ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

CM Siddaramaiah: ಇನ್ನೆರಡು ವರ್ಷ ಸಿದ್ದರಾಮಯ್ಯನವರೇ ಸಿಎಂ, ಹೈಕಮಾಂಡ್ ಸ್ಪಷ್ಟನೆ ಬೇಕಿಲ್ಲ: ಜಿ ಪರಮೇಶ್ವರ್

ಮೈಸೂರಲ್ಲಿ ಮಾತನಾಡಿದ ಜಿ ಪರಮೇಶ್ವರ, ಇನ್ನೂ ಎರಡು ವರ್ಷ ಸಿದ್ದರಾಮಯ್ಯ ಅವರೇ ಸಿಎಂ ಆಗಿ ಇರುತ್ತಾರೆ. 2023ರಲ್ಲಿ ಸಿದ್ದರಾಮಯ್ಯ ಸಿಎಂ ಎಂದು ಪಕ್ಷದ ಹೈಕಮಾಂಡ್ ಘೋಷಣೆ ಮಾಡಿತ್ತು. ಅದರ ಅವಧಿ 2028ರ ವರೆಗೆ ಇದೆ. ಹೈಕಮಾಂಡ್ ನೀವೇ 5 ವರ್ಷ ಸಿಎಂ ಎಂದು ಪ್ರತ್ಯೇಕವಾಗಿ ಸ್ಪಷ್ಟೀಕರಣ ಕೊಡುವ ಅವಶ್ಯಕತೆ ಇಲ್ಲ ಎಂದು ಹೇಳಿದರು.

ಇನ್ನೆರಡು ವರ್ಷ ಸಿದ್ದರಾಮಯ್ಯನವರೇ ಸಿಎಂ, ಹೈಕಮಾಂಡ್ ಹೇಳಬೇಕಿಲ್ಲ: ಪರಮೇಶ್ವರ

ಜಿ ಪರಮೇಶ್ವರ -

ಹರೀಶ್‌ ಕೇರ
ಹರೀಶ್‌ ಕೇರ Apr 6, 2026 2:52 PM

ಮೈಸೂರು. ಏ.06 : ಪಂಚ ರಾಜ್ಯಗಳ ಚುನಾವಣೆ (five states election) ಹಾಗೂ ಕರ್ನಾಟಕ ಉಪ ಚುನಾವಣೆ (Karnataka bypoll) ಗದ್ದಲದಲ್ಲಿ ರಾಜ್ಯದ ನಾಯಕತ್ವ ಬದಲಾವಣೆ ವಿಚಾರ ಸ್ವಲ್ಪ ತಣ್ಣಗಾಗಿತ್ತು. ಆದರೆ, ಇದೀಗ ಗೃಹ ಸಚಿವ ಜಿ ಪರಮೇಶ್ವರ್ (G Parameshwara) ನಾಯಕತ್ವ ಬದಲಾವಣೆ ವಿಚಾರವಾಗಿ ಸ್ಫೋಟಕ ಹೇಳಿಕೆ ನೀಡಿದ್ದು, ಇನ್ನೆರಡು ವರ್ಷ ಸಿದ್ದರಾಮಯ್ಯ (CM Siddaramaiah) ಅವರೇ ಸಿಎಂ ಆಗಿ ಮುಂದುವರೆಯುತ್ತಾರೆ. ಇದಕ್ಕೆ ಹೈಕಮಾಂಡ್ ಸ್ಪಷ್ಟನೆ ಬೇಕಿಲ್ಲ ಎಂದು ತಿಳಿಸಿದ್ದಾರೆ.

ಮೈಸೂರಲ್ಲಿ ಮಾತನಾಡಿದ ಅವರು, ಇನ್ನೂ ಎರಡು ವರ್ಷ ಸಿದ್ದರಾಮಯ್ಯ ಅವರೇ ಸಿಎಂ ಆಗಿ ಇರುತ್ತಾರೆ. 2023ರಲ್ಲಿ ಸಿದ್ದರಾಮಯ್ಯ ಸಿಎಂ ಎಂದು ಪಕ್ಷದ ಹೈಕಮಾಂಡ್ ಘೋಷಣೆ ಮಾಡಿತ್ತು. ಅದರ ಅವಧಿ 2028ರ ವರೆಗೆ ಇದೆ. ಹೈಕಮಾಂಡ್ ನೀವೇ 5 ವರ್ಷ ಸಿಎಂ ಎಂದು ಪ್ರತ್ಯೇಕವಾಗಿ ಸ್ಪಷ್ಟೀಕರಣ ಕೊಡುವ ಅವಶ್ಯಕತೆ ಇಲ್ಲ ಎಂದು ಗೃಹಸಚಿವ ಜಿ.ಪರಮೇಶ್ವರ್‌ ಹೇಳಿದರು.

2013ರಲ್ಲಿ ಸಿದ್ದರಾಮಯ್ಯ 5 ವರ್ಷ ಸಿಎಂ ಎಂದು ಹೈಕಮಾಂಡ್ ಘೋಷಣೆ ಮಾಡಿರಲಿಲ್ಲ. ಆದರೂ ಅವರು ಐದು ವರ್ಷ ಸಿಎಂ ಆಗಿದ್ದರು. ಈ ಬಾರಿಯೂ ಪೂರ್ಣಾವಧಿ ಮುಗಿಸಬೇಕು ತಾನೇ? ಹೈಕಮಾಂಡ್ ಯಾವ ಗೊಂದಲಗಳನ್ನೂ ಸೃಷ್ಟಿ ಮಾಡಿಲ್ಲ. ಯಾರು ಏನೇ ಹೇಳಿದರೂ ಅದು ಮುಖ್ಯ ಅಲ್ಲ ಎಂದರು.

Virajpet MLA A S Ponnanna Interview: ನಾಯಕತ್ವದ ಬಗ್ಗೆ ಸಿಎಂ-ಡಿಸಿಎಂ ಮಧ್ಯೆ ಚರ್ಚೆಯಾಗಿದೆ

ಹೈಕಮಾಂಡ್ ಯಾವತ್ತಾದರೂ ಸಿದ್ದರಾಮಯ್ಯ ಅವಧಿ ಇಷ್ಟು ಎಂದು ಹೇಳಿದ್ಯಾ? ಬದಲಾವಣೆ ಬಗ್ಗೆ ಮಾತನಾಡಿದ್ದಾರಾ? ಅದರ ಅರ್ಥ ಆ ರೀತಿಯ ಯಾವ ಬೆಳವಣಿಗೆಯೂ ಇಲ್ಲ. ಸಿಎಂ ಸ್ಥಾನ ಬದಲಾವಣೆ ಮಾಡಬೇಕಾಗಿರುವುದು ಹೈಕಮಾಂಡ್. ಅಲ್ಲಿಯವರೆಗೆ ಯಾರು ಏನೇ ಮಾತನಾಡಿದರೂ ಅದು ವೈಯಕ್ತಿಕ ಅಭಿಪ್ರಾಯ ಎಂದರು.