ಬೆಂಗಳೂರು: ಅಕ್ರಮವಾಗಿ ರೆಸಾರ್ಟ್ ಗಳನ್ನು ನಡೆಸುತ್ತಿರುವವರ ವಿರುದ್ಧ ಕಟ್ಟು ನಿಟ್ಟಿನ ಕ್ರಮ ಜರುಗಿಸುವುದಾಗಿ ಸಿಎಂ ಸಿದ್ಧರಾಮಯ್ಯ(CM Siddaramaiah) ಖಡಕ್ ಎಚ್ಚರಿಕೆ ಕೊಟ್ಟಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಅಕ್ರಮ ರೆಸಾರ್ಟ್‌ಗಳ ಸಂಖ್ಯೆ ಹೆಚ್ಚಾಗುತ್ತಿದೆ. ಇದಕ್ಕೆ ಕಡಿವಾಣ ಹಾಕುವುದು ಅತ್ಯಗತ್ಯ. ಪ್ರವಾಸಿಗರಿಗಾಗಿ ಕೈಗೊಳ್ಳುವ ಸಫಾರಿಗಳ ಸಂಖ್ಯೆಯನ್ನೂ ಕಡಿಮೆ ಮಾಡಲು ಸೂಚನೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.
ರಾಜ್ಯದ ಅರಣ್ಯ ಪ್ರದೇಶಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ರೆಸಾರ್ಟ್ ಗಳು ತಲೆ ಎತ್ತುತ್ತಿದ್ದು, ಸಫಾರಿಗಳು ಸೇರಿದಂತೆ ಜನರ ಸಂಚಾರ ಹೆಚ್ಚುತ್ತಿದೆ. ನೀರು ಮತ್ತು ಮೇವಿನ ಕೊರತೆ ಹಾಗೂ ಹುಲಿ, ಚಿರತೆಗಳ ಹಾವಳಿಯಿಂದ ಕಾಡು ಪ್ರಾಣಿಗಳು ಜನವಸತಿ ಪ್ರದೇಶಕ್ಕೆ ಬರುತ್ತಿವೆ. ಈ ಬಗ್ಗೆ ಸಂಬಂಧಪಟ್ಟ ಸಚಿವರು ಈಗಾಗಲೇ ಸಭೆ ನಡೆಸಿದ್ದು, ನನ್ನ ಅಧ್ಯಕ್ಷತೆಯಲ್ಲಿಯೂ ಸಭೆ ನಡೆಯಲಿದೆ. ಅಲ್ಲದೇ, ಅಕ್ರಮವಾಗಿ ರೆಸಾರ್ಟ್ ಗಳನ್ನು ನಡೆಸುತ್ತಿರುವವರ ವಿರುದ್ಧವೂ ಕಾನೂನು ಕ್ರಮ ಕೈಗೊಳ್ಳಲಾಗುವುದು. ಪ್ರವಾಸಿಗರಿಗಾಗಿ ಕೈಗೊಳ್ಳುವ ಸಫಾರಿಗಳ ಸಂಖ್ಯೆಯನ್ನೂ ಕಡಿಮೆ ಮಾಡಲು ಸೂಚನೆ ನೀಡಲಾಗಿದೆ ಎಂದು ಹೇಳಿದ್ದಾರೆ.
ಇದೇ ವೇಳೆ ಅವರು ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಬಗ್ಗೆ ಪ್ರತಿಕ್ರಿಯಿಸಿದ್ದು, ಈ ಬಾರಿಯ ಕನ್ನಡ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿದೆ. ಈ ಸಲ ಪ್ರಶಸ್ತಿಗಾಗಿ ಅರ್ಜಿಯನ್ನು ಕರೆಯದೇ, ಸಾಮಾಜಿಕ ನ್ಯಾಯ ಹಾಗೂ ಪ್ರಾದೇಶಿಕ ಸಮಾನತೆಯನ್ನು ಗಮನದಲ್ಲಿರಿಸಿ ಪ್ರತಿ ಜಿಲ್ಲೆಯಿಂದಲೂ ಸಾಧಕರನ್ನು ಗುರುತಿಸಿ ಗೌರವಿಸಲಾಗಿದೆ ಎಂದರು.
ಈ ಸುದ್ದಿಯನ್ನೂ ಓದಿ: CM Siddaramaiah: ಗ್ರೇಟರ್ ಮೈಸೂರು ಆಗಲಿ, ಸಂಸ್ಕೃತಿಗೆ ಧಕ್ಕೆ ಆಗದಿರಲಿ: ಸಿಎಂ ಸಿದ್ದರಾಮಯ್ಯ
ಸಮಾಜದ ವಿವಿಧ ಕ್ಷೇತ್ರಗಳಲ್ಲಿ ಎಲೆಮರೆಕಾಯಿಯಂತೆ ಸೇವೆ ಸಲ್ಲಿಸಿರುವ ಹಲವು ಸಾಧಕರನ್ನು ಗುರುತಿಸಿ ಈ ಬಾರಿಯ ಕನ್ನಡ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿದೆ. ಈ ಸಲ ಪ್ರಶಸ್ತಿಗಾಗಿ ಅರ್ಜಿಯನ್ನು ಕರೆಯದೇ, ಸಾಮಾಜಿಕ ನ್ಯಾಯ ಹಾಗೂ ಪ್ರಾದೇಶಿಕ ಸಮಾನತೆಯನ್ನು ಗಮನದಲ್ಲಿರಿಸಿ ಪ್ರತಿ ಜಿಲ್ಲೆಯಿಂದಲೂ ಸಾಧಕರನ್ನು ಗುರುತಿಸಿ ಗೌರವಿಸಲಾಗಿದೆ ಎಂದರು.
ಆರೆಸ್ಸೆಸ್ ಪಥಸಂಚಲನಕ್ಕೆ ಅನುಮತಿ ಪ್ರಶ್ನಿಸಿ ಮೇಲ್ಮನವಿ
ರಾಜ್ಯದಲ್ಲಿ ಆರೆಸ್ಸೆಸ್ ಪಥಸಂಚಲನ ನಿರ್ಬಂಧಿಸುವ ಉದ್ದೇಶದಿಂದ ಜಾರಿ ಮಾಡಲಾಗಿದ್ದ ಆದೇಶಕ್ಕೆ ಕರ್ನಾಟಕ ಹೈಕೋರ್ಟ್ ಪೀಠ ತಡೆಯಾಜ್ಞೆ ನೀಡಿದ್ದು, ಈ ತಡೆಯಾಜ್ಞೆಯನ್ನು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸುವುದಾಗಿ ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಆರೆಸ್ಸೆಸ್ ಪಥ ಸಂಚಲನ ನಿರ್ಬಂಧಿಸಲು ಮುಂದಾಗಿದ್ದ ರಾಜ್ಯ ಸರ್ಕಾರಕ್ಕೆ ಹಿನ್ನಡೆಯಾಗಿದೆ. ರಾಜ್ಯ ಸರ್ಕಾರದ ಆದೇಶಕ್ಕೆ ಹೈಕೋರ್ಟ್ ಇದೀಗ ಮಧ್ಯಂತರ ತಡೆ ನೀಡಿದೆ. ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ಪೀಠ ಈ ಆದೇಶ ಹೊರಡಿಸಿದೆ. ಬಿಜೆಪಿಯ ಜಗದೀಶ ಶೆಟ್ಟರ್ ಅವರ ಅವಧಿಯಲ್ಲಿ ಹೊರಡಿಸಲಾಗಿದ್ದ ಆದೇಶವನ್ನು ಕಾಂಗ್ರೆಸ್ ಸರಕಾರ ಇನ್ನಷ್ಟು ಕಠಿಣವಾಗಿ ಜಾರಿಗೆ ತಂದಿತ್ತು.
ಸರಕಾರಿ ಸ್ಥಳಗಳಲ್ಲಿ ಖಾಸಗಿ ಸಂಘಸಂಸ್ಥೆಗಳು ಕಾರ್ಯಕ್ರಮ ನಡೆಸುವಂತಿಲ್ಲ. ಪೂರ್ವಾನುಮತಿ ಅಗತ್ಯ ಎಂಬ ಆದೇಶಕ್ಕೆ ಧಾರವಾಡ ಹೈಕೋರ್ಟ್ ಪೀಠ ನಿನ್ನೆ ಮಧ್ಯಂತರ ತಡೆ ನೀಡಿದೆ. ಈ ವಿಚಾರವಾಗಿ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿ, ನಾವು ಹೈಕೋರ್ಟಿಗೆ ಮತ್ತೆ ಮೇಲ್ಮನವಿ ಅರ್ಜಿ ಸಲ್ಲಿಸುತ್ತೇವೆ ಎಂದು ತಿಳಿಸಿದರು.