ಕರ್ನಾಟಕ ಬಜೆಟ್​ ಮಹಿಳಾ ದಿನಾಚರಣೆ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

ನಟಿ ಶಬಾನಾ ಅಜ್ಮಿಗೆ ʼಜೀವಮಾನ ಸಾಧನೆ ಪ್ರಶಸ್ತಿʼ ನೀಡಿ ಗೌರವಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರಿನಲ್ಲಿ‌ ಆಯೋಜಿಸಿದ್ದ 16ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ಅಂಗವಾಗಿ ಕೊಡಮಾಡುವ ʼಜೀವಮಾನ ಸಾಧನೆ ಪ್ರಶಸ್ತಿʼ ಯನ್ನು ಭಾರತೀಯ ಚಿತ್ರರಂಗದ ಮೇರು ನಟಿ, ಬಹುಭಾಷಾ ಕಲಾವಿದೆ ಶಬಾನಾ ಅಜ್ಮಿ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾವೇರಿ ನಿವಾಸದಲ್ಲಿ ನೀಡಿ ಗೌರವಿಸಿದರು.

ನಟಿ ಶಬಾನಾ ಅಜ್ಮಿಗೆ ʼಜೀವಮಾನ ಸಾಧನೆ ಪ್ರಶಸ್ತಿʼ ನೀಡಿ ಗೌರವಿಸಿದ ಸಿಎಂ

Profile Siddalinga Swamy Mar 10, 2025 7:52 PM

ಬೆಂಗಳೂರು: ಬೆಂಗಳೂರಿನಲ್ಲಿ‌ ಆಯೋಜಿಸಿದ್ದ 16ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ಅಂಗವಾಗಿ ಕೊಡಮಾಡುವ ʼಜೀವಮಾನ ಸಾಧನೆ ಪ್ರಶಸ್ತಿʼ ಯನ್ನು ಭಾರತೀಯ ಚಿತ್ರರಂಗದ ಮೇರು ನಟಿ, ಬಹುಭಾಷಾ ಕಲಾವಿದೆ ಶಬಾನಾ ಅಜ್ಮಿ (Shabana Azmi) ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರು ಕಾವೇರಿ ನಿವಾಸದಲ್ಲಿ ನೀಡಿ ಗೌರವಿಸಿದರು. ನಟಿಗೆ ಪ್ರಶಸ್ತಿ ಮತ್ತು 10 ಲಕ್ಷದ ಚೆಕ್ ನೀಡಲಾಯಿತು. ಕವಿ, ಗೀತಕಾರ ಜಾವೇದ್ ಅಖ್ತರ್ (Javed Akhtar) ಅವರು ಈ ಸಂದರ್ಭದಲ್ಲಿ ಜತೆಗಿದ್ದರು.

ಈ ವೇಳೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ʼಮಿಲೇಸುರ್ ಮೇರಾ ತುಮಾರಾʼ ದೃಶ್ಯಕಾವ್ಯ ನಮಗೆ ತುಂಬಾ ಇಷ್ಟ. ಇದರಲ್ಲಿ ನಿಮ್ಮನ್ನು ನೋಡಿದ್ದೇನೆ ಎಂದು ಶಬಾನಾ ಅಜ್ಮಿ ಅವರಿಗೆ ಹೇಳಿದರು. ಇದೇ ವೇಳೆ ಶಬಾನಾ ಅಜ್ಮಿ ಮತ್ತು ಜಾವೇದ್ ಅವರು ಪ್ರತಿಕ್ರಿಯಿಸಿ, ಕರ್ನಾಟಕ ರಾಜ್ಯ ಸಾಂಸ್ಕೃತಿಕವಾಗಿ ಮತ್ತು ಸಂಗೀತಕ್ಕೆ ಅತ್ಯಂತ ಪ್ರಸಿದ್ಧಿ ಎಂದು ಮೆಚ್ಚುಗೆ ಸೂಚಿಸಿದರು.

ಭೀಮ್ ಸೇನ್ ಜೋಶಿ, ಕುಮಾರ ಗಂಧರ್ವ, ಗಂಗೂಬಾಯಿ ಹಾನಗಲ್ ಇವರೆಲ್ಲಾ ಹಿಂದೂಸ್ತಾನಿ ಸಂಗೀತದ ದಿಗ್ಗಜರು, ನಮ್ಮ ರಾಜ್ಯದ ಹೆಮ್ಮೆ ಇವರೆಲ್ಲಾ ಧಾರವಾಡದವರು ಎನ್ನುವುದು ಮತ್ತೊಂದು ವಿಶೇಷ ಎಂದ ಸಿಎಂ ಸಿದ್ದರಾಮಯ್ಯ, ಕಾಪಿ ರೈಟ್ಸ್ ಕಾಯ್ದೆಯಲ್ಲಿ ಕಲಾವಿದರಿಗೆ, ಸಂಗೀತಗಾರರಿಗೆ ಅನುಕೂಲ ಆಗಿರುವ ರೀತಿಯಲ್ಲೇ, GST ಯಲ್ಲೂ ಅನುಕೂಲ ಆಗುವ ರೀತಿಯಲ್ಲಿ GST ಕೌನ್ಸಿಲ್‌ನಲ್ಲಿ ಅಭಿಪ್ರಾಯ ವ್ಯಕ್ತಪಡಿಸುವ ಬಗ್ಗೆಯೂ ತಿಳಿಸಿದರು.

ಈ ವೇಳೆ ಸರ್ಕಾರದ ಕಾರ್ಯದರ್ಶಿ ಕಾವೇರಿ, ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ. ಪ್ರಭಾಕರ್, ವಾರ್ತಾ ಮತ್ತು ಪ್ರಚಾರ ಇಲಾಖೆ ಆಯುಕ್ತ ಹೇಮಂತ್ ನಿಂಬಾಳ್ಕರ್ ಅವರು ಶಬಾನಾ ಅಜ್ಮಿ ಮತ್ತು ಜಾವೇದ್ ಅಖ್ತರ್ ಅವರನ್ನು ಸ್ವಾಗತಿಸಿದರು.

ಈ ಸುದ್ದಿಯನ್ನೂ ಓದಿ | Shiva Rajkumar: ಡಾಕ್ಯುಮೆಂಟರಿ ರೂಪದಲ್ಲಿ ಬರಲಿದೆ ಶಿವಣ್ಣನ ಕ್ಯಾನ್ಸರ್‌ ಹೋರಾಟದ ಕಥೆ

ಈ ಸಂದರ್ಭದಲ್ಲಿ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ. ಅತೀಕ್ , ಚಲನಚಿತ್ರ ಅಕಾಡೆಮಿ ಅಧ್ಯಕ್ಷ ಸಾಧು ಕೋಕಿಲ, 16ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ಕಲಾ ನಿರ್ದೇಶಕ ವಿದ್ಯಾಶಂಕರ್ ಅವರು ಉಪಸ್ಥಿತರಿದ್ದು ಗೌರವಿಸಿದರು.