ಫೋಟೋ ಗ್ಯಾಲರಿ ಗುಜರಾತ್​ ವಿಮಾನ ಪತನ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

RCB celebrations: ವಿಧಾನಸೌಧದಲ್ಲಿ ಆರ್‌ಸಿಬಿ ತಂಡದ ಸನ್ಮಾನ‌ ಸಮಾರಂಭಕ್ಕೆ ರಾಜ್ಯಪಾಲರನ್ನು ನಾನೇ ಆಹ್ವಾನಿಸಿದ್ದೆ: ಸಿಎಂ ಸ್ಪಷ್ಟನೆ

RCB celebrations: ಮಾಧ್ಯಮಗಳಲ್ಲಿ ರಾಜ್ಯಪಾಲರು ಅವರಾಗಿಯೇ ಬಂದಿದ್ದರು ಎಂದು ಪ್ರಾಚಾರವಾಗಿದ್ದು ಅದು ತಪ್ಪು. ನಾನು ಕಾರ್ಯಕ್ರಮಕ್ಕೆ ತೆರಳುತ್ತಿದ್ದಾಗ ನೀವೂ ಬನ್ನಿ ಎಂದು ಆಹ್ವಾನಿಸಿದೆ. ಹೀಗಾಗಿ ರಾಜ್ಯಪಾಲರು ಕೂಡ ಕಾರ್ಯಕ್ರಮಕ್ಕೆ ಆಗಮಿಸಿದ್ದರು ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ.

ಆರ್‌ಸಿಬಿ ತಂಡದ ಸನ್ಮಾನ‌ಕ್ಕೆ ರಾಜ್ಯಪಾಲರನ್ನು ನಾನೇ ಆಹ್ವಾನಿಸಿದ್ದೆ: ಸಿಎಂ

Profile Prabhakara R Jun 11, 2025 5:16 PM

ಗೌರಿಬಿದನೂರು, ಜೂನ್ 11: ವಿಧಾನಸೌಧದ ಮೆಟ್ಟಿಲುಗಳ ಮೇಲೆ ಹಮ್ಮಿಕೊಂಡ ಆರ್‌ಸಿಬಿ ತಂಡದ ಸನ್ಮಾನ (RCB celebrations) ಕಾರ್ಯಕ್ರಮಕ್ಕೆ ರಾಜ್ಯಪಾಲರು ಅವರಾಗೇ ಬರಲಿಲ್ಲ, ನಾನೇ ಆಹ್ವಾನಿಸಿದ್ದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಪಷ್ಟಪಡಿಸಿದರು. ಗೌರಿಬಿದನೂರಿನಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿರುವ ಅವರು, ರಾಜ್ಯಪಾಲರು ಅವರಾಗಿಯೇ ಬರಲಿಲ್ಲ, ಆಹ್ವಾನ ನೀಡಲಾಗಿತ್ತು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

ಜೂನ್ 4 ರಂದು ಕರ್ನಾಟಕ ಕ್ರಿಕೆಟ್ ಸಂಸ್ಥೆ ಹಾಗೂ ಆರ್‌ಸಿಬಿಯ ವತಿಯಿಂದ ಆರ್.ಸಿ. ಬಿ ಆಟಗಾರರಿಗೆ ಸನ್ಮಾನ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದರು. ನನಗೆ ಅಂದು ಬೆಳಗ್ಗೆ 11.29 ನಿಮಿಷಕ್ಕೆ ಕೆ.ಎಸ್.ಸಿ.ಎ ವತಿಯಿಂದ ಶಂಕರ್ ಮತ್ತು ಜಯರಾಮ್ ಅವರು ಆಹ್ವಾನ ನೀಡಿ ಮನವಿ ಮಾಡಿಕೊಂಡರು. ಇದಕ್ಕೆ ನಾನು ಒಪ್ಪಿಗೆ ನೀಡಿದೆ. ಬಳಿಕ ಅವರು ರಾಜ್ಯಪಾಲರನ್ನು ಆಹ್ವಾನ ಮಾಡಿರುವುದಾಗಿ ತಿಳಿಸಿದರು. ಪತ್ರಿಕೆಗಳಲ್ಲಿ ಹಾಗೂ ಮಾಧ್ಯಮಗಳಲ್ಲಿ ರಾಜ್ಯಪಾಲರು ಅವರಾಗಿಯೇ ಬಂದಿದ್ದರು ಎಂದು ಪ್ರಾಚಾರವಾಗಿದ್ದು ಅದು ತಪ್ಪು ಎಂದರು.

ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಆಗಿದ್ದ ಗೋವಿಂದರಾಜು ಅವರು ರಾಜ್ಯಪಾಲರಿಗೆ ಕರೆ ಮಾಡಿ ಫೋನ್ ನನಗೆ ಕೊಟ್ಟರು. ಆಗ ನಾನು ಕೂಡ ಕಾರ್ಯಕ್ರಮಕ್ಕೆ ತೆರಳುತ್ತಿದ್ದು ನೀವೂ ಬನ್ನಿ ಎಂದು ಆಹ್ವಾನಿಸಿದೆ. ರಾಜ್ಯಪಾಲರು ಕೂಡ ಕಾರ್ಯಕ್ರಮಕ್ಕೆ ಆಗಮಿಸಿದರು. ಸನ್ಮಾನ ಕಾರ್ಯಕ್ರಮ 20 ನಿಮಿಷಗಳಲ್ಲಿ ಮುಗಿದುಹೋಯಿತು ಎಂದರು.



ಮಾಧ್ಯಮಗಳು ಹಾಗೂ ಸುದ್ದಿ ವಾಹಿನಿಗಳಲ್ಲಿ ರಾಜ್ಯಪಾಲರು ತಾವಾಗಿಯೇ ಬಂದಿದ್ದಾರೆ ಎಂದು ವರದಿಯಾದ್ದರಿಂದ ಸ್ಪಷ್ಟೀಕರಣ ನೀಡುತ್ತಿದ್ದೇನೆ. ಇನ್ನು ಕಾಲ್ತುಳಿತದಲ್ಲಿ ಮೃತಪಟ್ಟಿವರ ಕುಟುಂಬಕ್ಕೆ ತಲಾ 25 ಲಕ್ಷ ರೂ.ಗಳನ್ನೂ ಈಗಾಗಲೇ ಪಾವತಿಸಲಾಗಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಕನ್ನಡದ ಅಭಿವೃದ್ಧಿಗೆ ಅನುದಾನ ಲಭ್ಯವಿದೆ

ಕನ್ನಡ ಅಭಿವೃದ್ಧಿ ಪ್ರಾಧಿಕಾರಕ್ಕೆ ಅನುದಾನದ ಅಗತ್ಯವಿದ್ದರೆ ಅನುದಾನ ಒದಗಿಸಲಾಗುವುದು. ಕನ್ನಡದ ಅಭಿವೃದ್ಧಿಗೆ ಯಾವುದೇ ಕಾರಣಕ್ಕೂ ಅನುದಾನವಿಲ್ಲ ಎಂದು ಹೇಳುವುದಿಲ್ಲ. ವಿಧಾನ ಪರಿಷತ್ ಸದಸ್ಯರ ನಾಮ ನಿರ್ದೇಶನದ ವಿಚಾರದಲ್ಲಿ ಯಾವುದೇ ಗೊಂದಲಗಳಿಲ್ಲ. ಈ ವಿಚಾರದ ಬಗ್ಗೆ ಚರ್ಚೆ ಮಾಡಬೇಕಿದ್ದು ಅದನ್ನು ಮುಂದಕ್ಕೆ ಹಾಕಿದ್ದೇವೆ ಎಂದರು.

ಹೊಸ ಜಿಲ್ಲೆ ರಚನೆ: ಚರ್ಚಿಸಿ ತೀರ್ಮಾನ

ಬೆಳಗಾವಿಯಲ್ಲಿ ಮಾತ್ರ ಹೊಸ ಜಿಲ್ಲೆ ರಚಿಸುವ ಬಗ್ಗೆ ಬೇಡಿಕೆ ಇದ್ದು, ಇದಕ್ಕೆ ಸಂಬಂಧಿಸಿದಂತೆ ಶಾಸಕರು, ಸಚಿವರು ಮಾತು ಸಂಸದರ ಸಭೆಯನ್ನು ನಡೆಸಿ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದರು.

ನಂದಿ ಬೆಟ್ಟದಲ್ಲಿ ಸಚಿವ ಸಂಪುಟ ಸಭೆ

ನಂದಿ ಬೆಟ್ಟದಲ್ಲಿ ಸಚಿವ ಸಂಪುಟ ಸಭೆ ನಡೆಯಲಿರುವುದು ಈ ಭಾಗದ ಜನರಲ್ಲಿ ನಿರೀಕ್ಷೆ ಹುಟ್ಟುಹಾಕಿದೆ ಎಂಬ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿಗಳು ಬೆಂಗಳೂರು ವಿಭಾಗಕ್ಕೆ ಸಂಬಂಧಿಸಿದಂತೆ 19 ರಂದು ಸಚಿವ ಸಂಪುಟ ನಡೆಯುತ್ತಿದೆ. ಅಲ್ಲಿ ಪ್ರಸ್ತಾಪವಾಗುವ ವಿಷಯಗಳ ಬಗ್ಗೆ ಚರ್ಚೆ ನಡೆಯಲಿದೆ ಎಂದರು.

ಈ ಸುದ್ದಿಯನ್ನೂ ಓದಿ | Yettinahole Project: ಎತ್ತಿನಹೊಳೆ ಯೋಜನೆ ಇನ್ನೆರಡು ವರ್ಷದಲ್ಲಿ ಮುಗಿಯುತ್ತೆ: ಸಿಎಂ ಸಿದ್ದರಾಮಯ್ಯ

ಮಾವಿಗೆ ಬೆಂಬಲ ಬೆಲೆ ಬಗ್ಗೆ ಸಚಿವ ಸಂಪುಟದಲ್ಲಿ ಚರ್ಚೆ

ಮಾವಿನ ಬೆಲೆ ಕುಸಿತದ ಬೆಂಬಲ ಬೆಲೆ ನೀಡುವ ಬಗ್ಗೆ ಮಾತನಾಡಿ ಆಂಧ್ರದಲ್ಲಿ ತೋತಾಪುರಿ ಮಾವಿಗೆ ಒಂದು ಕೆಜಿ ಗೆ 4 ರೂ. ನೀಡಲಾಗುತ್ತಿದ್ದು, ಇಲ್ಲಿಯೂ ಕೊಡಬೇಕು ಎನ್ನುವ ಬೇಡಿಕೆಯನ್ನು ಸಚಿವ ಎಂ.ಸಿ.ಸುಧಾಕರ್ ಅವರು ಮಾಡಿದ್ದು, ಸಚಿವ ಸಂಪುಟದಲ್ಲಿ ತೀರ್ಮಾನ ಮಾಡಲಾಗುವುದು ಎಂದರು.