ಬೆಂಗಳೂರು: ಮಾಜಿ ಸಚಿವ, ಕಾಂಗ್ರೆಸ್ ಶಾಸಕ (Congres MLA) ಎಚ್.ವೈ ಮೇಟಿ (HY Meti) ಅವರು ನಿಧನ ಹೊಂದಿದ್ದಾರೆ. ಬೆಂಗಳೂರಿನ ಜಯನಗರದ ಖಾಸಗಿ ಆಸ್ಪತ್ರೆಯಲ್ಲಿ ಅನಾರೋಗ್ಯಕ್ಕೆ ಚಿಕಿತ್ಸೆ ಪಡೆಯುತ್ತಿದ್ದ ಎಚ್.ವೈ ಮೇಟಿ, ಚಿಕಿತ್ಸೆ ಫಲಕಾರಿಯಾಗದೇ ಇಂದು ನಿಧನರಾಗಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರ ಆಪ್ತರಾಗಿದ್ದ ಎಚ್.ವೈ ಮೇಟಿ ಅವರು ತೀವ್ರ ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದರು. ಅವರಿಗೆ 80 ವರ್ಷ ವಯಸ್ಸಾಗಿತ್ತು.
ಎಚ್.ವೈ ಮೇಟಿ (ಹುಲ್ಲಪ್ಪ ಯಮನಪ್ಪ ಮೇಟಿ) 2023ರ ವಿಧಾನಸಭೆ ಚುನಾವಣೆಯಲ್ಲಿ ಬಾಗಲಕೋಟೆ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಯ ವೀರಣ್ಣ ಚರಂತಿಮಠರನ್ನು ಸೋಲಿಸಿ ವಿಧಾನಸಭೆಗೆ ಆಯ್ಕೆಯಾಗಿದ್ದರು. 2018ರ ವಿಧಾನಸಭಾ ಚುನಾವಣೆಯಲ್ಲಿ ಸೋತಿದ್ದರು. ಈ ಹಿಂದೆ 2013ರಿಂದ 2016 ರವರೆಗಿನ ಸಿದ್ದರಾಮಯ್ಯ ಸರ್ಕಾರದಲ್ಲಿ ಎಚ್.ವೈ ಮೇಟಿ ಅಬಕಾರಿ ಖಾತೆ ಮಂತ್ರಿಯಾಗಿದ್ದರು. ಆ ವೇಳೆ ಲೈಂಗಿಕ ಹಗರಣದಲ್ಲಿ ಸಿಲುಕಿ ಕ್ಯಾಬಿನೆಟ್ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.
ಇದನ್ನೂ ಓದಿ: Gubbi News: ಹಳ್ಳಿಕಾರ್ ತಳಿ ರಾಸುಗಳ ಪಾಲಕ ಸಿ.ಜಿ.ಕೃಷ್ಣಮೂರ್ತಿ ನಿಧನ