ಫೋಟೋ ಗ್ಯಾಲರಿ ಆಪರೇಷನ್​ ಸಿಂಧೂರ ಐಪಿಎಲ್​ ಅಕ್ಷಯ ತೃತೀಯ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

CM Siddaramaiah: ಸಿಎಂ ಸಿದ್ದರಾಮಯ್ಯ ಆಸ್ಪತ್ರೆಗೆ ದಾಖಲು: ವೈದ್ಯರು ಹೇಳಿದ್ದೇನು?

ಎಡಗಾಲಿನ ಮಂಡಿಯಲ್ಲಿ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಣಿಪಾಲ್ ಆಸ್ಪತ್ರೆಗೆ ತೆರಳಿ ತಪಾಸಣೆಗೆ ಒಳಗಿದ್ದಾರೆ. 2 ದಿನ ಪ್ರಯಾಣ ಮಾಡದೆ ಮನೆಯಲ್ಲೇ ವಿಶ್ರಾಂತಿ ಪಡೆಯುವಂತೆ ವೈದ್ಯರು ಸಲಹೆ ನೀಡಿದ ಹಿನ್ನಲೆಯಲ್ಲಿ ಮುಖ್ಯಮಂತ್ರಿ ಅವರ ಎಲ್ಲ ಕಾರ್ಯಕ್ರಮಗಳನ್ನು ರದ್ದುಗೊಳಿಸಲಾಗಿದೆ.

ಮಂಡಿ ನೋವು: ಆಸ್ಪತ್ರೆಗೆ ಸಿಎಂ ಸಿದ್ದರಾಮಯ್ಯ ಭೇಟಿ

ಮುಖ್ಯಮಂತ್ರಿ ಸಿದ್ದರಾಮಯ್ಯ.

Profile Ramesh B Feb 2, 2025 11:57 AM

ಬೆಂಗಳೂರು: ಎಡಗಾಲಿನ ಮಂಡಿಯಲ್ಲಿ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರು ಮಣಿಪಾಲ್ ಆಸ್ಪತ್ರೆಗೆ ತೆರಳಿ ತಪಾಸಣೆಗೆ ಒಳಗಿದ್ದಾರೆ. 2 ದಿನ ಪ್ರಯಾಣ ಮಾಡದೆ ಮನೆಯಲ್ಲೇ ವಿಶ್ರಾಂತಿ ಪಡೆಯುವಂತೆ ವೈದ್ಯರು ಸಲಹೆ ನೀಡಿದ ಹಿನ್ನಲೆಯಲ್ಲಿ ಮುಖ್ಯಮಂತ್ರಿ ಅವರ ಇಂದಿನ ಎಲ್ಲ ಕಾರ್ಯಕ್ರಮಗಳನ್ನು ರದ್ದುಗೊಳಿಸಲಾಗಿದೆ.

ವೈದ್ಯರು ಹೇಳಿದ್ದೇನು?

ಸಿದ್ದರಾಮಯ್ಯ ಅವರ ತಪಾಸಣೆ ನಡೆಸಿದ ವೈದ್ಯರು, ಈ ಹಿಂದೆ ಲೆಗಮೆಂಟ್ ಶಸ್ತ್ರ ಚಿಕಿತ್ಸೆ ನಡೆದ ಜಾಗದ ಮೇಲೆ ಒತ್ತಡ ಬಿದ್ದಿರುವುದರಿಂದ ನೋವು ಕಾಣಿಸಿಕೊಂಡಿದೆ. ಉಳಿದಂತೆ ಯಾವುದೇ ಸಮಸ್ಯೆ ಇಲ್ಲ ಎಂದು ತಿಳಿಸಿದ್ದಾರೆ. ಜತೆಗೆ 2 ದಿನ ಪ್ರಯಾಣ ಮಾಡದೆ ಮನೆಯಲ್ಲೇ ವಿಶ್ರಾಂತಿ ಪಡೆಯುವಂತೆ ಸಲಹೆ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಇಂದು ಸಿದ್ದರಾಮಯ್ಯ ಅವರ ಚಿಕ್ಕಬಳ್ಳಾಪುರ ಮತ್ತು ರಾಮನಗರ ಪ್ರವಾಸ ನಿಗದಿಯಾಗಿತ್ತು. ಇದೀಗ ಈ ಕಾರ್ಯಕ್ರಮ ರದ್ದುಪಡಿಸಲಾಗಿದೆ.

ಈ ಸುದ್ದಿಯನ್ನೂ ಓದಿ: CM Siddaramaiah: ಅಂಬೇಡ್ಕರ್ ಮನುಸ್ಮೃತಿ ಸುಟ್ಟು ದೇಶಕ್ಕೆ ಸಂವಿಧಾನ ಕೊಟ್ಟರು: ಸಿದ್ದರಾಮಯ್ಯ