Coorg News: ತಡಿಯಂಡಮೋಳ್ ಚಾರಣಕ್ಕೆ ಹೋದ ಯುವತಿ ನಾಪತ್ತೆ
ಆನ್‌ಲೈನ್‌ನಲ್ಲಿ ಬುಕ್ಕಿಂಗ್ ಮಾಡಿ ಬಂದಿದ್ದ ಶರಣ್ಯ ಒಬ್ಬರೇ ಬಂದಿದ್ದರು. ಈ ವ್ಯಾಪ್ತಿಯಲ್ಲಿ ಕಾಡಾನೆ ಹಾವಳಿ ಇರುವುದರಿಂದ ಬೇರೆ ಪ್ರವಾಸಿಗರ ಜೊತೆಯಲ್ಲಿ ಕಳುಹಿಸಲಾಗಿದೆ. ಬೆಟ್ಟಕ್ಕೆ ತೆರಳಿದ್ದ ಇತರ ಪ್ರವಾಸಿಗರು ಹಿಂತಿರುಗಿ ಬಂದರೂ ಶರಣ್ಯ ಹಿಂತಿರುಗಿ ಬಾರದ ಕಾರಣ ಅರಣ್ಯ ಇಲಾಖೆ ಸಿಬ್ಬಂದಿಗೆ ಸ್ಥಳೀಯರು ವಿಷಯ ತಿಳಿಸಿದ್ದಾರೆ.
ನಾಪತ್ತೆಯಾದ ಶರಣ್ಯ -
ಮಡಿಕೇರಿ, ಏ.03: ಕೊಡಗಿನ (Coorg News) ತಡಿಯಂಡಮೋಳ್ ಬೆಟ್ಟಕ್ಕೆ (Tadiandamol Peak) ಟ್ರೆಕ್ಕಿಂಗ್‌ಗೆ (Trekking) ತೆರಳಿದ್ದ ಮಹಿಳೆ ನಾಪತ್ತೆಯಾಗಿರುವ ಘಟನೆ ತಿಳಿದುಬಂದಿದೆ. ಶರಣ್ಯ (36) ನಾಪತ್ತೆಯಾದ ಮಹಿಳೆ. ಯವಕಪಾಡಿ ಗ್ರಾಮದ ಖಾಸಗಿ ಹೋಂಸ್ಟೇಯಲ್ಲಿ ತಂಗಿದ್ದು, ಅಲ್ಲಿಂದ ಚಾರಣಕ್ಕೆ ಹೊರಟಿದ್ದರು ಎಂದು ಹೇಳಲಾಗಿದೆ.
ಆನ್‌ಲೈನ್‌ನಲ್ಲಿ ಬುಕ್ಕಿಂಗ್ ಮಾಡಿ ಬಂದಿದ್ದ ಶರಣ್ಯ ಒಬ್ಬರೇ ಬಂದಿದ್ದರು. ಈ ವ್ಯಾಪ್ತಿಯಲ್ಲಿ ಕಾಡಾನೆ ಹಾವಳಿ ಇರುವುದರಿಂದ ಬೇರೆ ಪ್ರವಾಸಿಗರ ಜೊತೆಯಲ್ಲಿ ಕಳುಹಿಸಲಾಗಿದೆ. ಬೆಟ್ಟಕ್ಕೆ ತೆರಳಿದ್ದ ಇತರ ಪ್ರವಾಸಿಗರು ಹಿಂತಿರುಗಿ ಬಂದರೂ ಶರಣ್ಯ ಹಿಂತಿರುಗಿ ಬಾರದ ಕಾರಣ ಅರಣ್ಯ ಇಲಾಖೆ ಸಿಬ್ಬಂದಿಗೆ ಸ್ಥಳೀಯರು ವಿಷಯ ತಿಳಿಸಿದ್ದಾರೆ.
ಈ ಬಗ್ಗೆ ಅಲ್ಲಿಯ ಸ್ಥಳೀಯ ನಿವಾಸಿ ಕುಡಿಯರ ಮುತ್ತಪ್ಪ ಎಂಬವರು ಪೊಲೀಸರಿಗೆ ವಿಷಯ ತಿಳಿಸಿದ್ದಾರೆ. ಬಳಿಕ ಅರಣ್ಯ ಇಲಾಖೆಯವರು ಹಾಗೂ ಪೊಲೀಸರು, ಗ್ರಾಮಸ್ಥರು ಬೆಟ್ಟದಲ್ಲೆಲ್ಲ ಹುಡುಕಾಡಿದರೂ ಮಹಿಳೆಯ ಸುಳಿವು ದೊರೆತಿಲ್ಲ. ಇಂದು ಮತ್ತೆ ಮಹಿಳೆಗಾಗಿ ಶೋಧ ನಡೆಸಲಾಗುತ್ತಿದೆ. ಮಹಿಳೆಯ ಮೊಬೈಲ್ ಕೇರಳ ನೆಟ್ವರ್ಕ್‌ನಲ್ಲಿರುದಾಗಿ ತಿಳಿದು ಬಂದಿದ್ದು, ನಾಪೋಕ್ಲು ಠಾಣಾಧಿಕಾರಿ ರಾಘವೇಂದ್ರ, ಸಿಬ್ಬಂದಿ ಹಾಗೂ ಅರಣ್ಯ ಇಲಾಖೆ ಸಿಬ್ಬಂದಿ ಬೆಟ್ಟದ ಪ್ರದೇಶದಲ್ಲಿ ಬೀಡುಬಿಟ್ಟಿದ್ದಾರೆ.
ಬಿಳಿಗಿರಿ ರಂಗನಬೆಟ್ಟದಲ್ಲಿ ಮತ್ತೆ ಕಾಳ್ಗಿಚ್ಚು
ಚಾಮರಾಜನಗರ: ಬಿಳಿಗಿರಿರಂಗನ ಬೆಟ್ಟದ (Biligiri Ranga Hills) ಹುಲಿ ಸಂರಕ್ಷಿತ ಅರಣ್ಯ ಪ್ರದೇಶದಲ್ಲಿ ಮತ್ತೆ ಬೆಂಕಿ ಕಾಣಿಸಿಕೊಂಡಿದ್ದು, 25ಕ್ಕೂ ಹೆಚ್ಚು ಎಕರೆ ಅಗ್ನಿಗಾಹುತಿಯಾಗಿದೆ. ಬಿಳಿಗಿರಿರಂಗನ ಬೆಟ್ಟದ ಹುಲಿ ಸಂರಕ್ಷಿತ ಅರಣ್ಯ ಪ್ರದೇಶದಲ್ಲಿ ಒಂದು ವಾರದಲ್ಲಿ ಎರಡು ಕಡೆ ಕಾಡ್ಗಿಚ್ಚು ಉಂಟಾಗಿ, ಕಾಡು ಹೊತ್ತಿಯುರಿದಿದೆ.
ಕಳೆದ ತಿಂಗಳ 26ರಂದು ಬಿಳಿಗಿರಿರಂಗನ ಬೆಟ್ಟ ಹುಲಿ ಸಂರಕ್ಷಿತ ಅರಣ್ಯದ ಬೈಲೂರು ವಲಯ ಹಾಗೂ ಕೊಳ್ಳೇಗಾಲ ವನ್ಯಜೀವಿ ವಲಯದಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ಅರಣ್ಯ ಇಲಾಖೆ ಸಿಬ್ಬಂದಿ ಬೆಂಕಿಯನ್ನು ನಂದಿಸಿದ್ದರು. ಇದೀಗಾ ಮತ್ತೇ ಕೊಳ್ಳೇಗಾಲ ವನ್ಯಜೀವಿ ವಲಯದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಬೆಂಕಿ ನಂದಿಸಲು ಅರಣ್ಯ ಸಿಬ್ಬಂದಿ ಹರಸಾಹಸ ಪಟ್ಟರು. ಆದರೆ ಪದೇ ಪದೆ ಬೆಂಕಿ ಕಾಣಿಸಿಕೊಳ್ಳಲು ಅರಣ್ಯ ಇಲಾಖೆಯ ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣವಿರಬಹುದೆಂಬ ಶಂಕೆ ವ್ಯಕ್ತವಾಗಿದೆ.