ದಾವಣಗೆರೆ, ಬಾಗಲಕೋಟೆ ಉಪ ಚುನಾವಣೆಗೆ ಕ್ಷಣಗಣನೆ; ಸಿದ್ಧತೆ ಹೇಗಿದೆ?
Davangere And Bagalkot by-elections: ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ಉಪ ಚುನಾವಣೆ ಏಪ್ರಿಲ್ 9 ಕ್ಕೆ ನಡೆಯಲಿದ್ದು, ಎಲ್ಲಾ ರೀತಿಯ ಸಿದ್ದತೆಗಳನ್ನು ನಡೆಸಲಾಗುತ್ತಿದೆ. ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಬಿಗಿ ಪೊಲೀಸ್ ಭದ್ರತೆ ಕೈಗೊಳ್ಳಲಾಗಿದೆ. ಕಳೆದ ಕೆಲವು ದಿನಗಳ ಭರ್ಜರಿ ಪ್ರಚಾರದ ಬಳಿಕ ಮಂಗಳವಾರ ಸಂಜೆ 5.30 ಕ್ಕೆ ಬಹಿರಂಗ ಪ್ರಚಾರಕ್ಕೆ ತೆರೆ ಬಿದ್ದಿತ್ತು.
ಸಂಗ್ರಹ ಚಿತ್ರ -
ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ಉಪ ಚುನಾವಣೆ ಏಪ್ರಿಲ್ 9 ಕ್ಕೆ ನಡೆಯಲಿದ್ದು, ಎಲ್ಲಾ ರೀತಿಯ ಸಿದ್ದತೆಗಳನ್ನು ನಡೆಸಲಾಗುತ್ತಿದೆ. ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಬಿಗಿ ಪೊಲೀಸ್ ಭದ್ರತೆ ಕೈಗೊಳ್ಳಲಾಗಿದೆ. ಕಳೆದ ಕೆಲವು ದಿನಗಳ ಭರ್ಜರಿ ಪ್ರಚಾರದ ಬಳಿಕ ಮಂಗಳವಾರ ಸಂಜೆ 5.30 ಕ್ಕೆ ಬಹಿರಂಗ ಪ್ರಚಾರಕ್ಕೆ ತೆರೆ ಬಿದ್ದಿತ್ತು. ಮತದಾರರ ಮನವೊಲಿಸಲು ಉಭಯ ಪಕ್ಷಗಳು ಭಾರೀ ಪ್ರಾಚಾರ ಕೈಗೊಂಡಿದ್ದವು. ಸಿಎಂ ಸಿದ್ದರಾಮಯ್ಯ ಸೇರಿದಂತೆ ಘಟಾನುಘಟಿ ನಾಯಕರು ತಮ್ಮ ಪಕ್ಷದ ಅಭ್ಯರ್ಥಿ ಪರ ಮತ ಬೇಟೆ ನಡೆಸಿದ್ದರು.
ದಾವಣಗೆರೆ ದಕ್ಷಿಣ ಕ್ಷೇತ್ರ
ಶಾಮನೂರು ಶಿವಶಂಕರಪ್ಪ ನಿಧನದಿಂದ ತೆರವಾಗಿದ್ದ ದಾವಣಗೆರೆ ದಕ್ಷಿಣ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಹಂಚಿಕೆಯಲ್ಲಿ ಹೈಡ್ರಾಮಾ ನಡೆದಿತ್ತು. ಮುಸ್ಲಿಂ ಪ್ರಾಬಲ್ಯ ಹೊಂದಿರುವ ಕ್ಷೇತ್ರವಾದ್ದರಿಂದ ಮುಸ್ಲಿಂ ಅಭ್ಯರ್ಥಿಗೆ ಟಿಕೆಟ್ ನೀಡಬೇಕೆಂದು ಪಟ್ಟು ಹಿಡಿಯಲಾಗಿತ್ತು. ಆದರೆ ಕಾಂಗ್ರೆಸ್ ಸಮರ್ಥ್ ಶಾಮನೂರುಗೆ ಟಿಕೆಟ್ ನೀಡಿದೆ. ಬಿಜೆಪಿಯಿಂದ ಟಿ ಶ್ರೀನಿವಾಸ ದಾಸ ಕರಿಯಪ್ಪ ಮತ್ತು ಎಸ್‌ಡಿಪಿಐ - ಅಫ್ಸರ್ ಕೊಡ್ಲಿಪೇಟೆ ಕಣದಲ್ಲಿದ್ದಾರೆ.
1,13,654 ಪುರುಷ ಮತದಾರರಿದ್ದರೆ 1,17,986 ಮಹಿಳೆಯರಿದ್ದಾರೆ. 43 ಇತರೆ ಮತಾರರಿದ್ದಾರೆ. ಮತದಾನಕ್ಕೆ ಅಂತಿಮ ಹಂತದ ಸಿದ್ದತೆ ಮಾಡಿಕೊಳ್ಳಲಾಗಿದ್ದು, ಒಟ್ಟು 284 ಮತಗಟ್ಟೆಗಳ ನಿರ್ಮಾಣ ಮಾಡಲಾಗಿದೆ. ಅವುಗಳಲ್ಲಿ 76 ಸೂಕ್ಷ್ಮ ಮತಗಟ್ಟೆಗಳೆಂದು ಗುರುತಿಸಲಾಗಿದೆ. 1,489 ಚುನಾವಣಾ ಸಿಬ್ಬಂದಿ ನಿಯೋಜನೆ ಮಾಡಲಾಗಿದೆ. ಮತಗಟ್ಟೆಯ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಮಾಡಲಾಗಿದೆ. ಎಲ್ಲ ಮತಗಟ್ಟೆಯಲ್ಲಿ ವೆಬ್‌ಕಾಸ್ಟಿಂಗ್ ವ್ಯವಸ್ಥೆ ಇದೆ.
Zameer ahmed khan: ದಾವಣಗೆರೆ ದಂಗಲ್: ಜಮೀರ್ ಅಹಮದ್ ರಾಜೀನಾಮೆ ಬಾಂಬ್
ಬಾಗಲಕೋಟೆ ಕ್ಷೇತ್ರ
ಕಾಂಗ್ರೆಸ್ ಶಾಸಕ ಹೆಚ್. ವೈ ಮೇಟಿ ನಿಧನದಿಂದ ತೆರವಾಗಿದ್ದ ಬಾಗಲಕೋಟೆ ವಿಧಾನಸಭಾ ಕ್ಷೇತ್ರಕ್ಕೆ ನಾಳೆ ಉಪಚುನಾವಣೆ ನಡೆಯಲಿದೆ. ಕಾಂಗ್ರೆಸ್‌ನಿಂದ ಉಮೇಶ್ ಮೇಟಿ ಕಣದಲ್ಲಿದ್ದರೆ, ಬಿಜೆಪಿಯಿಂದ ವೀರಣ್ಣ ಚರಂತಿ ಮಠ ಕಣಕ್ಕಿಳಿದಿದ್ದಾರೆ. ಪುರುಷ ಮತದಾರರು- 1,26,999, ಮಹಿಳಾ ಮತದಾರರು- 1,31,77 ಹಾಗೂ ಇತರೆ- 23 ಮತದಾರರಿದ್ದಾರೆ. ಒಟ್ಟು 322 ಮತಗಟ್ಟೆಗಳನ್ನು ಸ್ಥಾಪಿಸಲಾಗಿದ್ದು, ನವನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಮಸ್ಟರಿಂಗ್ ಕೇಂದ್ರ ಸ್ಥಾಪನೆ ಮಾಡಲಾಗಿದೆ.