Water Crisis: ಕೃಷ್ಣಾ, ಭೀಮಾ ನದಿಗೆ ನೀರು ಬಿಡುವಂತೆ ಮಹಾರಾಷ್ಟ್ರ ಸರ್ಕಾರಕ್ಕೆ ಸಿಎಂ ಸಿದ್ದರಾಮಯ್ಯ ಪತ್ರ
Water Crisis: ರಾಜ್ಯದ ಜಲಾಶಯಗಳಲ್ಲಿರುವ ನೀರು, ಕೃಷ್ಣಾ ಜಲಾನಯನ ಪ್ರದೇಶದ ಉತ್ತರ ಕರ್ನಾಟಕ ಜಿಲ್ಲೆಗಳ ಕುಡಿಯುವ ನೀರಿನ ಅಗತ್ಯಗಳನ್ನು ಪೂರೈಸಲು ಸಾಕಾಗುವುದಿಲ್ಲ. ಹೀಗಾಗಿ ವಾರ್ಣಾ, ಕೊಯ್ನಾ ಜಲಾಶಯದಿಂದ ಕೃಷ್ಣಾ ನದಿಗೆ 2 ಟಿಎಂಸಿ ಹಾಗೂ ಉಜ್ಜನಿ ಜಲಾಶಯದಿಂದ ಭೀಮಾ ನದಿಗೆ 1 ಟಿಎಂಸಿ ನೀರು ಬಿಡುಗಡೆ ಮಾಡಬೇಕು ಎಂದು ಮಹಾರಾಷ್ಟ್ರ ಸರ್ಕಾರವನ್ನು ಸಿಎಂ ಸಿದ್ದರಾಮಯ್ಯ ಕೋರಿದ್ದಾರೆ.


ಬೆಂಗಳೂರು: ಬೇಸಿಗೆ ಹಿನ್ನೆಲೆಯಲ್ಲಿ ಉತ್ತರ ಕರ್ನಾಟಕದ ಭಾಗದಲ್ಲಿ ಕುಡಿಯುವ ನೀರಿನ ಅಭಾವ (Water Crisis) ಉಂಟಾಗಿರುವುದರಿಂದ ಮಹಾರಾಷ್ಟ್ರದ ಜಲಾಶಯಗಳಿಂದ ಕೃಷ್ಣಾ ಹಾಗೂ ಭೀಮಾ ನದಿಗೆ ನೀರು ಬಿಡುಗಡೆ ಮಾಡಬೇಕು ಎಂದು ದೇವೇಂದ್ರ ಫಡ್ನವೀಸ್ ಸರ್ಕಾರಕ್ಕೆ ಕರ್ನಾಟಕ ಸಿಎಂ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಪತ್ರ ಬರೆದಿದ್ದು, ಕರ್ನಾಟಕದ ಕುಡಿಯುವ ನೀರಿನ ಅಗತ್ಯಗಳಿಗಾಗಿ ವಾರ್ಣಾ, ಕೊಯ್ನಾ ಜಲಾಶಯದಿಂದ ಕೃಷ್ಣಾ ನದಿಗೆ 2 ಟಿಎಂಸಿ ಹಾಗೂ ಉಜ್ಜನಿ ಜಲಾಶಯದಿಂದ ಭೀಮಾ ನದಿಗೆ 1 ಟಿಎಂಸಿ ನೀರು ಬಿಡುಗಡೆ ಮಾಡುವಂತೆ ಕೋರಿದ್ದಾರೆ.
ಉತ್ತರ ಕರ್ನಾಟಕದ ಬೆಳಗಾವಿ, ವಿಜಯಪುರ, ಬಾಗಲಕೋಟೆ, ಕಲಬುರಗಿ ಯಾದಗಿರಿ ಮತ್ತು ರಾಯಚೂರು ಜಿಲ್ಲೆಗಳು 2025ರ ಮಾರ್ಚ್ ಆರಂಭದಿಂದಲೂ ಕುಡಿಯುವ ನೀರಿನ ತೀವ್ರ ಕೊರತೆಯನ್ನು ಎದುರಿಸುತ್ತಿವೆ. ಈ ಹಿಂದೆ ಜನ, ಜಾನುವಾರುಗಳಿಗೆ ಕುಡಿಯುವ ನೀರಿನ ಅಗತ್ಯಗಳನ್ನು ಪೂರೈಸಲು ಮಹಾರಾಷ್ಟ್ರ ಸರ್ಕಾರವು ಕೃಷ್ಣಾ ನದಿಯಿಂದ ನೀರನ್ನು ಬಿಡುಗಡೆ ಮಾಡಲು ಸಕಾರಾತ್ಮಕವಾಗಿ ಪ್ರತಿಕ್ರಿಯಿಸಿತ್ತು. ಇದಕ್ಕೆ ಕರ್ನಾಟಕ ಸರ್ಕಾರಧನ್ಯವಾದಗಳನ್ನು ಅರ್ಪಿಸುತ್ತದೆ.
ಪ್ರಸ್ತುತ ಬೇಸಿಗೆಯಲ್ಲಿ ತಾಪಮಾನ ಹೆಚ್ಚುತ್ತಿದೆ. ಅಲ್ಲದೇ ಹಿಪ್ಪರಗಿ ಬ್ಯಾರೇಜ್ ಮತ್ತು ಇತರ ಸ್ಥಳೀಯ ಜಲಾಶಯಗಳಲ್ಲಿ ಸದ್ಯ ಇರುವ ನೀರಿನ ಪ್ರಮಾಣ, ಮಳೆಗಾಲ ಪ್ರಾರಂಭವಾಗುವವರೆಗೆ ಕೃಷ್ಣಾ ಜಲಾನಯನ ಪ್ರದೇಶದ ಉತ್ತರ ಕರ್ನಾಟಕ ಜಿಲ್ಲೆಗಳ ಕುಡಿಯುವ ನೀರಿನ ಅಗತ್ಯಗಳನ್ನು ಪೂರೈಸಲು ಸಾಕಾಗುವುದಿಲ್ಲ. ಈ ಅಂಶಗಳನ್ನು ಗಮನದಲ್ಲಿಟ್ಟುಕೊಂಡು, ಕರ್ನಾಟಕದ ಉತ್ತರ ಜಿಲ್ಲೆಗಳ ಜನ ಮತ್ತು ಜಾನುವಾರುಗಳ ಕುಡಿಯುವ ನೀರಿನ ಅಗತ್ಯಗಳನ್ನು ಪೂರೈಸಲು ವಾರ್ಣಾ/ಕೊಯ್ನಾ ಜಲಾಶಯದಿಂದ ಕೃಷ್ಣಾ ನದಿಗೆ ಕನಿಷ್ಠ 2 ಟಿಎಂಸಿ ನೀರು ಮತ್ತು ಉಜ್ಜನಿ ಜಲಾಶಯದಿಂದ ಭೀಮಾ ನದಿಗೆ 1 ಟಿಎಂಸಿ ನೀರನ್ನು ಬಿಡುಗಡೆ ಮಾಡಲು ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡಬೇಕೆಂದು ವಿನಂತಿಸುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ.
ಈ ಸುದ್ದಿಯನ್ನೂ ಓದಿ | CN Ashwath Narayan: ರಾಜ್ಯದಲ್ಲಿ ವ್ಯವಸ್ಥಿತ ಸ್ಮಾರ್ಟ್ ಮೀಟರ್ ಹಗರಣ; ಕೇಂದ್ರದ ಪ್ರಮುಖ ನಿಯಮಾವಳಿಗಳ ಉಲ್ಲಂಘನೆ: ಅಶ್ವತ್ಥ ನಾರಾಯಣ್ ಆರೋಪ
ಇಂದು, ನಾಳೆ ರಾಜ್ಯದ ಉತ್ತರ ಒಳನಾಡಿನಲ್ಲಿ ಗುಡುಗು, ಬಿರುಗಾಳಿ ಸಹಿತ ಭಾರಿ ಮಳೆ!
ಬೆಂಗಳೂರು: ಕರಾವಳಿ ಕರ್ನಾಟಕ ಮತ್ತು ಉತ್ತರ ಒಳನಾಡಿನ ಕೆಲವೆಡೆ ಸೋಮವಾರ ಮಳೆಯಾಗಿದೆ. ಅದೇ ರೀತಿ ಏ.7ರವರೆಗೆ ರಾಜ್ಯದಲ್ಲಿ ಉತ್ತಮ ಮಳೆಯಾಗುವ ಮುನ್ಸೂಚನೆ ಸಿಕ್ಕಿದ್ದು, ಉತ್ತರ ಒಳನಾಡಿನಲ್ಲಿ ಭಾರಿ ಮಳೆ ಸಾಧ್ಯತೆ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆಯು ಆರೆಂಜ್ ಅಲರ್ಟ್ ಘೋಷಿಸಿದೆ. ಇನ್ನುಳಿದಂತೆ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲೂ ಮಳೆ ಅಬ್ಬರಿಸಲಿದೆ. ಹೀಗಾಗಿ ಈ ಭಾಗಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ಇನ್ನು ಮಂಗಳವಾರ (ಏ.1) ರಾತ್ರಿ ಕೂಡ ಕರಾವಳಿ ಜಿಲ್ಲೆಗಳು ಹಾಗೂ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ವರುಣ ಅಬ್ಬರಿಸುವ ಸಂಭವ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ ಮುಂದಿನ 48 ಗಂಟೆಗಳ ಕಾಲ ಭಾಗಶಃ ಮೋಡ ಕವಿದ ಆಕಾಶ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 32 °C ಮತ್ತು 21 ° C ಆಗುವ ಸಾಧ್ಯತೆ ಇದೆ.
ಮುಂದಿನ ಆರು ದಿನ ರಾಜ್ಯದ ಹಲವೆಡೆ ಭಾರಿ ಮಳೆ
ಏ.2ರಂದು ಬೆಳಗಾವಿ, ಧಾರವಾಡ, ಕಲಬುರಗಿ, ಬಾಗಲಕೋಟೆ, ಗದಗ, ಹಾವೇರಿ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ದಾವಣಗೆರೆ, ಚಿತ್ರದುರ್ಗ, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ರಾಮನಗರ, ಮಂಡ್ಯ, ಮೈಸೂರು, ಚಾಮರಾಜನಗರ, ಬೀದರ್, ಕೊಪ್ಪಳ, ಬಳ್ಳಾರಿ, ವಿಜಯಪುರ, ರಾಯಚೂರು ಹಾಗೂ ವಿಜಯಪುರ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಭಾರಿ ಮಳೆಯಾಗುವ (Karnataka Weather) ಸಾಧ್ಯತೆ ಇದೆ ಎಂದು ಭಾರತ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಏ.3ರಂದು ಬೆಳಗಾವಿ, ಧಾರವಾಡ, ಗದಗ ಮತ್ತು ಹಾವೇರಿ ಜಿಲ್ಲೆಗಳ ಪ್ರತ್ಯೇಕ ಸ್ಥಳಗಳಲ್ಲಿ ಗಂಟೆಗೆ 50-60 ಕಿಮೀ ವೇಗದ ಗಾಳಿಯೊಂದಿಗೆ ಭಾರೀ ಮಳೆ ಮತ್ತು ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲೆಗಳ ಪ್ರತ್ಯೇಕ ಸ್ಥಳಗಳಲ್ಲಿ 40-50 ಕಿಮೀ ವೇಗದ ಗಾಳಿಯೊಂದಿಗೆ ಸಾಧಾರಣ ಮಳೆ ಮತ್ತು ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಹಾಸನ, ಚಿಕ್ಕಮಗಳೂರು ಮತ್ತು ಕೊಡಗು ಜಿಲ್ಲೆಗಳ ಪ್ರತ್ಯೇಕ ಸ್ಥಳಗಳಲ್ಲಿ ಗಂಟೆಗೆ 40-50 ಕಿಮೀ ವೇಗದ ಗಾಳಿಯೊಂದಿಗೆ ಭಾರೀ ಮಳೆ / ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಕರ್ನಾಟಕದ ಜಿಲ್ಲೆಗಳಲ್ಲಿ ಹೆಚ್ಚಿನ ಸ್ಥಳಗಳಲ್ಲಿ ಗಂಟೆಗೆ 40-60 ಕಿ.ಮೀ ವೇಗದಲ್ಲಿ ಗಾಳಿಯೊಂದಿಗೆ ಹಗುರದಿಂದ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.
ಏ.4ರಂದು ಕೂಡ ಬೆಳಗಾವಿ, ಧಾರವಾಡ ಮತ್ತು ಹಾವೇರಿ, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಮತ್ತು ಕೊಡಗು, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡದಲ್ಲಿ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಒಳನಾಡಿನ ಜಿಲ್ಲೆಗಳಲ್ಲಿ ಹಲವೆಡೆ ಗಂಟೆಗೆ 40-60 ಕಿಮೀ ವೇಗದಲ್ಲಿ ಬಿರುಗಾಳಿ ಬೀಸುವ ಸಾಧ್ಯತೆ ಇದೆ.
ಏ.5ರಂದು ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಜಿಲ್ಲೆಗಳ ಪ್ರತ್ಯೇಕ ಸ್ಥಳಗಳಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ / ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಗಂಟೆಗೆ 40-50 ಕಿ.ಮೀ ವೇಗದಲ್ಲಿ ಬಿರುಗಾಳಿ ಸಹಿತ ಹಗುರದಿಂದ ಸಾಧಾರಣ ಮಳೆ / ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ, ಕರಾವಳಿ ಕರ್ನಾಟಕದ ಜಿಲ್ಲೆಗಳಲ್ಲಿ ಹೆಚ್ಚಿನ ಸ್ಥಳಗಳಲ್ಲಿ ಗಂಟೆಗೆ 30-40 ಕಿ.ಮೀ ವೇಗದಲ್ಲಿ ಬಿರುಗಾಳಿ ಬೀಸುವ ಸಾಧ್ಯತೆಯಿದೆ.
ಏ.6ರಂದು ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಜಿಲ್ಲೆಗಳ ಪ್ರತ್ಯೇಕ ಸ್ಥಳಗಳಲ್ಲಿ ಗಂಟೆಗೆ 30-40 ಕಿಮೀ ವೇಗದ ಗಾಳಿಯೊಂದಿಗೆ ಭಾರೀ ಮಳೆ / ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿ ಕರ್ನಾಟಕದ ಜಿಲ್ಲೆಗಳಲ್ಲಿ ಹಲವೆಡೆ, ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಮತ್ತು ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಪ್ರತ್ಯೇಕ ಸ್ಥಳಗಳಲ್ಲಿ ಗಂಟೆಗೆ 30-40 ಕಿಮೀ ವೇಗದಲ್ಲಿ ಗಾಳಿ ಸಹಿತ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
ಈ ಸುದ್ದಿಯನ್ನೂ ಓದಿ | Health Tips: ಬೇಸಿಗೆಯಲ್ಲಿ ಯಾವ ಬಗೆಯ ಚರ್ಮದ ಆರೈಕೆ ಹೇಗಿರಬೇಕು?
ಏ. 7ರಂದು ಕರಾವಳಿ ಕರ್ನಾಟಕದ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಮತ್ತು ಕರ್ನಾಟಕದ ಒಳನಾಡಿನ ಜಿಲ್ಲೆಗಳಲ್ಲಿ ಪ್ರತ್ಯೇಕ ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.