SL Bhyrappa: ಎಸ್ಎಲ್ ಭೈರಪ್ಪ ಅಂತಿಮ ದರ್ಶನ ಪಡೆದ ಸಿಎಂ ಸಿದ್ದರಾಮಯ್ಯ
ಇಂದು ಮಧ್ಯಾಹ್ನ 2 ಗಂಟೆಯವರೆಗೆ ಇಲ್ಲಿ ಅಂತಿಮ ದರ್ಶನ ಇರಲಿದ್ದು, ಬಳಿಕ ಭೈರಪ್ಪನವರ ಕಾಯಕದ ಕ್ಷೇತ್ರವಾದ ಮೈಸೂರಿಗೆ ಸಾಗಿಸಲಾಗುತ್ತದೆ. ಇಂದು ಸಂಜೆ ಹಾಗೂ ನಾಳೆ ಮೈಸೂರಿನಲ್ಲಿ ಸಾರ್ವಜನಿಕರಿಗೆ ಅಂತಿಮ ದರ್ಶನ ಇರಲಿದ್ದು, ನಾಳೆ ಮೈಸೂರು ಬೆಟ್ಟದ ತಪ್ಪಲಿನ ರುದ್ರಭೂಮಿಯಲ್ಲಿ ಬ್ರಾಹ್ಮಣ ಸಂಪ್ರದಾಯದಂತೆ ಎಸ್ಎಲ್ ಭೈರಪ್ಪ ಅವರ ಅಂತ್ಯಕ್ರಿಯೆ ನೆರವೇರಲಿದೆ.

-

ಬೆಂಗಳೂರು: ನಿನ್ನೆ ದಿವಂಗತರಾದ ಕನ್ನಡದ ಹಿರಿಯ ಕಾದಂಬರಿಕಾರ ಡಾ. ಎಸ್ಎಲ್ ಭೈರಪ್ಪ (94) (SL Bhyrappa) ಅವರ ಅಂತಿಮ ದರ್ಶನವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಇಂದು ಪಡೆದರು. ಅವರ ಜೊತೆ ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ, ಸಂಸದ ತೇಜಸ್ವಿ ಸೂರ್ಯ, ವಿಶ್ವವಾಣಿ ಪ್ರಧಾನ ಸಂಪಾದಕ ವಿಶ್ವೇಶ್ವರ ಭಟ್ ಮೊದಲಾದವರು ಇದ್ದರು. ಸಿಎಂ ಸಿದ್ದರಾಮಯ್ಯ ಅವರು ಭೈರಪ್ಪನವರ ಶರೀರಕ್ಕೆ ಹೂಗುಚ್ಛವಿಟ್ಟು ಅಂತಿಮ ನಮನ ಸಲ್ಲಿಸಿದರು. ಬಳಿಕ ಕುಟುಂಬಸ್ಥರಿಗೆ ಸಿಎಂ ಸಾಂತ್ವನ ಹೇಳಿದರು.
ನಿನ್ನೆ ಬೆಂಗಳೂರಿನ ರಾಜರಾಜೇಶ್ವರಿ ನಗರದ ರಾಷ್ಟ್ರೋತ್ಥಾನ ಆಸ್ಪತ್ರೆಯಲ್ಲಿ ಅಲ್ಪಕಾಲದ ಅಸ್ವಾಸ್ಥ್ಯದಿಂದ ನಿಧನರಾದ ಭೈರಪ್ಪನವರ ಪಾರ್ಥಿವ ಶರೀರವನ್ನು ಇಂದು ಮುಂಜಾನೆ 8 ಗಂಟೆಯಿಂದ ರವೀಂದ್ರ ಕಲಾಕ್ಷೇತ್ರದಲ್ಲಿ ಸಾರ್ವಜನಿಕರ ಅಂತಿಮ ದರ್ಶನಕ್ಕೆ ಇಡಲಾಗಿದೆ. ಇಂದು ಮಧ್ಯಾಹ್ನ 2 ಗಂಟೆಯವರೆಗೆ ಇಲ್ಲಿ ಅಂತಿಮ ದರ್ಶನ ಇರಲಿದ್ದು, ಬಳಿಕ ಭೈರಪ್ಪನವರ ಕಾಯಕದ ಕ್ಷೇತ್ರವಾದ ಮೈಸೂರಿಗೆ ಸಾಗಿಸಲಾಗುತ್ತದೆ. ಇಂದು ಸಂಜೆ ಹಾಗೂ ನಾಳೆ ಮೈಸೂರಿನಲ್ಲಿ ಸಾರ್ವಜನಿಕರಿಗೆ ಅಂತಿಮ ದರ್ಶನ ಇರಲಿದ್ದು, ನಾಳೆ ಮೈಸೂರು ಬೆಟ್ಟದ ತಪ್ಪಲಿನ ರುದ್ರಭೂಮಿಯಲ್ಲಿ ಬ್ರಾಹ್ಮಣ ಸಂಪ್ರದಾಯದಂತೆ ಎಸ್ಎಲ್ ಭೈರಪ್ಪ ಅವರ ಅಂತ್ಯಕ್ರಿಯೆ ನೆರವೇರಲಿದೆ.
ಪದ್ಮಶ್ರೀ, ಪದ್ಮಭೂಷಣ, ಸರಸ್ವತಿ ಸಮ್ಮಾನ್ ಮೊದಲಾದ ಪ್ರಶಸ್ತಿಗಳನ್ನು ಪಡೆದ ಕನ್ನಡದ ಹಿರಿಯ ಖ್ಯಾತ ಸಾಹಿತಿ, ಕಾದಂಬರಿಕಾರ ಭೈರಪ್ಪ ಅವರ ನಿಧನಕ್ಕೆ ಗಣ್ಯರು, ಅಭಿಮಾನಿಗಳಿಂದ ಸಂತಾಪದ ಮಹಾಪೂರವೇ ಹರಿದುಬರುತ್ತಿದೆ. ಕನ್ನಡ, ಇಂಗ್ಲಿಷ್, ಹಿಂದಿ ಹಾಗೂ ಇತರ ಭಾಷೆಯ ಮಾಧ್ಯಮಗಳು ಕೂಡ ಭೈರಪ್ಪನವರ ಸಾಹಿತ್ಯಕ ಕೊಡುಗೆಯನ್ನು ಇಂದು ಸ್ಮರಿಸಿವೆ.
ಇದನ್ನೂ ಓದಿ: SL Bhyrappa: ಕರ್ಫ್ಯೂ ನಡುವೆಯೂ ರಾಮಜನ್ಮ ಸಭೆಯಲ್ಲಿ ಭೈರಪ್ಪ ಭಾಗಿಯಾಗಿದ್ದರು; ಅರವಿಂದ ಲಿಂಬಾವಳಿ ಹೇಳಿದ್ದೇನು?