ಕರೆದು ತಕರಾರುಗಳನ್ನು ಪರಿಹರಿಸಲಾಗುವುದು ಎಂದರು. ಅಧಿಕಾರಕ್ಕೆ ಬಂದಾಗ ಪಕ್ಷದ ಕಾರ್ಯಕರ್ತರಿಗೆ ಅಧಿಕಾರದಲ್ಲಿ ಅವಕಾಶ ನೀಡುವುದು ಹಿಂದಿನಿಂದಲೂ ನಡೆದುಕೊಂಡು ಬಂದಿದೆ. ಮಹಾರಾಷ್ಟ್ರದಲ್ಲಿ (Maharashtra) ಎಲ್ಲಾ ಶಾಸಕರ ಕಚೇರಿಗೂ ಆರ್‌ಎಸ್‌ಎಸ್‌ (RSS) ಕಾರ್ಯಕರ್ತರನ್ನು ನೇಮಿಸಿಕೊಳ್ಳುತ್ತಿರುವುದನ್ನು ಅವರು ಉಲ್ಲೇಖಿಸಿದರು.

ತಾಲೂಕುಗಳಲ್ಲಿ ಶಾಸಕರ ಘನತೆಗೆ, ಅಧಿಕಾರಕ್ಕೆ ಯಾವುದೇ ಚ್ಯುತಿ ಬರುವುದಿಲ್ಲ. ಈ ಬಗ್ಗೆ ಎಲ್ಲಾ ಜಿಲ್ಲಾಡಳಿತಕ್ಕೂ ಸೂಚನೆ ನೀಡಲಾಗಿದೆ ಎಂದರು.

ಈ ಸುದ್ದಿಯನ್ನೂ ಓದಿ | CM Siddaramaiah: ಕೇಂದ್ರದಿಂದ ಅನ್ಯಾಯ ವಿರೋಧಿಸಿ ದಕ್ಷಿಣದ ರಾಜ್ಯಗಳು ಹೋರಾಟಕ್ಕೆ ಸಜ್ಜು, ಸಿಎಂ ಸಿದ್ದರಾಮಯ್ಯ ಬೆಂಬಲ

ಗ್ಯಾರಂಟಿ ಜಾರಿ ಸಮಿತಿಗಳಲ್ಲಿ ಬದಲಾವಣೆ ಇಲ್ಲ

ರಾಜ್ಯ ಮತ್ತು ಜಿಲ್ಲಾ, ತಾಲೂಕು ಗ್ಯಾರಂಟಿ ಜಾರಿ ಸಮಿತಿಗಳಲ್ಲಿ ಬದಲಾವಣೆ ಇಲ್ಲ ಎಂದು ಇದೇ ಸಂದರ್ಭದಲ್ಲಿ ಸಿಎಂ ಸಿದ್ದರಾಮಯ್ಯ ಅವರು ಸ್ಪಷ್ಟಪಡಿಸಿದರು.

ನ್ಯಾಯಾಲಯ ಸೂಚಿಸಿದರೆ ಕೆಎಎಸ್‌ ಮರು ಪರೀಕ್ಷೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕೆಪಿಎಸ್‌ಸಿಯಿಂದ ಭ್ರಷ್ಟಾಚಾರ ಹೊರಗೆ ಹೋಗಬೇಕು. ಇದರ ಬಗ್ಗೆ ಎರಡು ಮಾತಿಲ್ಲ. ಉಪ್ಪು ತಿಂದವರು ನೀರು ಕುಡಿಯಲೇಬೇಕು. ಕೆಪಿಎಸ್‌ಸಿಯಲ್ಲಿ (KAS Exam) ಹಲವು ಬಾರಿ ನಾನಾ ಗೊಂದಲಗಳಾಗಿ, ನ್ಯಾಯಾಲಯಗಳ ಮೆಟ್ಟಿಲು ಏರಿರುವ ಚರಿತ್ರೆ ಇದೆ. ಕೆಪಿಎಸ್‌ಸಿ ಸದಸ್ಯರ ಸಂಖ್ಯೆ ಕಡಿಮೆ ಮಾಡುವುದು, ಸದಸ್ಯರ ಆಯ್ಕೆಗೆ ಸರ್ಚ್ ಕಮಿಟಿ ರಚಿಸುವುದು, ಪ್ರಾಮಾಣಿಕವಾಗಿ ಇರುವವರನ್ನು ನೇಮಕ ಮಾಡಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

ಕೆಎಎಸ್‌ ಪರೀಕ್ಷೆಯಲ್ಲಿ (KAS Exam) ಭಾಷಾಂತರದಲ್ಲಿ ಆದ ಲೋಪದ ಕಾರಣಕ್ಕೆ ಅಭ್ಯರ್ಥಿಗಳಿಗೆ ಆಗಿರುವ ಸಮಸ್ಯೆ ಬಗ್ಗೆ ವಿರೋಧ ಪಕ್ಷದ ನಿಲುವಳಿ ಸೂಚನೆಯಡಿ ನಡೆದ ಚರ್ಚೆ ವೇಳೆ ಸಿಎಂ ಸಿದ್ದರಾಮಯ್ಯ ಅವರು ಪ್ರತಿಕ್ರಿಯಿಸಿದರು.

ಪ್ರಕರಣ ನ್ಯಾಯಾಲಯದಲ್ಲಿದೆ. ಈಗ ಮರು ಪರೀಕ್ಷೆ ಮಾಡಿ ಎಂದು ಸೂಚನೆ ಕೊಡಲು ಸಾಧ್ಯವಿಲ್ಲ. ಮರು ಪರೀಕ್ಷೆಗೆ ನ್ಯಾಯಾಲಯ ಸೂಚನೆ ಕೊಟ್ಟರೆ ಮಾಡಲಾಗುತ್ತದೆ. ಕೋರ್ಟ್ ಸೂಚನೆ ಬರದಿದ್ದರೆ ಸರ್ವ ಪಕ್ಷ ಸಭೆ ಕರೆದು ಚರ್ಚೆ ನಡೆಸಲಾಗುತ್ತದೆ. ತಪ್ಪು ಭಾಷಾಂತರದಿಂದ ಅನ್ಯಾಯಕ್ಕೆ ಒಳಗಾದವರ ಪರವಾಗಿ ನಾವಿದ್ದೇವೆ. ಯುಪಿಎಸ್‌ಸಿ ಮಾದರಿಯಲ್ಲಿ ಕೆಪಿಎಸ್‌ಸಿ ಪರೀಕ್ಷೆ, ನೇಮಕಾತಿ ನಡೆಸಲು ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಭರವಸೆ ನೀಡಿದರು.

ನಿಲುವಳಿ ಸೂಚನೆಯಯಲ್ಲಿ ಕೆಎಎಸ್ ಪೂರ್ವಭಾವಿ ಪರೀಕ್ಷೆಯಲ್ಲಿ ಕನ್ನಡ ಭಾಷಾಂತರದಲ್ಲಿ ಉಂಟಾಗಿರುವ ಲೋಪಗಳ ಕುರಿತು ಹಾಗೂ ಪರೀಕ್ಷೆಗಳು ನಡೆದು ಸಂದರ್ಶನಗಳನ್ನು ಮಾಡದೆ ಲೋಪ ಮಾಡಲಾಗುತ್ತಿದೆ ಎಂದು ಆರೋಪಿಸಲಾಗಿದೆ. ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಕೆ.ಪಿ.ಎಸ್.ಸಿ.ಯನ್ನು ರೋಗಗ್ರಸ್ತ ಸಂಸ್ಥೆಯೆಂದು ಹಾಗೂ ಹುದ್ದೆಗಳಿಗೆ ರೇಟ್ ಫಿಕ್ಸ್ ಮಾಡುವ ಬಗ್ಗೆ ಮಾತನಾಡಿದ್ದಾರೆ.

ಪ್ರಸ್ತುತ ನಡೆಯುತ್ತಿರುವ ಗೆಜೆಟೆಡ್ ಪ್ರೊಬೇಷರ್ಸ್ ಪರೀಕ್ಷೆಯಲ್ಲಿ ಕನ್ನಡ ಅನುವಾದ ತಪ್ಪು ಮಾಡಲಾಗಿದೆ. ತಪ್ಪು ಮಾಡಿದವರ ಮೇಲೆ ಕ್ರಮ ತೆಗೆದುಕೊಳ್ಳಬೇಕು. ತಪ್ಪು ಮಾಡಿದ ಕಾರಣದಿಂದ ಉಂಟಾಗಿರುವ 30 ಕೋಟಿ ರೂ. ನಷ್ಟವನ್ನು ತಪ್ಪಿತಸ್ಥರಿಂದ ವಸೂಲು ಮಾಡಬೇಕು. ಪರೀಕ್ಷೆ ನಡೆಸಲು ಈ ಹಿಂದೆ ಮಾಡಿರುವ ಅಧಿಸೂಚನೆಯನ್ನು ರದ್ದು ಮಾಡಿ ಹೊಸ ಅಧಿಸೂಚನೆ ಹೊರಡಿಸಬೇಕು ಎಂದು ಒತ್ತಾಯಿಸಿದ್ದಾರೆ. ಜತೆಗೆ ಕೆಪಿಎಸ್‌ಸಿಯ ಸಮಗ್ರ ಬದಲಾವಣೆಯಾಗಬೇಕು ಎಂದೂ ಸಹ ಸಲಹೆ ನೀಡಿದ್ದಾರೆ.