CM Siddaramaiah: ವಿಶ್ವವಿದ್ಯಾಲಯಗಳನ್ನು ಮುಚ್ಚುವ ಬಗ್ಗೆ ತೀರ್ಮಾನ ಆಗಿಲ್ಲ- ಸಿಎಂ ಸಿದ್ದರಾಮಯ್ಯ
CM Siddaramaiah: ವರದಿ ಬರುವ ಮೊದಲೇ ವಿಶ್ವವಿದ್ಯಾಲಯಗಳನ್ನು ಮುಚ್ಚುತ್ತೇವೆ ಎನ್ನುವುದು ಸರಿಯಲ್ಲ. ಇಂಥಾ ತೀರ್ಮಾನ ನಮ್ಮಿಂದ ಆಗಿಲ್ಲ ಎಂದು ಸ್ಪಷ್ಟಪಡಿಸಿದ ಸಿಎಂ ಸಿದ್ದರಾಮಯ್ಯ ಅವರು, ಉಪ ಸಮಿತಿ ವರದಿ ಬರುವ ಮೊದಲೇ ಬಿಜೆಪಿಗೆ ಆತಂಕ ಏಕೆ ಎಂದು ಸದನದಲ್ಲಿ ತಿಳಿಸಿದ್ದಾರೆ.

ಸಿಎಂ ಸಿದ್ದರಾಮಯ್ಯ

ಬೆಂಗಳೂರು: ವಿಶ್ವವಿದ್ಯಾಲಯಗಳನ್ನು ಮುಚ್ಚುವ ಬಗ್ಗೆ ತೀರ್ಮಾನ ಆಗಿಲ್ಲ. ಕ್ಯಾಬಿನೆಟ್ ಉಪ ಸಮಿತಿ ವರದಿಯೇ ಇನ್ನೂ ಬಂದಿಲ್ಲ. ಉಪ ಸಮಿತಿ ವರದಿ ಬರುವ ಮೊದಲೇ ಬಿಜೆಪಿಗೆ ಆತಂಕ ಏಕೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರು ಸದನದಲ್ಲಿ ತಿಳಿಸಿದರು. ಈ ಬಗ್ಗೆ ವಿರೋಧ ಪಕ್ಷದ ಸದಸ್ಯರು ವ್ಯಕ್ತಪಡಿಸಿದ ಆತಂಕಕ್ಕೆ ಉತ್ತರಿಸಿದರು. ಉಪ ಮುಖ್ಯಮಂತ್ರಿ ಅವರ ಅಧ್ಯಕ್ಷತೆಯಲ್ಲಿ ಈ ಸಂಗತಿಯ ಕೂಲಂಕುಷ ಪರಿಶೀಲನೆಗೆ ಉಪ ಸಮಿತಿ ರಚಿಸಲಾಗಿದೆ. ಉಪ ಸಮಿತಿ ವರದಿ ಕೊಡುವುದು ಬಾಕಿ ಇದೆ. ವರದಿ ಬರುತ್ತಿದ್ದಂತೆ ಅದನ್ನು ಕ್ಯಾಬಿನೆಟ್ ಮುಂದೆ ಇಟ್ಟು ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಹೇಳಿದರು.
ಈ ಸುದ್ದಿಯನ್ನೂ ಓದಿ | BOB Recruitment 2025: ಬ್ಯಾಂಕ್ ಆಫ್ ಬರೋಡಾದ 518 ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ದಿನಾಂಕ ವಿಸ್ತರಣೆ
ವರದಿ ಬರುವ ಮೊದಲೇ ವಿಶ್ವವಿದ್ಯಾಲಯಗಳನ್ನು ಮುಚ್ಚುತ್ತೇವೆ ಎನ್ನುವುದು ಸರಿಯಲ್ಲ. ಇಂಥಾ ತೀರ್ಮಾನ ನಮ್ಮಿಂದ ಆಗಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.
ನೀರಿನ ದರ 1 ಪೈಸೆಯಷ್ಟು ಏರಿಕೆ ಮಾಡಲು ಚಿಂತನೆ: ಡಿಸಿಎಂ ಡಿ.ಕೆ. ಶಿವಕುಮಾರ್
ಬೆಂಗಳೂರು: "2014ರ ನಂತರ ಬೆಂಗಳೂರಿನಲ್ಲಿ ನೀರಿನ ದರ ಪರಿಷ್ಕರಣೆ ಮಾಡಿಲ್ಲ. ಹೀಗಾಗಿ ಬೆಂಗಳೂರು ಜಲ ಮಂಡಳಿ (BWSSB)ಯು 7-8 ಪೈಸೆ ದರ ಏರಿಕೆಗೆ (Water tariff hike) ಪ್ರಸ್ತಾಪ ನೀಡಿದ್ದು, ಸದ್ಯಕ್ಕೆ 1 ಪೈಸೆಯಷ್ಟು ಮಾತ್ರ ಏರಿಕೆ ಮಾಡಲು ಚಿಂತನೆ ಮಾಡಲಾಗಿದ್ದು, ಈ ಬಗ್ಗೆ ಸದ್ಯದಲ್ಲೇ ನಗರದ ಶಾಸಕರ ಬಳಿ ಚರ್ಚಿಸಲಾಗುವುದು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (DK shivakumar) ತಿಳಿಸಿದರು. ವಿಧಾನ ಪರಿಷತ್ ಶೂನ್ಯವೇಳೆಯಲ್ಲಿ ಕಾಂಗ್ರೆಸ್ ಸದಸ್ಯರಾದ ರಾಮೋಜಿ ಗೌಡರ ಪ್ರಶ್ನೆಗೆ ಪ್ರತಿಕ್ರಿಯಿಸಿದಾಗ, ನೀರಿನ ದರ ಏರಿಕೆ ಬಗ್ಗೆ ಡಿ.ಕೆ. ಶಿವಕುಮಾರ್ ಪ್ರಸ್ತಾಪಿಸಿದ್ದಾರೆ.
ಬೇಸಿಗೆ ಆರಂಭವಾಗುತ್ತಿದ್ದು, ಬೆಂಗಳೂರಿನ ಪೂರ್ವ ಭಾಗದಲ್ಲಿ ಕುಡಿಯುವ ನೀರಿನ ಅಭಾವದಿಂದ ಖಾಸಗಿ ಟ್ಯಾಂಕರ್‌ಗಳು ದುಪ್ಪಟ್ಟು ಹಣದ ಬೇಡಿಕೆ ಇಡುತ್ತಿದ್ದು, ಜನರಿಗೆ ಉಚಿತವಾಗಿ ನೀರು ಪೂರೈಸಬೇಕು ಹಾಗೂ ಕಾವೇರಿ ಸಂಪರ್ಕ ನೀಡಿರುವ ಮನೆಗಳಿಗೆ ಶೀಘ್ರ ನೀರು ಒದಗಿಸಬೇಕು ಎಂದು ಕಾಂಗ್ರೆಸ್ ಸದಸ್ಯರಾದ ರಾಮೋಜಿ ಗೌಡ ಶುಕ್ರವಾರ ಗಮನ ಸೆಳೆದರು.
ಇದಕ್ಕೆ ಪ್ರತಿಕ್ರಿಯೆ ನೀಡಿದ ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆದ ಶಿವಕುಮಾರ್ ಅವರು, “ಸದಸ್ಯರಾದ ರಾಮೋಜಿಗೌಡರು ಸೂಕ್ತ ಕಾಲದಲ್ಲಿ ಸೂಕ್ತ ವಿಚಾರ ಪ್ರಸ್ತಾಪಿಸಿದ್ದಾರೆ. ಶಿವರಾತ್ರಿ ಕಳೆದಿದ್ದು ಬೇಸಿಗೆ ತೀವ್ರತೆ ಹೆಚ್ಚಾಗಿ ಉಷ್ಣಾಂಶ ಏರಿಕೆಯಾಗಿದೆ. ಆದರೆ ಕಳೆದ ವರ್ಷ ಬಹಳ ಸಂಕಷ್ಟದ ಪರಿಸ್ಥಿತಿ ಎದುರಾಗಿತ್ತು. 7 ಸಾವಿರ ಕೊಳವೆಬಾವಿಗಳು ಬತ್ತಿದ್ದವು. ಹೀಗಾಗಿ ಖಾಸಗಿ ಟ್ಯಾಂಕರ್‌ಗಳನ್ನು ಪಾಲಿಕೆ ಸುಪರ್ದಿಗೆ ತೆಗೆದುಕೊಳ್ಳಲಾಗಿತ್ತು. ಇದೇ 22ರಂದು ಜಲಸಂರಕ್ಷಣಾ ದಿನವಾಗಿದ್ದು, ಒಂದು ತಿಂಗಳ ಕಾಲ ಜಲ ಸಂರಕ್ಷಣೆ ವಿಚಾರವಾಗಿ ಜಾಗೃತಿ ಅಭಿಯಾನ ಮಾಡಲು ತೀರ್ಮಾನಿಸಿದ್ದೇವೆ. ಕಾವೇರಿ 5ನೇ ಹಂತದ ಯೋಜನೆಯನ್ನು ಪೂರ್ಣಗೊಳಿಸಿ ನೀರನ್ನು ಹೊರ ತರಲಾಗಿದೆ. 110 ಹಳ್ಳಿಗಳಿಗೆ ನೀಡಲು ವ್ಯವಸ್ಥೆ ಮಾಡಲಾಗಿದೆ” ಎಂದು ತಿಳಿಸಿದರು.