ಯುಗಾದಿ ಹಬ್ಬ ಐಪಿಎಲ್​ ಸುನಿತಾ ವಿಲಿಯಮ್ಸ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Doddaballapur News: ನಿರಾಶ್ರಿತರ ನಿವೇಶನದಲ್ಲಿ ಅಕ್ರಮವಾಗಿ ಮನೆ ನಿರ್ಮಾಣ; ಬಿಲ್ ಕಲೆಕ್ಟರ್ ವಿರುದ್ಧ ದೂರು

Doddaballapur News: ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ ಗ್ರಾಮ ಪಂಚಾಯಿತಿ ಬಿಲ್ ಕಲೆಕ್ಟರ್ ಪ್ರಭಾವತಿ ವಿರುದ್ಧ ದೂರು ದಾಖಲಾಗಿದೆ. ತಮ್ಮ ಹೆಸರಿಗೆ ಹಂಚಿಕೆಯಾಗಿದ್ದ ನಿವೇಶನದಲ್ಲಿ ಅಕ್ರಮವಾಗಿ ಮನೆ ನಿರ್ಮಾಣ ಮಾಡುತ್ತಿದ್ದಾರೆ ಎಂದು ಮಹಿಳೆಯೊಬ್ಬರು ಆರೋಪಿಸಿದ್ದಾರೆ.

ಅಕ್ರಮವಾಗಿ ಮನೆ ನಿರ್ಮಾಣ; ಬಿಲ್ ಕಲೆಕ್ಟರ್ ವಿರುದ್ಧ ದೂರು

Profile Prabhakara R Feb 9, 2025 7:32 PM

ದೊಡ್ಡಬಳ್ಳಾಪುರ: ನಿರಾಶ್ರಿತರಿಗೆ ಹಂಚಿಕೆ ಮಾಡಿದ್ದ ನಿವೇಶನದಲ್ಲಿ ಅಕ್ರಮವಾಗಿ ಮನೆ ನಿರ್ಮಾಣ ಮಾಡುತ್ತಿದ್ದಾರೆ ಎಂಬ ಆರೋಪದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ (Doddaballapur News) ತಾಲೂಕಿನ ದೊಡ್ಡಬೆಳವಂಗಲ ಗ್ರಾಮ ಪಂಚಾಯಿತಿ ಬಿಲ್ ಕಲೆಕ್ಟರ್ ಪ್ರಭಾವತಿ ವಿರುದ್ಧ ದೂರು ದಾಖಲಾಗಿದೆ. ತಮ್ಮ ಹೆಸರಿಗೆ ಹಂಚಿಕೆಯಾಗಿದ್ದ ನಿವೇಶನದಲ್ಲಿ ಅಕ್ರಮವಾಗಿ ಮನೆ ನಿರ್ಮಾಣ ಮಾಡುತ್ತಿದ್ದಾರೆ ಎಂದು ಆರೋಪಿಸಿ ಬಿಲ್ ಕಲೆಕ್ಟರ್ ಪ್ರಭಾವತಿ ಮತ್ತು ಪತಿ ನಂಜಪ್ಪ ವಿರುದ್ಧ ಸರಸ್ವತಮ್ಮ ಎಂಬುವವರು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ, ದೊಡ್ಡಬೆಳವಂಗಲ ಪಿಡಿಒ ಹಾಗೂ ದೊಡ್ಡಬೆಳವಂಗಲ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ದೊಡ್ಡಬೆಳವಂಗಲ ಗ್ರಾಮ ಪಂಚಾಯಿತಿಯಲ್ಲಿ ಸರಸ್ವತಮ್ಮ ಹೆಸರಲ್ಲಿ ಖಾತೆಯೂ ಇದ್ದು, 2021ರವರೆಗೆ ಕಂದಾಯವನ್ನು ಬಿಲ್ ಕಲೆಕ್ಟರ್ ಪ್ರಭಾವತಿ ಕಟ್ಟಿಸಿಕೊಂಡಿದ್ದರು. ಆದರೆ ವೈಯಕ್ತಿಕ ಪ್ರಭಾವದಿಂದ ಅದೇ ಜಾಗಕ್ಕೆ ಅತಿಕ್ರಮ ಪ್ರವೇಶ ಮಾಡಿ, ನಕಲಿ ದಾಖಲೆ ಸೃಷ್ಟಿಸಿ ಅತಿಕ್ರಮಣಕ್ಕೆ ಮುಂದಾಗಿದ್ದಾರೆ ಎನ್ನಲಾಗಿದೆ.

ಗ್ರಾಮ ಪಂಚಾಯಿತಿಯಲ್ಲಿ ಖಾತೆ ಇರುವ ನಿವೇಶನದಲ್ಲಿ ಅಲ್ಲಿನ ಬಿಲ್ ಕಲೆಕ್ಟರ್ ಅಕ್ರಮವಾಗಿ ಮನೆ ನಿರ್ಮಾಣ ಮಾಡುತಿದ್ದರೂ ಪಿಡಿಒ ಸುಮ್ಮನೆ ಕುಳಿತಿರುವುದೇಕೆ ಎಂದು ಸ್ಥಳೀಯರು ಪ್ರಶ್ನಿಸಿದ್ಧಾರೆ. ಬಿಲ್ ಕಲೆಕ್ಟರ್ ಪ್ರಭಾವತಿ ಸಾಕ್ಷ್ಯ ನಾಶ ಮಾಡುವ ಸಂಭವವಿರುವುದರಿಂದ ಕೂಡಲೇ ಅವರ ವಿರುದ್ಧ ಕಾನೂನು ಕ್ರಮ ತೆಗೆದುಕೊಂಡು, ಅಮಾನತು ಮಾಡಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

ಈ ಸುದ್ದಿಯನ್ನೂ ಓದಿ | Aarushi Nishank: ಹಿರೋಯಿನ್ ಮಾಡುತ್ತೇವೆಂದು ಮಾಜಿ ಸಿಎಂ ಪುತ್ರಿಗೆ ವಂಚನೆ: 4 ಕೋಟಿ‌ ರೂ. ಪಂಗನಾಮ!

ಅಕ್ರಮ ಗ್ಯಾಸ್ ಸಿಲಿಂಡರ್ ಫಿಲ್ಲಿಂಗ್: ಆರೋಪಿ ಬಂಧನ, 137 ಸಿಲಿಂಡರ್‌ ವಶ

Koratagere News

ಕೊರಟಗೆರೆ: ಕೋಳಿ ಶೆಡ್‌ನಲ್ಲಿ ಅಕ್ರಮವಾಗಿ ಗ್ಯಾಸ್ ಸಿಲಿಂಡರ್ ಫಿಲ್ಲಿಂಗ್ ಅಡ್ಡೆಯ ಮೇಲೆ ಕೊರಟಗೆರೆ ಪಿಎಸ್‌ಐ ಚೇತನ್‌ ಕುಮಾರ್ ನೇತೃತ್ವದ ತಂಡ ದಾಳಿ ನಡೆಸಿ, 137 ಸಿಲಿಂಡರ್, ಒಂದು ಟಾಟಾ ಇಂಟ್ರಾ ಗೂಡ್ಸ್ ಗಾಡಿ ಸಮೇತ ಆರೋಪಿಯನ್ನು ಬಂಧಿಸಿರುವ ಘಟನೆ ತಾಲೂಕಿನ (Koratagere News) ಸಿ.ಎನ್.ದುರ್ಗ ಹೋಬಳಿಯ ಬುಕ್ಕಾಪಟ್ಟಣ ಬಳಿ ಶನಿವಾರ ತಡರಾತ್ರಿ ಜರುಗಿದೆ.

ಕೊರಟಗೆರೆ ತಾಲೂಕಿನ ಸಿ.ಎನ್.ದುರ್ಗ ಹೋಬಳಿಯ ಬುಕ್ಕಾಪಟ್ಟಣ ಸಮೀಪ ಬುಕ್ಕಾಪಟ್ಟಣ ಸರ್ವೆ ನಂ.98 ರಲ್ಲಿ ಫಾತಿಮಾ ಬಿನ್ ಸೈಯದ್ ಜಮೀಲ್ ಬಾಷ ಎನ್ನುವವರಿಗೆ ಸೇರಿದ ಕೋಳಿ ಫಾರಂ ಶೆಡ್‌ನಲ್ಲಿ ಅಕ್ರಮವಾಗಿ ಸಿಲಿಂಡರ್‌ಗಳನ್ನು ಫಿಲ್ಲಿಂಗ್ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿಯ ಮೇರೆಗೆ ಪಿಎಸ್‌ಐ ಚೇತನ್‌ ಕುಮಾರ್ ಅವರ ತಂಡ ದಾಳಿ ನಡೆಸಿ, ಬಡವರಿಗೆ ನೀಡುವ ಉಜ್ವಲ್ ಯೋಜನೆಯ ಗೃಹ ಬಳಕೆಯ 75 ಸಿಲಿಂಡರ್ ಹಾಗೂ 62 ಕಮರ್ಷಿಯಲ್ ಸಿಲಿಂಡರ್‌ಗಳನ್ನು ಹಾಗೂ ಒಂದು ಗೂಡ್ಸ್ ಗಾಡಿ ಮತ್ತು ಆಕ್ಟೀವಾ ಬೈಕ್ ವಶಪಡಿಸಿಕೊಂಡಿದ್ದಾರೆ. ದಾಳಿ ವೇಳೆ ರಘು ಎಂಬ ಆರೋಪಿಯನ್ನು ಪೊಲೀಸರು ಬಂಧಿಸಿದ್ದು, ಇಬ್ಬರು ಆರೋಪಿಗಳು ಪರಾರಿಯಾಗಿದ್ದಾರೆ ಎಂದು ತಿಳಿದು ಬಂದಿದೆ.

ಈ ಸುದ್ದಿಯನ್ನೂ ಓದಿ | Honeytrap Case: ಪ್ರೀತಿ, ಮದುವೆ ಹೆಸರಲ್ಲಿ ನಾಲ್ವರಿಗೆ ವಂಚನೆ; ಮಹಿಳೆ ವಿರುದ್ಧ ಕೇಸ್‌ ದಾಖಲು

ಘಟನಾ ಸ್ಥಳಕ್ಕೆ ಮಧುಗಿರಿ ಡಿವೈಎಸ್ಪಿ ಮಂಜುನಾಥ್, ಸಿಪಿಐ ಅನಿಲ್, ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ದಾಳಿ ವೇಳೆ ಸಿಬ್ಬಂದಿಗಳಾದ ಎಎಸ್‌ಐ ಗಂಗಾಧರಪ್ಪ, ಪೇದೆಗಳಾದ ದೊಡ್ಡಲಿಂಗಯ್ಯ, ಮೋಹನ್, ದಯಾನಂದ್, ರಾಮಚಂದ್ರ, ನವೀನ್, ಸಿದ್ದರಾಮು ಸೇರಿದಂತೆ ಇತರರು ಇದ್ದರು.