ಫೋಟೋ ಗ್ಯಾಲರಿ ಬಿಗ್​ಬಾಸ್ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

CM Siddaramaiah: ಅನಗತ್ಯ ಹೇಳಿಕೆ ಬೇಡ: ಪುತ್ರನಿಗೆ ಸಿಎಂ ಎಚ್ಚರಿಕೆ; ಡಿಕೆ ಶಿವಕುಮಾರ್‌, ಜಮೀರ್ ಹೇಳಿದ್ದೇನು?

ನಿನ್ನೆ ಯತೀಂದ್ರ ಸಿದ್ದರಾಮಯ್ಯ (Yathindra Siddaramaiah) ಅವರು ಸದ್ಯಕ್ಕೆ ರಾಜ್ಯದಲ್ಲಿ ಸಿಎಂ ಬದಲಾವಣೆ ಆಗಲ್ಲ. ಐದು ವರ್ಷಗಳ ಕಾಲ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ ಸ್ಥಾನದಲ್ಲಿ ಮುಂದುವರೆಯುತ್ತಾರೆ. ಹೈಕಮಾಂಡ್ ಹೇಳಿದಂತೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಅವರ ಮಾತಿಗೆ ಬದ್ಧ ಅಂತ ಹೇಳಿದ್ದಾರೆ. ಹಾಗಾಗಿ ಸದ್ಯಕ್ಕೆ ಸಿಎಂ ಬದಲಾವಣೆ ಅಪ್ರಸ್ತುತ ಎಂದು ಹೇಳಿದ್ದರು.

ಅನಗತ್ಯ ಹೇಳಿಕೆ ಬೇಡ: ಪುತ್ರನಿಗೆ ಸಿಎಂ ಎಚ್ಚರಿಕೆ; ಜಮೀರ್ ಹೇಳಿದ್ದೇನು?

ಯತೀಂದ್ರ, ಸಿದ್ದರಾಮಯ್ಯ -

ಹರೀಶ್‌ ಕೇರ
ಹರೀಶ್‌ ಕೇರ Dec 9, 2025 12:17 PM

ಬೆಳಗಾವಿ, ಡಿ.09 : ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ ಎಂದು ಯತೀಂದ್ರ ಸಿದ್ದರಾಮಯ್ಯ (Yathindra Siddaramaiah) ನಿನ್ನೆ ಹೇಳಿಕೆ ನೀಡಿದ್ದರು. ಈ ವಿಚಾರವಾಗಿ ಸಿಎಂ ಸಿದ್ದರಾಮಯ್ಯ (CM Siddaramaiah) ಪುತ್ರ ಯತೀಂದ್ರ ಅವರಿಗೆ ಅನಗತ್ಯ ಹೇಳಿಕೆ ಕೊಡಬೇಡ ಎಂದು ಖಡಕ್ ಸೂಚನೆ ಕೊಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಇನ್ನೊಂದೆಡೆ ಸಚಿವ ಜಮೀರ್‌ ಅಹಮದ್‌ ಖಾನ್‌ (Zameer Ahmed Khan) ಅವರು, ಸಿದ್ದರಾಮಯ್ಯ ಅವರೇ ಐದು ವರ್ಷ ಅವಧಿಗೆ ಸಿಎಂ ಎಂದು ಪುನರುಚ್ಚರಿಸಿದ್ದಾರೆ.

ನಿನ್ನೆ ಯತೀಂದ್ರ ಸಿದ್ದರಾಮಯ್ಯ ಅವರು ಸದ್ಯಕ್ಕೆ ರಾಜ್ಯದಲ್ಲಿ ಸಿಎಂ ಬದಲಾವಣೆ ಆಗಲ್ಲ. ಐದು ವರ್ಷಗಳ ಕಾಲ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ ಸ್ಥಾನದಲ್ಲಿ ಮುಂದುವರೆಯುತ್ತಾರೆ. ಹೈಕಮಾಂಡ್ ಹೇಳಿದಂತೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಅವರ ಮಾತಿಗೆ ಬದ್ಧ ಅಂತ ಹೇಳಿದ್ದಾರೆ. ಹಾಗಾಗಿ ಸದ್ಯಕ್ಕೆ ಸಿಎಂ ಬದಲಾವಣೆ ಅಪ್ರಸ್ತುತ ಎಂದು ಹೇಳಿದರು. ಇದಕ್ಕೆ ಸಿಎಂ ಸಿದ್ದರಾಮಯ್ಯ ಅವರು, ಅನಗತ್ಯ ಹೇಳಿಕೆ ಕೊಡಬೇಡ ಎಂದು ಖಡಕ್ ಸೂಚನೆ ಕೊಟ್ಟಿದ್ದಾರೆ.

ಕರೆದು ಮಾತಾಡುತ್ತೇನೆ: ಡಿಕೆ ಶಿವಕುಮಾರ್‌

ಇದೇ ವಿಚಾರವಾಗಿ ಈ ಹಿಂದೆ ಸಿಎಂ ವಿಚಾರವಾಗಿ ಮಾತನಾಡಿದ ಶಾಸಕರಿಗೆ ನೋಟಿಸ್ ಕೊಟ್ಟಿದ್ದೀರಿ. ಈಗ ಯತೀಂದ್ರ ಅವರು ಮಾತನಾಡಿದ್ದಾರೆ. ಅವರಿಗೂ ನೋಟಿಸ್ ಕೊಡುತ್ತೀರಾ ಎಂದು ಮಾಧ್ಯಮಗಳು ಕೇಳಿದ ಪ್ರಶ್ನೆಗೆ ನಾನು ಯತೀಂದ್ರ ಅವರ ಹತ್ತಿರ ಮಾತನಾಡುತ್ತೇನೆ. ಹೈಕಮಾಂಡ್ ಕರೆದಿದ್ದು ಮಾತನಾಡಿದ್ದು ಬಹಿರಂಗಪಡಿಸಲು ಆಗಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದ್ದಾರೆ.

ಸಮುದಾಯದ ನಾಯಕನ ಪರ ನಿಲ್ಲಿ: ತಂದೆ ಪರ ಯತೀಂದ್ರ ಸಿದ್ದರಾಮಯ್ಯ ಬ್ಯಾಟಿಂಗ್‌

ಸಿಎಂ ಬದಲಾವಣೆ ವಿಚಾರವಾಗಿ ಯಾವುದೇ ಭಿನ್ನಾಭಿಪ್ರಾಯ ಇಲ್ಲ. ಅವರು ಏನು ಹೇಳಿಕೆ ಕೊಟ್ಟಿದ್ದಾರೆ ನನಗೆ ಅರ್ಥ ಆಗಿಲ್ಲ. ಹೈಕಮಾಂಡ್ ಯಾವಾಗ ಕರೀತಾರೆ, ನನ್ನ ಹತ್ರ ಮಾತಾಡೋದು ಯಾವುದನ್ನೂ ನಾನು ಬಹಿರಂಗಪಡಿಸುವುದಿಲ್ಲ. ಹಾಗಾಗಿ ಯತೀಂದ್ರ ಅವರನ್ನು ಕರೆದು ಅವರ ಜೊತೆಗೆ ಮಾತನಾಡುತ್ತೇನೆ ಎಂದು ತಿಳಿಸಿದರು.

ಐದು ವರ್ಷ ಸಿದ್ದು: ಜಮೀರ್‌

ಜಮೀರ್‌ ಈ ನಡುವೆ ಬೆಳಗಾವಿಯಲ್ಲಿ ಮಾತನಾಡಿದ ಸಚಿವ ಜಮೀರ್‌ ಅಹಮದ್‌ ಖಾನ್‌ ಅವರು, ಐದು ವರ್ಷ ಸಿದ್ದರಾಮಯ್ಯ ಅವರೇ ಸಿಎಂ ಆಗಿರುತ್ತಾರೆ. ನವೆಂಬರ್‌ ಕ್ರಾಂತಿ, ಡಿಸೆಂಬರ್‌ ಕ್ರಾಂತಿ ಇತ್ಯಾದಿ ಮಾತುಗಳಲ್ಲಿ ಹುರುಳಿಲ್ಲ ಎಂದು ಪುನರುಚ್ಚರಿಸಿದರು.