ಬೆಂಗಳೂರು: ಆಂಧ್ರಪ್ರದೇಶದಲ್ಲಿ (Andhra Pradesh) ಕೋವಿಡ್ ಪ್ರಕರಣಗಳು (Covid 19) ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದ್ದು, ಕರ್ನಾಟಕದಲ್ಲಿಯೂ (Karnataka) ಆತಂಕ ಮೂಡಿಸಿದೆ. ರಾಜ್ಯದಲ್ಲಿ ಈಗಾಗಲೇ 32ಕ್ಕೂ ಹೆಚ್ಚು ಜನರಿಗೆ ಕೊರೋನಾ ಪಾಸಿಟಿವ್ ಬಂದಿರುವುದು ಸಾರ್ವಜನಿಕರಲ್ಲಿ ಆತಂಕ ಹೆಚ್ಚಿಸಿದೆ. ಜೂನ್ ತಿಂಗಳ ಅವಧಿಯಲ್ಲಿ ಕೇವಲ 14 ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದವು.
ಆದರೆ ಜುಲೈ ತಿಂಗಳ ಕಳೆದ ಕೇವಲ ಹತ್ತು ದಿನಗಳಲ್ಲೇ ಈ ಸಂಖ್ಯೆ 32ಕ್ಕೆ ತಲುಪಿದೆ. ಒಟ್ಟು 193 ಶಂಕಿತರನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಿದಾಗ ಈ 32 ಜನರಲ್ಲಿ ಸೋಂಕು ಇರುವುದು ದೃಢಪಟ್ಟಿದೆ. ಕೋವಿಡ್ ಪ್ರಕರಣಗಳು ಮರುಕಳಿಸುತ್ತಿರುವ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆಯು ಸಾರ್ವಜನಿಕರಿಗೆ ಹಾಗೂ ವೈದ್ಯಕೀಯ ಸಿಬ್ಬಂದಿಗೆ ಪ್ರಮುಖ ಸೂಚನೆಗಳನ್ನು ನೀಡಿದೆ. ರಾಜ್ಯದ ಎಲ್ಲಾ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಮುನ್ನೆಚ್ಚರಿಕೆ ವಹಿಸಲು ಮತ್ತು ಕೋವಿಡ್ ವಾರ್ಡ್‌ಗಳನ್ನು ಸನ್ನದ್ಧ ಸ್ಥಿತಿಯಲ್ಲಿಡಲು ಸೂಚಿಸಲಾಗಿದೆ.
ಮುನ್ನೆಚ್ಚರಿಕಾ ಕ್ರಮವಾಗಿ, ಆಂಧ್ರದ ಗಡಿ ಹಂಚಿಕೊಂಡಿರುವ ಕರ್ನಾಟಕದ ಜಿಲ್ಲೆಗಳಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. ತುಮಕೂರಿನ ಪಾವಗಡಲ್ಲಿ ಚೆಕ್‌ಪೋಸ್ಟ್‌ಗಳ ನಿರ್ಮಾಣ ಮಾಡಲಾಗಿದೆ. ಸದ್ಯ ಎಲ್ಲಾ ಆರೋಗ್ಯ ಕೇಂದ್ರಗಳಲ್ಲಿ ಮುನ್ನಚ್ಚರಿಕೆ ತೆಗೆದುಕೊಳ್ಳುವಂತೆ ಸರ್ಕಾರ ಸೂಚಿಸಿದೆ.
ಆಂಧ್ರದಲ್ಲಿ ಇಬ್ಬರು ಸಾವು
ಆಂಧ್ರಪ್ರದೇಶದ ಕಡಪ ಜಿಲ್ಲೆಯಲ್ಲಿ ಕೋವಿಡ್-19 ಮತ್ತೆ ಕಾಣಿಸಿಕೊಂಡಿದ್ದು, ಇತ್ತೀಚಿನ ವಾರಗಳಲ್ಲಿ 8 ಪ್ರಕರಣಗಳು ವರದಿಯಾಗಿದೆ. ದುರಂತವೆಂದರೆ ಈ ಪ್ರಕರಣಗಳಲ್ಲಿ ಇಬ್ಬರು ರೋಗಿಗಳು ಸಾವನ್ನಪ್ಪಿದ್ದಾಗಿ ವರದಿಯಾಗಿದೆ. .ಕಡಪದ ರಾಜಂಪೇಟ್ ಪ್ರದೇಶದ 52 ವರ್ಷದ ವ್ಯಕ್ತಿಯೊಬ್ಬರು ಜ್ವರ ಮತ್ತು ಕೆಮ್ಮಿನಿಂದಾಗಿ ಕೋವಿಡ್ -19 ಪಾಸಿಟಿವ್ ದೃಢಪಟ್ಟಿತ್ತು.
Viral News: ಮತ್ತೆ ಕೊರೋನಾ ಅಬ್ಬರ? ನಿಜವಾಗುತ್ತಾ ಬಾಬಾ ವಂಗಾ ಭವಿಷ್ಯವಾಣಿ?
ವೆಲ್ಲೂರಿನ ಕ್ರಿಶ್ಚಿಯನ್ ಮೆಡಿಕಲ್ ಕಾಲೇಜಿನಲ್ಲಿ (CMC) ಚಿಕಿತ್ಸೆ ಪಡೆಯುತ್ತಿದ್ದಾಗ ಸಾವನ್ನಪ್ಪಿದ್ದಾರೆ. ಮತ್ತೊಂದು ಪ್ರಕರಣದಲ್ಲಿ, ಕಡಪ ಮೂಲದ 43 ವರ್ಷದ ವ್ಯಕ್ತಿಯೊಬ್ಬರು ಆರೋಗ್ಯ ಸಮಸ್ಯೆಗಳಿಂದಾಗಿ ಸರ್ಕಾರಿ ಜನರಲ್ ಆಸ್ಪತ್ರೆಗೆ ದಾಖಲಾಗಿದ್ದರು, ಅವರಿಗೆ ಸೋಂಕು ದೃಢಪಟ್ಟಿದ್ದು, ನಂತರ ಕೋವಿಡ್-19 ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಗ ಸಾವನ್ನಪ್ಪಿದ್ದಾರೆ. ಕಡಪ ವೈದ್ಯಕೀಯ ಕಾಲೇಜಿನ 25 ವರ್ಷದ ವೈದ್ಯಕೀಯ ವಿದ್ಯಾರ್ಥಿನಿಗೂ ಸಹ ವೈರಸ್ ಸೋಂಕು ತಗುಲಿದೆ.