ಸ್ವಾತಂತ್ರ್ಯೋತ್ಸವ ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

CN Ashwath Narayan: ಹಿಂದೂಗಳ ಹಬ್ಬಕ್ಕೆ ಕಾಂಗ್ರೆಸ್‌ ಸರ್ಕಾರದಿಂದ ಅಡ್ಡಿ: ಅಶ್ವತ್ಥ ನಾರಾಯಣ್‌ ಆಕ್ರೋಶ

ಹಿಂದೂ ಸಮಾಜದ ಯಾವುದೇ ಹಬ್ಬಗಳು ಬಂದಾಗ ನಮ್ಮ ಭಾವನೆಗಳಿಗೆ ಧಕ್ಕೆ ಬರುವ ರೀತಿಯಲ್ಲಿ ಕಾಂಗ್ರೆಸ್ ಸರ್ಕಾರ ನಡೆದುಕೊಳ್ಳುತ್ತಿರುವುದು ಇದು ಒಂದೇ ಬಾರಿ ಅಲ್ಲ. ರಾಮ ಜನ್ಮಭೂಮಿಯಲ್ಲಿ ರಾಮಮಂದಿರ ನಿರ್ಮಾಣವಾಗಿ ಉದ್ಘಾಟನೆಯ ಸಂದರ್ಭದಲ್ಲೂ ಮನಬಂದಂತೆ ಮಾತನಾಡಿದ್ದರು. ಸನಾತನ ಧರ್ಮದ ವಿರುದ್ಧವಾಗಿ ಮಾತನಾಡಿದ್ದರು. ಗಣೇಶ ಚತುರ್ಥಿ ಸಂದರ್ಭದಲ್ಲಿ ಗಣೇಶನ ವಿಗ್ರಹವನ್ನೇ ಬಂಧಿಸಿರುವುದನ್ನು ನಾವು ನೋಡಿದ್ದೇವೆ ಎಂದು ಮಾಜಿ ಉಪಮುಖ್ಯಮಂತ್ರಿ ಹಾಗೂ ಶಾಸಕ ಡಾ. ಸಿ.ಎನ್. ಅಶ್ವತ್ಥ ನಾರಾಯಣ್ ಟೀಕಿಸಿದ್ದಾರೆ.

ತೆರಿಗೆ ಹಣವನ್ನು ರಾಜ್ಯ ಸರ್ಕಾರ ಲೂಟಿ ಮಾಡುತ್ತಿದೆ: ಅಶ್ವತ್ಥ ನಾರಾಯಣ್‌

Profile Siddalinga Swamy Aug 21, 2025 9:02 PM

ಬೆಂಗಳೂರು: ರಾಜ್ಯದ ಕಾಂಗ್ರೆಸ್ ಸರ್ಕಾರವು ತೆರಿಗೆ ಹಣವನ್ನು ಪಕ್ಷದ ಹಣ ಎಂದುಕೊಂಡಿದೆ. ತೆರಿಗೆ ಹಣ ದುರ್ಬಳಕೆ ಮಾಡುತ್ತಿರುವುದು ಖಂಡನೀಯ ಎಂದು ಮಾಜಿ ಉಪಮುಖ್ಯಮಂತ್ರಿ ಹಾಗೂ ಶಾಸಕ ಡಾ. ಸಿ.ಎನ್. ಅಶ್ವತ್ಥನಾರಾಯಣ್ (CN Ashwath Narayan) ಆರೋಪಿಸಿದ್ದಾರೆ. ನಗರದಲ್ಲಿ ಮಾಧ್ಯಮಗಳ ಜತೆ ಗುರುವಾರ ಮಾತನಾಡಿದ ಅವರು, ಸರ್ಕಾರ ಜವಾಬ್ದಾರಿಯುತವಾಗಿದ್ದರೆ, ತೆರಿಗೆದಾರರ ಒಂದು ರೂಪಾಯಿ ಹಣವನ್ನೂ ದುರ್ಬಳಕೆ ಮಾಡಬಾರದು. ಆದರೆ ಕಾಂಗ್ರೆಸ್ ಸರ್ಕಾರ ಮಾಡುತ್ತಿದೆ ಎಂದು ದೂರಿದ ಅವರು, ನಾವು ಈ ಸರ್ಕಾರಕ್ಕೆ ಎಷ್ಟು ಹೇಳಿದರೂ ಮಾಡುವುದನ್ನು ಮಾಡುತ್ತೇವೆ ಎಂದು ಹೇಳುತ್ತಾರೆ. ಇದನ್ನು ನಾವು ಸಂಪೂರ್ಣವಾಗಿ ಖಂಡಿಸುತ್ತೇವೆ ಎಂದು ತಿಳಿಸಿದರು.

ಹಿಂದೂ ಸಮಾಜದ ಯಾವುದೇ ಹಬ್ಬಗಳು ಬಂದಾಗ ನಮ್ಮ ಭಾವನೆಗಳಿಗೆ ಧಕ್ಕೆ ಬರುವ ರೀತಿಯಲ್ಲಿ ಕಾಂಗ್ರೆಸ್ ಸರ್ಕಾರ ನಡೆದುಕೊಳ್ಳುತ್ತಿರುವುದು ಇದು ಒಂದೇ ಬಾರಿ ಅಲ್ಲ. ರಾಮ ಜನ್ಮಭೂಮಿಯಲ್ಲಿ ರಾಮಮಂದಿರ ನಿರ್ಮಾಣವಾಗಿ ಉದ್ಘಾಟನೆಯ ಸಂದರ್ಭದಲ್ಲೂ ಮನಬಂದಂತೆ ಮಾತನಾಡಿದ್ದರು. ಸನಾತನ ಧರ್ಮದ ವಿರುದ್ಧವಾಗಿ ಮಾತನಾಡಿದ್ದರು. ಗಣೇಶ ಚತುರ್ಥಿ ಸಂದರ್ಭದಲ್ಲಿ ಗಣೇಶನ ವಿಗ್ರಹವನ್ನೇ ಬಂಧಿಸಿರುವುದನ್ನು ನಾವು ನೋಡಿದ್ದೇವೆ ಎಂದು ಟೀಕಿಸಿದರು.

ರಾಜ್ಯದ ಕೆಲವು ಜಿಲ್ಲೆಗಳಲ್ಲಿ ದೈವದ ಕಾರ್ಯಕ್ರಮಗಳು ಮತ್ತು ಬೇರೆ ಬೇರೆ ಸಾಂಸ್ಕೃತಿಕ ಕಾರ್ಯಕ್ರಮಗಳು ಪ್ರಾರಂಭವಾಗುವುದೇ ರಾತ್ರಿ. ಇಂತಹ ಎಲ್ಲ ಕಾರ್ಯಕ್ರಮಗಳಿಗೂ ಕಡಿವಾಣ ಹಾಕುತ್ತಿದ್ದಾರೆ. ಗಣೇಶನ ಚತುರ್ಥಿಗೆ ನಿರ್ಬಂಧಗಳನ್ನು ಹೇರುತ್ತಿದ್ದಾರೆ. ಇದನ್ನು ಪ್ರಶ್ನಿಸಿದಾಗ ಇದೆಲ್ಲವನ್ನು ನೀವು ಚರ್ಚೆ ಮಾಡುವ ಹಾಗಿಲ್ಲ ಮತ್ತು ಕೇಳುವ ಹಾಗಿಲ್ಲ ಅನ್ನುವ ಮಾತುಗಳನ್ನು ಆಡಳಿತಾರೂಢ ಕಾಂಗ್ರೆಸ್ ನಾಯಕರು ಮಾತನಾಡುತ್ತಿದ್ದಾರೆ ಎಂದು ಆರೋಪಿಸಿದರು.

ಸುಪ್ರೀಂ ಕೋರ್ಟ್ ಆದೇಶದಲ್ಲಿ ಯಾವುದೇ ಆಜಾನ್ ಬಳಕೆ ಮಾಡುವುದಕ್ಕೆ ಕಾನೂನಾತ್ಮಕ ಅವಕಾಶವಿಲ್ಲ. ಅದರೂ ಅದಕ್ಕೆ ಕಾನೂನು ಅನ್ವಯ ಮಾಡುವುದಿಲ್ಲ. ಇಂದು ಕಾನೂನು ಪಾಲನೆ ಮಾಡುವವರಿಗೆ ಸರ್ಕಾರ ಹೆಚ್ಚು ಹೆಚ್ಚು ಬರೆಯನ್ನು ಎಳೆಯುತ್ತಿದೆ. ಇಂತಹವುಗಳನ್ನು ನಾವು ಖಂಡಿಸುತ್ತೇವೆ ಎಂದು ತಿಳಿಸಿದರು.

ಈ ಸುದ್ದಿಯನ್ನೂ ಓದಿ | Online Gaming Bill 2025: ಆನ್‌ಲೈನ್‌ ಗೇಮಿಂಗ್‌ ಮಸೂದೆಗೆ ರಾಜ್ಯಸಭೆಯಲ್ಲೂ ಅಂಗೀಕಾರ

ಮತ ನೀಡಿರುವವರ ಭಾವನೆಗಳನ್ನು ಕಡೆಗಣಿಸುವುದು, ತುಷ್ಟೀಕರಣದ ರಾಜಕಾರಣ ಮಾಡುತ್ತಾ ಇರುವ ಸರ್ಕಾರದ ನಡವಳಿಕೆಯು ಸರಿಯಿಲ್ಲ. ಎಲ್ಲರ ಭಾವನೆಗಳನ್ನು ಗೌರವಿಸಿ, ಎಲ್ಲ ರೀತಿಯಲ್ಲಿ ವ್ಯವಸ್ಥಿತವಾಗಿ ಕಾರ್ಯಕ್ರಮಗಳನ್ನು ಜರುಗಿಸುವುದಕ್ಕೆ ರಾಜ್ಯ ಸರ್ಕಾರ ಸಹಕಾರ ಕೊಡಬೇಕು ಎಂದು ಮಾಜಿ ಉಪಮುಖ್ಯಮಂತ್ರಿ ಹಾಗೂ ಶಾಸಕ ಡಾ. ಸಿ.ಎನ್. ಅಶ್ವತ್ಥ ನಾರಾಯಣ್ ಆಗ್ರಹಿಸಿದರು.