ಬಿಗ್​ಬಾಸ್ ಫೋಟೋ ಗ್ಯಾಲರಿ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

CM Siddaramaiah: ಸಿದ್ದರಾಮಯ್ಯ ಅವರೇ 5 ವರ್ಷ ಸಿಎಂ: ತಂದೆ ಪರ ಯತೀಂದ್ರ ಮತ್ತೆ ಬ್ಯಾಟಿಂಗ್

Yathindra Siddaramaiah: ​ಸಿದ್ದರಾಮಯ್ಯನವರು ಅಲ್ಪಸಂಖ್ಯಾತರು, ಹಿಂದುಳಿದ ವರ್ಗ ಮತ್ತು ದಲಿತರ (ಅಹಿಂದ) ಅಭಿವೃದ್ಧಿಗಾಗಿ ಪ್ರಾಮಾಣಿಕವಾಗಿ ಶ್ರಮಿಸಿದ್ದಾರೆ. ಈ ಕಾರಣಕ್ಕಾಗಿಯೇ, ಅಹಿಂದ ಸಮುದಾಯ ಸಂಪೂರ್ಣವಾಗಿ ಸಿದ್ದರಾಮಯ್ಯ ಅವರ ಬೆನ್ನಿಗೆ ನಿಂತಿದೆ. ​ಈ ಬಲವಾದ ಬೆಂಬಲದಿಂದಾಗಿ, ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿ ತಮ್ಮ ಸಂಪೂರ್ಣ ಐದು ವರ್ಷಗಳ ಅಧಿಕಾರಾವಧಿಯನ್ನು ಪೂರ್ಣಗೊಳಿಸಲಿದ್ದಾರೆ ಎಂದು ಡಾ. ಯತೀಂದ್ರ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದರು.

ಯತೀಂದ್ರ, ಸಿದ್ದರಾಮಯ್ಯ

ನರಗುಂದ, ನ.23: ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರು ತಮ್ಮ ಐದು ವರ್ಷಗಳ ಅಧಿಕಾರದ ಅವಧಿಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಲಿದ್ದಾರೆ ಎಂದು ವಿಧಾನಪರಿಷತ್ ಸದಸ್ಯ ಡಾ. ಯತೀಂದ್ರ ಸಿದ್ದರಾಮಯ್ಯ (Yathindra Siddaramaiah) ಅವರು ಭರವಸೆ ವ್ಯಕ್ತಪಡಿಸಿದ್ದಾರೆ. ​ಗದಗ ಜಿಲ್ಲೆಯ ನರಗುಂದದಲ್ಲಿ (Naragunda) ಶನಿವಾರ ನಡೆದ ಕನಕದಾಸರ 538ನೇ ಜಯಂತ್ಯುತ್ಸವ ಸಮಾರಂಭದಲ್ಲಿ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯನವರ ಆಡಳಿತದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.

​ಸಿದ್ದರಾಮಯ್ಯನವರು ಅಲ್ಪಸಂಖ್ಯಾತರು, ಹಿಂದುಳಿದ ವರ್ಗ ಮತ್ತು ದಲಿತರ (ಅಹಿಂದ) ಅಭಿವೃದ್ಧಿಗಾಗಿ ಪ್ರಾಮಾಣಿಕವಾಗಿ ಶ್ರಮಿಸಿದ್ದಾರೆ. ಈ ಕಾರಣಕ್ಕಾಗಿಯೇ, ಅಹಿಂದ ಸಮುದಾಯವು ಸಂಪೂರ್ಣವಾಗಿ ಸಿದ್ದರಾಮಯ್ಯ ಅವರ ಬೆನ್ನಿಗೆ ನಿಂತಿದೆ ಮತ್ತು ಮುಂದೆಯೂ ನಿಲ್ಲಬೇಕು ಎಂದು ಯತೀಂದ್ರ ಸಿದ್ದರಾಮಯ್ಯ ಕರೆ ನೀಡಿದರು. ​ಅಹಿಂದ ಸಮುದಾಯದ ಈ ಬಲವಾದ ಬೆಂಬಲದಿಂದಾಗಿ, ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿ ತಮ್ಮ ಸಂಪೂರ್ಣ ಐದು ವರ್ಷಗಳ ಅಧಿಕಾರಾವಧಿಯನ್ನು ಪೂರ್ಣಗೊಳಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಗೊಂದಲಕ್ಕೆ ತೆರೆ ಎಳೆಯಲು ಖರ್ಗೆಗೆ ಸಿಎಂ ಒತ್ತಾಯ

ರಾಜ್ಯ ಸರ್ಕಾರ ಹಾಗೂ ಪಕ್ಷಕ್ಕೆ ತೀವ್ರ ಹಾನಿಯುಂಟು ಮಾಡುತ್ತಿರುವ ನಾಯಕತ್ವ ಬದಲಾವಣೆ ಗೊಂದಲಕ್ಕೆ ಅಂತಿಮ ತೆರೆ ಎಳೆಯುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಒತ್ತಾಯಿಸಿದ್ದಾರೆ. ಇದಕ್ಕೆ ಸ್ಪಂದಿಸಿರುವ ಖರ್ಗೆ ಅವರು, ದೆಹಲಿಗೆ ತೆರಳಿದ ಕೂಡಲೇ ವರಿಷ್ಠ ರಾಹುಲ್‌ ಗಾಂಧಿ ಅವರೊಂದಿಗೆ ಚರ್ಚಿಸಿ ಈ ಬಗ್ಗೆ ಸ್ಪಷ್ಟತೆ ನೀಡುವ ಮೂಲಕ ಗೊಂದಲ ಪರಿಹರಿಸುವ ಭರವಸೆ ನೀಡಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ.

ಇದನ್ನೂ ಓದಿ: CM Siddaramaiah: ಸಿಎಂ ಆಗಿ ನಾನೇ ಮುಂದುವರಿಯುವೆ: ಮುಖ್ಯಮಂತ್ರಿ ಬದಲಾವಣೆ ವದಂತಿ ನಿರಾಕರಿಸಿದ ಸಿದ್ದರಾಮಯ್ಯ

ಮೂಲಗಳ ಪ್ರಕಾರ, ಪ್ರಸ್ತುತ ವಿದೇಶ ಪ್ರವಾಸದಲ್ಲಿರುವ ರಾಹುಲ್ ಗಾಂಧಿ ಅವರು ನ. 26ರಂದು ಹಿಂತಿರುಗಲಿದ್ದು, ಅನಂತರ ಹೈಕಮಾಂಡ್ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ದೆಹಲಿಗೆ ಬುಲಾವ್‌ ನೀಡಿ ಈ ವಿಚಾರದ ಬಗ್ಗೆ ಸ್ಪಷ್ಟ ನಿರ್ಧಾರ ಕೈಗೊಳ್ಳುವ ಸಾಧ್ಯತೆಯಿದೆ.

ರಾಜ್ಯ ಸರ್ಕಾರಕ್ಕೆ ಎರಡೂವರೆ ವರ್ಷ ತುಂಬಿದ ಬೆನ್ನಲ್ಲೇ ತೀವ್ರಗೊಂಡಿರುವ ಅಧಿಕಾರ ಹಸ್ತಾಂತರ ಗೊಂದಲ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ರಾತ್ರಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿ ಸುಮಾರು ಒಂದೂವರೆ ಗಂಟೆ ಸುದೀರ್ಘ ಚರ್ಚೆ ನಡೆಸಿದರು. ಈ ಚರ್ಚೆಯ ವೇಳೆ ಸಚಿವ ಸಂಪುಟ ಪುನಾರಚನೆಯೂ ಸೇರಿದಂತೆ ಹಲವು ವಿಚಾರಗಳ ಬಗ್ಗೆ ವಿವರವಾದ ಚರ್ಚೆ ನಡೆದಿದೆ. ರಾಜ್ಯ ಸರ್ಕಾರಕ್ಕೆ ಯಶಸ್ವಿ ಎರಡೂವರೆ ವರ್ಷ ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ ಸಂಪುಟ ಪುನಾರಚನೆ ಪ್ರಸ್ತಾಪವನ್ನು ಮತ್ತೆ ಮಂಡಿಸಿದರು ಎನ್ನಲಾಗಿದೆ.

ಇದನ್ನೂ ಓದಿ: Next CM of Karnataka: ಸಿದ್ದರಾಮಯ್ಯ ನಂತರ ಸತೀಶ್ ಜಾರಕಿಹೊಳಿ ಸಿಎಂ; ಯತೀಂದ್ರ ಹೊಸ ಬಾಂಬ್!

ಹರೀಶ್‌ ಕೇರ

View all posts by this author