ಬೆಂಗಳೂರು: ಅಹಮದಾಬಾದ್ ವಿಮಾನ ದುರಂತದಲ್ಲಿ ಸುಮಾರು 133 ಮಂದಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದ್ದು, ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ. ವಿಮಾನ ಅವಘಡದ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಸೇರಿ ರಾಜ್ಯದ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ.
ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯಿಸಿರುವ ಸಿಎಂ ಸಿದ್ದರಾಮಯ್ಯ ಅವರು, ಸುಮಾರು 200ಕ್ಕೂ ಅಧಿಕ ಪ್ರಯಾಣಿಕರಿದ್ದ ಏರ್ ಇಂಡಿಯಾ ವಿಮಾನ ಗುಜರಾತ್‌ನ ಅಹಮದಾಬಾದ್ ನಗರದಲ್ಲಿ ಅಪಘಾತಕ್ಕೀಡಾದ ಸುದ್ದಿ ತಿಳಿದು ಆಘಾತವಾಗಿದೆ.ಇದು ಅತ್ಯಂತ ದುರದೃಷ್ಟಕರ ಮತ್ತು ನೋವಿನ ಗಳಿಗೆ. ಈ ಅಪಘಾತದಿಂದ ಹೆಚ್ಚಿನ ಹಾನಿಯಾಗದಿರಲಿ, ಪ್ರಯಾಣಿಕರೆಲ್ಲರೂ ಸುರಕ್ಷಿತವಾಗಿರಲಿ ಎಂದು ಪ್ರಾರ್ಥಿಸೋಣ ಎಂದು ತಿಳಿಸಿದ್ದಾರೆ.
ಸುಮಾರು 200ಕ್ಕೂ ಅಧಿಕ ಪ್ರಯಾಣಿಕರಿದ್ದ ಏರ್ ಇಂಡಿಯಾ ವಿಮಾನ ಗುಜರಾತ್‌ನ ಅಹ್ಮದಾಬಾದ್ ನಗರದಲ್ಲಿ ಅಪಘಾತಕ್ಕೀಡಾದ ಸುದ್ದಿ ತಿಳಿದು ಆಘಾತವಾಗಿದೆ.
— Siddaramaiah (@siddaramaiah) June 12, 2025
ಇದು ಅತ್ಯಂತ ದುರದೃಷ್ಟಕರ ಮತ್ತು ನೋವಿನ ಗಳಿಗೆ. ಈ ಅಪಘಾತದಿಂದ ಹೆಚ್ಚಿನ ಹಾನಿಯಾಗದಿರಲಿ, ಪ್ರಯಾಣಿಕರೆಲ್ಲರೂ ಸುರಕ್ಷಿತವಾಗಿರಲಿ ಎಂದು ಪ್ರಾರ್ಥಿಸೋಣ. #AirIndia #crash pic.twitter.com/5wux1aj1dj
ವಿಮಾನ ಪತನ ಸುದ್ದಿ ತಿಳಿದು ಅತ್ಯಂತ ದುಃಖವಾಗಿದೆ: ನಿಖಿಲ್
ಅಹಮದಾಬಾದ್ ವಿಮಾನ ದುರಂತಕ್ಕೆ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಸಂತಾಪ ಸೂಚಿಸಿದ್ದಾರೆ. ಗುಜರಾತ್ ರಾಜ್ಯದ ಅಹಮದಾಬಾದ್‌ನಿಂದ ಲಂಡನ್‌ಗೆ ಹೊರಟಿದ್ದ ಏರ್ ಇಂಡಿಯಾ ವಿಮಾನ ಅಹಮದಾಬಾದ್ ವಿಮಾನ ನಿಲ್ದಾಣದ ಬಳಿ ತಾಂತ್ರಿಕ ದೋಷದಿಂದ ಪತನವಾದ ಸುದ್ದಿ ತಿಳಿದು ಅತ್ಯಂತ ದುಃಖವಾಗಿದೆ.
ವಿಮಾನದಲ್ಲಿ 242 ಪ್ರಯಾಣಿಕರು ಇದ್ದ ಬಗ್ಗೆ ಪ್ರಾಥಮಿಕವಾಗಿ ತಿಳಿದು ಬಂದಿದ್ದು, ಈ ದುರಂತದಲ್ಲಿ ಸಾವೀಗಿಡಾದವರ ಆತ್ಮಕ್ಕೆ ಶಾಂತಿ ದೊರೆಯಲಿ ಹಾಗೂ ಗಾಯಗೊಂಡವರು ಶೀಘ್ರವಾಗಿ ಗುಣಮುಖರಾಗಲಿ ಎಂದು ತಾಯಿ ಚಾಮುಂಡೇಶ್ವರಿಯಲ್ಲಿ ಪ್ರಾರ್ಥಿಸುತ್ತೇನೆ ಎಂದು ತಿಳಿಸಿದ್ದಾರೆ.
ಗುಜರಾತ ರಾಜ್ಯದ ಅಹಮದಾಬಾದ್ ನಿಂದ ಲಂಡನ್ ಗೆ ಹೊರಟಿದ್ದ ಏರ್ ಇಂಡಿಯಾ ವಿಮಾನ ಅಹಮದಾಬಾದ್ ವಿಮಾನ ನಿಲ್ದಾಣದ ಬಳಿ ತಾಂತ್ರಿಕ ದೋಷದಿಂದ ಪತನವಾದ ಸುದ್ದಿ ತಿಳಿದು ಅತ್ಯಂತ ದುಃಖವಾಗಿದೆ.
— Nikhil Kumar (@Nikhil_Kumar_k) June 12, 2025
ವಿಮಾನದಲ್ಲಿ 242 ಪ್ರಯಾಣಿಕರು ಇದ್ದ ಬಗ್ಗೆ ಪ್ರಾಥಮಿಕವಾಗಿ ತಿಳಿದು ಬಂದಿದ್ದು, ಈ ದುರಂತದಲ್ಲಿ ಸಾವೀಗಿಡಾದವರ ಆತ್ಮಕ್ಕೆ ಶಾಂತಿ ದೊರೆಯಲಿ ಹಾಗೂ… pic.twitter.com/FbIx4S9g2M