ಫೋಟೋ ಗ್ಯಾಲರಿ ಬಜೆಟ್​ T20 ವಿಶ್ವಕಪ್​ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ವಿದೇಶ ಕ್ರೈಂ ಧಾರ್ಮಿಕ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

Karnataka Politics: ಇಂದು ಕಾಂಗ್ರೆಸ್‌ ಹೈಕಮಾಂಡ್‌ ಮಹತ್ವದ ಮೀಟಿಂಗ್‌, ಖರ್ಗೆ ದಿಲ್ಲಿಗೆ ದೌಡು

ದೆಹಲಿಯ ಕಾಂಗ್ರೆಸ್‌ ಭವನದಲ್ಲಿ ಇಂದು ರಾಜ್ಯ ಕಾಂಗ್ರೆಸ್ ಪಾಲಿನ ನಿರ್ಣಾಯಕ ಸಭೆ ನಡೆಯಲಿದೆ. ಸಿಎಂ ಸ್ಥಾನಕ್ಕಾಗಿ ಬಣ ಬಡಿದಾಟಕ್ಕೆ ಬ್ರೇಕ್‌ ಹಾಕುವ, ಅಂತಿಮ ನಿರ್ಣಯ ಕೈಗೊಳ್ಳುವ ಸಾಧ್ಯತೆಯಿದೆ. ಅದಕ್ಕಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ (Rahul Gandhi), ವೇಣುಗೋಪಾಲ್ ಹಾಗೂ ರಾಜ್ಯ ಉಸ್ತುವಾರಿ ರಣದೀಪ್‌ ಸುರ್ಜೇವಾಲ ಒಟ್ಟು ಸೇರಿ ಇಂದು ಸಭೆ ನಡೆಸಲಿದ್ದಾರೆ ಎಂದು ತಿಳಿದುಬಂದಿದೆ.

ಕಾಂಗ್ರೆಸ್‌ ಹೈಕಮಾಂಡ್‌ ಸಭೆ

ನವದೆಹಲಿ, ನ.27: ರಾಜ್ಯ ಕಾಂಗ್ರೆಸ್‌ನಲ್ಲಿ (Karnataka Congress) ಸಿಎಂ ಸ್ಥಾನದ ಕುರಿತ ಬಣ ರಾಜಕೀಯ (karnataka politics) ಹಾಗೂ ಸಂಪುಟ ಸ್ಥಾನಾಕಾಂಕ್ಷಿಗಳ ಅಬ್ಬರ ಇದೀಗ ಕ್ಲೈಮ್ಯಾಕ್ಸ್‌ ಹಂತಕ್ಕೆ ಬಂದು ನಿಂತಿದೆ. ಇದೇ ಶನಿವಾರ ರಾಹುಲ್ ಗಾಂಧಿ (Rahul gandhi) ನೇತೃತ್ವದಲ್ಲಿ ಹೈಕಮಾಂಡ್‌ನ ಮಹತ್ವದ ಸಭೆ ನಡೆಯಲಿದೆ. ಸಿಎಂ ಸಿದ್ದರಾಮಯ್ಯ (CM Siddaramaiah) ಹಾಗೂ ಡಿಸಿಎಂ ಡಿಕೆ ಶಿವಕುಮಾರ್‌ (DCM DK Shivakumar) ಇಬ್ಬರೂ ಸಭೆಗೆ ತೆರಳುವ ಸಾಧ್ಯತೆಯಿದ್ದು, ಇನ್ನೆರಡು ದಿನಗಳಲ್ಲಿ ಸಂಧಾನ ಸೂತ್ರ ಹೊರಬೀಳಲಿದೆ. ಸಿಎಂ- ಡಿಸಿಎಂ ಮುಖಾಮುಖಿಗೂ ಮುನ್ನ ಹೈಕಮಾಂಡ್‌ ಇಂದು ನಿರ್ಣಾಯಕ ಸಭೆ ನಡೆಸಲಿದೆ ಎಂದು ಪಕ್ಷದ ಆಪ್ತ ಮೂಲಗಳು ತಿಳಿಸಿವೆ.

ದೆಹಲಿಯ ಕಾಂಗ್ರೆಸ್‌ ಭವನದಲ್ಲಿ ಇಂದು ರಾಜ್ಯ ಕಾಂಗ್ರೆಸ್ ಪಾಲಿನ ನಿರ್ಣಾಯಕ ಸಭೆ ನಡೆಯಲಿದ್ದು, ಯಾರು ಸಿಎಂ ಆಗಿರಬೇಕು ಎಂಬುದರ ಬಗ್ಗೆ ನಿರ್ಣಯ ಕೈಗೊಳ್ಳುವ ಸಾಧ್ಯತೆಯಿದೆ. ಅದಕ್ಕಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ, ವೇಣುಗೋಪಾಲ್ ಹಾಗೂ ರಾಜ್ಯ ಉಸ್ತುವಾರಿ ರಣದೀಪ್‌ ಸುರ್ಜೇವಾಲ ಒಟ್ಟು ಸೇರಿ ಇಂದು ಸಭೆ ನಡೆಸಲಿದ್ದಾರೆ ಎಂದು ತಿಳಿದುಬಂದಿದೆ. ಇಂದಿನ ಸಭೆಯಲ್ಲಿ, ಪವರ್ ಶೇರಿಂಗ್ ವಿಚಾರದಲ್ಲಿ ಹೈಕಮಾಂಡ್ ನಿಲುವು ಏನಿರಬೇಕು ಎಂಬ ವಿಚಾರದಲ್ಲಿ ಒಂದು ಸ್ಪಷ್ಟತೆಗೆ ಬರುವ ಸಾಧ್ಯತೆ ಇದೆ ಎನ್ನಲಾಗಿದೆ.

ಸಿಎಂ- ಡಿಸಿಎಂ ಇಬ್ಬರ ನಡುವಿನ ಸಂಧಾನ ಸೂತ್ರಕ್ಕೆ ಯಾವ ಮಾನದಂಡ, ಏನು ಸೂತ್ರ ಎಂಬುದನ್ನು ಹೈಕಮಾಂಡ್ ಇಂದು ನಿಗದಿ ಮಾಡುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ. ಈ ಹಿಂದೆ ಸಿಎಂ ಸ್ಥಾನದ ಅಧಿಕಾರಾವಧಿಯನ್ನು 50:50 ಎಂದು ಹಂಚಲಾಗಿದೆ ಎಂಬುದನ್ನು ಕ್ಯಾಬಿನೆಟ್‌ನ ಹಲವು ಸಚಿವರೇ ನಿರಾಕರಿಸಿದ್ದರು. ಅಂಥ ಒಪ್ಪಂದ ಆಗಿತ್ತಾ ಎಂಬುದನ್ನು ಸ್ವತಃ ಡಿಕೆ ಶಿವಕುಮಾರ್‌ ಕೂಡ ಸ್ಪಷ್ಟಪಡಿಸಿರಲಿಲ್ಲ. ಆದರೆ ಡಿಕೆ ಶಿವಕುಮಾರ್‌ ಬಣದವರು ಅಧಿಕಾರಕ್ಕಾಗಿ ಒತ್ತಡ ತಂತ್ರದ ಮೊರೆ ಹೋಗಿದ್ದರು. ಪ್ರತಿಯಾಗಿ ಸಿದ್ದರಾಮಯ್ಯ ಬಣದವರು ಕೂಡ ಡಿನ್ನರ್‌ ಮೀಟಿಂಗ್‌ ಇತ್ಯಾದಿ ನಡೆಸಿದ್ದರು.

ʼ50:50' ಒಪ್ಪಂದ ಆಗಿಲ್ಲ ಎಂದ ಕೆಜೆ ಜಾರ್ಜ್

ನಿನ್ನೆ ದೆಹಲಿಯಿಂದ ಬೆಂಗಳೂರಿಗೆ ಬರುವಾಗ ಮಲ್ಲಿಕಾರ್ಜುನ ಖರ್ಗೆಗೆ ರಾಹುಲ್ ಗಾಂಧಿ ದೂರವಾಣಿ ಕರೆ ಮಾಡಿ ಸುಮಾರು 20 ನಿಮಿಷಗಳ ಚರ್ಚೆ ನಡೆಸಿದ್ದಾರೆ. ಅಲ್ಲದೇ ಇಂದು (ಗುರುವಾರ) ಬೆಂಗಳೂರಿಂದ ಮತ್ತೆ ದೆಹಲಿಗೆ ಖರ್ಗೆ ಹೋಗಲಿದ್ದು, ರಾಹುಲ್ ಗಾಂಧಿ, ವೇಣುಗೋಪಾಲ್, ಸುರ್ಜೇವಾಲ ಸಂಜೆ ಹೈವೋಲ್ಟೇಜ್ ಮೀಟಿಂಗ್ ನಡೆಸಲಿದ್ದಾರೆ.

ನ.29ರ ಸಭೆಗೂ ಮೊದಲು ರಾಜ್ಯದ ಬೆಳವಣಿಗೆಯ ಬಗ್ಗೆ ಹೈಕಮಾಂಡ್ ನಾಯಕರು ಗಂಭೀರವಾಗಿ ಚರ್ಚಿಸಲಿದ್ದಾರೆ. ಕಾಂಗ್ರೆಸ್‌ನಲ್ಲಿರುವ ಸಮಸ್ಯೆಯನ್ನು ಮೊದಲ ಬಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಒಪ್ಪಿಕೊಂಡಿದ್ದಾರೆ. ಪಕ್ಷದಲ್ಲಿ ಸಮಸ್ಯೆ ಇದೆ. ಹೈಕಮಾಂಡ್ ಮದ್ದರೆಯಲಿದೆ ಅಂದಿದ್ದಾರೆ.

ಸಿಎಂ ಕುರ್ಚಿಗಿಂತ ಪಕ್ಷ ಮತ್ತೆ ಅಧಿಕಾರಕ್ಕೆ ತರುವುದೇ ಮುಖ್ಯ: ಡಿಕೆಶಿ

ಹರೀಶ್‌ ಕೇರ

View all posts by this author